ಮುಂಬಯಿ: ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಿಷಭ್ ಪಂತ್(Rishabh Pant) ಆದಷ್ಟು ಬೇಗ ಚೇತರಿಸಿಕೊಂಡು ಮತ್ತೆ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯಲಿ ಎಂದು ಹಾರ್ದಿಕ್ ಪಾಂಡ್ಯ ಪ್ರಾರ್ಥಿಸಿದ್ದಾರೆ.
ಶ್ರೀಲಂಕಾ ವಿರುದ್ಧದ ಟಿ20 ಪಂದ್ಯಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಾಂಡ್ಯ, “ಇದೊಂದು ಆಕಸ್ಮಿಕವಾಗಿ ನಡೆದ ಘಟನೆ. ಇಂತಹ ಘಟನೆಗಳಿಗೆ ಯಾರು ಏನು ಮಾಡಲು ಸಾಧ್ಯವಿಲ್ಲ. ಪಂತ್ ಆದಷ್ಟು ಬೇಗ ಚೇತರಿಸಿಕೊಂಡು ಮತ್ತೆ ತಂಡ ಸೇರಿಕೊಳ್ಳಲಿ. ನಾವು ಸದಾ ಪಂತ್ ಜತೆ ಇದ್ದೇವೆ. ಜತೆಗೆ ಟೀಮ್ ಇಂಡಿಯಾದ ಪ್ರೀತಿಯೂ ಪಂತ್ ಮೇಲೆ ಇದೆ. ಆಲ್ ದೀ ಬೆಸ್ಟ್ ಸ್ಪೀಡ್ಲಿ ರಿಕವರ್” ಎಂದು ಪಾಂಡ್ಯ ಹೇಳಿದ್ದಾರೆ.
ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಮೊದಲ ಪಂದ್ಯ ಇಂದು ಮುಂಬಯಿಯಲ್ಲಿ ನಡೆಯಲಿದೆ.
ರಿಷಭ್ ಪಂತ್ ಡಿಸೆಂಬರ್ 30ರಂದು ಡೆಹ್ರಾಡೂನ್ ಬಳಿ ಭೀಕರ ಕಾರು ಅಪಘಾತಕ್ಕೆ ಒಳಗಾಗಿ ಗಾಯಗೊಂಡಿದ್ದರು. ಸದ್ಯ ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ | INDvsSL | ಲಂಕಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯ ಎಲ್ಲಿ ನಡೆಯುತ್ತದೆ? ಪಿಚ್ ಹೇಗಿದೆ?