ಕ್ರಿಕೆಟ್
Rishabh Pant : ಸ್ವಿಮ್ಮಿಂಗ್ ಪೂಲ್ನಲ್ಲಿರುವ ಹೊಸ ಚಿತ್ರ ಪ್ರಕಟಿಸಿದ ರಿಷಭ್ ಪಂತ್
ರಿಷಭ್ ಪಂತ್ (Rishabh Pant) ಪ್ರಕಟಿಸುತ್ತಿರುವ ವಿಡಿಯೊಗಳನ್ನು ನೋಡಿದರೆ ಅವರು ಅತಿವೇಗದಲ್ಲಿ ಚೇತರಿಸಿಕೊಳ್ಳುತ್ತಿರುವ ಲಕ್ಷಣಗಳು ಕಾಣಿಸುತ್ತಿವೆ.
ಮುಂಬಯಿ: ಟೀಮ್ ಇಂಡಿಯಾದ ವಿಕೆಟ್ಕೀಪರ್ ಬ್ಯಾಟರ್ ರಿಷಭ್ ಪಂತ್ ಕಾರು ಅಪಘಾತದ ವೇಳೆ ಉಂಟಾಗಿರುವ ಗಾಯದಿಂದ ಅತಿ ವೇಗದಲ್ಲಿ ಗುಣಮುಖರಾಗುತ್ತಿದ್ದಾರೆ. ತಿಂಗಳ ಹಿಂದೆ ಊರುಗೋಲಿನ ಸಹಾಯದಿಂದ ಓಡಾಡುತ್ತಿದ್ದ ಅವರು ಕೆಲವು ದಿನಗಳ ಹಿಂದೆ ಚೆಸ್ ಆಡುತ್ತಿದ್ದ ಫೊಟೋವನ್ನು ಹಾಕಿದ್ದರು. ಇದೀಗ ಅವರು ಸ್ವಿಮ್ಮಿಂಗ್ ಪೂಲ್ನಲ್ಲಿ ನಡೆಯುತ್ತಿರುವ ಚಿತ್ರವನ್ನು ಪ್ರಕಟಿಸಿದ್ದಾರೆ.
ವಿಡಿಯೊದಲ್ಲಿ ರಿಷಭ್ ಪಂತ್ ನಿಧಾನವಾಗಿ ನಡೆದುಕೊಂಡು ಹೋಗುತ್ತಿದೆ. ಅಲ್ಲೂ ಅವರು ಊರುಗೋಲು ಹಿಡಿದುಕೊಂಡು ಹೋಗುತ್ತಿದ್ದಾರೆ. ಆದರೆ, ಸಲೀಸಾಗಿ ನಡೆದುಕೊಂಡು ಹೋಗುತ್ತಿದ್ದಾರೆ. ಈ ಮೂಲಕ ತಾವು ಬೇಗ ಗುಣಮುಖರಾಗುತ್ತಿದ್ದಾರೆ ಎಂಬ ಸಂದೇಶವನ್ನು ರವಾನಿಸಿದ್ದಾರೆ.
ಕಳೆದ ಡಿಸೆಂಬರ್ನಲ್ಲಿ ಡೆಲ್ಲಿಯಿಂದ ರೂರ್ಕಿಗೆ ಪ್ರಯಾಣ ಮಾಡುತ್ತಿದ್ದ ವೇಳೆ ರಿಷಭ್ ಪಂತ್ ಅವರ ಕಾರು ಡಿವೈಡರ್ಗೆ ಗುದ್ದಿ ಸುಟ್ಟು ಕರಲಾಗಿತ್ತು. ಘಟನೆಯಲ್ಲಿ ಪವಾಡಸದೃಶ ರಿಷಭ್ ಪಂತ್ ಜೀವಂತ ಉಳಿದಿದ್ದರು. ಮೊದಲು ಡೆಹ್ರಾಡೂನ್ನಲ್ಲಿ ಚಿಕಿತ್ಸೆ ಪಡೆದಿದ್ದ ಅವರು ಬಳಿಕ ಮುಂಬಯಿಯ ಕೋಕಿಲಾ ಬೆನ್ ಆಸ್ಪತ್ರೆಯಲ್ಲಿ ಮಂಡಿ ನೋವಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಅವರು ಗುಣಮುಖರಾಗುವ ಹಂತದಲ್ಲಿದ್ದಾರೆ.
ಇದನ್ನೂ ಓದಿ : Rishabhh Pant : ಅಪಘಾತದ ಬಳಿಕ ಮೊದಲ ಬಾರಿ ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡ ರಿಷಭ್ ಪಂತ್
ರಿಷಭ್ ಪಂತ್ ಯಾವಾಗ ತಂಡಕ್ಕೆ ಮರಳುತ್ತಾರೆ ಎಂಬುದೇ ಸದ್ಯದ ಚರ್ಚೆಯ ವಿಷಯ. ಕೆಲವರು ಎರಡು ವರ್ಷ ಬೇಕಾಗಬಹುದು ಎಂದೂ ಹೇಳುತ್ತಿದ್ದಾರೆ. ಆದರೆ, ರಿಷಭ್ ಗುಣಮುಖರಾಗುತ್ತಿರುವ ವೇಗ ನೋಡಿದರೆ ಆದಷ್ಟು ಬೇಗ ವಾಪಸಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಕ್ರಿಕೆಟ್
IPL 2023: ಒತ್ತಡ ನಿವಾರಣೆಗಾಗಿ ಕೆಲ ಐಪಿಎಲ್ ಪಂದ್ಯಗಳಿಗೆ ರೋಹಿತ್ ಅಲಭ್ಯ ಸಾಧ್ಯತೆ
ಕೆಲಸದ ಒತ್ತಡ ನಿವಾರಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಈ ಬಾರಿಯ ಈಪಿಎಲ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ಅವರು ಸೀಮಿತ ಪಂದ್ಯಗಳಲ್ಲಿ ಮಾತ್ರ ಆಡಲಿದ್ದಾರೆ ಎಂದು ತಿಳಿದುಬಂದಿದೆ.
ಮುಂಬಯಿ: 16ನೇ ಆವೃತ್ತಿಯ ಐಪಿಎಲ್(IPL 2023) ಟೂರ್ನಿಗೆ ಅಖಾಡ ರೆಡಿಯಾಗಿದೆ. ಒನ್ನೊಂದು ದಿನ ಕಳೆದರೆ ಟೂರ್ನಿಗೆ ಅಧಿಕೃತ ಚಾಲನೆ ದೊರೆಯಲಿದೆ. ಬಳಿಕ ಸರಮಾರು 2 ತಿಂಗಳುಗಳ ಕಾಲ ಎಲ್ಲ ಕ್ರಿಕೆಟ್ ಅಭಿಮಾನಿಗಳು ಐಪಿಎಲ್ ಗುಂಗಿನಲ್ಲಿರುತ್ತಾರೆ. 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್(Mumbai Indians) ತಂಡದ ನಾಯಕ ರೋಹಿತ್ ಶರ್ಮಾ(Rohit Sharma) ಅವರು ಈ ಬಾರಿಯ ಐಪಿಎಲ್ನಲ್ಲಿ ಕೇಲವ ಸೀಮಿತ ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದ ಮುಂಬೈ ಅಭಿಮಾನಿಗಳಲ್ಲಿ ಆತಂಕ ಮೂಡಿದೆ.
ಜೂನ್ನಲ್ಲಿ ನಡೆಯುವ ಪ್ರತಿಷ್ಠಿತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್, ಪಾಕಿಸ್ತಾನ ಆತಿಥ್ಯದಲ್ಲಿ ನಡೆಯಲಿರುವ ಏಷ್ಯಾ ಕಪ್ ಹಾಗೂ ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ನಡೆಯಲಿದೆ. ಹಿನ್ನೆಲೆಯಲ್ಲಿ ಕೆಲಸದ ಒತ್ತಡವನ್ನು ಕಡಿಮೆ ಮಾಡುವ ಸಲುವಾಗಿ ರೋಹಿತ್ ಶರ್ಮಾ ಅವರನ್ನು ಐಪಿಎಲ್ ಟೂರ್ನಿಯ ಹಲವು ಪಂದ್ಯಗಳಿಂದ ದೂರ ಇಡಲಾಗುತ್ತಿದೆ ಎಂದು ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
ರೋಹಿತ್ ಶರ್ಮಾ ಹೊರಗುಳಿಯಲಿರುವ ಪಂದ್ಯಗಳಲ್ಲಿ ಸೂರ್ಯಕುಮಾರ್ ಯಾದವ್ ಅವರು ತಂಡವನ್ನು ಮುನ್ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಐಪಿಎಲ್ನ ಕೆಲ ಪಂದ್ಯಗಳಿಂದ ಹೊರಗುಳಿಯುವ ನಿರ್ಧಾರವನ್ನು ರೋಹಿತ್ ಅವರೇ ಕೈಗೊಂಡಿರುವುದಾಗಿ ಮುಂಬೈ ಇಂಡಿನ್ಸ್ ತಂಡದ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ IPL 2023: ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ; ಐಪಿಎಲ್ ಫ್ರಾಂಚೈಸಿಗಳಿಗೆ ಬಿಸಿಸಿಐ ಆದೇಶ
2020ರಲ್ಲಿ ರೋಹಿತ್ ಶರ್ಮಾ ಐಪಿಎಲ್ ಟೂರ್ನಿಯ ಕೆಲ ಪಂದ್ಯಕ್ಕೆ ಅಲಭ್ಯರಾಗಿದ್ದರು. ಈ ವೇಳೆ ಕೀರನ್ ಪೋಲಾರ್ಡ್ ತಂಡ ಮುನ್ನಡೆಸಿದ್ದರು. ಆದರೆ ಪೋಲಾರ್ಡ್ ಈ ಬಾರಿ ಐಪಿಎಲ್ಗೆ ನಿವೃತ್ತಿ ಹೇಳಿದ್ದಾರೆ. ಹೀಗಾಗಿ ಸೂರ್ಯಕುಮಾರ್ ಯಾದವ್‌ಗೆ ನಾಯಕತ್ವ ನೀಡಲು ಮುಂಬೈ ಮುಂದಾಗಿದೆ.
ಇದನ್ನೂ ಓದಿ IPL 2023: ಆರ್‌ಸಿಬಿ ಬಗ್ಗೆ ಭಾವನಾತ್ಮಕ ಸಂದೇಶ ಬರೆದ ಎಬಿ ಡಿ ವಿಲಿಯರ್ಸ್
ಈಗಾಗಲೇ ಜಸ್ಪ್ರೀತ್ ಬುಮ್ರಾ, ಶ್ರೇಯಸ್ ಅಯ್ಯರ್ ಅವರು ಗಾಯಗೊಂಡು ವಿಶ್ರಾಂತಿಯಲ್ಲಿದ್ದಾರೆ. ಹೀಗಾಗಿ ಉಭಯ ಆಟಗಾರರು ಸದ್ಯಕ್ಕೆ ಮುಂದಿನ 5ರಿಂದ 6 ತಿಂಗಳುಗಳ ಕಾಲ ಭಾರತ ತಂಡಕ್ಕೆ ವಾಪಾಸ್ ಆಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಮಹತ್ವದ ಟೂರ್ನಿಗೆ ಕೆಲವೇ ದಿನಗಳಿರುವಾಗ ಲಭ್ಯವಿರುವ ಸ್ಟಾರ್ ಆಟಗಾರರು ಕೂಡ ಗಾಯಕ್ಕೆ ತುತ್ತಾದರೆ ತಂಡಕ್ಕೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸಲಿದೆ. ಈ ಎಲ್ಲ ಮುನ್ನೆಚ್ಚರಿಕೆಯ ಕ್ರಮಾವಾಗಿ ಕೆಲ ಆಟಗಾರರಿಗೆ ಬಿಸಿಸಿಐ ಈ ಬಾರಿಯ ಐಪಿಎಲ್ನಲ್ಲಿ ಸೀಮಿತ ಪಂದ್ಯಗಳಲ್ಲಿ ಆಡುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.
ಕ್ರಿಕೆಟ್
IPL 2023: ಆರ್‌ಸಿಬಿ ಬಗ್ಗೆ ಭಾವನಾತ್ಮಕ ಸಂದೇಶ ಬರೆದ ಎಬಿ ಡಿ ವಿಲಿಯರ್ಸ್
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಮ್ಮ ಡ್ರೆಸ್ಸಿಂಗ್ ರೂಮಿನ ಬಾಲ್ಕನಿಯತ್ತ ಹೆಜ್ಜೆ ಹಾಕಿದಾಗ ನನ್ನ ಕಣ್ಣಂಚಿನಲ್ಲಿ ನೀರು ಜಿನುಗಿತು ಎಂದು ಎಬಿ ಡಿ ವಿಲಿಯರ್ಸ್ ಭಾವನಾತ್ಮಕ ಮಾತುಗಳನ್ನಾಡಿದ್ದಾರೆ.
ಬೆಂಗಳೂರು: ಐಪಿಎಲ್ನ(IPL 2023) ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ, ಮಿಸ್ಟರ್ 360 ಡಿಗ್ರಿ ಖ್ಯಾತಿಯ ಎಬಿ ಡಿ ವಿಲಿಯರ್ಸ್(AB de Villiers) ಅವರು ಆರ್‌ಸಿಬಿ ಅಭಿಮಾನಿಗಳಿಗಾಗಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಮ್ಮ ಡ್ರೆಸ್ಸಿಂಗ್ ರೂಮಿನ ಬಾಲ್ಕನಿಯತ್ತ ಹೆಜ್ಜೆ ಹಾಕಿದಾಗ ನನ್ನ ಕಣ್ಣಂಚಿನಲ್ಲಿ ನೀರು ಜಿನುಗಿತು. ಪ್ರತಿ ಸಲ ಎಬಿಡಿ, ಎಬಿಡಿ ಎಂಬ ಅಭಿಮಾನಿಗಳ ಕೂಗು ನಮ್ಮನ್ನು ಗೆಲುವಿಗಾಗಿ ಹುರಿದುಂಬಿಸುತ್ತಿತ್ತು. ಆದರೆ ಈ ಬಾರಿಯ ಕೂಗಿನಲ್ಲಿ ಬೇರೆಯದ್ದೇ ಭಾವನೆ ಇತ್ತು. ನನಗೆ ಸಹಕಾರ ನೀಡಿದ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.
ಕಳೆದ ಭಾನುವಾರ(ಮಾರ್ಚ್ 26)ದಂದು ಆರ್‌ಸಿಬಿ ಪ್ರಾಂಚೈಸಿಯು “ಅನ್ಬಾಕ್ಸ್ ಆರ್‌ಸಿಬಿ” ಎಂಬ ಕಾರ್ಯಕ್ರಮ ನಡೆಸಿತ್ತು. ಈ ಕಾರ್ಯಕ್ರಮದಲ್ಲಿ ಆರ್ಸಿಬಿಯ ಮಾಜಿ ಆಟಗಾರಾದ ವೆಸ್ಟ್ ಇಂಡೀಸ್ ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್ಗೆ ಹಾಲ್ ಆಫ್ ಫೇಮ್ ಗೌರವ ಸೂಚಿಸಲಾಗಿತ್ತು. ಉಭಯ ಆಟಗಾರರು ಆರ್‌ಸಿಬಿ ತಂಡಕ್ಕೆ ನೀಡಿದ ಕೊಡುಗೆಗೆ ಗೌರವವಾಗಿ ಆರ್‌ಸಿಬಿ ಫ್ರಾಂಚೈಸಿಯು ಡಿ ವಿಲಿಯರ್ಸ್ ಅವರ ಜೆರ್ಸಿ ಸಂಖ್ಯೆ 17 ಮತ್ತು ಕ್ರಿಸ್ ಗೇಲ್ ಅವರ ಜೆರ್ಸಿ ಸಂಖ್ಯೆ 333ರನ್ನು ಹಾಲ್ ಆಫ್ ಫೇಮ್(Hall of Fame) ಸೇರ್ಪಡೆಗೊಳಿಸಿ ನಿವೃತ್ತಿ ಘೋಷಿಸಿತ್ತು.
ಹಾಲ್ ಆಫ್ ಫೇಮ್ ಸೇರ್ಪಡೆಗೊಂಡ ಬಳಿಕ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಎಬಿಡಿ ಪೋಸ್ಟ್ ಮಾಡಿದ್ದಾರೆ. ಈ ಸಂದೇಶದಲ್ಲಿ ಆರ್‌ಸಿಬಿ ತಂಡ ಮತ್ತು ತಮ್ಮ ಜರ್ಸಿ ಸಂಖ್ಯೆಯನ್ನು ನಿವೃತ್ತಿಗೊಳಿಸಿದ್ದಕ್ಕಾಗಿ ಫ್ರಾಂಚೈಸಿಗೆ ಧನ್ಯವಾದ ಅರ್ಪಿಸಿದ್ದಾರೆ. ಜತೆಗೆ ಅವರು ಆರ್ಸಿಬಿಯಲ್ಲಿ ಕಳೆದ ದಿನಗಳ ಬಗ್ಗೆಯೂ ತಿಳಿಸಿದ್ದಾರೆ.
ಇದನ್ನೂ ಓದಿ IPL 2023: ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ; ಐಪಿಎಲ್ ಫ್ರಾಂಚೈಸಿಗಳಿಗೆ ಬಿಸಿಸಿಐ ಆದೇಶ
“ಆರ್‌ಸಿಬಿ ಹಾಲ್ ಆಫ್ ಫೇಮ್‌ಗೆ ಸೇರ್ಪಡೆಗೊಂಡಾಗ ನನ್ನ ಹೃದಯ ತುಂಬಿ ಬಂದಿತು. ನಾನು ಮತ್ತು ಪತ್ನಿ ಹಾಗೂ ಮೂವರು ಮಕ್ಕಳೊಂದಿಗೆ ಆರ್‌ಸಿಬಿ ವೇದಿಕೆಯ ಮೆಟ್ಟಿಲುಗಳ ಮೇಲೆ ಈ ಬಾರಿ ನಡೆದಾಗ ಬೇರೆಯೇ ಅನುಭವವಾಯಿತು. 2003 ರಿಂದ ನಾನು ಭಾರತದಲ್ಲಿ ಕಳೆದ ದಿನಗಳ ಕುರಿತು ಯೋಚಿಸುತ್ತಿದ್ದಾಗ ಹಲವು ಮರೆಯಲಾರದ ನೆನಪುಗಳು ಕಣ್ಣಮುಂದೆ ಹಾದುಹೋದವು. ನಾನು ಈ ದೇಶ ಮತ್ತು ಜನರೊಂದಿಗೆ ಆಳವಾದ ಸಂಪರ್ಕ, ಸಂಬಂಧ ಹೊಂದಿದ್ದೇನೆ. ಇದಕ್ಕಾಗಿ ತಂಡದ ಸಹ ಆಟಗಾರರಿಗೆ ಹಾಗೂ ವಿಶೇಷವಾಗಿ ವಿರಾಟ್(Virat Kohli), ಆರ್‌ಸಿಬಿ ಅಭಿಮಾನಿಗಳಿಗೆ ಧನ್ಯವಾದಗಳು” ಎಂದು ಎಬಿಡಿ ಭಾವನಾತ್ಮಕ ಸಂದೇಶವನ್ನು ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಕ್ರಿಕೆಟ್
ICC Rankings: ಏಕದಿನ ಶ್ರೇಯಾಂಕದಲ್ಲಿ ಬಡ್ತಿ ಪಡೆದ ರೋಹಿತ್ ಶರ್ಮ, ಹಾರ್ದಿಕ್ ಪಾಂಡ್ಯ
ಐಸಿಸಿ ನೂತನ ಏಕದಿನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಒಂದು ಸ್ಥಾನ ಮೇಲೇರುವ ಮೂಲಕ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಎಂಟನೇ ಸ್ಥಾನ ಪಡೆದಿದ್ದಾರೆ.
ದುಬೈ: ಐಸಿಸಿ ನೂತನ ಏಕದಿನ ಶ್ರೇಯಾಂಕ(ICC Rankings) ಪಟ್ಟಿಯಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ(Rohit Sharma) ಮತ್ತು ಹಾರ್ದಿಕ್ ಪಾಂಡ್ಯ(Hardik Pandya) ಉತ್ತಮ ಪ್ರಗತಿ ಸಾಧಿಸಿದ್ದಾರೆ. ಬ್ಯಾಟರ್ಗಳ ಶ್ರೇಯಾಂಕದಲ್ಲಿ ರೋಹಿತ್ ಒಂದು ಸ್ಥಾನ ಏರಿಕೆ ಕಂಡು ಎಂಟನೇ ಸ್ಥಾನದಲ್ಲಿದ್ದರೆ, ಪಾಂಡ್ಯ ಬೌಲಿಂಗ್ ಶ್ರೇಯಾಂಕದಲ್ಲಿ 10 ಸ್ಥಾನಗಳ ಜಿಗಿತ ಕಂಡು 76ನೇ ಸ್ಥಾನ ಪಡೆದಿದ್ದಾರೆ.
ಬುಧವಾರ ಐಸಿಸಿ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಪಾಕಿಸ್ತಾನದ ನಾಯಕ ಬಾಬರ್ ಅಜಂ ಬ್ಯಾಟರ್ಗಳ ಪಟ್ಟಿಯಲ್ಲಿ ಅಗ್ರ ಸ್ಥಾನ ಅಲಂಕರಿಸಿದ್ದಾರೆ. ದಕ್ಷಿಣ ಆಫ್ರಿಕಾದ ರಸ್ಸಿ ವಾನ್ ಡರ್ ಡಸ್ಸೆನ್ 2ನೇ, ಪಾಕ್ನ ಇಮಾಮ್-ಉಲ್-ಹಕ್ 3ನೇ ಮತ್ತು ಭಾರತದ ಶುಭಮನ್ ಗಿಲ್ 5ನೇ ಸ್ಥಾನ ಪಡೆದಿದ್ದಾರೆ. ಉಳಿದಂತೆ ವಿರಾಟ್ ಕೊಹ್ಲಿ ಏಳನೇ ಸ್ಥಾನದಲ್ಲಿದ್ದಾರೆ. ಕೆ.ಎಲ್. ರಾಹುಲ್ 38ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.
ಬೌಲಿಂಗ್ ಶ್ರೇಯಾಂಕದಲ್ಲಿ ಸಿರಾಜ್ ನಂ.3
ಬೌಲಿಂಗ್ ಶ್ರೇಯಾಂಕದಲ್ಲಿ ಆಸ್ಟ್ರೇಲಿಯಾದ ಜೋಶ್ ಹ್ಯಾಜಲ್ವುಡ್ ಅವರು ನಂ.1 ಸ್ಥಾನದಲ್ಲಿಯೇ ಮುಂದುವರಿದಿದ್ದಾರೆ. ನ್ಯೂಜಿಲ್ಯಾಂಡ್ನ ಹಿರಿಯ ವೇಗಿ ಟ್ರೆಂಟ್ ಬೌಲ್ಟ್ ದ್ವಿತೀಯ ಸ್ಥಾನದಲ್ಲಿದರೆ, ಟೀಮ್ ಇಂಡಿಯಾದ ಮೊಹಮ್ಮದ್ ಸಿರಾಜ್ ಮೂರನೇ ಸ್ಥಾನದಲ್ಲಿದ್ದಾರೆ. ಮಿಚೆಲ್ ಸ್ಟಾರ್ಕ್ ಸ್ಟಾರ್ಕ್ 4 ಮತ್ತು ಅಫ್ಘಾನಿಸ್ಥಾನದ ರಶೀದ್ ಖಾನ್ 5ನೇ ಸ್ಥಾನದಲ್ಲಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಮುಕ್ತಾಯ ಕಾಣುವ ಮೊದಲು ಮೊಹಮ್ಮದ್ ಸಿರಾಜ್ ನಂ.1 ಸ್ಥಾನದಲ್ಲಿದ್ದರು. ಆದರೆ ಆಸೀಸ್ ವಿರುದ್ಧದ ಸರಣಿಯಲ್ಲಿ ಕಳಪೆ ಬೌಲಿಂಗ್ ಪ್ರದರ್ಶನ ತೋರಿದ ಕಾರಣ ಅವರು ಹಠಾತ್ 2 ಸ್ಥಾನಗಳ ಕುಸಿತ ಕಂಡು ಮೂರನೇ ಸ್ಥಾನ ಪಡೆದರು. ಸದ್ಯ ಅವರು ಇದೇ ಸ್ಥಾನದಲ್ಲಿ ಮುಂದುವರಿಸಿದ್ದಾರೆ. ಉಳಿದಂತೆ ಕುಲ್ದೀಪ್ ಯಾದವ್ (23), ಬುಮ್ರಾ (26), ಮೊಹಮ್ಮದ್ ಶಮಿ (32), ರವೀಂದ್ರ ಜಡೇಜಾ (78) ಸ್ಥಾನದಲ್ಲಿದ್ದಾರೆ.
ಉಪನಾಯಕ ಹಾರ್ದಿಕ್ ಪಾಂಡ್ಯ ಆಲ್ರೌಂಡರ್ಗಳ ಪಟ್ಟಿಯಲ್ಲಿ 13 ನೇ ಸ್ಥಾನದಲ್ಲಿದ್ದಾರೆ. ಮೊದಲ ಸ್ಥಾನದಲ್ಲಿ ಬಾಂಗ್ಲಾದೇಶದ ಹಿರಿಯ ಆಟಗಾರ ಶಕೀಬ್ ಅಲ್ ಹಸನ್ ಕಾಣಿಸಿಕೊಂಡಿದ್ದಾರೆ. ದ್ವಿತೀಯ ಸ್ಥಾನ ಅಫಘಾನಿಸ್ತಾನದ ಮೊಹಮ್ಮದ್ ನಬಿ ಪಾಲಾಗಿದೆ.
ಕ್ರಿಕೆಟ್
Virushka: ವಿರಾಟ್ ಕೊಹ್ಲಿಯ ಮೂರು ಪೆಗ್ಗಿನ ರಹಸ್ಯ ಬಿಚ್ಚಿಟ್ಟ ಅನುಷ್ಕಾ ಶರ್ಮಾ
ಟೀಮ್ ಇಂಡಿಯಾದ ಆಟಗಾರ ವಿರಾಟ್ ಕೊಹ್ಲಿ ಅವರು ಮೂರು ಪೆಗ್ಗಿಗಿಂತ ಹೆಚ್ಚು ಕುಡಿದರೆ ಅವರ ನೃತ್ಯವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಅವರ ಪತ್ನಿ ಅನುಷ್ಕಾ ಶರ್ಮಾ ಹೇಳಿದ್ದಾರೆ.
ಮುಂಬಯಿ: ಭಾರತೀಯ ಕ್ರಿಕೆಟ್ ತಂಡದ ಆಟಗಾರ ವಿರಾಟ್ ಕೊಹ್ಲಿ (Virat Kohli) ಮತ್ತು ಅವರ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ(anushka sharma) ಅದೆಷ್ಟೋ ಜನರಿಗೆ ಸ್ಫೂರ್ತಿಯಾಗಿದ್ದಾರೆ. ಕೊಹ್ಲಿಯ ಎಲ್ಲ ಏರಿಳಿತದಲ್ಲಿಯೂ ಪತ್ನಿ ಅನುಷ್ಕಾ ಬೆಂಬಲಕ್ಕೆ ನಿಂತು ಅವರಿಗೆ ಸಾದಾ ಪ್ರೋತ್ಸಾಹವನ್ನು ನೀಡುತ್ತಲೇ ಬಂದಿದ್ದಾರೆ. ಆದರೆ ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅನುಷ್ಕಾ ಶರ್ಮಾ ಅವರು ವಿರಾಟ್ ಕೊಹ್ಲಿಯ ಕುಡಿತದ ಚಟದ ಬಗ್ಗೆ ರೋಚಕ ಸಂಗತಿಯೊಂದನ್ನು ತಿಳಿಸಿದ್ದಾರೆ.
ಸಾಮಾನ್ಯವಾಗಿ ನೀವಿಬ್ಬರು ಪಾರ್ಟಿಗಳಿಗೆ ಹೋದಾಗ ಯಾರನ್ನು ಹೆಚ್ಚಾಗಿ ಜನ ಗುರುತಿಸುತ್ತಾರೆ? ಎಂಬ ಪ್ರಶ್ನೆಗೆ ಉತ್ತರಿಸಿದ ಅನುಷ್ಕಾ ಶರ್ಮಾ, ಅದು ವಿರಾಟ್ ಕೊಹ್ಲಿ ಎಂದು ಹೇಳಿದ್ದಾರೆ. ಇದಕ್ಕೆ ಕಾರಣವನ್ನು ಅವರು ತಿಳಿಸಿದ್ದಾರೆ. ಕೊಹ್ಲಿ ಮೂರು ಪೆಗ್ ಹಾಕಿದ ಬಳಿಕ ಡ್ಯಾನ್ಸ್ ಮಾಡಲು ಆರಂಭಿಸುತ್ತಾರೆ. ಹೀಗಾಗಿ ಅಲ್ಲಿದ್ದವರು ಕೊಹ್ಲಿಯ ಕಡೆ ಹೆಚ್ಚು ಗಮನ ಕೊಡುತ್ತಾರೆ. ಒಮ್ಮೆ ಅವರು ನೃತ್ಯ ಆರಂಭಿಸಿದರೆ ಇದನ್ನು ಯಾರಿಂದಲೂ ತಡೆಯಲು ಅಸಾಧ್ಯ ಎಂದು ಹೇಳಿದರು.
ಪತ್ನಿಯ ಈ ಮಾತನ್ನು ನಗುತ್ತಲೇ ಒಪ್ಪಿಕೊಂಡ ವಿರಾಟ್, ಇದು ನಿಜ. ನಾನು ಎರಡು ಪೆಗ್ಗಳಿಗಿಂತಲೂ ಹೆಚ್ಚು ಕುಡಿದೆನೆಂದರೆ ಡ್ಯಾನ್ಸ್ ಮಾಡಲು ಆರಂಭಿಸುತ್ತೇನೆ. ಆ ಬಳಿಕ ನಾನು ಏನು ಮಾಡುತ್ತೇನೆ ಎಂಬ ಅರಿವೇ ನನಗಿರುವುದಿಲ್ಲ. ಆದರೆ ಈ ವರ್ತನೆಯನ್ನು ಈಗ ನೆನಪಿಸಿಕೊಂಡರೆ ನನಗೆ ನಾಚಿಕೆಯಾಗುತ್ತದೆ. ಈಗ ನಾನು ಕುಡಿತದಿಂದ ಮುಕ್ತವಾಗಿದ್ದೇನೆ. ಇದಕ್ಕೆ ಒಂದು ರೀತಿಯಲ್ಲಿ ಪತ್ನಿ ಅನುಷ್ಕಾ ಕೂಡ ಕಾರಣ. ಅವಳು ನನ್ನ ಬದುಕಿನಲ್ಲಿ ಬಂದ ಬಳಿಕ ಹಲವು ವಿಚಾರದಲ್ಲಿ ನಾನು ಸುಧಾರಿಸಿಕೊಂಡಿದ್ದೇನೆ ಎಂದು ಕೊಹ್ಲಿ ಹೇಳಿದರು.
ಅನುಷ್ಕಾಳೇ ನನ್ನ ಸ್ಫೂರ್ತಿ
ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವಿರಾಟ್ ಕೊಹ್ಲಿ ಅವರು ತಮ್ಮ ಪತ್ನಿಯ ಬಗ್ಗೆ ಮುಕ್ತವಾಗಿ ಮಾತನಾಡಿದ್ದರು. “ಅನುಷ್ಕಾ ಅವರ ಭೇಟಿ ನನ್ನ ಜೀವನದಲ್ಲಿ ಹೊಸ ದೃಷ್ಟಿಕೋನವನ್ನು ಕೊಟ್ಟಿದೆ. ಹಾಗೇ ಎಲ್ಲವನ್ನೂ ಸ್ವೀಕರಿಸುವ ಭಾವನೆಯನ್ನು ಬೆಳೆಸಿಕೊಳ್ಳಲು ಸಹಕರಿಸಿದೆ” ಎಂದು ಕೊಹ್ಲಿ ಹೇಳಿದ್ದರು.
ಇದನ್ನೂ ಓದಿ IPL 2023: ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ; ಐಪಿಎಲ್ ಫ್ರಾಂಚೈಸಿಗಳಿಗೆ ಬಿಸಿಸಿಐ ಆದೇಶ
“ನನ್ನ ಜೀವನವು ಸಂಪೂರ್ಣವಾಗಿ ವಿಭಿನ್ನ ದೃಷ್ಟಿಕೋನವನ್ನು ಹೊಂದಿತ್ತು. ನೀವು ಒಬ್ಬ ವ್ಯಕ್ತಿಯೊಂದಿಗೆ ಪ್ರೀತಿಯಲ್ಲಿ ಬಿದ್ದಾಗ, ನಿಮ್ಮೊಳಗೆ ಆ ಬದಲಾವಣೆಗಳನ್ನು ಪ್ರಕ್ರಿಯೆಗೊಳಿಸಲು ಪ್ರಾರಂಭಿಸುತ್ತೀರಿ. ಅವಳ ಜೀವನದ ದೃಷ್ಟಿಕೋನವು ವಿಭಿನ್ನವಾಗಿತ್ತು ಮತ್ತು ಅದು ನನ್ನನ್ನು ಉತ್ತಮವಾಗಿ ಬದಲಾಯಿಸಲು ಮತ್ತು ವಿಷಯಗಳನ್ನು ಹೆಚ್ಚು ಒಪ್ಪಿಕೊಳ್ಳುವಂತೆ ಪ್ರೇರೇಪಿಸಿತು. ತಾಯಿಯಾಗಿ ಅನುಷ್ಕಾ ಮಾಡಿದ ತ್ಯಾಗಗಳು ದೊಡ್ಡವು. ಅವಳನ್ನು ನೋಡಿದಾಗ, ನನಗೆ ಏನೇ ಸಮಸ್ಯೆಗಳಿದ್ದರೂ ಏನೂ ಅಲ್ಲ ಎಂದು ಎನಿಸಿಬಿಡುತ್ತದೆ” ಎಂದು ಕೊಹ್ಲಿ ಪತ್ನಿ ಅನುಷ್ಕಾ ಬಗ್ಗೆ ಮೆಚ್ಚುಗೆಯ ಮಾತುಗಳನಾಡಿದ್ದರು. ಸದ್ಯ ವಿರಾಟ್ ಕೊಹ್ಲಿ 16ನೇ ಆವೃತ್ತಿಯ ಐಪಿಎಲ್ಗಾಗಿ ಅಭ್ಯಾಸ ನಡೆಸುತ್ತಿದ್ದಾರೆ.
-
ಕರ್ನಾಟಕ14 hours ago
Karnataka Election: ಮೇ 10ರಂದು ಕರ್ನಾಟಕ ಚುನಾವಣೆ; ಮೇ 13ಕ್ಕೆ ಫಲಿತಾಂಶ ಎಂದು ಘೋಷಿಸಿದ ಚುನಾವಣಾ ಆಯೋಗ
-
ಕರ್ನಾಟಕ15 hours ago
Karnataka Election 2023 LIVE: ಕರ್ನಾಟಕದಲ್ಲಿ ಮೇ 10ಕ್ಕೆ ಮತದಾನ, 13ಕ್ಕೆ ರಿಸಲ್ಟ್, ಒಂದೇ ಹಂತದ ಎಲೆಕ್ಷನ್
-
ಕರ್ನಾಟಕ18 hours ago
Karnataka Election: ಕರ್ನಾಟಕ ಚುನಾವಣೆ ದಿನಾಂಕ ಇಂದು ಘೋಷಣೆ, ಇಂದಿನಿಂದಲೇ ನೀತಿ ಸಂಹಿತೆ ಜಾರಿ
-
ಕರ್ನಾಟಕ12 hours ago
Karnataka Election: ನೀತಿ ಸಂಹಿತೆಗೆ ಮೊದಲೇ ತುಂಬಿತು ಅಕ್ರಮದ ಪಾತ್ರೆ: 2018ರ ಹಣದ ಹೊಳೆಯನ್ನು ಈಗಲೇ ಮೀರಿಸಿದ ಕರ್ನಾಟಕ !
-
ಪ್ರಮುಖ ಸುದ್ದಿ9 hours ago
UPI transactions : ಯುಪಿಐ ಬಳಕೆ ಗ್ರಾಹಕರಿಗೆ ಸಂಪೂರ್ಣ ಉಚಿತ ಎಂದ ಎನ್ಪಿಸಿಐ, ಹಾಗಾದರೆ 1.1% ಶುಲ್ಕ ಯಾರಿಗೆ?
-
ಗ್ಯಾಜೆಟ್ಸ್10 hours ago
Google: ಗೂಗಲ್ಗೆ 1337 ಕೋಟಿ ರೂ. ದಂಡ, 30 ದಿನದಲ್ಲಿ ಪಾವತಿಸಲು ನ್ಯಾಯಮಂಡಳಿ ಆದೇಶ!
-
ಕರ್ನಾಟಕ12 hours ago
Karnataka Elections 2023 : ವಲಸಿಗ ಸಚಿವರ ಮೇಲೆ ಬೊಮ್ಮಾಯಿ ನಿಗಾ; ಹೆಬ್ಬಾರ್, ಮುನಿರತ್ನ ಕರೆಸಿಕೊಂಡು ಚರ್ಚೆ
-
ಕರ್ನಾಟಕ16 hours ago
Karnataka Elections 2023 : 8 ಸಚಿವರ ಸಹಿತ 35 ಶಾಸಕರಿಗೆ ಸೋಲಿನ ಭೀತಿ, ಈ ಬಾರಿ ಬಿಜೆಪಿಯಲ್ಲಿ 50 ಹೊಸ ಮುಖ?