Site icon Vistara News

Rishabh Pant | ಐಪಿಎಲ್​ಗೆ ರಿಷಭ್​ ಪಂತ್​ ಅಲಭ್ಯ​; ಡೆಲ್ಲಿ ತಂಡಕ್ಕೆ ಡೇವಿಡ್​ ವಾರ್ನರ್​ ನಾಯಕ?

david warner

ನವದೆಹಲಿ: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಿಷಭ್‌ ಪಂತ್‌ ಚೇತರಿಸಿಕೊಳ್ಳಲು ಕನಿಷ್ಠ 6 ತಿಂಗಳ ಸಮಯ ಬೇಕಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅವರ ಅನುಪಸ್ಥಿತಿಯಲ್ಲಿ 16ನೇ ಆವೃತ್ತಿಯ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಆಸ್ಟ್ರೇಲಿಯಾದ ಕ್ರಿಕೆಟಿಗ ಡೇವಿಡ್‌ ವಾರ್ನರ್‌ ಮುನ್ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಶುಕ್ರವಾರ (ಡಿಸೆಂಬರ್​ 30) ಪಂತ್​ ದೆಹಲಿಯಿಂದ ಉತ್ತರಾಖಂಡದ ರೂರ್ಕಿಯಲ್ಲಿರುವ ತಮ್ಮ ಮನೆಗೆ ಪ್ರಯಾಣಿಸುತ್ತಿದ್ದ ವೇಳೆ ಕಾರು ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡಿದ್ದರು. ಸದ್ಯ ಅವರು ಡೆಹ್ರಾಡೂನ್​ನ ಮ್ಯಾಕ್ಸ್​ ಆಸ್ಪತ್ರೆಯಲ್ಲಿ ಪ್ಲಾಸ್ಟಿಕ್​ ಸರ್ಜರಿ ಮತ್ತು ಕೆಲ ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಂತ್​ ಸಂಪೂರ್ಣವಾಗಿ ಚೇತರಿಕೆ ಕಾಣಲು ಕನಿಷ್ಠ 6 ತಿಂಗಳು ಸಮಯ ಬೇಕಾಗಬಹುದು ಎಂದು ವೈದ್ಯರು ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆ ಅವರು ಆಸ್ಟ್ರೇಲಿಯಾ ವಿರುದ್ಧದ ಹಾಗೂ ಐಪಿಎಲ್​ ಟೂರ್ನಿಯಿಂದ ಸಂಪೂರ್ಣವಾಗಿ ಹೊರಗುಳಿಯುವುದು ಖಚಿತವಾಗಿದೆ. ಪಂತ್​ ಅಲಭ್ಯದಿಂದ ಡೆಲ್ಲಿ ಕ್ಯಾಪಿಟಲ್ಸ್​ 16ನೇ ಆವೃತ್ತಿಗೆ ಹೊಸ ನಾಯಕನ ಹುಡುಕಾಟದಲ್ಲಿ ತೊಡಗಿದೆ. ಮೂಲಗಳ ಪ್ರಕಾರ ಆಸ್ಟ್ರೇಲಿಯಾದ ಎಡಗೈ ಆಟಗಾರ ಡೇವಿಡ್​ ವಾರ್ನರ್​ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಡೇವಿಡ್ ವಾರ್ನರ್‌ ಈ ಹಿಂದೆ ಸನ್‌ರೈಸ​ರ್ಸ್‌ ಹೈದರಾಬಾದ್‌ ತಂಡವನ್ನು ಮುನ್ನಡೆಸಿದ ಅನುಭವ ಹೊಂದಿದ್ದಾರೆ. ಜತೆಗೆ 2016ರಲ್ಲಿ ಅವರ ನಾಯಕತ್ವದಲ್ಲಿ ಸನ್‌ರೈಸ​ರ್ಸ್‌ ಹೈದರಾಬಾದ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಣಿಸಿ ಚೊಚ್ಚಲ ಬಾರಿಗೆ ಚಾಂಪಿಯನ್‌ ಆಗಿತ್ತು. ಸದ್ಯ ವಾರ್ನರ್​ ಉತ್ತಮ ಬ್ಯಾಟಿಂಗ್​ ಫಾರ್ಮ್​ನಲ್ಲಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ದ್ವಿಶತಕ ಬಾರಿಸಿ ಮಿಂಚಿದ್ದಾರೆ. ಈ ಎಲ್ಲ ದೃಷ್ಟಿಕೋನದಿಂದ ವಾರ್ನರ್​ಗೆ ನಾಯಕತ್ವದ ಸಿಗುವುದು ಬಹುತೇಕ ಖಚಿತ ಎನ್ನುವಂತಿದೆ.

ಇದನ್ನೂ ಓದಿ | Rishabh Pant | ಪಂತ್ ಜೀವ ಉಳಿಸಿದ ಚಾಲಕ, ಕಂಡಕ್ಟರ್​ಗೆ ಗಣರಾಜ್ಯೋತ್ಸವದಂದು ಸನ್ಮಾನ; ಸಿಎಂ ಪುಷ್ಕರ್

Exit mobile version