Site icon Vistara News

Rishabh Pant | 16ನೇ ಆವೃತ್ತಿಯ ಐಪಿಎಲ್​ನಿಂದ ರಿಷಭ್​ ಪಂತ್​ ಔಟ್​; ಖಚಿತಪಡಿಸಿದ ಡೆಲ್ಲಿ ಕ್ಯಾಪಿಟಲ್ಸ್‌!

pant and ganguly

ನವದೆಹಲಿ: ಕಾರು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಟೀಮ್​ ಇಂಡಿಯಾ ಆಟಗಾರ ರಿಷಭ್​ ಪಂತ್(Rishabh Pant) 2023ರ ಐಪಿಎಲ್‌ನಿಂದ ಹೊರಗುಳಿಯಲಿದ್ದಾರೆ ಎಂದು ಡೆಲ್ಲಿ ಕ್ಯಾಪಿಟಲ್ಸ್ ಖಚಿತಪಡಿಸಿದೆ. ಡೆಲ್ಲಿ ಕ್ಯಾಪಿಟಲ್ಸ್‌ನ ಕ್ರಿಕೆಟ್‌ ನಿರ್ದೇಶಕ ಸೌರವ್ ಗಂಗೂಲಿ ಈ ವಿಚಾರವನ್ನು ಖಚಿತಪಡಿಸಿದ್ದಾರೆ.

“ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್​ ಪಂತ್ 16ನೇ ಆವೃತ್ತಿಯ ಐಪಿಎಲ್​ನಿಂದ ಸಂಪೂರ್ಣವಾಗಿ ಹೊರಗುಳಿಯಲಿದ್ದಾರೆ. ಪಂತ್​ ಅಲಭ್ಯದಲ್ಲಿ ತಂಡಕ್ಕೆ ಹೊಸ ನಾಯಕನನ್ನು ಶೀಘ್ರದಲ್ಲೇ ಆಯ್ಕೆ ಮಾಡಲಾಗುವುದು” ಎಂದು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ತಿಳಿಸಿದೆ.

ಈ ಬಗ್ಗೆ ಮಾತನಾಡಿರುವ ಸೌರವ್ ಗಂಗೂಲಿ, “2023ರ ಐಪಿಎಲ್‌ಗೆ ರಿಷಭ್​ ಪಂತ್ ಲಭ್ಯವಿರುವುದಿಲ್ಲ. ನಾನು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಜತೆ ಸಂಪರ್ಕದಲ್ಲಿದ್ದೇನೆ, ನಾವು ಈ ಬಾರಿ ತಂಡ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವಿದೆ. ಪಂತ್ ಗಾಯಗೊಂಡು ಹೊರಗುಳಿಯುತ್ತಿರುವುದು ತಂಡಕ್ಕೆ ಅಪಾರ ನಷ್ಟ. ಅವರು ಶೀಘ್ರ ಗುಣಮುಖರಾಗಿ ಮತ್ತೆ ಕ್ರಿಕೆಟ್​ ಆಡುವಂತಾಗಲಿ” ಎಂದು ಗಂಗೂಲಿ ತಿಳಿಸಿದ್ದಾರೆ.

ಸದ್ಯ ಪಂತ್​ ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಯಲ್ಲಿ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಂತ್​ ಪೂರ್ಣ ಪ್ರಮಾಣದ ಚೇತರಿಕೆಗೆ ಕನಿಷ್ಠ 6-9 ತಿಂಗಳು ಬೇಕಾಗಬಹುದು ಎಂದು ವೈದ್ಯರು ಈಗಾಗಲೇ ತಿಳಿಸಿದ್ದಾರೆ. ಆದ್ದರಿಂದ ಪಂತ್​ ಈ ವರ್ಷ ಕ್ರಿಕೆಟ್​ನಿಂದ ದೂರ ಉಳಿಯುವುದು ಖಚಿತವಾದಂತಿದೆ.

ಇದನ್ನೂ ಓದಿ | Rishabh Pant | ಪಂತ್​ ದಾಖಲಾಗಿರುವ ಕೋಕಿಲಾ ಬೆನ್​ ಆಸ್ಪತ್ರೆಯ ಚಿತ್ರ ಪ್ರಕಟಿಸಿದ ಊರ್ವಶಿಯ ತಾಯಿ; ಕಾನೂನು ಕ್ರಮ ಕೈಗೊಳ್ಳಿ ಎಂದರು ನೆಟ್ಟಿಗರು

Exit mobile version