Site icon Vistara News

Rishabh Pant: ಕೊನೆಗೂ ಪಂತ್ ಕಮ್​ಬ್ಯಾಕ್​ಗೆ ವೇದಿಕೆ ಸಿದ್ಧ; ನಾಯಕನಾಗಿ ಕಣಕ್ಕೆ

rishabh Pant ipl

ನವದೆಹಲಿ: ಕಳೆದ ವರ್ಷದ ಡಿಸೆಂಬರ್​ನಲ್ಲಿ ಅಪಘಾತಕ್ಕೆ ಒಳಗಾಗಿ ಚೇತರಿಕೆ ಕಾಣುತ್ತಿರುವ ಟೀಮ್​ ಇಂಡಿಯಾದ ಯುವ ಆಟಗಾರ ರಿಷಭ್​ ಪಂತ್(Rishabh Pant) ಅವರು ಮತ್ತೆ ಕ್ರಿಕೆಟ್ ಕ್ಷೇತ್ರಕ್ಕೆ ಪುನರಾಗಮನ ಮಾಡಲು ವೇದಿಕೆ ಸಿದ್ಧವಾಗಿದೆ. ಮುಂದಿನ ವರ್ಷ ನಡೆಯುವ ಐಪಿಎಲ್​ ಆವೃತ್ತಿಯಲ್ಲಿ ಅವರು ಕಣಕ್ಕಿಳಿಯುವುದು ಖಚಿತ ಎಂದು ಡೆಲ್ಲಿ ಕ್ಯಾಪಿಟಲ್ಸ್​ ದೃಢಪಡಿಸಿದೆ.

“ಸುಮಾರು ಒಂದು ವರ್ಷದಿಂದ ಕ್ರಿಕೆಟ್​ ಕ್ಷೇತ್ರದಿಂದ ಹೊರಗುಳಿದಿರುವ ಭಾರತೀಯ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ 2024ರ ಐಪಿಎಲ್ ಋತುವಿನಲ್ಲಿ ಆಡುವ ಜತೆಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಲಿದ್ದಾರೆ” ಎಂದು ಮ್ಯಾನೇಜ್‌ಮೆಂಟ್ ಖಚಿತಪಡಿಸಿದೆ. ಈ ಸುದ್ದಿ ಕೇಳಿ ಪಂತ್​ ಅವರ ಅಭಿಮಾನಿಗಳು ಸಂತಸಗೊಂಡಿದ್ದಾರೆ.

ಪಂತ್ ಅವರ ಚೇತರಿಕೆಯ ಬಗ್ಗೆ ಡೆಲ್ಲಿ ಕ್ಯಾಪಿಟಲ್ಸ್​ ಆಡಳಿತ ಮಂಡಳಿ ನಿಕಟವಾಗಿ ಕಣ್ಣಿಟ್ಟಿದೆ. ಪಂತ್​ ಕೂಡ ಕೆಲ ದಿನಗಳ ಹಿಂದೆ ಕಠಿಣ ಫಿಟ್​ನೆಸ್​ ಅಭ್ಯಾಸ ನಡೆಸುವ ವಿಡಿಯೊವನ್ನು ಹಂಚಿಕೊಂಡು ಎಲ್ಲ ನೋವಿನಿಂದ ಹೊರಬಂದಿರುವುದಾಗಿ ತಿಳಿಸಿದ್ದರು. ಈ ಪೋಸ್ಟ್​ ಕಂಡ ಕೂಡಲೇ ಅವರು ಸದ್ಯದಲ್ಲೇ ಕ್ರಿಕೆಟ್​ಗೆ ಕಮ್​ಬ್ಯಾಕ್​ ಮಾಡುತ್ತಾರೆ ಎಂದು ನಿರೀಕ್ಷೆ ಮಾಡಲಾಗಿತ್ತು. ಇದೀಗ ಡೆಲ್ಲಿ ಫ್ರಾಂಚೈಸಿ ಪಂತ್​ ಪುನರಾಗಮನದ ಮಾಹಿತಿ ನೀಡಿದೆ.

ಪ್ರಸ್ತುತ, ಪಂತ್ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ರಿಹ್ಯಾಬ್​ಗೆ ಒಳಗಾಗಿದ್ದಾರೆ. ವಿಶ್ವಕಪ್​ ಟೂರ್ನಿಯ ವೇಳೆಯೆ ಡೆಲ್ಲಿ ತಂಡದ ಕ್ರಿಕೆಟ್ ನಿರ್ದೇಶಕ ಸೌರವ್ ಗಂಗೂಲಿ ಅವರು ಪಂತ್​ 2024 ಐಪಿಎಲ್ ಆಡುವುದು ಖಚಿತ ಎಂದು ಹೇಳಿದ್ದರು. ಐಪಿಎಲ್ 2023 ರಲ್ಲಿ ಪಂತ್ ಅನುಪಸ್ಥಿತಿಯಲ್ಲಿ ಡೆಲ್ಲಿ ತಂಡವನ್ನು ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ ಮುನ್ನಡೆಸಿದ್ದರು. ಆದರೆ ತಂಡ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಸಂಪೂರ್ಣವಾಗಿ ವಿಫಲಾಗಿತ್ತು. ಪಂತ್​ ಅವರ ಚೇತರಿಕೆಗಾಗಿ ಅಂದು ಡೆಲ್ಲಿ ತಂಡ ಪಂತ್​ ಜೆರ್ಸಿಯನ್ನು ಆಟಗಾರರ ಡಗೌಟ್​ನಲ್ಲಿ ನೇತು ಹಾಕಿ ಅವರಿಗೆ ಆತ್ಮವಿಶ್ವಾಸ ತುಂಬುವ ಕಾರ್ಯ ಮಾಡಿತ್ತು.

ಇದನ್ನೂ ಓದಿ Rishabh Pant: ಮಹೇಂದ್ರ ಸಿಂಗ್ ಧೋನಿ ಜತೆ ಪಾರ್ಟಿ ಮಾಡಿದ ರಿಷಭ್​ ಪಂತ್

ಬಹುತೇಕ ಚೇತರಿಕೆ ಕಂಡಿರುವ ಅವರ ಫಿಟ್ನೆಸ್​ ಮೇಲೆ ಬಿಸಿಸಿಐ ವೈದ್ಯಕಿಯ ತಂಡ ನಿಗಾ ಇರಿಸಿದೆ. ಪಂತ್​ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಮರಳ ಬೇಕಾದರ ದೇಶೀಯ ಕ್ರಿಕೆಟ್​ನಲ್ಲಿ ಆಡಿ ತಮ್ಮ ಫಿಟ್​ಸೆನ್​ ಸಾಬೀತುಪಡಿಸಬೇಕಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಹೇಳಿರುವುದಾಗಿ ಇನ್​ಸೈಡ್​ ಸ್ಪೋರ್ಟ್ಸ್​ಗೆ ವರದಿ ಮಾಡಿದೆ.

ಡಿವೈಡರ್​ಗೆ ಡಿಕ್ಕಿಯಾಗಿದ್ದ ಕಾರು

ಕಳೆದ ಡಿಸೆಂಬರ್​ 30ರಂದು(rishabh pant accident date) ರಿಷಭ್​ ಪಂತ್ ಅವರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರು ಡಿವೈಡರ್​ಗೆ ಡಿಕ್ಕಿ(rishabh pant accident) ಹೊಡೆದಿತ್ತು. ಘಟನೆಯಲ್ಲಿ ಅವರ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು. ಸುಟ್ಟ ಗಾಯಗಳು ಹಾಗೂ ಮಂಡಿಯ ಗಾಯಗೊಂಡಿಗೆ ರಿಷಭ್​ ಪಂತ್​ ಪಾರಾಗಿದ್ದರು. ಡೆಹ್ರಾಡೂನ್​ನಲ್ಲಿ ಆರಂಭದಲ್ಲಿ ಚಿಕಿತ್ಸೆ ಪಡೆದಿದ್ದ ಅವರನ್ನು ಬಳಿಕ ಮುಂಬಯಿಯ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು.

Exit mobile version