Robin Uthappa: ಮಾನಸಿಕ ಖಿನ್ನತೆಯ ಅನುಭವಗಳನ್ನು ಬಿಚ್ಚಿಟ್ಟ ಭಾರತ ತಂಡದ ಮಾಜಿ ಕ್ರಿಕೆಟಿಗ - Vistara News

ಕ್ರೀಡೆ

Robin Uthappa: ಮಾನಸಿಕ ಖಿನ್ನತೆಯ ಅನುಭವಗಳನ್ನು ಬಿಚ್ಚಿಟ್ಟ ಭಾರತ ತಂಡದ ಮಾಜಿ ಕ್ರಿಕೆಟಿಗ

Robin Uthappa: ಉತ್ತಪ್ಪ ಅವರು 2015 ರಲ್ಲಿ ಕೊನೆಯ ಬಾರಿ ಜಿಂಬಾಬ್ಬೆ ವಿರುದ್ಧದ ಏಕದಿನ ಹಾಗೂ ಟಿ-20 ಯನ್ನು ಆಡಿದ್ದರು

VISTARANEWS.COM


on

Robin Uthappa
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಟೀಮ್​ ಇಂಡಿಯಾದ ಮಾಜಿ ಆಟಗಾರ, ಕನ್ನಡಿಗ ರಾಬಿನ್​ ಉತ್ತಪ್ಪ(Robin Uthappa) ಹಿಂದೆ ತಾನು ಖಿನ್ನತೆಯಿಂದ(Depression) ಬಳಲಿ ಆತ್ಮಹತ್ಯೆಗೆ ಮುಂದಾಗಿ ಇದರಿಂದ ಹೊರಬಂದ ವಿಚಾರವನ್ನು ಸಾರ್ವಜನಿಕವಾಗಿ ಹಂಚಿಕೊಂಡಿದ್ದಾರೆ. ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಚಿಕಿತ್ಸೆ ಪಡೆಯುವುದು ಹೇಗೆ ಎಂಬಹುದನ್ನು ತಿಳಿಸುವ ಉದ್ದೇಶದಿಂದ ಅವರು ಈ ವಿಚಾರವನ್ನು ತಿಳಿಸಿದ್ದಾರೆ.

ಟ್ವಿಟರ್​ ಎಕ್ಸ್​ ವಿಡಿಯೊದಲ್ಲಿ ಮಾತನಾಡಿದ ಉತ್ತಪ್ಪ, ಖಿನ್ನತೆಯೊಂದಿಗಿನ ತನ್ನ ಸಮರವು ಕ್ರಿಕೆಟ್ ಮೈದಾನದಲ್ಲಿ ತಾನು ಎದುರಿಸಿದ ಯಾವುದೇ ಸವಾಲುಗಳಿಗಿಂತ ಹೆಚ್ಚಿನದಾಗಿತ್ತು ಎಂದು ಹೇಳಿದ್ದಾರೆ. ಕ್ರಿಕೆಟ್ ಕ್ಷೇತ್ರದಲ್ಲಿ ನಾನು ಹಲವು ಯುದ್ಧಗಳನ್ನು ಎದುರಿಸಿದ್ದೇನೆ, ಆದರೆ ಅವು ಯಾವುದೂ ನಾನು ಖಿನ್ನತೆಯೊಂದಿಗೆ ಹೋರಾಡಿದ ಯುದ್ಧಕ್ಕಿಂತ ಕಠಿಣವಾಗಿರಲಿಲ್ಲ. ಜೀವನದಲ್ಲಿ ಏನು ಮಾಡಬೇಕೆಂದು ನಿಮಗೆ ತಿಳಿದಿಲ್ಲದಿದ್ದಾಗ ಆತ್ಮಹತ್ಯೆಯ ಯೋಚನೆಗಳು ತಲೆಗೆ ಬರುತ್ತದೆ. ಆ ಕತ್ತಲೆಯಿಂದ ಹೊರಬರಲು ಸ್ವಲ್ಪ ಸಹಾಯ ಬೇಕಾಗುತ್ತದೆ ಎಂದು ಹೇಳುವ ಮೂಲಕ ಉತ್ತಪ್ಪ ತಮ್ಮ ಕಷ್ಟದ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

“ಇತ್ತೀಚೆಗೆ ಇಂಗ್ಲೆಂಡ್​ನ ಮಾಜಿ ಕ್ರಿಕೆಟಿಗ ಗ್ರಹಾಮ್ ತೋರ್ಪ್ ಮತ್ತು ಭಾರತದ ಡೇವಿಡ್ ಜಾನ್ಸನ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಕೇಳಿದ್ದೇವೆ. ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ)ನ ಬೆನ್ನೆಲುಬು ಆಗಿದ್ದ ವಿ.ಬಿ. ಚಂದ್ರಶೇಖರ್ ಸರ್ ಸಾವನ್ನೂ ಕೂಡ ನಾವು ನೋಡಿದ್ದೇವೆ. ಇದೇ ಮಾನಸಿಕ ಸ್ಥಿತಿಯನ್ನು ನಾನೂ ಅನುಭವಿಸಿದ್ದೇನೆ. ಇದು ಉತ್ತಮ ವಿಷಯವಲ್ಲ. ನಮ್ಮನ್ನು ಪ್ರೀತಿಸುವ ಜನರಿಗೆ ನಾವು ಹೊರೆಯಾಗುತ್ತೇವೆ ಎಂಬ ಭಾವನೆ ನಮ್ಮಲ್ಲಿ ಬರುತ್ತದೆ” ಎಂದು 38 ವರ್ಷದ ಉತ್ತಪ್ಪ ಹೇಳಿದರು.

ಇದನ್ನೂ ಓದಿ Robin Uthappa: ಚೆಕ್ ಬೌನ್ಸ್ ಪ್ರಕರಣದಲ್ಲಿ ರಾಬಿನ್ ಉತ್ತಪ್ಪಗೆ ಬಿಗ್ ರಿಲೀಫ್; ಜಾಮೀನು ರಹಿತ ವಾರೆಂಟ್​ಗೆ ಹೈಕೋರ್ಟ್ ತಡೆ

ಉತ್ತಪ್ಪ ಅವರು 2022ರಲ್ಲಿ ಎಲ್ಲ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. 2006 ರಲ್ಲಿ ಇಂಗ್ಲೆಂಡ್‌ ವಿರುದ್ಧದ ಏಕದಿನ ಪಂದ್ಯದ ಮೂಲಕ ಭಾರತ ತಂಡಕ್ಕೆ ಪಾದರ್ಪಣೆ ಮಾಡಿದ ರಾಬಿನ್‌ ಉತ್ತಪ್ಪ, 46 ಏಕದಿನ ಪಂದ್ಯಗಳನ್ನು ಆಡಿದ್ದು, 934 ರನ್‌ ಗಳನ್ನು ಗಳಿಸಿದ್ದಾರೆ. 86 ಅವರ ಸರ್ವಾಧಿಕ ರನ್.‌ 2007 ರ ಟಿ-20 ವಿಶ್ವಕಪ್‌ ತಂಡಕ್ಕೆ ಆಯ್ಕೆಯಾಗಿದ್ದ ಉತ್ತಪ್ಪ ಪಾಕಿಸ್ತಾನ ವಿರುದ್ಧದ ಸಮಬಲಗೊಂಡ ಪಂದ್ಯದಲ್ಲಿ ಬಾಲ್‌ ಶೂಟೌಟ್​ನಲ್ಲಿ ಗೆಲ್ಲಲು ಪ್ರಧಾನ ಪಾತ್ರ ವಹಿಸಿದ್ದರು. 13 ಅಂತಾರಾಷ್ಟ್ರೀಯ ಟಿ-20 ಪಂದ್ಯವನ್ನಾಡಿರುವ ಅವರು, 118.01 ಸ್ಟ್ರೈಕ್‌ ರೇಟ್‌ ನೊಂದಿಗೆ 249 ರನ್‌ ಗಳಿಸಿದ್ದಾರೆ.

2015 ರಲ್ಲಿ ಕೊನೆಯ ಬಾರಿ ಜಿಂಬಾಬ್ಬೆ ವಿರುದ್ಧದ ಏಕದಿನ ಹಾಗೂ ಟಿ-20 ಯನ್ನು ಆಡಿದ್ದರು. ಐಪಿಎಲ್​ನಲ್ಲಿ ಮಂಬಯಿ, ಆರ್​ಸಿಬಿ, ಕೆಕೆಆರ್‌, ರಾಜಸ್ಥಾನ್‌ ರಾಯಲ್ಸ್‌, ಸಿಎಸ್‌ ಕೆ ಪರವಾಗಿ ಆಡಿದ್ದರು. ಐಪಿಎಲ್‌ ನಲ್ಲಿ 205 ಪಂದ್ಯವನ್ನಾಡಿ ಒಟ್ಟು 4952 ರನ್‌ ಗಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರಿಕೆಟ್

Danish Kaneria: ರಕ್ಷಾ ಬಂಧನ ಆಚರಿಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

Danish Kaneria: ಕರಾಚಿ ಮೂಲದ ದಾನಿಶ್ ಕನೇರಿಯಾ 2000ರಿಂದ 2010ರವರೆಗೆ ಪಾಕಿಸ್ತಾನ ರಾಷ್ಟ್ರೀಯ ಕ್ರಿಕೆಟ್ ತಂಡದ ಮುಖ್ಯ ಸ್ಪಿನ್ ಬೌಲರ್ ಆಗಿ ಸೇವೆ ಸಲ್ಲಿಸಿದ್ದರು. ತಮ್ಮ ವೃತ್ತಿಜೀವನದುದ್ದಕ್ಕೂ ಕನೇರಿಯಾ ಇಸ್ಲಾಂ ದೇಶದಲ್ಲಿ ತಾರತಮ್ಯ ಎದುರಿಸಿದ್ದರು.

VISTARANEWS.COM


on

Danish Kaneria
Koo

ಲಂಡನ್​: ಭಾರತದಲ್ಲಿ ಹೆಚ್ಚು ಮಹತ್ವವಿರುವ, ಸಹೋದರ ಮತ್ತು ಸಹೋದರಿಯ ನಡುವಿನ ಬಾಂಧವ್ಯವನ್ನು ಬಲಪಡಿಸುವ ಹಬ್ಬವೆಂದರೆ ರಕ್ಷಾ ಬಂಧನವನ್ನು(Raksha Bandhan) ಸೋಮವಾರವಷ್ಟೇ ಎಲ್ಲಡೆ ಅದ್ಧೂರಿಯಾಗಿ ಆಚರಿಸಲಾಗಿತ್ತು. ಸಹೋದರ-ಸಹೋದರಿಯರು ಪರಸ್ಪರ ರಾಖಿ ಕಟ್ಟುವ ಮೂಲಕ ಈ ಸಂಭ್ರಮಾಚರಣೆ ಮಾಡಿದ್ದರು. ಪಾಕಿಸ್ತಾನದ ಮಾಜಿ ಕ್ರಿಕೆಟಿಗ ದಾನಿಶ್ ಕನೇರಿಯಾ (Danish Kaneria) ಕೂಡ ತಮ್ಮ ಪರಿವಾರದೊಂದಿಗೆ ರಕ್ಷಾ ಬಂಧನವನ್ನು ಆಚರಿಸಿದ್ದಾರೆ. ಈ ಫೋಟೊವನ್ನು ಕನೇರಿಯಾ ತಮ್ಮ ಅಧಿಕೃತ ಟ್ವಿಟರ್ ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ.​ ಜತೆಗೆ ರಕ್ಷಾ ಬಂಧನ ಆಚರಣೆಯ ಕೆಲವು ಝಲಕ್‌ಗಳನ್ನು ಹಂಚಿಕೊಳ್ಳುತ್ತಿದ್ದೇವೆ! ಎಂದು ಬರೆದುಕೊಂಡಿದ್ದಾರೆ.

ಯಾರು ಈ ದಾನಿಶ್ ಕನೇರಿಯಾ?


ಕರಾಚಿ ಮೂಲದ ದಾನಿಶ್ ಕನೇರಿಯಾ 2000ರಿಂದ 2010ರವರೆಗೆ ಪಾಕಿಸ್ತಾನ ರಾಷ್ಟ್ರೀಯ ಕ್ರಿಕೆಟ್ ತಂಡದ ಮುಖ್ಯ ಸ್ಪಿನ್ ಬೌಲರ್ ಆಗಿ ಸೇವೆ ಸಲ್ಲಿಸಿದ್ದರು. ತಮ್ಮ ವೃತ್ತಿಜೀವನದುದ್ದಕ್ಕೂ ಕನೇರಿಯಾ ಇಸ್ಲಾಂ ದೇಶದಲ್ಲಿ ತಾರತಮ್ಯ ಎದುರಿಸಿದ್ದರು. ಈ ವಿಚಾರವನ್ನು ಸ್ವತಃ ಅವರೇ ಹೇಳಿದ್ದರು. ಹಿಂದೊಮ್ಮೆ ಸಂದರ್ಶನವೊಂದರಲ್ಲಿ ಮಾತನಾಡುವ ವೇಳೆ ಇಸ್ಲಾಂಗೆ ಮತಾಂತರಗೊಳ್ಳಲು ಕೆಲವು ಸಹ ಆಟಗಾರರಿಂದ ಒತ್ತಾಯ ಬಂದಿತ್ತು ಎಂದು ದೂರಿದ್ದರು. ಕ್ರಿಕೆಟ್​ನಲ್ಲಿ ಪಾಕಿಸ್ತಾನವನ್ನು ಪ್ರತಿನಿಧಿಸಿದ ಎರಡನೇ ಹಿಂದೂ ಎಂಬ ಹೆಗ್ಗಳಿಕೆಗೆ ಕನೇರಿಯಾ ಅವರದ್ದು . ಟೆಸ್ಟ್ ಕ್ರಿಕೆಟ್​ನಲ್ಲಿ 250 ಕ್ಕೂ ಹೆಚ್ಚು ವಿಕೆಟ್​ಗಳ ಪ್ರಭಾವಶಾಲಿ ಪ್ರದರ್ಶನ ನೀಡಿದ್ದರು.

ಗೂಗ್ಲಿ ಬೌಲಿಂಗ್ ಮಾಡಬಲ್ಲ ಬಲಗೈ ಲೆಗ್ ಸ್ಪಿನ್ನರ್ ಆಗಿದ್ದ ಕನೇರಿಯಾ ಪಾಕಿಸ್ತಾನ ಪರ 61 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು 34.79 ಸರಾಸರಿಯಲ್ಲಿ 261 ವಿಕೆಟ್‌ ಪಡೆದುಕೊಂಡಿದ್ದಾರೆ. ಜತೆಗೆ 18 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಅವರು ತಮ್ಮ ಸೋದರ ಸಂಬಂಧಿ ಅನಿಲ್ ದಳಪತ್ ನಂತರ ಪಾಕಿಸ್ತಾನ ತಂಡವನ್ನು ಪ್ರತಿನಿಧಿಸಿದ ಎರಡನೇ ಹಿಂದೂ ಮತ್ತು ಒಟ್ಟಾರೆಯಾಗಿ ಏಳನೇ ಮುಸ್ಲಿಮೇತರ ಆಟಗಾರರಾಗಿದ್ದರು.

ಇದನ್ನೂ ಓದಿ Sanju Samson | ಸಂಜು ಸ್ಯಾಮ್ಸನ್​ಗೆ ಅವಕಾಶ ನೀಡದಕ್ಕೆ ಬೇಸರ ವ್ಯಕ್ತಪಡಿಸಿದ ಪಾಕ್​ ಕ್ರಿಕೆಟಿಗ ಕನೇರಿಯಾ

ರಾಮಮಂದಿರ ಉದ್ಘಾಟನೆಯ ವೇಳೆಯೂ ಕನೇರಿಯಾ ತಮ್ಮ ಅಧಿಕೃತ ಟ್ವೀಟರ್​ ಎಕ್ಸ್​​ ಖಾತೆಯಲ್ಲಿ ರಾಮಮಂದಿರದ ಫೋಟೊ ಹಂಚಿಕೊಂಡು ಜೈಶ್ರೀರಾಮ್. ಎಲ್ಲ ಹಿಂದೂಗಳಿಗೂ ಅಭಿನಂದನೆಗಳು ಎಂದು ಬರೆದುಕೊಂಡಿದ್ದರು.

2012ರ ಇಂಗ್ಲಿಷ್‌ ಕೌಂಟಿ ಕ್ರಿಕೆಟ್‌ ಪಂದ್ಯಾವಳಿಯ ವೇಳೆ ಸ್ಪಾಟ್‌ ಫಿಕ್ಸಿಂಗ್‌ ನಡೆಸಿದ್ದು ಸಾಬೀತಾದ ಕಾರಣ ದಾನಿಶ್‌ ಕನೇರಿಯಾ ಅವರಿಗೆ ಪಿಸಿಬಿ ಆಜೀವ ಕ್ರಿಕೆಟ್‌ ನಿಷೇಧ ವಿಧಿಸಿತ್ತು. ಪಾಕಿಸ್ತಾನದಲ್ಲಿ ಐತಿಹಾಸಿಕ ಹಿಂದೂ ದೇಗುಲಗಳನ್ನು ನೆಲಸಮ ಮಾಡುತ್ತಿರುವ ಬಗ್ಗೆಯೂ ಕನೇರಿಯಾ ಧ್ವನಿ ಎತ್ತಿದ್ದರು.

ಪಾಕಿಸ್ತಾನದಲ್ಲಿ ಹಿಂದೂಗಳ ಮೇಲೆ ಪ್ರತಿದಿನ ಲೆಕ್ಕವಿಲ್ಲದಷ್ಟು ಮತಾಂತರ, ಅಪಹರಣ, ಅತ್ಯಾಚಾರ, ಹತ್ಯೆ ಸೇರಿದಂತೆ ಅನೇಕ ರೀತಿಯ ದೌರ್ಜನ್ಯಗಳು ನಡೆಯುತ್ತಿವೆ. ಈ ಅನ್ಯಾಯದ ವಿರುದ್ಧ ವಿಶ್ವಾದ್ಯಂತ ಇರುವ ಹಿಂದೂಗಳು ಒಂದಾಗಿ ಹೋರಾಟ ನಡೆಸಬೇಕು ಎಂದು ಅವರು ಟ್ವೀಟ್‌ ಮೂಲಕ ಹಿಂದೊಮ್ಮೆ ಮನವಿ ಮಾಡಿದ್ದರು.

Continue Reading

ಕ್ರೀಡೆ

PR Sreejesh: ಹಾಕಿ ದಿಗ್ಗಜ ಶ್ರೀಜೇಶ್​ಗೆ 2 ಕೋಟಿ ಬಹುಮಾನ ಘೋಷಣೆ ಮಾಡಿದ ಕೇರಳ ಸರ್ಕಾರ

PR Sreejesh: ಒಟ್ಟು ನಾಲ್ಕು ಒಲಿಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸಿದ ಗೋಲ್​ ಕೀಪರ್​ ಪಿ.ಆರ್‌.ಶ್ರೀಜೇಶ್(PR Sreejesh)2 ಕಂಚಿನ ಪದಕ ಗೆದ್ದ ಸಾಧನೆ ಮಾಡಿದ್ದಾರೆ.

VISTARANEWS.COM


on

PR Sreejesh
Koo

ತಿರುವನಂತಪುರಂ: ಪ್ಯಾರಿಸ್​ ಒಲಿಂಪಿಕ್ಸ್​ ಕಂಚಿನ ಪದಕ ವಿಜೇತ, ಭಾರತ ಹಾಕಿ ತಂಡದ ಮಾಜಿ ಗೋಲ್​ ಕೀಪರ್​ ಪಿ.ಆರ್‌.ಶ್ರೀಜೇಶ್(PR Sreejesh) ಅವರಿಗೆ ಕೇರಳ ಸರ್ಕಾರ(Kerala government) 2 ಕೋಟಿ ನಗದು ಬಹುಮಾನ ಪ್ರಕಟಿಸಿದೆ. ಬುಧವಾರ ಮುಖ್ಯಮಂತ್ರಿ ಪಿಣರಾಯಿ ವಿಜಯನ್(Pinarayi Vijayan) ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಸಂಬಂಧ ನಿರ್ಧಾರ ಕೈಗೊಳ್ಳಲಾಗಿದೆ.

‌ಕೇರಳದ ಎರ್ನಾಕುಲಂ ಜಿಲ್ಲೆಯವರಾದ ಶ್ರೀಜೇಶ್‌ ಭಾರತ ತಂಡ ಟೋಕಿಯೊ ಮತ್ತು ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ​ ಯಶಸ್ಸು ಕಾಣುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಟೋಕಿಯೊದಲ್ಲಿ ಅಮೋಘ ಪ್ರದರ್ಶನ ನೀಡಿದ ಕಾರಣ ಅವರಿಗೆ ಅತ್ಯುತ್ತಮ ಗೋಲ್​ ಕೀಪರ್​ ಪ್ರಶಸ್ತಿಯೂ ಲಭಿಸಿತ್ತು. ಒಟ್ಟು ನಾಲ್ಕು ಒಲಿಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸಿ 2 ಕಂಚಿನ ಪದಕ ಗೆದ್ದ ಸಾಧನೆ ಮಾಡಿದ್ದಾರೆ.

ಶ್ರೀಜೇಶ್ ಕೃಷಿ ಕುಟುಂಬದಿಂದ ಬಂದವರು. ಹಾಕಿ ಕಿಟ್ ಖರೀದಿಸಲು ತಮ್ಮ ಹಸುವನ್ನು ಮಾರಿದ ಅವರ ತಂದೆಯ ತ್ಯಾಗವು ಕ್ರೀಡೆಯಲ್ಲಿ ಅವರ ಆರಂಭಿಕ ಹಂತದ ಪ್ರಯಾಣವಾಗಿತ್ತು. ಸಾಂಪ್ರದಾಯಿಕ ಉಡುಗೆ ಮತ್ತು ಮಲಯಾಳಂ ಉಚ್ಚಾರಣೆಗಾಗಿ ಅಪಹಾಸ್ಯವನ್ನು ಎದುರಿಸುತ್ತಿದ್ದರೂ, ಶ್ರೀಜೇಶ್ ತನ್ನ ತಂದೆಯ ಅಚಲ ಬೆಂಬಲದಿಂದ ತಿರುವನಂತಪುರಂನ ಜಿವಿ ರಾಜಾ ಸ್ಪೋರ್ಟ್ಸ್ ಸ್ಕೂಲ್​ಗೆ ಸೇರಿದ್ದರು ಅಲ್ಲಿ ಅವರ ತರಬೇತುದಾರರು ಗೋಲ್ ಕೀಪಿಂಗ್ ಆಯ್ಕೆ ಮಾಡಲು ಸಲಹೆ ನೀಡಿದರು. ಈ ನಿರ್ಧಾರವು ಅವರ ವೃತ್ತಿಜೀವನವನ್ನು ರೂಪಿಸುವಲ್ಲಿ ನಿರ್ಣಾಯಕವಾಯಿತು.

ಇದನ್ನೂ ಓದಿ PR Sreejesh : ಕುಟುಂಬ ಸಮೇತ ಪ್ರಧಾನಿ ಮೋದಿಯನ್ನು ಭೇಟಿಯಾದ ಒಲಿಂಪಿಯನ್​ ಪಿ.ಆರ್ ಶ್ರೀಜೇಶ್​​

ಭಾರತೀಯ ಹಾಕಿಗೆ ಶ್ರೀಜೇಶ್​ ನೀಡಿದ ಅಪಾರ ಸೇವೆಯನ್ನು ಪರಿಗಣಿಸಿ ಹಾಕಿ ಇಂಡಿಯಾ(Hockey India) ಕಳೆದ ವಾರ ಶ್ರೀಜೇಶ್ ಅವರ ಜೆರ್ಸಿ ನಂ.16ಕ್ಕೆ ವಿದಾಯ ಹೇಳಿತ್ತು. ಇನ್ನು ಮುಂದೆ ಶ್ರೀಜೇಶ್ ಧರಿಸುತ್ತಿದ್ದ ಜೆರ್ಸಿ ಸಂಖ್ಯೆ 16 ಅನ್ನು ಹಾಕಿ ಹಿರಿಯರ ತಂಡದ ಯಾವೊಬ್ಬ ಆಟಗಾರರಿಗೂ ನೀಡಲಾಗುವುದಿಲ್ಲ. ಪ್ಯಾರಿಸ್​ ಒಲಿಂಪಿಕ್ಸ್​ ಕಂಚಿನ ಪದಕ ಪಂದ್ಯವನ್ನಾಡುವ ಮೂಲಕ ಶ್ರೀಜೇಶ್​ ತಮ್ಮ 18 ವರ್ಷಗಳ ಹಾಕಿ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದರು.​

ಶ್ರೀಜೇಶ್​ ಅವರಿಗೆ ಹಾಕಿ ಇಂಡಿಯಾ(Hockey India) ಭಾರತ ಜೂನಿಯರ್ ಪುರುಷರ ತಂಡದ ಹೊಸ ಮುಖ್ಯ ಕೋಚ್ ಆಗಿ ನೇಮಿಸಿದೆ. 36 ವಷದ ಕೇರಳದ ಶ್ರೀಜೇಶ್‌ ಭಾರತ ಪರ 336 ಪಂದ್ಯಗಳನ್ನು ಆಡಿದ್ದಾರೆ. 2 ಒಲಿಂಪಿಕ್ಸ್‌ ಕಂಚಿನ ಪದಕ, ಏಷ್ಯನ್‌ ಗೇಮ್ಸ್‌ನಲ್ಲಿ 2 ಚಿನ್ನ, 1 ಕಂಚು, ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ 2 ಬೆಳ್ಳಿ, ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿಯಲ್ಲಿ 2 ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ.

Continue Reading

ಕ್ರೀಡೆ

Manu Bhaker: ನಟ ವಿಜಯ್​ ಗೊತ್ತು, ಸಿಎಂ ಸ್ಟಾಲಿನ್‌ ಗೊತ್ತಿಲ್ಲ ಎಂದು ನಕ್ಕ ಮನು ಭಾಕರ್; ವಿಡಿಯೊ ವೈರಲ್​​

Manu Bhaker: ಮನು ಅವರು ವಿದ್ಯಾರ್ಥಿಗಳ ಜತೆಗೆ ಕತ್ರಿನಾ ಕೈಫ್ ಹೆಜ್ಜೆ ಹಾಕಿದ್ದ ಕಾಲಾ ಚಷ್ಮಾ(‘Kala Chashma’ Song) ಹಿಂದಿ ಹಾಡೊಂದಕ್ಕೆ ನೃತ್ಯ ಮಾಡಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು.

VISTARANEWS.COM


on

Manu Bhaker
Koo

ಚೆನ್ನೈ: ಅವಳಿ ಒಲಿಂಪಿಕ್ಸ್​ ಪಕದ ವಿಜೇತೆ ಮನು ಭಾಕರ್(Manu Bhaker) ಅವರು ಚೆನ್ನೈಯಲ್ಲಿ ನಡೆದಿದ್ದ ಶಾಲಾ ಕಾರ್ಯಕ್ರಮವೊಂದಲ್ಲಿ ಪಾಲ್ಗೊಂಡಿದ್ದರು. ಕ್ರೀಡಾ ಸ್ಕಾಲರ್‌ಷಿಪ್‌ ವಿತರಣಾ ಕಾರ್ಯಕ್ರಮ ಇದಾಗಿತ್ತು. ಈ ವೇಳೆ ಅವರಿಗೆ ತಮಿಳುನಾಡಿನ ಕುರಿತಾದ ಹಲವು ಪ್ರಶ್ನೆಗಳನ್ನು ಕೇಳಲಾಯಿತು. ಇದರೊಲ್ಲೊಂದು ಪ್ರಶ್ನೆ, ತಮಿಳುನಾಡು ಮುಖ್ಯಮಂತ್ರಿ(Tamil Nadu CM) ಎಂ.ಕೆ. ಸ್ಟಾಲಿನ್‌(MK Stalin) ಗೊತ್ತೇ ಎಂಬುದಾಗಿತ್ತು. ಈ ಪ್ರಶ್ನೆಗೆ ಉತ್ತರಿಸಿದ ಮನು ಭಾಕರ್​ ನನಗೆ ಅವರು ಯಾರೆಂದೆ ತಿಳಿದಿಲ್ಲ ಎಂದು ಹೇಳುವ ಮೂಲಕ ಜೋರಾಗಿ ನಕ್ಕರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರು ಕೂಡ ಮನು ಅವರ ಈ ಪ್ರತಿಕ್ರಿಯೆ ಕೇಳಿ ಜೋರಾಗಿ ನಕ್ಕರು. ಸದ್ಯ ಈ ವಿಡಿಯೊ ವೈರಲ್(viral video)​ ಆಗಿದೆ.

ತಮಿಳುನಾಡಿನ ವಿಶೇಷ ಖಾದ್ಯ ಪೊಂಗಲ್​, ಮಧುರೈ ಮೀನಾಕ್ಷಿ ದೇವಸ್ಥಾನ, ಸಿನಿಮಾ ನಟ ವಿಜಯ್(Vijay)​ ತಿಳಿದಿದೆಯಾ? ಹೀಗೆ ಹಲವು ಪ್ರಶ್ನೆಗಳನ್ನು ಮನು ಭಾಕರ್​ ಅವರಿಗೆ ಕೇಳಲಾಯಿತು. ನಟ ವಿಜಯ್​ ಅವರನ್ನು ಹೊರತುಪಡಿಸಿ ಉಳಿದ ಯಾವುದರ ಬಗ್ಗೆಯೂ ತಿಳಿದಿಲ್ಲ ಎಂದು ಹೇಳಿದರು. ಅದರಲ್ಲೂ ಸಿಎಂ ಸ್ಟಾಲಿನ್​ ತಿಳಿದಿಲ್ಲ ಎನ್ನುವ ಪ್ರತಿಕ್ರಿಯೆಯ ವಿಡಿಯೊ ಮಾತ್ರ ತುಂಬಾ ವೈರಲ್​ ಆಗಿದೆ. ಸ್ಟಾಲಿನ್​ ವಿರೋಧಿಗಳು ಈ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಟ್ರೋಲ್​ ಮಾಡಿದ್ದಾರೆ.

ಇದೇ ಕಾರ್ಯಕ್ರಮದಲ್ಲಿ ಮನು ಅವರು ವಿದ್ಯಾರ್ಥಿಗಳ ಜತೆಗೆ ಕತ್ರಿನಾ ಕೈಫ್ ಹೆಜ್ಜೆ ಹಾಕಿದ್ದ ಕಾಲಾ ಚಷ್ಮಾ(‘Kala Chashma’ Song) ಹಿಂದಿ ಹಾಡೊಂದಕ್ಕೆ ನೃತ್ಯ ಮಾಡಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು. ಭರತನಾಟ್ಯ(Manu Bhaker Bharatnatyam) ಕಲಿಕೆಗಾಗಿ ಮನು ಭಾಕರ್​ ತಮಿಳುನಾಡಿಗೆ ಆಗಮಿಸಿದ್ದರು. ತಮಿಳುನಾಡಿನ ಶಿಕ್ಷಕರೊಬ್ಬರ ಸಹಾಯದಿಂದ ಆನ್​ಲೈನ್​ನಲ್ಲಿಯೇ ಭರತನಾಟ್ಯವನ್ನು ಅಭ್ಯಾಸ ಮಾಡುತ್ತಿದ್ದ 22 ವರ್ಷದ ಮನು ಭಾಕರ್​ ಇದೀಗ ಶೂಟಿಂಗ್​ನಿಂದ ಮೂರು ತಿಂಗಳ ವಿಶ್ರಾಂತಿ ಪಡೆದು ನೇರವಾಗಿ ತರಗತಿಗೆ ಹಾಜರಾಗಿ ನೃತ್ಯ ಕಲಿಯಲಿದ್ದಾರೆ. ಜತೆಗೆ ವಯೋಲಿನ್​ ಕಲಿಕೆ ಕೂಡ ಮಾಡಲಿದ್ದಾರೆ.

ಇದನ್ನೂ ಓದಿ Manu Bhaker: 3 ತಿಂಗಳ ರಜೆಯಲ್ಲಿ ಭರತನಾಟ್ಯ, ಕುದುರೆ ಸವಾರಿ, ಸ್ಕೇಟಿಂಗ್ ಕಲಿಯಲಿದ್ದಾರೆ ಮನು ಭಾಕರ್

ಪ್ಯಾರಿಸ್​ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮೊದಲ ಮಹಿಳಾ ಶೂಟರ್ ಎಂಬ ಹೆಗ್ಗಳಿಕೆಗೆ ಮನು ಭಾಕರ್​ ಪಾತ್ರರಾಗಿದ್ದರು. ಜತೆಗೆ 12 ವರ್ಷಗಳ ಬಳಿಕ ಒಲಿಂಪಿಕ್​ ಶೂಟಿಂಗ್​ನಲ್ಲಿ ದೇಶಕ್ಕೆ ಪದಕ ಗೆದ್ದ ಸಾಧನೆ ಮಾಡಿದ್ದರು. ಭಾಕರ್(Manu Bhaker)​ ಅವರ ಜಾಹೀರಾತು ಮೌಲ್ಯದಲ್ಲಿ ಇದೀಗ ಭಾರೀ ಏರಿಕೆ ಕಂಡಿದೆ. ಮನು ಅವರ ಬ್ರ್ಯಾಂಡ್​ ಮೌಲ್ಯ ಈಗ 1.5 ರೂ. ಆಗಿದೆ. ಅವರು ಪ್ರತಿ ಡಿಜಿಟಲ್​ ಜಾಹೀರಾತಿಗೂ 30 ಲಕ್ಷ ರೂ. ಸಂಭಾವನೆ ಪಡೆಯಲಿದ್ದಾರೆ ಎನ್ನಲಾಗಿದೆ. ಪ್ರಮುಖವಾಗಿ ತಂಪು ಪಾನೀಯ, ಸ್ಕಿನ್​ ಕೇರ್​, ನ್ಯೂಟ್ರೀಷಿಯನ್​ ಕಂಪನಿಗಳು ಮನು ಅವರನ್ನು ಸಂಪರ್ಕಿಸಿವೆ ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ 40 ಕಂಪನಿಗಳು(40 brands chasing Manu Bhaker) ಮನು ಅವರನ್ನು ಸಂಪರ್ಕಿಸಿದ್ದವು ಎಂದು ವರದಿಯಾಗಿತ್ತು.

Continue Reading

ಕ್ರೀಡೆ

Virat Kohli: ಐಪಿಎಲ್​ನ ನೆಚ್ಚಿನ ಎದುರಾಳಿ ತಂಡವನ್ನು ಹೆಸರಿಸಿದ ವಿರಾಟ್​ ಕೊಹ್ಲಿ

Virat Kohli: ಕೊಹ್ಲಿ ಕೆಕೆಆರ್​ ತಂಡವನ್ನು ತನ್ನ ನೆಚ್ಚಿನ ಎದುರಾಳಿ ತಂಡವಾಗಿ ಆಯ್ಕೆ ಮಾಡಿಕೊಳ್ಳಲು ಕೂಡ ಒಂದು ಕಾರಣವಿದೆ. ಏಕೆಂದರೆ ಕೊಹ್ಲಿ ತಮ್ಮ ಚೊಚ್ಚಲ ಐಪಿಎಲ್​ ಪಂದ್ಯ ಆಡಿದ್ದು ಕೆಕೆಆರ್​ ವಿರುದ್ಧ. ಇದೇ ಕಾರಣದಿಂದ ಕೊಹ್ಲಿಗೆ ಕೆಕೆಆರ್​ ನೆಚ್ಚಿನ ಎದುರಾಳಿ ತಂಡವಾಗಿದೆ.

VISTARANEWS.COM


on

Virat Kohli
Koo

ಮುಂಬಯಿ: ಐಪಿಎಲ್​ ಟೂರ್ನಿಯ(IPL) ಇದುವರೆಗಿನ 17 ಆವೃತ್ತಿಗಳಲ್ಲಿಯೂ ಆರ್​ಸಿಬಿ(RCB) ಒಂದೇ ತಂಡದ ಪರ ಆಡುತ್ತಿರುವ ವಿರಾಟ್​ ಕೊಹ್ಲಿ(Virat Kohli) ತಮ್ಮ ನೆಚ್ಚಿನ ಎದುರಾಳಿ ತಂಡ ಯಾವುದು ಎಂದು ಹೇಳಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿ 16 ವರ್ಷ ತುಂಬಿದ ಹಿನ್ನಲೆಯಲ್ಲಿ ನಡೆಸಿದ್ದ ಸಂದರ್ಶನದಲ್ಲಿ ಕೊಹ್ಲಿ ಈ ವಿಚಾರವನ್ನು ಬಹಿರಂಗಪಡಿಸಿದರು.

ಆಗಸ್ಟ್​ 18 ರಂದು ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಅಡಿ ಇರಿಸಿ 16 ವರ್ಷ ತುಂಬಿತ್ತು. ಇದೇ ಹಿನ್ನಲೆಯಲ್ಲಿ ಆರ್​ಸಿಬಿ ಕೊಹ್ಲಿಯೊಂದಿಗೆ ವಿಶೇಷ ಸಂದರ್ಶನ ನಡೆಸಿತ್ತು. ಈ ಸಂದರ್ಶನದಲ್ಲಿ ಕೊಹ್ಲಿಗೆ ನಿಮ್ಮ ನೆಚ್ಚಿನ ಐಪಿಎಲ್​ ಎದುರಾಳಿ ತಂಡ ಯಾವುದೆಂದು ಪ್ರಶ್ನೆ ಕೇಳಲಾಯಿತು. ಎಲ್ಲರು ಕೊಹ್ಲಿ ಚೆನ್ನೈ ಅಥವಾ ಮುಂಬೈ ಇಂಡಿಯನ್ಸ್​ ಆಯ್ಕೆ ಮಾಡುತ್ತಾರೆ ಎಂದು ನಿರೀಕ್ಷೆ ಮಾಡಿದ್ದರು. ಆದರೆ ಈ ನಿರೀಕ್ಷೆ ಹುಸಿಯಾಗಿದೆ. ಕೊಹ್ಲಿಯ ನೆಚ್ಚಿನ ಎದುರಾಳಿ ತಂಡ ಮೂರು ಬಾರಿಯ ಚಾಂಪಿಯನ್​ ಕೆಕೆಆರ್​.

ಹೌದು, ಕೊಹ್ಲಿ ಕೆಕೆಆರ್​ ತಂಡವನ್ನು ತನ್ನ ನೆಚ್ಚಿನ ಎದುರಾಳಿ ತಂಡವಾಗಿ ಆಯ್ಕೆ ಮಾಡಿಕೊಳ್ಳಲು ಕೂಡ ಒಂದು ಕಾರಣವಿದೆ. ಏಕೆಂದರೆ ಕೊಹ್ಲಿ ತಮ್ಮ ಚೊಚ್ಚಲ ಐಪಿಎಲ್​ ಪಂದ್ಯ ಆಡಿದ್ದು ಕೆಕೆಆರ್​ ವಿರುದ್ಧ. ಇದೇ ಕಾರಣದಿಂದ ಕೊಹ್ಲಿಗೆ ಕೆಕೆಆರ್​ ನೆಚ್ಚಿನ ಎದುರಾಳಿ ತಂಡವಾಗಿದೆ.

ಏಪ್ರಿಲ್ 18, 2008 ರಂದು ಆರ್‌ಸಿಬಿ ಮತ್ತು ಕೆಕೆಆರ್ ಮುಖಾಮುಖಿಯಾಗಿತ್ತು. ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ 5 ಎಸೆತಗಳಲ್ಲಿ 1 ರನ್ ಗಳಿಸಿ ಔಟಾಗಿದ್ದರು. ಆರ್​ಸಿಬಿ ಈ ಪಂದ್ಯದಲ್ಲಿ ಕೇವಲ 82 ರನ್‌ಗಳಿಗೆ ಆಲೌಟ್ ಆಗಿ ಹೀನಾಯ ಸೋಲು ಕಂಡಿತ್ತು. ಎದುರಾಳಿ ಕೆಕೆಆರ್​ 222 ರನ್ ಗಳಿಸಿತ್ತು.

ಒಂದೇ ಫ್ರಾಂಚೈಸಿ ಪರ ಆಡಿದ ಏಕೈಕ ಆಟಗಾರ ಎನಿಸಿಕೊಂಡಿರುವ ಕೊಹ್ಲಿ ನಾಯಕನಾಗಿ ಮತ್ತು ಆಟಗಾರನಾಗಿ ಒಟ್ಟು ಮೂರು ಸಲ ಐಪಿಎಲ್​ ಫೈನಲ್​ ಆಡಿದ್ದಾರೆ. ಆದರೆ ಒಮ್ಮೆಯೂ ಟ್ರೋಫಿ ಗೆದ್ದಿಲ್ಲ. ಮುಂದಿನ ಸಲವಾದರೂ ಕಪ್​ ಗೆಲ್ಲಲಿದೆಯಾ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ Virat Kohli : ಕೊಹ್ಲಿ ಕಿಂಗ್ ಅಲ್ಲ; ಭಾರತದ ಸೂಪರ್​​ ಸ್ಟಾರ್​ ಬ್ಯಾಟರ್​​ ಬಗ್ಗೆ ಕಳಪೆ ಕಾಮೆಂಟ್ ಮಾಡಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

ಮತ್ತೆ ನಾಯಕನಾಗಲಿದ್ದಾರಾ ಕೊಹ್ಲಿ?


ಟಿ20ಗೆ ನಿವೃತ್ತಿ ಹೇಳಿ ಎಲ್ಲ ಒತ್ತಡ ಕಡಿಮೆ ಮಾಡಿರುವ ಕೊಹ್ಲಿಯೇ ಮತ್ತೆ ಆರ್​ಸಿಬಿಗೆ ನಾಯಕನಾಗಲಿದ್ದಾರೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ. ವಿರಾಟ್​ ಕೊಹ್ಲಿ ಅವರು ಭಾರತ ತಂಡದ ಮೂರು ಮಾದರಿಯ ನಾಯಕತ್ವ ವಹಿಸಿಕೊಂಡಿದ್ದ ವೇಳೆ ಐಪಿಎಲ್​ನಲ್ಲಿಯೂ ತಂಡವನ್ನು ಮುನ್ನಡೆಸುವುದು ಕಷ್ಟವಾಗುತ್ತದೆ, ಕೆಲಸದ ಒತ್ತಡದಿಂದಾಗಿ ಆಟದ ಕಡೆ ಸರಿಯಾಗಿ ಗಮನ ಕೊಡಲು ಸಾಧ್ಯವಾಗುತ್ತಿಲ್ಲ ಎಂದು ಐಪಿಎಲ್​ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. 

ವಿರಾಟ್​ ಕೊಹ್ಲಿ 2013ರಲ್ಲಿ ಆರ್​ಸಿಬಿಯ ಪೂರ್ಣ ಪ್ರಮಾಣದ ನಾಯಕನಾಗಿ ನೇಮಕಗೊಂಡಿದ್ದರು. 2021ರ ತನಕ ಅವರು ಆರ್​ಸಿಬಿಯನ್ನು ಮುನ್ನಡೆಸಿದ್ದರು. ಕೊಹ್ಲಿ ನಾಯಕತ್ವದಲ್ಲಿ ಒಟ್ಟು 140 ಪಂದ್ಯಗಳನ್ನು ಆಡಿದ್ದ ಆರ್​​ಸಿಬಿ 66 ಪಂದ್ಯಗಳನ್ನು ಜಯಿಸಿದೆ. 70 ಪಂದ್ಯಗಳಲ್ಲಿ ಸೋಲು ಕಂಡಿದೆ. ಐಪಿಎಲ್​ ಇತಿಹಾಸದಲ್ಲಿ ವಿನ್ನಿಂಗ್ಸ್​ ಸರಾಸರಿಯಲ್ಲಿ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಅವರ ನಾಯಕತ್ವದ ಸರಾಸರಿ ಗೆಲುವು ಶೇ. 46.15 ರಷ್ಟಿದೆ. ದಾಖಲೆ ಧೋನಿ ಹೆಸರಿನಲ್ಲಿದೆ. ಧೋನಿ ನಾಯಕತ್ವದ ಗೆಲುವಿನ ಸರಾಸರಿ 60.38 ರಷ್ಟಿದೆ.

Continue Reading
Advertisement
ಕರ್ನಾಟಕ9 mins ago

Almatti Dam: ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

Danish Kaneria
ಕ್ರಿಕೆಟ್30 mins ago

Danish Kaneria: ರಕ್ಷಾ ಬಂಧನ ಆಚರಿಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

Areca nut
ಪರಿಸರ59 mins ago

Areca Nut Price: ವಿದೇಶಿ ಅಕ್ರಮ ಅಡಿಕೆ ಸಾಗಾಣಿಕೆಯಿಂದ ದೇಶಿಯ ಅಡಿಕೆ ದರ ಕುಸಿತ; ರೈತರಲ್ಲಿ ಆತಂಕ

PM Modi Poland Visit
ವಿದೇಶ1 hour ago

PM Modi Poland Visit: ಪೋಲೆಂಡ್‌ಗೆ ಬಂದಿಳಿದ ಪ್ರಧಾನಿ ಮೋದಿ- ಗುಜರಾತಿ ನೃತ್ಯದ ಮೂಲಕ ಭರ್ಜರಿ ಸ್ವಾಗತ

PR Sreejesh
ಕ್ರೀಡೆ2 hours ago

PR Sreejesh: ಹಾಕಿ ದಿಗ್ಗಜ ಶ್ರೀಜೇಶ್​ಗೆ 2 ಕೋಟಿ ಬಹುಮಾನ ಘೋಷಣೆ ಮಾಡಿದ ಕೇರಳ ಸರ್ಕಾರ

Physical Abuse
ಕರ್ನಾಟಕ2 hours ago

Physical Abuse: ಆಸ್ಪತ್ರೆಯಲ್ಲೇ 65 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ!

Kids Denim Fashion
ಫ್ಯಾಷನ್2 hours ago

Kids Denim Fashion: ಮಾನ್ಸೂನ್ ಸೀಸನ್ ನಲ್ಲಿ ಟ್ರೆಂಡಿಯಾದ ಮಕ್ಕಳ ಡೆನಿಮ್ ಫ್ಯಾಷನ್

Shraddha Kapoor
ದೇಶ2 hours ago

Shraddha Kapoor: ಪ್ರಧಾನಿ ಮೋದಿಯನ್ನು ಹಿಂದಿಕ್ಕಿದ ನಟಿ ಶ್ರದ್ಧಾ;‌ ಸ್ತ್ರೀ-2 ಸಕ್ಸೆಸ್‌ ಬೆನ್ನಲ್ಲೇ ಹೊಸ ದಾಖಲೆ

Kolkata Doctor Murder Case
ದೇಶ2 hours ago

Kolkata Doctor Murder Case: ಕೋಲ್ಕತ್ತಾ ವೈದ್ಯೆ ಅತ್ಯಾಚಾರ; ಮತ್ತೆ ನೆನಪಿಗೆ ಬಂದಳು ಕರ್ನಾಟಕ ಮೂಲದ ನರ್ಸ್ ಅರುಣಾ ಶಾನ್‌ಬಾಗ್

bangaldesh Unrest
ದೇಶ2 hours ago

Bangladesh Unrest: ಬಾಂಗ್ಲಾದಲ್ಲಿ ಹಿಂದೂಗಳನ್ನು ರಕ್ಷಿಸಿ- ನಾಲ್ವರು ಶಂಕರಾಚಾರ್ಯರಿಂದ ಕೇಂದ್ರ ಸರ್ಕಾರಕ್ಕೆ ಮನವಿ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌