ಬೆಂಗಳೂರು: ಕಾರು ಅಪಘಾತದಲ್ಲಿ ಗಾಯಗೊಂಡು ಕ್ರಿಕೆಟ್ನಿಂದ ದೂರ ಉಳಿದಿರುವ ಟೀಮ್ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್(Rishabh Pant) ಈ ವರ್ಷದ ಐಪಿಎಲ್ನಲ್ಲಿ(IPL 2024) ಮತ್ತೆ ಕ್ರಿಕೆಟ್ ಮೈದಾನಕ್ಕೆ ಇಳಿಯಲಿದ್ದಾರೆ. ಆ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್ಗೆ ಕಂಬ್ಯಾಕ್ ಮಾಡಲಿದ್ದಾರೆ. ಕ್ರಿಕೆಟ್ಗೆ ಮರಳುವ ಯತ್ನದಲ್ಲಿರುವ ಪಂತ್ ಅವರು ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ(ಎನ್ಸಿಎ)ಯಲ್ಲಿ ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ. ಜಿಮ್ನಲ್ಲಿ ವರ್ಕೌಟ್(Pant shares training session) ಮಾಡುತ್ತಿರುವ ವಿಡಿಯೊ ಹಂಚಿಕೊಂಡಿದ್ದಾರೆ.
ಕಳೆದ ವಾರ ಅಪಘಾತದ ಬಳಿಕ ಇದೇ ಮೊದಲ ಬಾರಿಗೆ ಸಂಪೂರ್ಣವಾಗಿ ಮೈದಾನದಲ್ಲಿ ಅಭ್ಯಾಸವನ್ನು ನಡೆಸಿದ ವಿಡಿಯೊವನ್ನು ಪಂತ್ ಹಂಚಿಕೊಂಡಿದ್ದರು. ಬೆಂಗಳೂರು ಸಮೀಪದ ಆಲೂರಿನಲ್ಲಿ ಪಂತ್ ಅಭ್ಯಾಸ ಪಂದ್ಯದಲ್ಲಿ ಭಾಗಿಯಾಗಿದ್ದರು. ರಿಷಭ್ ಪಂತ್ ಅವರು 2024ರ ಐಪಿಎಲ್ ಟೂರ್ನಿಯಲ್ಲಿ(IPL 2024 season) ಆಡಲಿದ್ದಾರೆ ಎಂಬ ವಿಚಾರ ಕಳೆದ ವರ್ಷ ದುಬೈನಲ್ಲಿ ನಡೆದ ಆಟಗಾರರ ಹರಾಜು ಪ್ರಕ್ರಿಯೆ ನಡೆಯುವ ವೇಳೆಯೇ ತಿಳಿದುಬಂದಿತ್ತು. ಆಟಗಾರರ ಮಿನಿ ಹರಾಜಿನಲ್ಲಿ ಪಂತ್ ಕೂಡ ಕಾಣಿಸಿಕೊಂಡಿದ್ದರು. ಫ್ರಾಂಚೈಸಿ ಜತೆ ಸೇರಿ ಕೆಲ ಆಟಗಾರರ ಬಿಡ್ಡಿಂಗ್ ಕೂಡ ಮಾಡಿದ್ದರು.
ಈಗಾಗಲೇ ಡೆಲ್ಲಿ ತಂಡದ ಕೋಚ್ ರಿಕಿ ಪಾಂಟಿಂಗ್ ಮತ್ತು ತಂಡದ ನಿರ್ದೇಶಕ ಸೌರವ್ ಗಂಗೂಲಿ ಅವರು ಪಂತ್ ಐಪಿಎಲ್ ಆಡುವುದು ಖಚಿತ ಎಂದು ಹೇಳಿದ್ದರು. ವರದಿಗಳ ಪ್ರಕಾರ ಪಂತ್ ಈ ಬಾರಿಯ ಐಪಿಎಲ್ನಲ್ಲಿ ಬ್ಯಾಟರ್ ಆಗಿ ಮಾತ್ರ ಮೈದಾನಕ್ಕೆ ಇಳಿಯಲಿದ್ದಾರೆ. ವಿಕೆಟ್ ಕೀಪಿಂಗ್ನಲ್ಲಿ ಕಾಣಿಸಿಕೊಳ್ಳುವುದಿಲ್ಲ. ಇದಲ್ಲದೆ ಅವರು ಡೆಲ್ಲಿ ತಂಡವನ್ನು ಕಪ್ತಾನನಾಗಿ ಈ ಬಾರಿ ಮುನ್ನಡೆಸಲಿದ್ದಾರೆ ಎಂದು ವರದಿ ತಿಳಿಸಿದೆ.
Pushing the limits 💪#RP17 pic.twitter.com/XyDmSWic3H
— Rishabh Pant (@RishabhPant17) February 27, 2024
ಪಂತ್ ಅವರಿಗೆ ಈ ಬಾರಿಯ ಐಪಿಎಲ್ ಟೂರ್ನಿ ಅವರ ಕ್ರಿಕೆಟ್ ಪುನರಾಗಮನಕ್ಕೆ ಉತ್ತಮ ವೇದಿಕೆಯಾಗಿದೆ. ಇಲ್ಲಿ ಪಂತ್ ತಮ್ಮ ಹಳೇಯ ಪ್ರದರ್ಶನವನ್ನೇ ತೋರ್ಪಡಿಸಿದರೆ ಐಪಿಎಲ್ ಮುಕ್ತಾಯದ ಬಳಿಕ ಆರಂಭಗೊಳ್ಳಲಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆದರೂ ಅಚ್ಚರಿಯಿಲ್ಲ. 17ನೇ ಆವೃತ್ತಿಯ ಐಪಿಎಲ್ ಟೂರ್ನಿ ಇದೇ ಮಾರ್ಚ್ 22 ರಿಂದ ಆರಂಭಗೊಳ್ಳಲಿದೆ.
ಇದನ್ನೂ ಓದಿ Rishab Pant : ಐಪಿಎಲ್ನಲ್ಲಿ ರಿಷಭ್ ಪಂತ್ ಆಡುವುದ ಪಕ್ಕಾ; ಆದರೆ ಒಂದು ಕಂಡೀಷನ್
ಜಿಮ್ನಲ್ಲಿ ವೇಟ್ಲೀಫ್ಟಿಂಗ್ ಮತ್ತು ಇತರ ವರ್ಕೌಟ್ ಮಾಡುತ್ತಿರುವ ವಿಡಿಯೊವನ್ನು ಪಂತ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಮಿತಿಗಳಿಗಿಂತ ಹೆಚ್ಚಿನದ್ದೇ ಮಾಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಐಪಿಎಲ್ನಲ್ಲಿ ಕಮ್ಬ್ಯಾಕ್ ಮಾಡುವುದು ಖಚಿತ ಹಾಗೂ ಫಿಟ್ನೆಸ್ಗಾಗಿ ಹೆಚ್ಚಿನ ಅಭ್ಯಾಸ ನಡೆಸುತ್ತಿದ್ದೇನೆ ಎನ್ನುವ ಎನ್ನುವ ಸ್ಪಷ್ಟ ಸಂದೇಶವನ್ನು ಅಭಿಮಾನಿಗಳಿಗೆ ರವಾನಿಸಿದ್ದಾರೆ.
2022ರ ಡಿಸೆಂಬರ್ 30ರಂದು(rishabh pant accident date) ರಿಷಭ್ ಪಂತ್ ಅವರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರು ಡಿವೈಡರ್ಗೆ ಡಿಕ್ಕಿ(rishabh pant accident) ಹೊಡೆದಿತ್ತು. ಈ ಭೀಕರ ಅಪಘಾತದಲ್ಲಿ ಅವರ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು. ಆದರೆ, ಪಂತ್ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದರು.