Australian Open: ಫೈನಲ್​​ ಪ್ರವೇಶಿಸಿದ ರೋಹನ್ ಬೋಪಣ್ಣ-ಮ್ಯಾಥ್ಯೂ ಎಬ್ಡೆನ್‌ ಜೋಡಿ - Vistara News

ಕ್ರೀಡೆ

Australian Open: ಫೈನಲ್​​ ಪ್ರವೇಶಿಸಿದ ರೋಹನ್ ಬೋಪಣ್ಣ-ಮ್ಯಾಥ್ಯೂ ಎಬ್ಡೆನ್‌ ಜೋಡಿ

ಆಸ್ಟ್ರೇಲಿಯನ್ ಓಪನ್(Australian Open) ಟೆನಿಸ್‌ 2024 ರ ಪುರುಷರ ಡಬಲ್ಸ್​ನಲ್ಲಿ ಎರಡನೇ ಶ್ರೇಯಾಂಕದ ಬೋಪಣ್ಣ-ಎಬ್ಡೆನ್ ಜೋಡಿ ಫೈನಲ್​ ಪ್ರವೇಶಿಸಿದ್ದಾರೆ.

VISTARANEWS.COM


on

Rohan Bopanna and Matthew Ebden
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೆಲ್ಬೊರ್ನ್​: ಭಾರತದ ಹಿರಿಯ ಟೆನಿಸ್‌ ತಾರೆ ರೋಹನ್ ಬೋಪಣ್ಣ(Rohan Bopanna) ಅವರು ಆಸ್ಟ್ರೇಲಿಯನ್ ಓಪನ್(Australian Open) ಟೆನಿಸ್‌ 2024 ರ ಪುರುಷರ ಡಬಲ್ಸ್​ನಲ್ಲಿ ಫೈನಲ್‌ ತಲುಪಿದ್ದಾರೆ. ಮೂಲಕ ಗ್ರ್ಯಾಂಡ್‌ಸ್ಲಾಮ್​ನಲ್ಲಿ ಹೊಸ ಇತಿಹಾಸವನ್ನು ನಿರ್ಮಿಸಿದ್ದಾರೆ. ಬೋಪಣ್ಣ ಮತ್ತು ಅವರ ಜತೆಗಾರ ಮ್ಯಾಥ್ಯೂ ಎಬ್ಡೆನ್(Matthew Ebden) ಗುರುವಾರ ನಡೆದ ಸೆಮಿಫೈನಲ್​ ಪಂದ್ಯದಲ್ಲಿ ಅಧಿಕಾರಯುತ ಗೆಲುವು ಸಾಧಿಸಿ ಪ್ರಶಸ್ತಿ ಸುತ್ತಿಗೇರಿದ್ದಾರೆ.

ಗುರುವಾರ ನಡೆದ ಪುರುಷರ ಡಬಲ್ಸ್​ನ ಸೆಮಿಫೈನಲ್​ ಪಂದ್ಯದಲ್ಲಿ ವಿಶ್ವ ನಂ.2 ಇಂಡೋ-ಆಸೀಸ್​ ಜೋಡಿ ರೋಚಕ 3 ಸೆಟ್‌ಗಳ ಸೆಮಿ ಕಾದಾಟದಲ್ಲಿ ಥಾಮಸ್ ಮಚಾಕ್ ಮತ್ತು ಜಾಂಗ್ ಝಿಶೆನ್ ಜೋಡಿಯನ್ನು ಸೋಲಿಸಿದರು. ಬೋಪಣ್ಣ-ಎಬ್ಡೆನ್ ಜೋಡಿಯು ಮೊದಲ ಸೆಟ್ ಅನ್ನು 6-3 ರಿಂದ ಆರಾಮವಾಗಿ ಗೆದ್ದುಕೊಂಡರು. ನಂತರ ಎರಡನೇ ಸೆಟ್​ನಲ್ಲಿ 3-6 ರಲ್ಲಿ ಸೋತರು. ಮೂರನೇ ಸೆಟ್‌ನಲ್ಲಿ ಎರಡೂ ಜೋಡಿಗಳು ತಮ್ಮ ಅತ್ಯುತ್ತಮ ಪ್ರದರ್ಶನ ನೀಡಿ ಟೈ ಬ್ರೇಕರ್‌ಗೆ ಕೊಂಡೊಯ್ದರು. ಬೋಪಣ್ಣ ಮತ್ತು ಎಬ್ಡೆನ್ ಅವರು ಟೈ ಬ್ರೇಕರನ್ನು 10-7 ರಿಂದ ಗೆದ್ದು ಫೈನಲ್ ಟಿಕೆಟ್​ ಪಡೆದರು. ಇದೇ ವೇಳೆ ಬೋಪಣ್ಣ ಗ್ರ್ಯಾಂಡ್ ಸ್ಲಾಮ್ ಫೈನಲ್‌ ತಲುಪಿದ ಅತ್ಯಂತ ಹಿರಿಯ ಆಟಗಾರ ಎನ್ನುವ ತಮ್ಮದೇ ದಾಖಲೆಯನ್ನು ಮುರಿದರು.

ಮೊದಲ ಫೈನಲ್​


ಬೋಪಣ್ಣ ಆಸ್ಟ್ರೇಲಿಯನ್ ಓಪನ್ ಫೈನಲ್ ಪ್ರವೇಶಿಸಿದ್ದು ಇದೇ ಮೊದಲು. 2023ರಲ್ಲಿ ನಡೆದಿದ್ದ ಯುಎಸ್ ಓಪನ್ ಗ್ರ್ಯಾನ್‌ಸ್ಲಾಮ್‌ ಟೂರ್ನಿಯಲ್ಲಿ ಬೋಪಣ್ಣ ಮತ್ತು ಎಬ್ಡೆನ್ ಫೈನಲ್‌ಗೆ ಪ್ರವೇಶಿಸಿದ್ದರು. ಆದರೆ ಫೈನಲ್​ನಲ್ಲಿ ಸೋತು ರನ್ನರ್​ ಅಪ್​ಗೆ ತೃಪ್ತಿಪಟ್ಟಿದ್ದರು. ಈ ಬಾರಿಯ ಆಟವನ್ನು ನೋಡುವಾಗ ಬೋಪಣ್ಣ-ಎಬ್ಡೆನ್ ಜೋಡಿ ಚೊಚ್ಚಲ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿಗೆ ಮುತ್ತಿಕ್ಕುವ ನಿರೀಕ್ಷೆಯಲ್ಲಿದ್ದಾರೆ.

ಎರಡನೇ ಶ್ರೇಯಾಂಕದ ಇಂಡೋ-ಆಸ್ಟ್ರೇಲಿಯನ್ ಜೋಡಿಯು ಮೂರನೇ ಸೆಟ್‌ನಲ್ಲಿ ತಮ್ಮ ಪ್ರತಿಸ್ಪರ್ಧಿಗಳಿಂದ ಕೆಲವು ತೀವ್ರ ಪ್ರತಿರೋಧವನ್ನು ಎದುರಿಸಿತು. ಆದರೆ ಅಂತಿಮವಾಗಿ ಸೂಪರ್ ಟೈ ಬ್ರೇಕರ್ಸ್​ನಲ್ಲಿ ಮೇಲುಗೈ ಸಾಧಿಸಿದ ಬೋಪಣ್ಣ-ಎಬ್ಡೆನ್ ಜೋಡಿ 6-3 3-6 7-6 (10-7) ಅಂಕಗಳೊಂದಿಗೆ ಹೆದ್ದು ಫೈನಲ್​ಗೆ ಮುನ್ನಡೆದರು. ಈ ಹೋರಾಟ ಎರಡು ಗಂಟೆ ಎರಡು ನಿಮಿಷದ ವರೆಗೆ ಸಾಗಿತು.

ಇದನ್ನೂ ಓದಿ Australian Open: ಸೆಮಿಫೈನಲ್​ ಪ್ರವೇಶಿಸಿದ ಬೋಪಣ್ಣ-ಎಬ್ಡೆನ್‌ ಜೋಡಿ

ಬುಧವಾರ ನಡೆದಿದ್ದ ಕ್ವಾರ್ಟರ್​ ಫೈನಲ್​ನಲ್ಲಿ ಬೋಪಣ್ಣ ಮತ್ತು ಅವರ ಜತೆಗಾರ ಮ್ಯಾಥ್ಯೂ ಎಬ್ಡೆನ್ ಉತ್ಕೃಷ್ಟ ಮಟ್ಟದ ಪ್ರದರ್ಶನ ತೋರುವ ಮೂಲಕ ಅರ್ಜೆಂಟೀನಾದ ಮ್ಯಾಕ್ಸಿಮೊ ಗೊಂಝಾಲೆಝ್-ಆ್ಯಂಡ್ರೆಸ್‌ ಮಾಲ್ಟೆನಿ ಜೋಡಿಗೆ 6-4, 7-6 (5) ಅಂತರದ ನೇರ ಸೆಟ್​ಗಳ ಸೋಲಿನ ಆಘಾತವಿಕ್ಕಿದ್ದರು. 43 ನೇ ವಯಸ್ಸಿನ ಬೋಪಣ್ಣ ಕೊಡಗು ಮೂಲದವರಾಗಿದ್ದಾರೆ. ವಿಶ್ವದ ನಂ.1 ಪುರುಷರ ಡಬಲ್ಸ್ ಆಟಗಾರ ಎನಿಸಿಕೊಂಡಿರುವ ಅವರು ಶ್ರೇಯಾಂಕಗಳನ್ನು ನವೀಕರಿಸಿದಾಗ ಕ್ರೀಡಾ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಅತ್ಯಂತ ಹಿರಿಯ ಆಟಗಾರ ಎನಿಸಿಕೊಳ್ಳಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024: ಬರೋಬ್ಬರಿ 12 ವರ್ಷಗಳ ಬಳಿಕ ವಾಂಖೆಡೆಯಲ್ಲಿ ಗೆಲುವು ಸಾಧಿಸಿದ ಕೆಕೆಆರ್​

IPL 2024: ಈ ಬಾರಿಯ ಐಪಿಎಲ್​ನಲ್ಲಿ(IPL 2024) ಮುಂಬೈ ತಂಡಕ್ಕೆ ಚೇಸಿಂಗ್​ ವೇಳೆ ಎದುರಾದ 5ನೇ ಸೋಲು ಇದಾಗಿದೆ. 6 ಪಂದ್ಯಗಳಲ್ಲಿ ಮುಂಬೈ ಚೇಸಿಂಗ್​ ನಡೆಸಿತ್ತು. ಗೆಲುವು ಸಾಧಿಸಿದ್ದು ಒಂದು ಬಾರಿ ಮಾತ್ರ. ಇದು ಆರ್​ಸಿಬಿ ವಿರುದ್ಧ. ಸದ್ಯ ಮುಂಬೈ ತಂಡದ ಪ್ಲೇ ಆಫ್​ ರೇಸ್​ ಬಹುತೇಕ ಅಂತ್ಯ ಕಂಡಿದೆ

VISTARANEWS.COM


on

IPL 2024
Koo

ಮುಂಬಯಿ: ಮುಂಬೈ ಇಂಡಿಯನ್ಸ್(Mumbai Indians)​ ವಿರುದ್ಧ ಕೆಕೆಆರ್​ ನಿನ್ನೆ(ಶುಕ್ರವಾರ) ನಡೆದ ಪಂದ್ಯದಲ್ಲಿ ಗೆಲುವು 24 ರನ್​ಗಳ ಗೆಲುವು ಸಾಧಿಸಿತು. ಇದು ಕೆಕೆಆರ್​ಗೆ(Kolkata Knight Riders) ಬರೋಬ್ಬರಿ 12 ವರ್ಷಗಳ ಬಳಿಕ ವಾಂಖೆಡೆಯಲ್ಲಿ ಒಲಿದ ಗೆಲುವಾಗಿದೆ. ಕೆಕೆಆರ್​ ಇಲ್ಲಿ ಕೊನೆಯ ಬಾರಿಗೆ ಗೆದ್ದದ್ದು 2012ರಲ್ಲಿ. ಆ ಪಂದ್ಯದಲ್ಲಿ ಸುನೀಲ್​ ನಾರಾಯಣ್​ 3.1 ಓವರ್​ ಬೌಲಿಂಗ್​ ನಡೆಸಿ ಕೇವಲ 15 ರನ್​ಗೆ 4 ವಿಕೆಟ್​ ಕಿತ್ತು ಗೆಲುವಿನ ಹೀರೊ ಎನಿಸಿಕೊಂಡಿದ್ದರು. ಕೆಕೆಆರ್​ ಈ ಪಂದ್ಯವನ್ನು 32 ರನ್​ ಅಂತರದಿಂದ ಗೆದ್ದಿತ್ತು. ಕೆಕೆಆರ್​ ವಾಂಖೆಡೆಯಲ್ಲಿ ಇದುವರೆಗೆ 11 ಪಂದ್ಯ ಆಡಿ 2 ಗೆಲುವು ಸಾಧಿಸಿದೆ.

ಈ ಬಾರಿಯ ಐಪಿಎಲ್​ನಲ್ಲಿ(IPL 2024) ಮುಂಬೈ ತಂಡಕ್ಕೆ ಚೇಸಿಂಗ್​ ವೇಳೆ ಎದುರಾದ 5ನೇ ಸೋಲು ಇದಾಗಿದೆ. 6 ಪಂದ್ಯಗಳಲ್ಲಿ ಮುಂಬೈ ಚೇಸಿಂಗ್​ ನಡೆಸಿತ್ತು. ಗೆಲುವು ಸಾಧಿಸಿದ್ದು ಒಂದು ಬಾರಿ ಮಾತ್ರ. ಇದು ಆರ್​ಸಿಬಿ ವಿರುದ್ಧ. ಸದ್ಯ ಮುಂಬೈ ತಂಡದ ಪ್ಲೇ ಆಫ್​ ರೇಸ್​ ಬಹುತೇಕ ಅಂತ್ಯ ಕಂಡಿದೆ. 9ನೇ ಸ್ಥಾನದಲ್ಲಿರುವ ಮುಂಬೈಗೆ ಇನ್ನು ಮೂರು ಪಂದ್ಯ ಬಾಕಿ ಇದೆ. ಈ ಪಂದ್ಯ ಗೆದ್ದರೂ ಕೂಡ 12 ಅಂಕ ಆಗಲಿದೆ. ಪ್ಲೇ ಆಫ್​ಗೆ ಈ ಅಂಕ ಸಾಲದು. ಹೀಗಾಗಿ ತಂಡ ಟೂರ್ನಿಯಿಂದ ಹೊರಬಿದ್ದಿದೆ ಎಂದರೂ ತಪ್ಪಾಗಲಾರದು.

ವಾಖೆಂಡೆ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮುಂಬೈ ತಂಡ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಕೆಕೆಆರ್​ 19.5 ಓವರ್​ಗಳಲ್ಲಿ 169 ರನ್​ಗೆ ಆಲ್​ಔಟ್ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬಯಿ 18.5 ಓವರ್​​ 145 ರನ್​ಗಳಿಗೆ ಶರಣಾಗಿ ಸೋಲೊಪ್ಪಿಕೊಂಡಿತು. ಕೆಕೆಅರ್​ ಪರ ಬ್ಯಾಟಿಂಗ್​ನಲ್ಲಿ ವೆಂಕಟೇಶ್​ ಅಯ್ಯರ್​ (70) ಅರ್ಧ ಶತಕ ಬಾರಿಸಿ ಮಿಂಚಿದರೆ ಬೌಲಿಂಗ್​ನಲ್ಲಿ ಮಿಚೆಲ್ ಸ್ಟಾರ್ಕ್​ 4 ವಿಕೆಟ್ ತಮ್ಮದಾಗಿಸಿಕೊಂಡರು.

ಇದನ್ನೂ ಓದಿ IPL 2024 POINTS TABLE: ಕೆಕೆಆರ್​ ಗೆಲುವಿನ ಬಳಿಕ ಅಂಕಪಟ್ಟಿ ಹೇಗಿದೆ?

ಬ್ಯಾಟಿಂಗ್​ ಪೂರಕವಾಗಿದ್ದ ಟ್ರ್ಯಾಕ್​ನಲ್ಲಿ ಟಾಸ್​ ಸೋತು ಬ್ಯಾಟಿಂಗ್​ ನಡೆಸಿದ ಕೆಕೆಆರ್​ 57 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಸಿಲುಕಿತು. ಈ ವೇಳೆ ವೆಂಕಟೇಶ್ ಅಯ್ಯರ್ ಹಾಗೂ ಹಾಲಿ ಆವೃತ್ತಿಯಲ್ಲಿ ಮೊದಲ ಅವಕಾಶ ಪಡೆದ ಮನೀಶ್ ಪಾಂಡೆ 42 ರನ್ ಬಾರಿಸಿ ತಂಡಕ್ಕೆ ಆಧಾರವಾದರು. ಇವರಿಬ್ಬರ ನೆರವಿನಿಂದ ಸ್ಪರ್ಧಾತ್ಮಕ ಮೊತ್ತವನ್ನು ಪೇರಿಸಲು ಕೆಕೆಆರ್​ಗೆ ಸಾಧ್ಯವಾಯಿತು. ಅಂಗ್​ಕ್ರಿಶ್​ ರಘುವಂಶಿ 13 ರನ್ ಬಾರಿಸಿ ಕೆಕೆಆರ್​ ಪರ ಎರಡಂಕಿ ಮೊತ್ತ ದಾಟಿದ ಎರಡನೇ ಆಟಗಾರ ಎನಿಸಿಕೊಂಡರು. ಉಳಿದವರೆಲ್ಲರೂ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದರು.

Continue Reading

ಕ್ರೀಡೆ

IPL 2024 POINTS TABLE: ಕೆಕೆಆರ್​ ಗೆಲುವಿನ ಬಳಿಕ ಅಂಕಪಟ್ಟಿ ಹೇಗಿದೆ?

IPL 2024 POINTS TABLE: ಕೆಕೆಆರ್​ ಗೆಲುವು ಸಾಧಿಸಿ 14 ಅಂಕದೊಂದಿಗೆ ಪ್ಲೇ ಆಫ್​ ಸನಿಹಕ್ಕೆ ಬಂದು ನಿಂತಿದೆ. ಸದ್ಯ 2ನೇ ಸ್ಥಾನದಲ್ಲಿರುವ ಕೆಕೆಆರ್​ಗೆ ಇನ್ನು 4 ಪಂದ್ಯಗಳು ಬಾಕಿ ಉಳಿದಿವೆ. ಈ ಪೈಕಿ ಕನಿಷ್ಠ 1 ಪಂದ್ಯ ಗೆದ್ದರೂ ಪ್ಲೇ ಆಫ್​ ಪ್ರವೇಶಿಸಬಹುದು. ಇಂದು ನಡೆಯುವ ಆರ್​ಸಿಬಿ ಮತ್ತು ಗುಜರಾತ್​ ಟೈಟಾನ್ಸ್​ ಮುಖಾಮುಖಿಯಾಗಲಿವೆ.

VISTARANEWS.COM


on

IPL 2024 POINTS TABLE
Koo

ಮುಂಬಯಿ: ಶುಕ್ರವಾರ ರಾತ್ರಿ ನಡೆದ ಐಪಿಎಲ್(IPL 2024)​ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್(Mumbai Indians)​ ತಂಡ ತವರಿನಲ್ಲೇ ಕೆಕೆಆರ್(Kolkata Knight Riders)​ ವಿರುದ್ಧ 24 ರನ್​​ ಅಂತರದ ಸೋಲು ಕಂಡಿತು. ಈ ಸೋಲಿನಿಂದ ಮುಂಬೈಯ ಪ್ಲೇ ಆಫ್​ ಆಸೆ ಬಹುತೇಕ ಕಮರಿ ಹೋಗಿದೆ. ಅಂಕಪಟ್ಟಿಯಲ್ಲಿ(IPL 2024 POINTS TABLE) 9ನೇ ಸ್ಥಾನದಲ್ಲಿರುವ ಹಾರ್ದಿಕ್​ ಪಡೆಗೆ ಇನ್ನು ಮೂರು ಪಂದ್ಯಗಳು ಮಾತ್ರ ಬಾಕಿ ಉಳಿದಿದೆ. ಈ ಪಂದ್ಯ ಗೆದ್ದರೂ ಕೂಡ ಯಾವುದೇ ಲಾಭವಿಲ್ಲ.

ಕೆಕೆಆರ್​ ಗೆಲುವು ಸಾಧಿಸಿ 14 ಅಂಕದೊಂದಿಗೆ ಪ್ಲೇ ಆಫ್​ ಸನಿಹಕ್ಕೆ ಬಂದು ನಿಂತಿದೆ. ಸದ್ಯ 2ನೇ ಸ್ಥಾನದಲ್ಲಿರುವ ಕೆಕೆಆರ್​ಗೆ ಇನ್ನು 4 ಪಂದ್ಯಗಳು ಬಾಕಿ ಉಳಿದಿವೆ. ಈ ಪೈಕಿ ಕನಿಷ್ಠ 1 ಪಂದ್ಯ ಗೆದ್ದರೂ ಪ್ಲೇ ಆಫ್​ ಪ್ರವೇಶಿಸಬಹುದು. ಇಂದು ನಡೆಯುವ ಆರ್​ಸಿಬಿ ಮತ್ತು ಗುಜರಾತ್​ ಟೈಟಾನ್ಸ್​ ಮುಖಾಮುಖಿಯಾಗಲಿವೆ. ಈ ಪಂದ್ಯ ಉಭಯ ತಂಡಗಳಿಗೂ ಪ್ಲೇ ಆಫ್​ ಪ್ರವೇಶದ ನಿಟ್ಟಿನಲ್ಲಿ ಮಹತ್ವದ್ದಾಗಿದೆ.

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ರಾಜಸ್ಥಾನ್​ ರಾಯಲ್ಸ್​98116 (+0.694)
ಕೆಕೆಆರ್​​107314 (+1.098)
ಲಕ್ನೋ​​106412 (+0.094)
ಹೈದರಾಬಾದ್​106512 (+0.072)
ಚೆನ್ನೈ​105510 (+0.627)
ಡೆಲ್ಲಿ115610 (-0.442)
ಪಂಜಾಬ್​10488 (-0.062)
ಗುಜರಾತ್​10468 (-1.113)
ಮುಂಬೈ11386 (-0.356)
ಆರ್​ಸಿಬಿ10376 (-0.415)

ತವರಿನಲ್ಲೇ ಸೋಲಿನ ಮುಖಭಂಗ

ವಾಖೆಂಡೆ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮುಂಬೈ ತಂಡ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಕೆಕೆಆರ್​ 19.5 ಓವರ್​ಗಳಲ್ಲಿ 169 ರನ್​ಗೆ ಆಲ್​ಔಟ್ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬಯಿ 18.5 ಓವರ್​​ 145 ರನ್​ಗಳಿಗೆ ಶರಣಾಗಿ ಸೋಲೊಪ್ಪಿಕೊಂಡಿತು. ಕೆಕೆಅರ್​ ಪರ ಬ್ಯಾಟಿಂಗ್​ನಲ್ಲಿ ವೆಂಕಟೇಶ್​ ಅಯ್ಯರ್​ (70) ಅರ್ಧ ಶತಕ ಬಾರಿಸಿ ಮಿಂಚಿದರೆ ಬೌಲಿಂಗ್​ನಲ್ಲಿ ಮಿಚೆಲ್ ಸ್ಟಾರ್ಕ್​ 4 ವಿಕೆಟ್ ತಮ್ಮದಾಗಿಸಿಕೊಂಡರು.

ಇದನ್ನೂ ಓದಿ IPL 2024 : ಮುಂಬೈ ವಿರುದ್ಧ ಕೆಕೆಆರ್​ಗೆ 24 ರನ್​ ಗೆಲುವು; ಪಾಂಡ್ಯಾ ಬಳಗಕ್ಕೆ ಮತ್ತೊಂದು ಆಘಾತ

ಬ್ಯಾಟಿಂಗ್​ ಪೂರಕವಾಗಿದ್ದ ಟ್ರ್ಯಾಕ್​ನಲ್ಲಿ ಟಾಸ್​ ಸೋತು ಬ್ಯಾಟಿಂಗ್​ ನಡೆಸಿದ ಕೆಕೆಆರ್​ 57 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಸಿಲುಕಿತು. ಈ ವೇಳೆ ವೆಂಕಟೇಶ್ ಅಯ್ಯರ್ ಹಾಗೂ ಹಾಲಿ ಆವೃತ್ತಿಯಲ್ಲಿ ಮೊದಲ ಅವಕಾಶ ಪಡೆದ ಮನೀಶ್ ಪಾಂಡೆ 42 ರನ್ ಬಾರಿಸಿ ತಂಡಕ್ಕೆ ಆಧಾರವಾದರು. ಇವರಿಬ್ಬರ ನೆರವಿನಿಂದ ಸ್ಪರ್ಧಾತ್ಮಕ ಮೊತ್ತವನ್ನು ಪೇರಿಸಲು ಕೆಕೆಆರ್​ಗೆ ಸಾಧ್ಯವಾಯಿತು. ಅಂಗ್​ಕ್ರಿಶ್​ ರಘುವಂಶಿ 13 ರನ್ ಬಾರಿಸಿ ಕೆಕೆಆರ್​ ಪರ ಎರಡಂಕಿ ಮೊತ್ತ ದಾಟಿದ ಎರಡನೇ ಆಟಗಾರ ಎನಿಸಿಕೊಂಡರು. ಉಳಿದವರೆಲ್ಲರೂ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದರು.

Continue Reading

ಕ್ರಿಕೆಟ್

RCB vs GT: ಇಂದು ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ; ಮೆಟ್ರೋ ಸೇವೆ ವಿಸ್ತರಣೆ

RCB vs GT: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಟಾ ಐಪಿಎಲ್ 2024 ಕ್ರಿಕೆಟ್ ಪಂದ್ಯಾವಳಿಯ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಈ ಕೆಳಕಂಡಂತೆ ಸೂಕ್ತ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿದೆ. ಮೇ 4 ಶನಿವಾರ ಮಧ್ಯಾಹ್ನ 3.00 ಗಂಟೆಯಿಂದ ರಾತ್ರಿ 11.00ರವರೆಗೆ ಈ ವ್ಯತ್ಯಾಸಗಳು ಜಾರಿಯಲ್ಲಿದ್ದು, ಸಾರ್ವಜನಿಕರು ಸಹಕರಿಸಲು ಕೋರಿದೆ. ಜತೆಗೆ ಬೆಂಗಳೂರು ನಗರ ಸಂಚಾರ ಪೊಲೀಸರಿಂದಲೂ ಹಲವು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.

VISTARANEWS.COM


on

RCB vs GT
Koo

ಬೆಂಗಳೂರು: ಕನ್ನಡಿಗರ ನೆಚ್ಚಿನ ತಂಡವಾದ ಆರ್​ಸಿಬಿ(Royal Challengers Bengaluru) ಇಂದು (ಮೇ​ 4) ತವರು ಮೈದಾನ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (chinnaswamy stadium) ಗುಜರಾತ್​ ಟೈಟಾನ್ಸ್(Gujarat Titans)​ ವಿರುದ್ಧ​ಕಣಕ್ಕಿಳಿಯಲು ಸಜ್ಜಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಟಾ ಐಪಿಎಲ್ 2024 ಕ್ರಿಕೆಟ್ ಪಂದ್ಯಾವಳಿಯ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಈ ಕೆಳಕಂಡಂತೆ ಸೂಕ್ತ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿದೆ. ಮೇ 4 ಶನಿವಾರ ಮಧ್ಯಾಹ್ನ 3.00 ಗಂಟೆಯಿಂದ ರಾತ್ರಿ 11.00ರವರೆಗೆ ಈ ವ್ಯತ್ಯಾಸಗಳು ಜಾರಿಯಲ್ಲಿದ್ದು, ಸಾರ್ವಜನಿಕರು ಸಹಕರಿಸಲು ಕೋರಿದೆ. ಜತೆಗೆ ಬೆಂಗಳೂರು ನಗರ ಸಂಚಾರ ಪೊಲೀಸರಿಂದಲೂ ಹಲವು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಪೂರ್ಣವಾಗಿ ಪಾರ್ಕಿಂಗ್ ನಿಷೇಧ ಮಾಡಲಾಗಿದೆ.

ವಾಹನಗಳ ನಿಲುಗಡೆ ನಿಷೇಧವಿರುವ ರಸ್ತೆಗಳ ವಿವರ


ಕ್ರೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ ರಸ್ತೆ ಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ವಿಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ & ನೃಪತುಂಗ ರಸ್ತೆ.

ಸಾರ್ವಜನಿಕ ವಾಹನಗಳ ನಿಲುಗಡೆ ಸ್ಥಳಗಳು


ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ, ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಮೊದಲನೆ ಮಹಡಿ & ಓಲ್ಸ್ ಕೆ.ಜಿ.ಐ.ಡಿ ಬಿಲ್ಡಿಂಗ್, ಕಿಂಗ್ಸ್ ರಸ್ತೆ, (ಕಬ್ಬನ್‌ಪಾರ್ಕ್ ಒಳಭಾಗ) ಈ ಪ್ರದೇಶದಲ್ಲಿ ಸಾರ್ವಜನಿಕ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

ಮೆಟ್ರೋ ಸೇವೆ


ಕ್ರಿಕೆಟ್‌ ಪಂದ್ಯ ನೋಡಲು ಬರುವ ಕ್ರಿಕೆಟ್‌ ಪ್ರೇಮಿಗಳಿಗಾಗಿ ಮೆಟ್ರೋ ರೈಲು ವಿಶೇಷ ಓಡಾಟಕ್ಕೆ ಅನುಮತಿ ನೀಡಿವೆ. ಹೀಗಾಗಿ ಕ್ರಿಕೆಟ್‌ ನೋಡಲು ಬರುವವರು, ಕ್ರೀಡಾಂಗಣ ತಲುಪುವ ವಿಚಾರದಲ್ಲಿ ಯಾವುದೇ ಚಿಂತೆ ಮಾಡಬೇಕಾಗಿಲ್ಲ. ಪಂದ್ಯ ವೀಕ್ಷಣೆಗಾಗಿ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ಎಲ್ಲಾ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ಕೊನೆಯ ರೈಲು ಸೇವೆಗಳನ್ನು ರಾತ್ರಿ 11.30ಕ್ಕೆ ವಿಸ್ತರಿಸಲಾಗಿದೆ.

ಪೇಪರ್‌ ಟಿಕೆಟ್‌ ಮಾರಾಟ


ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು 50 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಇದು ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಿಂದ ಯಾವುದೇ ಇತರ ಮೆಟ್ರೋ ನಿಲ್ದಾಣಕ್ಕೆ ಒಂದೇ ಪ್ರಯಾಣಕ್ಕೆ ವಿತರಣೆಯ ದಿನದಂದು ರಾತ್ರಿ 8.00 ರಿಂದ ದಿನದ ಸೇವೆಗಳು ಕೊನೆಗೊಳ್ಳುವವರೆಗೆ ಮಾನ್ಯವಾಗಿರುತ್ತದೆ. ಈ ನಿಲ್ದಾಣಗಳಲ್ಲಿ ಟೋಕನ್ ಲಭ್ಯವಿರುವುದಿಲ್ಲ.

ಎಂದಿನಂತೆ, ಕ್ಯೂಆರ್‌ ( QR) ಕೋಡ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್‌ಗಳು ಮತ್ತು ಎನ್‌ಸಿಎಂಸಿ (NCMC) ಕಾರ್ಡ್‌ಗಳನ್ನು ಸಹ ಬಳಸಬಹುದು. ವಾಟ್ಸ್ ಆಪ್/ನಮ್ಮ ಮೆಟ್ರೋ ಆ್ಯಪ್/ಪೇ ಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ QR ಟಿಕೆಟ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ. ಕಬ್ಬನ್ ಪಾರ್ಕ್ ಮತ್ತು ಎಂಜಿ ರೋಡ್ ಮೆಟ್ರೋ ನಿಲ್ದಾಣಗಳಲ್ಲಿ ಟಿಕೆಟ್ ಖರೀದಿಸಲು ಟಿಕೆಟ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಈ ವ್ಯವಸ್ಥೆ ಮಾಡಲಾಗಿದೆ.

Continue Reading

ಕ್ರೀಡೆ

Brij Bhushan: ಮಗನ ನಾಮನಿರ್ದೇಶನದ ವೇಳೆ 10 ಸಾವಿರಕ್ಕೂ ಅಧಿಕ ಬೆಂಬಲಿಗರೊಂದಿಗೆ ಶಕ್ತಿ ಪ್ರದರ್ಶಿಸಿದ ಬ್ರಿಜ್ ಭೂಷಣ್

Brij Bhushan: ಕರಣ್ ಭೂಷಣ್ ಸಿಂಗ್ ಅವರು ಉತ್ತರ ಪ್ರದೇಶದಿಂದ ಸತತ ಮೂರು ಬಾರಿ ಲೋಕಸಭೆಗೆ ಆಯ್ಕೆಯಾಗಿರುವ ಬ್ರಿಜ್ ಭೂಷಣ್ ಸಿಂಗ್ ಅವರ ಕಿರಿಯ ಪುತ್ರ . 2019 ರ ಲೋಕಸಭಾ ಚುನಾವಣೆಯಲ್ಲಿ, ಬ್ರಿಜ್ ಭೂಷಣ್ ಅವರು ಕೈಸರ್‌ಗಂಜ್‌ನಿಂದ ಚುನಾವಣೆಯಲ್ಲಿ ಎರಡು ಲಕ್ಷ ಮತಗಳಿಂದ ಗೆದ್ದಿದ್ದರು. ಕರಣ್ ಭೂಷಣ್ ಸಿಂಗ್ ಉತ್ತರ ಪ್ರದೇಶದ ಕುಸ್ತಿ ಸಂಘದ ಅಧ್ಯಕ್ಷರಾಗಿದ್ದಾರೆ.

VISTARANEWS.COM


on

Brij Bhushan
Koo

ಉತ್ತರ ಪ್ರದೇಶ: ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಕೈಸರ್‌ಗಂಜ್‌ನ(Kaiserganj ) ಹಾಲಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್(Brij Bhushan) ಅವರನ್ನು ಬಿಜೆಪಿ ಈ ಬಾರಿಯ ಲೋಕಸಭಾ ಚುನಾವಣೆಯಿಂದ(Lok Sabha polls) ಕೈಬಿಟ್ಟು, ಅವರ ಪುತ್ರ ಕರಣ್(Karan) ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಮಗನ ನಾಮನಿರ್ದೇಶನ ಮಾಡುವ ಮೊದಲು ಕೈಸರ್‌ಗಂಜ್‌ನಲ್ಲಿ ಭರ್ಜರಿ ಶಕ್ತಿ ಪ್ರದರ್ಶನ ಮಾಡಿದ್ದಾರೆ.

500 ಅಧಿಕ 700 ಎಸ್‌ಯುವಿ ಕಾರುಗಳ ಮೂಲಕ ರ‍್ಯಾಲಿ ಮತ್ತು ನಾಮನಿರ್ದೇಶನ ಸಭೆಯಲ್ಲಿ 10,000 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಇದರಲ್ಲಿ ಶಾಸಕರು, ಎಂಎಲ್‌ಸಿಗಳು, ಜಿಲ್ಲಾ ಪಂಚಾಯತ್ ಮುಖ್ಯಸ್ಥರು, ಹತ್ತಿರದ ಜಿಲ್ಲೆಗಳ ಬಿಜೆಪಿಯ ಸ್ಥಳೀಯ ನಾಯಕರು, ಅಯೋಧ್ಯೆಯ ಪ್ರಮುಖ ಧಾರ್ಮಿಕ ಮುಖಂಡರು ಸೇರಿದ್ದರು.

ಕರಣ್ ಭೂಷಣ್ ಸಿಂಗ್ ಅವರು ಉತ್ತರ ಪ್ರದೇಶದಿಂದ ಸತತ ಮೂರು ಬಾರಿ ಲೋಕಸಭೆಗೆ ಆಯ್ಕೆಯಾಗಿರುವ ಬ್ರಿಜ್ ಭೂಷಣ್ ಸಿಂಗ್ ಅವರ ಕಿರಿಯ ಪುತ್ರ . 2019 ರ ಲೋಕಸಭಾ ಚುನಾವಣೆಯಲ್ಲಿ, ಬ್ರಿಜ್ ಭೂಷಣ್ ಅವರು ಕೈಸರ್‌ಗಂಜ್‌ನಿಂದ ಚುನಾವಣೆಯಲ್ಲಿ ಎರಡು ಲಕ್ಷ ಮತಗಳಿಂದ ಗೆದ್ದಿದ್ದರು. ಕರಣ್ ಭೂಷಣ್ ಸಿಂಗ್ ಉತ್ತರ ಪ್ರದೇಶದ ಕುಸ್ತಿ ಸಂಘದ ಅಧ್ಯಕ್ಷರಾಗಿದ್ದಾರೆ. ಗೊಂಡಾದ ನವಾಬ್‌ಗಂಜ್‌ನಲ್ಲಿರುವ ಸಹಕಾರಿ ಗ್ರಾಮಾಭಿವೃದ್ಧಿ ಬ್ಯಾಂಕ್‌ನ ಅಧ್ಯಕ್ಷರಾಗಿಯೂ ಜನ ಸಂಪರ್ಕ ಹೊಂದಿದ್ದಾರೆ. ಐದನೇ ಹಂತದಲ್ಲಿ ಮೇ 20 ರಂದು ಕೈಸರ್‌ಗಂಜ್‌ನಲ್ಲಿ ಮತದಾನ ನಡೆಯಲಿದೆ.

ಹಳದಿ ಕುರ್ತಾ, ಕಿತ್ತಳೆ ಬಣ್ಣದ ಸ್ಕಾರ್ಫ್ ಮತ್ತು ಧೋತಿ ಧರಿಸಿದ್ದ ಬ್ರಿಜ್ ಭೂಷಣ್, ಉತ್ಸಾಹಭರಿತ ಕಾರ್ಯಕರ್ತರ ನಡುವೆ ಕೈಯಲ್ಲಿ ಮೈಕ್ರೊಫೋನ್ನೊಂದಿಗೆ ಎಲ್ಲ ವ್ಯವಸ್ಥೆಗಳನ್ನು ನಿರ್ವಹಿಸುತ್ತಿದ್ದರು. ತಾನು ಚುನಾವಣ ಕಣದಲ್ಲಿ ಇಲ್ಲದಿದ್ದರೂ ಕೂಡ ಈ ಕ್ಷೇತ್ರದಲ್ಲಿ ತಮ್ಮ ಪ್ರಾಬಲ್ಯ ಇನ್ನೂ ಕೂಡ ಇದೆ ಎನ್ನುವುದನ್ನು ಈ ಶಕ್ತ ಪ್ರದರ್ಶನದ ಮೂಲಕ ತೋರಿಸಿಕೊಟ್ಟಿದ್ದಾರೆ. ಆದ್ಯಾಗೂ, ಬ್ರಿಜ್​ ಭೂಷಣ್​ ಕಾರ್ಯಕ್ರಮದ ಉದ್ದಕ್ಕೂ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅಥವಾ ಅವರ ಮಗನ ಬಳಿ ಹೋಗಲಿಲ್ಲ. ಗಣ್ಯರು ಮತ್ತು ಧಾರ್ಮಿಕ ಮುಖಂಡರನ್ನು ಭೇಟಿ ಮಾಡುವುದರಲ್ಲಿ ನಿರತರಾಗಿದ್ದರು. ಮಗನ ನಾಮಪತ್ರ ಸಲ್ಲಿಕೆಗೂ ಹೋಗಿರಲಿಲ್ಲ.

ನಾಮಪತ್ರ ಸಲ್ಲಿಕೆಗೆ ಮಗನ ಜತೆ ಏಕೆ ಹೋಗಲಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಬ್ರಿಜ್​ ಭೂಷಣ್​​, “ಐದು ಜನರಿಗೆ ಮಾತ್ರ ಹೋಗಲು ಅನುಮತಿಸಲಾಗಿದೆ. ನಾಮಪತ್ರ ಸಲ್ಲಿಕೆಗೆ ತೆರಳಿದ್ದ ಸಂದರ್ಭದಲ್ಲಿ ನಾನು ಇಲ್ಲಿನ ವ್ಯವಸ್ಥೆಗಳನ್ನು ನೋಡಿಕೊಳ್ಳುತ್ತಿದ್ದೆ” ಎಂದು ಹೇಳಿದರು.

Continue Reading
Advertisement
Vettaiyan Movie Rajinikanth And Amitabh Bachchan Poses Together
ಸಿನಿಮಾ1 min ago

Vettaiyan Movie: ಸೂಟು ಬೂಟು ಹಾಕಿಕೊಂಡು ಸ್ಟೈಲಿಶ್‌ ಆಗಿ ಪೋಸ್‌ ಕೊಟ್ಟ ರಜನಿ!

Accident news
ಮಳೆ6 mins ago

Accident News: ಬಿರುಗಾಳಿಗೆ ಕೂಲಿಂಗ್ ಶೀಟ್ ತಲೆ ಮೇಲೆ ಬಿದ್ದು ವ್ಯಕ್ತಿ ಸಾವು; ಬಿಸಿಲಾಘಾತಕ್ಕೆ ಇಬ್ಬರು ಬಲಿ

cm siddaramaiah
ಕ್ರೈಂ19 mins ago

CM Siddaramaiah: ಸಿಎಂ ಸಿದ್ದರಾಮಯ್ಯ ಬಗ್ಗೆ ಪೋಸ್ಟ್:‌ ಮಹೇಶ್‌ ವಿಕ್ರಂ ಹೆಗ್ಡೆ, ವಸಂತ್‌ ಗಿಳಿಯಾರ್ ಬಂಧನವಿಲ್ಲ

Urfi Javed magical butterflies dress Samantha reacts
ಬಾಲಿವುಡ್21 mins ago

Urfi Javed: ಉರ್ಫಿ ʻಮ್ಯಾಜಿಕ್ʼ ಡ್ರೆಸ್‌ಗೆ ಸಮಂತಾ ಮೆಚ್ಚುಗೆ; ಗೌನ್‌ನಿಂದ ಹಾರಿತು ಬಣ್ಣದ ಚಿಟ್ಟೆ!

IPL 2024
ಕ್ರೀಡೆ31 mins ago

IPL 2024: ಬರೋಬ್ಬರಿ 12 ವರ್ಷಗಳ ಬಳಿಕ ವಾಂಖೆಡೆಯಲ್ಲಿ ಗೆಲುವು ಸಾಧಿಸಿದ ಕೆಕೆಆರ್​

Drama Artist
ಕರ್ನಾಟಕ31 mins ago

Drama Artist: ಶಕುನಿಯಾಗಿ ಗರ್ಜಿಸುತ್ತಿರುವಾಗಲೇ ಹೃದಯಾಘಾತ; ಮೊಬೈಲ್‌ನಲ್ಲಿ ಸೆರೆಯಾಯ್ತು ಕಲಾವಿದನ ಕೊನೆಯ ಕ್ಷಣ

Amith Shah
ದೇಶ42 mins ago

Amit Shah: ತೆಲಂಗಾಣದಲ್ಲಿ ಗೃಹಸಚಿವ ಅಮಿತ್ ಶಾ ವಿರುದ್ಧ FIR ದಾಖಲು

Porbandar Tour
ಪ್ರವಾಸ47 mins ago

Porbandar Tour: ಪೋರ್ ಬಂದರಿನಲ್ಲಿ ನೋಡಲೇಬೇಕಾದ ಅದ್ಭುತ ಸ್ಥಳಗಳಿವು

hd revanna prajwal revanna case
ಪ್ರಮುಖ ಸುದ್ದಿ1 hour ago

Prajwal Revanna Case: ಕಾಣದಂತೆ ಮಾಯವಾದ ಎಚ್‌ಡಿ ರೇವಣ್ಣ ! ಇಂದು ಜಾಮೀನು ಸಿಗದೇ ಹೋದರೆ….

Cocoa Price
ಕೃಷಿ1 hour ago

Cocoa Price: ಅಡಿಕೆ ಮರದೆತ್ತರಕ್ಕೆ ಕೋಕೋ ಬೆಳೆಯ ಧಾರಣೆ! 800% ಏರಿಕೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ19 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌