ನವದೆಹಲಿ: ಕಾರು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಟೀಮ್ ಇಂಡಿಯಾ ಆಟಗಾರ ರಿಷಭ್ ಪಂತ್ (Rishabh Pant) ಅವರ ಎಂಆರ್‌ಐ ಪರೀಕ್ಷೆಯ ವರದಿ ಬಂದಿದೆ. ಸದ್ಯ ಪಂತ್ಗೆ ಯಾವುದೇ ಗಂಭೀರ ಗಾಯವಾಗಿಲ್ಲ ಎಂದು ತಿಳಿದು ಬಂದಿದೆ.
ಶುಕ್ರವಾರ ಕಾರು ಅಪಘಾತಗೊಂಡು ಗಾಯಗೊಂಡ ಪಂತ್ ಸದ್ಯ ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಅವರ ಮೆದುಳು ಮತ್ತು ಬೆನ್ನುಮೂಳೆಯ ಎಂಆರ್‌ಐ ರಿಸಲ್ಟ್ ಬಂದಿದ್ದು, ಅವರಿಗೆ ಮೇಜರ್ ಸಮಸ್ಯೆ ಇಲ್ಲ ಎಂದು ತಿಳಿದು ಬಂದಿದೆ.
ಶುಕ್ರವಾರ ಪಂತ್ಗೆ ಮುಖದ ಮತ್ತು ದೇಹದ ಗಾಯಗಳನ್ನು ಸರಿಪಡಿಸಲು ಪ್ಲಾಸ್ಟಿಕ್ ಸರ್ಜರಿ ಮಾಡಲಾಗಿತ್ತು ಆದರೆ ನೋವು ಮತ್ತು ಊತದಿಂದಾಗಿ ಮೆದುಳು ಮತ್ತು ಬೆನ್ನುಮೂಳೆಯ ಎಂಆರ್‌ಐ ಸ್ಕ್ಯಾನ್ ಪರೀಕ್ಷೆಯನ್ನು ಶನಿವಾರಕ್ಕೆ ಮುಂದೂಡಲಾಗಿತ್ತು. ಇದೀಗ ಈ ಪರೀಕ್ಷೆಯೂ ನಡೆದಿದ್ದು ಪಂತ್ಗೆ ಯಾವುದೇ ಅಪಾಯವಿಲ್ಲ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಆದರೆ ಮೊಣಕಾಲಿನ ಎಂಆರ್‌ಐ ಸ್ಕ್ಯಾನ್ ವರದಿ ಇನ್ನಷ್ಟೇ ಬರಬೇಕಿದೆ.
ಇದನ್ನೂ ಓದಿ| Rishabh Pant | ರಿಷಭ್ ಪಂತ್ ಜೀವ ಉಳಿಸಿದ ಬಸ್ ಚಾಲಕ ಮತ್ತು ಕಂಡಕ್ಟರ್ಗೆ ರಾಜ್ಯ ಸರ್ಕಾರದಿಂದ ಗೌರವ ಸನ್ಮಾನ