ಮುಂಬಯಿ: ಕಾರು ಅಪಘಾತದಲ್ಲಿ ಗಾಯಗೊಂಡ ಟೀಮ್ ಇಂಡಿಯಾ ಕ್ರಿಕೆಟಿಗ ರಿಷಭ್ ಪಂತ್ಗೆ(Rishabh Pant) ಮುಂಬೈ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಮೊಣಕಾಲಿನ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
“ರಿಷಭ್ ಪಂತ್ ಶುಕ್ರವಾರದಂದು ಮೊಣಕಾಲಿನ ಅಸ್ಥಿರಜ್ಜು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.ಅವರು ಈಗ ವೈದ್ಯಕೀಯ ಚಿಕಿತ್ಸೆಯಲ್ಲಿದ್ದಾರೆ. ಜತೆಗೆ ಉತ್ತಮ ಚೇತರಿಕೆಯನ್ನು ಕಾಣುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ಡಾ. ದಿನ್ಶಾ ಪರ್ದಿವಾಲಾ ಮತ್ತು ಬಿಸಿಸಿಐ ಕ್ರೀಡಾ ವಿಜ್ಞಾನ-ಔಷಧ ತಂಡವು ಸಂಪೂರ್ಣ ನಿಗಾವಹಿಸಲಿದೆ” ಎಂದು ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿವೆ.
ಸದ್ಯ ಪಂತ್ ಅಂಧೇರಿ ಪಶ್ಚಿಮದಲ್ಲಿರುವ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿಸೆಂಬರ್ 30 ರಂದು ಭೀಕರ ಕಾರು ಅಪಘಾತದಲ್ಲಿ ಪಂತ್ ಗಾಯಗೊಂಡಿದ್ದರು. ಬಳಿಕ ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಇಲ್ಲಿ ಪಂತ್ಗೆ ಮುಖದ ಮತ್ತು ಹಣೆಯ ಗಾಯಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಲಾಗಿತ್ತು. ಇದಾದ ಬಳಿಕ ಮೊಣಕಾಲಿನ ಶಸ್ತ್ರಚಿಕಿತ್ಸೆ ಮುಂಬಯಿಗೆ ಸ್ಥಳಾಂತರಿಸಲಾಗಿತ್ತು. ಇದೀಗ ಪಂತ್ಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆದಿದೆ.
ರಿಷಭ್ ಪಂತ್ ಗಾಯದಿಂದ ಸಂಪೂರ್ಣ ಚೇತರಿಕೆ ಕಾಣಲು ಸಮಾರು 9 ತಿಂಗಳು ಸಮಯ ಬೇಕಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಆದ್ದರಿಂದ ಪಂತ್ ಈ ವರ್ಷ ಕ್ರಿಕೆಟ್ ಆಡುವುದು ಅನುಮಾನ ಎನ್ನಲಾಗಿದೆ.
ಇದನ್ನೂ ಓದಿ | Rishabh Pant and Urvashi Rautela | ಊರ್ವಶಿ ರೌಟೇಲಾ ಮತ್ತು ರಿಷಭ್ ಪಂತ್ ರಗಳೆ ಶುರುವಾಗಿದ್ದು ಎಲ್ಲಿಂದ?