Rishabh Pant | ರಿಷಭ್​ ಪಂತ್​ ಮೊಣಕಾಲಿನ ಶಸ್ತ್ರಚಿಕಿತ್ಸೆ ಯಶಸ್ವಿ; ಬಿಸಿಸಿಐ ಮಾಹಿತಿ - Vistara News

ಕ್ರಿಕೆಟ್

Rishabh Pant | ರಿಷಭ್​ ಪಂತ್​ ಮೊಣಕಾಲಿನ ಶಸ್ತ್ರಚಿಕಿತ್ಸೆ ಯಶಸ್ವಿ; ಬಿಸಿಸಿಐ ಮಾಹಿತಿ

ಟೀಮ್​ ಇಂಡಿಯಾದ ಆಟಗಾರ ರಿಷಭ್​ ಪಂತ್​ಗೆ ಮೊಣಕಾಲಿನ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.

VISTARANEWS.COM


on

Rishabh Pant
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮುಂಬಯಿ: ಕಾರು ಅಪಘಾತದಲ್ಲಿ ಗಾಯಗೊಂಡ ಟೀಮ್​ ಇಂಡಿಯಾ ಕ್ರಿಕೆಟಿಗ ರಿಷಭ್​ ಪಂತ್​ಗೆ​(Rishabh Pant) ಮುಂಬೈ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಮೊಣಕಾಲಿನ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

“ರಿಷಭ್ ಪಂತ್ ಶುಕ್ರವಾರದಂದು ಮೊಣಕಾಲಿನ ಅಸ್ಥಿರಜ್ಜು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.ಅವರು ಈಗ ವೈದ್ಯಕೀಯ ಚಿಕಿತ್ಸೆಯಲ್ಲಿದ್ದಾರೆ. ಜತೆಗೆ ಉತ್ತಮ ಚೇತರಿಕೆಯನ್ನು ಕಾಣುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ಡಾ. ದಿನ್ಶಾ ಪರ್ದಿವಾಲಾ ಮತ್ತು ಬಿಸಿಸಿಐ ಕ್ರೀಡಾ ವಿಜ್ಞಾನ-ಔಷಧ ತಂಡವು ಸಂಪೂರ್ಣ ನಿಗಾವಹಿಸಲಿದೆ” ಎಂದು ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿವೆ.

ಸದ್ಯ ಪಂತ್​ ಅಂಧೇರಿ ಪಶ್ಚಿಮದಲ್ಲಿರುವ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿಸೆಂಬರ್​ 30 ರಂದು ಭೀಕರ ಕಾರು ಅಪಘಾತದಲ್ಲಿ ಪಂತ್​ ಗಾಯಗೊಂಡಿದ್ದರು. ಬಳಿಕ ಡೆಹ್ರಾಡೂನ್​ನ ಮ್ಯಾಕ್ಸ್​ ಆಸ್ಪತ್ರೆಗೆ ದಾಖಲಾಗಿದ್ದರು. ಇಲ್ಲಿ ಪಂತ್​ಗೆ ಮುಖದ ಮತ್ತು ಹಣೆಯ ಗಾಯಕ್ಕೆ ಪ್ಲಾಸ್ಟಿಕ್​ ಸರ್ಜರಿ ಮಾಡಲಾಗಿತ್ತು. ಇದಾದ ಬಳಿಕ ಮೊಣಕಾಲಿನ ಶಸ್ತ್ರಚಿಕಿತ್ಸೆ ಮುಂಬಯಿಗೆ ಸ್ಥಳಾಂತರಿಸಲಾಗಿತ್ತು. ಇದೀಗ ಪಂತ್​ಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆದಿದೆ.

ರಿಷಭ್​ ಪಂತ್​ ಗಾಯದಿಂದ ಸಂಪೂರ್ಣ ಚೇತರಿಕೆ ಕಾಣಲು ಸಮಾರು 9 ತಿಂಗಳು ಸಮಯ ಬೇಕಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಆದ್ದರಿಂದ ಪಂತ್​ ಈ ವರ್ಷ ಕ್ರಿಕೆಟ್​ ಆಡುವುದು ಅನುಮಾನ ಎನ್ನಲಾಗಿದೆ.

ಇದನ್ನೂ ಓದಿ | Rishabh Pant and Urvashi Rautela | ಊರ್ವಶಿ ರೌಟೇಲಾ ಮತ್ತು ರಿಷಭ್​ ಪಂತ್​ ರಗಳೆ ಶುರುವಾಗಿದ್ದು ಎಲ್ಲಿಂದ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಟೀಮ್‌ ಇಂಡಿಯಾಗೆ ವೈಭವ್‌ ಸೂರ್ಯವಂಶಿ ಎಂಟ್ರಿ

VISTARANEWS.COM


on

ಇಂಗ್ಲೆಂಡ್‌ ಮತ್ತು ಐರ್ಲೆಂಡ್‌ ಟಿ-20 ಕ್ರಿಕೆಟ್‌ ಸರಣಿಗೆ ಭಾರತ ತಂಡ ಪ್ರಕಟವಾಗಿದೆ. ಟಿ-20 ವಿಶ್ವಕಪ್‌ ಗೆದ್ದುಕೊಟ್ಟಿದ್ದ ಸೂರ್ಯ ಕುಮಾರ್‌ ಯಾದವ್‌ ಬದಲಿಗೆ ಭಾರತ ತಂಡ ನಾಯಕನ ಸ್ಥಾನವನ್ನು ಶ್ರೇಯಸ್‌ ಅಯ್ಯರ್‌ಗೆ ನೀಡಲಾಗಿದೆ. ತಿಲಕ್‌ ವರ್ಮಾ ಉಪಸನಾಯಕರಾಗಿ ಆಯ್ಕೆಯಾಗಿದ್ದಾರೆ.

ಭಾರತ ತಂಡಕ್ಕೆ 15 ರ ಹರೆಯದ ವೈಭವ್‌ ಸೂರ್ಯವಂಶಿ ಆಯ್ಕೆಯಾಗಿದ್ದು, ಭಾರತ ತಂಡದಲ್ಲಿ ಸ್ಥಾನ ಪಡೆದ ಅತ್ಯಂತ ಕಿರಿಯ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ಜಪಾನ್‌ನಲ್ಲಿ ನಡೆಯಲಿರುವ 2026ರ ಏಷ್ಯನ್ ಗೇಮ್ಸ್‌ಗೆ ಭಾರತ ಕ್ರಿಕೆಟ್ ತಂಡವನ್ನು ಪ್ರಕಟವಾಗಿದೆ. ಟಿಸಲಾಗಿದೆ. ತಂಡದ ನಾಯಕತ್ವದ ಜವಾಬ್ದಾರಿಯನ್ನು ಶ್ರೇಯಸ್‌ ಅಯ್ಯರ್‌ ಅವರಿಗೆ ನೀಡಲಾಗಿದ್ದು, ಉಪನಾಯಕರಾಗಿ ತಿಲಕ್‌ ವರ್ಮಾ ಆಯ್ಕೆಯಾಗಿದ್ದಾರೆ.

ವಿಕೆಟ್ ಕೀಪರ್ ವಿಭಾಗದಲ್ಲಿ ಸಂಜು ಸ್ಯಾಮ್ಸನ್‌ ಹಾಗೂ ಇಶಾನ್‌ ಕಿಶನ್‌ ಸ್ಥಾನ ಪಡೆದಿದ್ದಾರೆ. ವೇಗದ ಬೌಲಿಂಗ್ ದಾಳಿಯನ್ನು ಜಸ್‌ಪ್ರೀತ್‌ ಬುರ್ಮಾ, ಅರ್ಷದೀಪ್‌ ಸಿಂಗ್‌ ಹಾಗೂ ಹರ್ಷಿತ್‌ ರಾಣಾ ಮುನ್ನಡೆಸಲಿದ್ದಾರೆ.

ಸ್ಪಿನ್ ವಿಭಾಗದಲ್ಲಿ ರವಿ ಬಿಷ್ಣೋಯ್‌, ಅಕ್ಷರ್‌ ಪಟೇಲ್‌, ವಾಷಿಂಗ್‌ಟನ್‌ ಸುಂದರ್‌ ಹಾಗೂ ವರುಣ್‌ ಚಕ್ರವರ್ತಿ ಅವರಿಗೆ ಅವಕಾಶ ದೊರೆತಿದೆ.

ಇನ್ನೂ ಬ್ಯಾಟಿಂಗ್ ಮತ್ತು ಆಲ್‌ರೌಂಡರ್ ವಿಭಾಗದಲ್ಲಿ ಅಭಿಷೇಕ್‌ ಶರ್ಮಾ, ನಿತೀಶ್‌ ಕುಮಾರ್‌ ರೆಡ್ಡಿ ಹಾಗೂ ಶಿವಂ ದುಬೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇಂಗ್ಲೆಂಡ್‌ ಟಿ-20 ಸರಣಿ, ಏಷ್ಯನ್‌ ಗೇಮ್ಸ್‌ -2026 ರ ಭಾರತ ತಂಡದಲ್ಲಿ ಐಪಿಎಲ್‌ ಹೀರೋ ವೈಭವ್‌ ಸೂರ್ಯವಂಶಿ ಸ್ಥಾನ ಪಡೆದಿದ್ದಾರೆ.

Continue Reading

Latest

ಶಿಸ್ತು ಮರೆತರಾ ರಿಯಾನ್ ಪರಾಗ್? ಕಾನೂನು ಸಂಕಷ್ಟಕ್ಕೆ ಸಿಲುಕುತ್ತಾರಾ ರಾಜಸ್ಥಾನ ರಾಯಲ್ಸ್ ಆಟಗಾರ?

VISTARANEWS.COM


on

ಶಿಸ್ತು ಮರೆತರಾ ರಿಯಾನ್ ಪರಾಗ್? ಕಾನೂನು ಸಂಕಷ್ಟಕ್ಕೆ ಸಿಲುಕುತ್ತಾರಾ ರಾಜಸ್ಥಾನ ರಾಯಲ್ಸ್ ಆಟಗಾರ?

ಪಂಜಾಬ್ ಕಿಂಗ್ಸ್ ವಿರುದ್ಧದ ಐಪಿಎಲ್ ಪಂದ್ಯದ ವೇಳೆ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ದೊಡ್ಡ ವಿವಾದಕ್ಕೆ ಸಿಲುಕಿದ್ದಾರೆ. ಪಂದ್ಯದ ನಡುವೆ ಡ್ರೆಸ್ಸಿಂಗ್ ರೂಮ್‌ನಲ್ಲಿ ಕುಳಿತಿದ್ದ ಪರಾಗ್ ‘ವೇಪಿಂಗ್’ (ಇ-ಸಿಗರೇಟ್) ಬಳಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಭಾರತದಲ್ಲಿ 2019 ರಿಂದಲೇ ಇ-ಸಿಗರೇಟ್ ಬಳಕೆಯನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕವಾಗಿ ಮತ್ತು ಕ್ರೀಡಾಂಗಣದ ಶಿಸ್ತು ಉಲ್ಲಂಘಿಸಿ ಈ ರೀತಿ ನಡೆದುಕೊಂಡಿರುವುದು ಈಗ ಅವರಿಗೆ ಕಾನೂನು ಸಂಕಷ್ಟ ತಂದೊಡ್ಡುವ ಸಾಧ್ಯತೆ ಇದ

ಈ ಜವಾಬ್ದಾರಿರಹಿತ ವರ್ತನೆಯಿಂದಾಗಿ ರಿಯಾನ್ ಪರಾಗ್ ಅವರಿಗೆ ಭಾರಿ ದಂಡ ಅಥವಾ ಪಂದ್ಯಗಳಿಂದ ನಿಷೇಧ ಹೇರುವ ಭೀತಿ ಎದುರಾಗಿದೆ. ಭಾರತೀಯ ಕಾನೂನಿನ ಪ್ರಕಾರ ಇ-ಸಿಗರೇಟ್ ಬಳಕೆಯ ಮೊದಲ ಅಪರಾಧಕ್ಕೆ ಒಂದು ವರ್ಷದವರೆಗೆ ಜೈಲು ಶಿಕ್ಷೆ ಅಥವಾ ₹1 ಲಕ್ಷದವರೆಗೆ ದಂಡ ವಿಧಿಸಲು ಅವಕಾಶವಿದೆ. ಇದರ ಜೊತೆಗೆ ಬಿಸಿಸಿಐ (BCCI) ಕೂಡ ಕ್ರೀಡಾ ಶಿಸ್ತಿನ ಉಲ್ಲಂಘನೆಗಾಗಿ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ. ಯುವಕರಿಗೆ ಮಾದರಿಯಾಗಬೇಕಾದ ಆಟಗಾರನ ಈ ವರ್ತನೆಯು ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿ ಹಾಗೂ ಐಪಿಎಲ್ ಆಡಳಿತ ಮಂಡಳಿಗೆ ಭಾರಿ ಮುಜುಗರ ತಂದಿದೆ.

Continue Reading

ಕ್ರೀಡೆ

ಕಿಂಗ್ ಕೊಹ್ಲಿಗೆ ಟಕ್ಕರ್ ಕೊಟ್ಟ ಯುವ ಕಿಡಿ: ಆರೆಂಜ್ ಕ್ಯಾಪ್ ರೇಸ್‌ನಲ್ಲಿ ವಿರಾಟ್ ಹಿಂದಿಕ್ಕಿದ ವೈಭವ್ ಸೂರ್ಯವಂಶಿ!

VISTARANEWS.COM


on

ಐಪಿಎಲ್ 2026ರ ಪ್ಲೇಆಫ್‌ ಹಂತ ಹತ್ತಿರವಾಗುತ್ತಿದ್ದಂತೆ ಆರೆಂಜ್ ಕ್ಯಾಪ್‌ಗಾಗಿ ದಿಗ್ಗಜ ಆಟಗಾರರ ನಡುವೆ ಭಾರಿ ಪೈಪೋಟಿ ಶುರುವಾಗಿದೆ. ಈ ರೇಸ್‌ನಲ್ಲಿ ರಾಜಸ್ತಾನ ರಾಯಲ್ಸ್‌ನ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಅವರು ಆರ್‌ಸಿಬಿ ಸ್ಟಾರ್ ವಿರಾಟ್ ಕೊಹ್ಲಿ ಅವರನ್ನೇ ಹಿಂದಿಕ್ಕಿ ಸದ್ದು ಮಾಡುತ್ತಿದ್ದಾರೆ. ಹೈದ್ರಾಬಾದ್ ವಿರುದ್ಧದ ಪಂದ್ಯದಲ್ಲಿ ಕೇವಲ 36 ಎಸೆತಗಳಲ್ಲಿ 12 ಸಿಕ್ಸರ್‌ಗಳ ನೆರವಿನಿಂದ ಶತಕ ಸಿಡಿಸಿದ ಸೂರ್ಯವಂಶಿ, ಸದ್ಯ 357 ರನ್‌ಗಳೊಂದಿಗೆ ರೇಸ್‌ನಲ್ಲಿ ಮೂರನೇ ಸ್ಥಾನಕ್ಕೇರಿದ್ದಾರೆ. ಇತ್ತ ಎಂಟು ಪಂದ್ಯಗಳಿಂದ 351 ರನ್ ಗಳಿಸಿರುವ ಕಿಂಗ್ ಕೊಹ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಪ್ರಸ್ತುತ ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಸನ್‌ರೈಸರ್ಸ್‌ ಹೈದ್ರಾಬಾದ್ ತಂಡದ ಅಭಿಷೇಕ್ ಶರ್ಮಾ 380 ರನ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದು, ಆರೆಂಜ್ ಕ್ಯಾಪ್ ಧರಿಸಿದ್ದಾರೆ. ಪಂಜಾಬ್ ಕಿಂಗ್ಸ್ ತಂಡದ ನಾಯಕ ಕೆ.ಎಲ್. ರಾಹುಲ್ 358 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದರೆ, ಅವರಿಗಿಂತ ಕೇವಲ ಒಂದು ರನ್ ಕಡಿಮೆ (357 ರನ್) ಹೊಂದಿರುವ ವೈಭವ್ ಸೂರ್ಯವಂಶಿ ಮೂರನೇ ಸ್ಥಾನದಲ್ಲಿದ್ದಾರೆ. 234.86ರ ಭೀಕರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿರುವ ಸೂರ್ಯವಂಶಿ ಅವರ ಆಟ ನೋಡಲು ಅಭಿಮಾನಿಗಳು ಕ್ರೀಡಾಂಗಣಕ್ಕೆ ಲಗ್ಗೆ ಇಡುತ್ತಿದ್ದಾರೆ. ಹೆನ್ರಿಚ್ ಕ್ಲಾಸೆನ್ 349 ರನ್‌ಗಳೊಂದಿಗೆ ಐದನೇ ಸ್ಥಾನ ಪಡೆದಿದ್ದು, ಪೈಪೋಟಿ ತೀವ್ರಗೊಂಡಿದೆ.

ವೈಭವ್ ಸೂರ್ಯವಂಶಿ ಅವರ ಈ ಸಾಧನೆಗೆ ಅವರ ಅದ್ಭುತ ಫಾರ್ಮ್ ಕಾರಣವಾಗಿದೆ. ಗುಜರಾತ್ ಟೈಟನ್ಸ್‌ ವಿರುದ್ಧ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿದ್ದ ಅವರು, ಈಗ ಹೈದ್ರಾಬಾದ್ ವಿರುದ್ಧವೂ ಅಬ್ಬರಿಸಿದ್ದಾರೆ. ಮಧ್ಯದಲ್ಲಿ ಮಂಡಿ ಗಾಯದಿಂದ ಕೊಂಚ ಹಿನ್ನಡೆ ಅನುಭವಿಸಿದ್ದರೂ, ಈಗ ಚೇತರಿಸಿಕೊಂಡು ಮತ್ತೆ ಮೈದಾನಕ್ಕೆ ಮರಳಲು ಸಿದ್ಧರಾಗಿದ್ದಾರೆ. ಐಪಿಎಲ್ ಇತಿಹಾಸದ ಸ್ಟಾರ್ ಬ್ಯಾಟರ್‌ಗಳನ್ನೇ ಮೀರಿಸಿರುವ ಈ 15ರ ಹರೆಯದ ಪೋರ, ಈ ಬಾರಿ ಆರೆಂಜ್ ಕ್ಯಾಪ್ ಮುಡಿಗೇರಿಸಿಕೊಳ್ಳುವ ಟಾರ್ಗೆಟ್ ಹೊಂದಿದ್ದಾರೆ. ಪ್ಲೇಆಫ್‌ ವೇಳೆಗೆ ಈ ರೇಸ್ ಇನ್ನು ಎಷ್ಟು ರೋಚಕವಾಗಲಿದೆ ಎಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

Continue Reading

Latest

ಕಿಂಗ್ ಕೊಹ್ಲಿಗಾಗಿ ಪುಟಾಣಿ ಫ್ಯಾನ್ ಹಠ: ಹೋಟೆಲ್ ಸಿಬ್ಬಂದಿ ತಡೆದಿದ್ದಕ್ಕೆ ಕಣ್ಣೀರು ಹಾಕಿದ ಬಾಲಕ

VISTARANEWS.COM


on

ಆರ್‌ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ವಿಶ್ವದಾದ್ಯಂತ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಇತ್ತೀಚೆಗೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್‌ಸಿಬಿ ಜಯಗಳಿಸಿದ ನಂತರ, ಹೋಟೆಲ್‌ನಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಕೊಹ್ಲಿ ಅವರ ಆಟೋಗ್ರಾಫ್ ಪಡೆಯಲು ಪುಟಾಣಿ ಬಾಲಕನೊಬ್ಬ ಬ್ಯಾಟ್ ಹಿಡಿದು ಬಹಳ ಹೊತ್ತು ಕಾತರದಿಂದ ಕಾಯುತ್ತಿದ್ದ. ಆದರೆ ಕೊಹ್ಲಿ ಹೋಟೆಲ್‌ಗೆ ಆಗಮಿಸಿದಾಗ ಭದ್ರತಾ ಸಿಬ್ಬಂದಿ ಬಾಲಕನನ್ನು ಹತ್ತಿರ ಹೋಗಲು ಬಿಡದೆ ತಡೆದಿದ್ದಾರೆ. ಇದರಿಂದ ಮನನೊಂದ ಬಾಲಕ ತನ್ನ ಕೈಯಲ್ಲಿದ್ದ ಬ್ಯಾಟನ್ನು ನೆಲಕ್ಕೆ ಎಸೆದು ಗಳಗಳನೇ ಅತ್ತಿದ್ದಾನೆ.

ಹೋಟೆಲ್ ಪ್ರವೇಶಿಸಿದ ವಿರಾಟ್ ಕೊಹ್ಲಿ ಸುತ್ತಲೂ ಸಿಬ್ಬಂದಿಗಳು ಬೌನ್ಸರ್‌ಗಳಂತೆ ನಿಂತು ಯಾರೂ ಹತ್ತಿರ ಸುಳಿಯದಂತೆ ನೋಡಿಕೊಳ್ಳುತ್ತಿದ್ದರು. ಈ ವೇಳೆ ಓಡೋಡಿ ಬಂದ ಬಾಲಕನನ್ನು ಸಿಬ್ಬಂದಿ ಬಲವಂತವಾಗಿ ತಡೆದಿದ್ದಾರೆ. ಇತ್ತ ಕೊಹ್ಲಿ ಕೂಡ ಬಾಲಕನತ್ತ ಗಮನ ಹರಿಸದೆ ನೇರವಾಗಿ ಮುಂದೆ ಸಾಗಿದ್ದಾರೆ. ತನ್ನ ನೆಚ್ಚಿನ ಕ್ರಿಕೆಟಿಗನನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ ಎಂಬ ನೋವಿನಿಂದ ಬಾಲಕ ಪೋಷಕರ ಬಳಿ ತೆರಳಿ ಜೋರಾಗಿ ಅಳಲಾರಂಭಿಸಿದನು. ಪೋಷಕರು ಎಷ್ಟೇ ಸಮಾಧಾನ ಪಡಿಸಿದರೂ ಆ ಪುಟ್ಟ ಅಭಿಮಾನಿಯ ಸಿಟ್ಟು ಮತ್ತು ಬೇಸರ ಮಾತ್ರ ಕಡಿಮೆಯಾಗಲಿಲ್ಲ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. “ಕೊಹ್ಲಿ ಕನಿಷ್ಠ ಪಕ್ಷ ಆ ಮಗುವಿಗೆ ಕೈಬೀಸಿ ವಿಶ್ ಮಾಡಬೇಕಿತ್ತು, ಆಗ ಆ ಮಗುವಿನ ಮುಖದಲ್ಲಿ ನಗು ಮೂಡುತ್ತಿತ್ತು” ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಇನ್ನು ಕೆಲವರು, “ಕೊಹ್ಲಿಗೆ ಆ ಸಮಯದಲ್ಲಿ ಬಾಲಕ ಅವರ ಗಮನಕ್ಕೆ ಬಂದಿರಲಿಕ್ಕಿಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ. ಏನೇ ಇರಲಿ, ಕ್ರಿಕೆಟ್ ತಾರೆಗಳ ಮೇಲಿರುವ ಅಭಿಮಾನವು ಕೆಲವೊಮ್ಮೆ ಇಂತಹ ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಗುವುದು ಸಹಜ ಎಂಬ ಚರ್ಚೆಗಳು ನಡೆಯುತ್ತಿವೆ.

Continue Reading
Advertisement
Latest1 day ago

ಟೀಮ್‌ ಇಂಡಿಯಾಗೆ ವೈಭವ್‌ ಸೂರ್ಯವಂಶಿ ಎಂಟ್ರಿ

Latest1 day ago

ಸಿಇಟಿ ಫಲಿತಾಂಶ ಪ್ರಕಟ

ಅವಿಭಾಗೀಕೃತ1 day ago

ರಾಮಲಿಂಗಾರೆಡ್ಡಿ ರಾಜೀನಾಮೆ ಕಗ್ಗಂಟಿಗೆ ತೆರೆ? ಸುರ್ಜೇವಾಲಾ ಮಾತುಕತೆ ಯಶಸ್ವಿ?

Latest2 days ago

ರಾಮಲಿಂಗಾರೆಡ್ಡಿ ಜೊತೆ ಮಾತನಾಡುತ್ತೇನೆ – ಡಿಕೆಶಿ

Latest2 days ago

ಬಿಜೆಪಿಗೆ ರಾಜೀನಾಮೆ ಬಳಿಕ ಹೊಸ ರಾಜಕೀಯ ಚಳವಳಿ ಘೋಷಿಸಿದ ಅಣ್ಣಾಮಲೈ; ತಮಿಳುನಾಡಿನಲ್ಲಿ ಏಕಾಂಗಿ ಹೋರಾಟದ ನಿರ್ಧಾರ

Latest2 days ago

ರಾಹುಲ್ ಗಾಂಧಿ ಸಮ್ಮುಖದಲ್ಲಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

Latest2 days ago

ಖಾತೆ ಹಂಚಿಕೆ ಬಗ್ಗೆ ಮುನಿಯಪ್ಪ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಜೀನಾಮೆ ಚಿಂತನೆ?

Latest2 days ago

ರಾಮಲಿಂಗಾ ರೆಡ್ಡಿ ರಾಜೀನಾಮೆ ಕಾಂಗ್ರೆಸ್ ಒಳಜಗಳದ ಪರಿಣಾಮ: ವಿಜಯೇಂದ್ರ ವಾಗ್ದಾಳಿ

Latest2 days ago

ಅಣ್ಣಾಮಲೈ ರಾಜೀನಾಮೆ ಸ್ವೀಕಾರ : ಹೊಸ ಪಕ್ಷ ಘೋಷಣೆ ಕುರಿತು ಇಂದು ಮಹತ್ವದ ಸುದ್ದಿಗೋಷ್ಠಿ

Latest2 days ago

ರಾಜ್ಯಸಭಾ ಚುನಾವಣೆಗೆ ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಲಿರುವ ಮಲ್ಲಿಕಾರ್ಜುನ ಖರ್ಗೆ

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌