IND vs SA | ಕಳಪೆ ಫೀಲ್ಡಿಂಗ್‌ನಲ್ಲೂ ನಾವಿಬ್ಬರೂ ಸಮಾನರು ಎಂಬುದನ್ನು ಸಾಬೀತುಪಡಿಸಿದ ರೋಹಿತ್‌, ವಿರಾಟ್‌! - Vistara News

T20 ವಿಶ್ವಕಪ್

IND vs SA | ಕಳಪೆ ಫೀಲ್ಡಿಂಗ್‌ನಲ್ಲೂ ನಾವಿಬ್ಬರೂ ಸಮಾನರು ಎಂಬುದನ್ನು ಸಾಬೀತುಪಡಿಸಿದ ರೋಹಿತ್‌, ವಿರಾಟ್‌!

ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಕಳಪೆ ಫೀಲ್ಡಿಂಗ್‌ ಮಾಡಿದ ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮ ಟ್ರೋಲ್‌ಗೆ ಒಳಗಾಗಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪರ್ತ್‌ : ಟೀಮ್‌ ಇಂಡಿಯಾದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಹಾಗೂ ಹಾಲಿ ನಾಯಕ ರೋಹಿತ್‌ ಶರ್ಮ ನಡುವೆ ಒಳಜಗಳವಿದೆ ಎಂಬುದು ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿತ್ತು. ಅದು ಫ್ಯಾನ್‌ ವಾರ್ ಮಟ್ಟಕ್ಕೆ ಮುಂದುವರಿದಿತ್ತು. ನಂತರ ಈ ಇಬ್ಬರು ಆಟಗಾರರು ಮೈದಾನ ಹಾಗೂ ಡ್ರೆಸಿಂಗ್ ರೂಮ್‌ನ ತಮ್ಮ ವರ್ತನೆಗಳ ಮೂಲಕ ಹಾಗೆನೂ ಇಲ್ಲ ಎಂಬುದನ್ನು ಸಾಬೀತುಪಡಿಸಿದ್ದರು. ಹೀಗಾಗಿ ಈ ಸ್ಟಾರ್‌ ಬ್ಯಾಟರ್‌ಗಳ ಫ್ಯಾನ್ ವಾರ್‌ ಕೂಡ ಕೊನೆಗೊಂಡಿತ್ತು. ಇದೀಗ ಅವರಿಬ್ಬರು ನಾವು ಎಲ್ಲದರಲ್ಲೂ ಒಂದೇ ಎಂಬುದನ್ನು ತೋರಿಸಿಕೊಳ್ಳುವುದಕ್ಕೆ ಮುಂದಾಗಿದ್ದಾರೆ ಎಂಬ ಹೊಸ ಹಾಸ್ಯವೊಂದು ಸೃಷ್ಟಿಯಾಗಿದೆ. ಅದಕ್ಕೆ ಕಾರಣ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದ ವೇಳೆಯ ಕಳಪೆ ಫೀಲ್ಡಿಂಗ್‌.

ಪಂದ್ಯದ ಎರಡನೇ ಇನಿಂಗ್ಸ್‌ನ ೧೨ ಹಾಗೂ ೧೩ನೇ ಓವರ್‌ನಲ್ಲಿ ಈ ಮಿಸ್‌ ಫೀಲ್ಡಿಂಗ್‌ಗಳು ನಡೆದಿವೆ. ಆರ್‌. ಅಶ್ವಿನ್‌ ಎಸೆದ ಇನಿಂಗ್ಸ್‌ನ ೧೨ನೇ ಓವರ್‌ನ ೫ನೇ ಎಸೆತದಲ್ಲಿ ಏಡೆನ್ ಮಾರ್ಕ್ರಮ್‌ ದೊಡ್ಡ ಹೊಡೆತ ಬಾರಿಸಲು ಮುಂದಾಗಿದ್ದರು. ಅದು ವಿರಾಟ್‌ ಕೊಹ್ಲಿಗೆ ಸುಲಭ ಕ್ಯಾಚ್‌ ಅಗಿತ್ತು. ಆದರೆ, ಎದ್ದು ಬಿದ್ದು ವಿರಾಟ್‌ ಆ ಚೆಂಡನ್ನು ನೆಲಕ್ಕೆ ಚೆಲ್ಲಿದರು. ೩೬ ರನ್‌ಗಳಿಗೆ ಜೀವದಾನ ಪಡೆದ ಮಾರ್ಕ್ರಮ್‌ ಅರ್ಧ ಶತಕ ಬಾರಿಸಿ ದಕ್ಷಿಣ ಆಫ್ರಿಕಾದ ಗೆಲುವಿಗೆ ಕಾರಣರಾದರು.

ವೇಗಿ ಮೊಹಮ್ಮದ್‌ ಶಮಿ ೧೩ನೇ ಓವರ್ ಎಸೆದಿದ್ದರು. ಈ ಓವರ್‌ನ ಐದನೇ ಎಸೆತದಲ್ಲಿ ಡೇವಿಡ್‌ ಮಿಲ್ಲರ್‌ ಅವರ ಬ್ಯಾಟ್‌ಗೆ ತಾಗಿದ ಚೆಂಡು ರೋಹಿತ್‌ ಶರ್ಮ ಅವರ ಬಳಿಗೆ ತೆರಳಿದೆ. ಬ್ಯಾಟರ್‌ಗಳಿಬ್ಬರು ರನ್‌ಗಾಗಿ ಓಡಲು ಮುಂದಾಗಿ ಗೊಂದಲಕ್ಕೆ ಒಳಗಾಗಿದ್ದಾರೆ. ಅದು ರೋಹಿತ್ ಪಾಲಿಗೆ ಸುಲಭ ರನ್‌ ಔಟ್‌ ಮಾಡುವ ಅವಕಾಶವಾಗಿತ್ತು. ಆದರೆ ರೋಹಿತ್ ಅದನ್ನು ಕಳೆದುಕೊಂಡರು.

ಈ ಎರಡು ಕಳಪೆ ಫೀಲ್ಡಿಂಗ್‌ ಪ್ರಸಂಗಗಳನ್ನು ಹಿಡಿದುಕೊಂಡು ಕ್ರಿಕೆಟ್‌ ಅಭಿಮಾನಿಗಳು ರೋಹಿತ್‌ ಹಾಗೂ ವಿರಾಟ್‌ ಕೊಹ್ಲಿಯನ್ನು ಟ್ರೋಲ್‌ ಮಾಡಿದ್ದಾರೆ. ಮಿಸ್‌ ಫೀಲ್ಡಿಂಗ್‌ನಲ್ಲೂ ನಮ್ಮಿಬ್ಬರ ನಡುವೆ ಗಲಾಟೆ ಇಲ್ಲ ಎಂಬುದನ್ನು ಸಾಬೀತು ಪಡಿಸಿದ್ದಾರೆ ಎಂಬುದಾಗಿ ಅವರು ಹೇಳಿದ್ದಾರೆ.

ಇದನ್ನೂ ಓದಿ | IPL 2023| ಆರ್‌ಸಿಬಿ ಬಳಗ ಸೇರಲಿದ್ದಾರೆ ಟೀಮ್‌ ಇಂಡಿಯಾದ ಸ್ಟಾರ್‌ ಆಲ್‌ರೌಂಡರ್‌, ಯಾರವರು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

KMF Nandini Logo: ನಂದಿನಿಗೆ ಸ್ವಾಗತಿಸಿ ಟಿ20 ವಿಶ್ವಕಪ್​ ಜೆರ್ಸಿ ಬಿಡುಗಡೆಗೊಳಿಸಿದ ಐರ್ಲೆಂಡ್ ತಂಡ

KMF Nandini Logo: ಜೆರ್ಸಿ ಬಿಡುಗಡೆಯ ಬಳಿಕ ಮಾತನಾಡಿದ, ಕ್ರಿಕೆಟ್ ಐರ್ಲೆಂಡ್‌ನ ಮುಖ್ಯ ಹಣಕಾಸು ಅಧಿಕಾರಿ ಆ್ಯಂಡ್ರ್ಯೂ ಮೇ,” ಕರ್ನಾಟಕ ಹಾಲು ಒಕ್ಕೂಟವನ್ನು ಹೊಸ ಪಾಲುದಾರರಾಗಿ ಸ್ವಾಗತಿಸಲು ನಮಗೆ ಸಂತೋಷವಾಗುತ್ತಿದೆ. ಟಿ–20 ವಿಶ್ವಕಪ್‌ನಲ್ಲಿ ಐರ್ಲೆಂಡ್ ಪುರುಷರ ತಂಡದ ಅಧಿಕೃತ ಪ್ರಾಯೋಜಕರಾಗಿ ನಂದಿನಿಯನ್ನು ಘೋಷಿಸಲು ಸಂತಸವಾಗುತ್ತಿದೆ” ಎಂದು ಹೇಳಿದರು.

VISTARANEWS.COM


on

KMF Nandini Logo
Koo

ಬೆಂಗಳೂರು: ಕೆಲವು ದಿನಗಳ ಹಿಂದಷ್ಟೇ ನಂದಿನಿ ಲೋಗೋ(KMF Nandini Logo) ಇರುವ ಜೆರ್ಸಿಯನ್ನು ‘ಕ್ರಿಕೆಟ್ ಸ್ಕಾಟ್ಲೆಂಡ್’ ಅನಾವರಣಗೊಳಿಸಿತ್ತು. ಇದೀಗ ಐರ್ಲೆಂಡ್(Ireland) ತಂಡ ಕೂಡ ನಂದಿನಿ ಲೋಗೋ ಇರುವ ಜೆರ್ಸಿಯನ್ನು ಪ್ರಕಟಿಸಿದೆ. ಇದು ಮಾತ್ರವಲ್ಲದೆ ಕ್ರಿಕೆಟ್​ ಐರ್ಲೆಂಡ್ ತನ್ನ ಅಧಿಕೃತ ವೆಬ್​ಸೈಟ್​ನ ಫೋಟೊದಲ್ಲಿಯೂ ನಂದಿನಿ ಲೋಗೋ ಇರುವ ಜೆರ್ಸಿಯ ದೊಡ್ಡ ಫೋಟೊವನ್ನು ಹಾಕಿ ‘ವೆಲ್​ಕಮ್​ ನಂದಿನಿ'(WELCOME NANDINI) ಎಂದು ಬರೆದುಕೊಂಡಿದೆ. ಸೋಮವಾರ ಕ್ರಿಕೆಟ್​ ಐರ್ಲೆಂಡ್ ಈ ಜೆರ್ಸಿಯನ್ನು ಅನಾವರಣ ಮಾಡಿತು.

ಜೆರ್ಸಿ ಬಿಡುಗಡೆಯ ಬಳಿಕ ಮಾತನಾಡಿದ, ಕ್ರಿಕೆಟ್ ಐರ್ಲೆಂಡ್‌ನ ಮುಖ್ಯ ಹಣಕಾಸು ಅಧಿಕಾರಿ ಆ್ಯಂಡ್ರ್ಯೂ ಮೇ,” ಕರ್ನಾಟಕ ಹಾಲು ಒಕ್ಕೂಟವನ್ನು ಹೊಸ ಪಾಲುದಾರರಾಗಿ ಸ್ವಾಗತಿಸಲು ನಮಗೆ ಸಂತೋಷವಾಗುತ್ತಿದೆ. ಟಿ–20 ವಿಶ್ವಕಪ್‌ನಲ್ಲಿ ಐರ್ಲೆಂಡ್ ಪುರುಷರ ತಂಡದ ಅಧಿಕೃತ ಪ್ರಾಯೋಜಕರಾಗಿ ನಂದಿನಿಯನ್ನು ಘೋಷಿಸಲು ಸಂತಸವಾಗುತ್ತಿದೆ” ಎಂದು ಹೇಳಿದರು.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ನಲ್ಲಿ ‘ನಂದಿನಿ’ ಲಾಂಛನ; ಹರ್ಷ ವ್ಯಕ್ತಪಡಿಸಿದ ಸಿದ್ದರಾಮಯ್ಯ

ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ ನಮ್ಮ ಬ್ರಾಂಡ್​ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳುವುದು ಕರ್ನಾಟಕದ ಪ್ರತಿಯೊಬ್ಬರಿಗೂ ಹೆಮ್ಮೆಯ ಕ್ಷಣವಾಗಿದೆ. ಶುದ್ಧತೆ ಮತ್ತು ಶ್ರೇಷ್ಠತೆಯ ಪ್ರತೀಕವಾಗಿರುವ ನಂದಿನಿಯು ಈಗ ಜಾಗತಿಕ ಬ್ರ್ಯಾಂಡ್‌ ಆಗಿ ಗುರುತಿಸಿಕೊಳ್ಳುವುದಕ್ಕೆ ಹೆಮ್ಮೆ ಎನಿಸುತ್ತದೆ. ಈ ಮೂಲಕ ನಂದಿನಿಯ ಮೌಲ್ಯ ಮತ್ತು ಜನಪ್ರಿಯತೆ ಮತ್ತಷ್ಟು ಹೆಚ್ಚಾಗಲಿದ್ದು, ಜನಪ್ರಿಯ ಕ್ರೀಡೆಯಾದ ಕ್ರಿಕೆಟ್‌ ತಂಡದ ಪ್ರಾಯೋಜಕತ್ವದಿಂದಾಗಿ ನಂದಿನಿ ಲೋಗೋ ವಿಶ್ವವ್ಯಾಪಿ ರಾರಾಜಿಸಲಿದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಇನಷ್ಟು ತಂಡಗಳ ಪ್ರಾಯೋಜಕ್ವ ಪಡೆದರೂ ಅಚ್ಚರಿಯಿಲ್ಲ.  

ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಎಡಗೈ ಬ್ಯಾಟ್ಸ್‌ಮನ್‌ಗಳಿಗೆ ಬಲಗೈ ಮತ್ತು ಬಲಗೈ ಬ್ಯಾಟ್ಸ್‌ಮನ್‌ಗಳ ಎಡಗೈ ಮೇಲೆ ನಂದಿನಿ ಲೋಗೋ ಕಾಣಿಸಿಕೊಳ್ಳಲಿದೆ. ಐರ್ಲೆಂಡ್ ತಂಡ ಜೆರ್ಸಿ ಇನ್ನಷ್ಟೇ ಅನಾವರಣಗೊಳ್ಳಬೇಕಿದೆ. ಮಿನಿ ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ಮೋಹನ್‌ದಾಸ್‌ ಪೈ ವಿರೋಧ


ಉದ್ಯಮಿ ಮೋಹನ್‌ದಾಸ್‌ ಪೈ (Mohandas Pai) ಅವರು ಸ್ಕಾಟ್ಲೆಂಡ್, ಐರ್ಲೆಂಡ್‌ ತಂಡಗಳಿಗೆ KMF ಪ್ರಾಯೋಜಕತ್ವ ಪಡೆದ ಕಾರಣ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಕೆಎಂಎಫ್‌ಗೆ ಕರ್ನಾಟಕ ರಣಜಿ ತಂಡ, ರಾಜ್ಯದ ಕ್ರೀಡಾಪಟುಗಳು, ಕಲಾವಿದರು, ರೈತರ ಮಕ್ಕಳು ಕಾಣುವುದಿಲ್ಲವೇ? ಇವುಗಳಿಗೇಕೆ ಪ್ರಾಯೋಜಕತ್ವ ನೀಡಿಲ್ಲ ಎಂದು ಪ್ರಶ್ನೆ ಮಾಡಿದ್ದರು.

ಕೆಎಂಎಫ್‌ನಿಂದ ವಿದೇಶಿ ಕ್ರಿಕೆಟ್ ತಂಡಗಳಿಗೆ ಪ್ರಾಯೊಜಕತ್ವ ಪಡೆದ ವಿಚಾರದ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೋಹನ್‌ ದಾಸ್‌ ಪೈ, ಕರ್ನಾಟಕದ ರಣಜಿ ತಂಡ, ರಾಜ್ಯದ ಕ್ರೀಡಾಪಟುಗಳು, ಕಲಾವಿದರು, ರೈತರ ಮಕ್ಕಳು, ಬಡವರಿಗೆ ವಿದ್ಯಾರ್ಥಿ ವೇತನಗಳಿಗೆ ಏಕೆ ಕೆಎಂಎಫ್‌ ಪ್ರಾಯೋಜಕತ್ವವನ್ನು ನೀಡಬಾರದು? ಕೆಎಂಎಫ್ ಕನ್ನಡಿಗ ತೆರಿಗೆದಾರರ ಹಣ, ಸಬ್ಸಿಡಿ ಮತ್ತು ಬಜೆಟ್‌ನಿಂದ ಧನಸಹಾಯವನ್ನು ಪಡೆದುಕೊಳ್ಳುತ್ತದೆ. ಆದರೆ, ಯಾರಿಗೂ ಗೊತ್ತಿಲ್ಲದ ವಿದೇಶಿ ತಂಡಗಳಿಗೆ ಖರ್ಚು ಮಾಡಲು ಹೊರಟಿದೆ” ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಈ ಬಗ್ಗೆ ಟ್ಯಾಗ್‌ ಮಾಡಿ ತಮ್ಮ ಆಕ್ರೋಶ ಹೊರಹಾಕಿದ್ದರು.

Continue Reading

ಕ್ರೀಡೆ

T20 World Cup 2024: ಇಂಡೋ-ಪಾಕ್​ ಮಿನಿ ವಿಶ್ವಕಪ್​ ಸಮರ ನಡೆಯುವ ಸ್ಟೇಡಿಯಂನ ವಿಡಿಯೊ ವೈರಲ್​

T20 World Cup 2024:ಈ ಸ್ಟೇಡಿಯಂ ಭಾರತ-ಪಾಕ್​ ಪಂದ್ಯಕ್ಕಾಗಿಯೇ ತಾತ್ಕಾಲಿಕವಾಗಿ ನಿರ್ಮಿಸಲಾಗಿದೆ ಎನ್ನಲಾಗಿದೆ. ಪಂದ್ಯದ ನಂತರ ಇದನ್ನು ಕೆಡವಲಾಗುತ್ತದೆ ಎಂದು ತಿಳಿಸಲಾಗಿದೆ. ವಿಶ್ವಕಪ್ ಟೂರ್ನಿಗೆ ಅಮೆರಿಕದ ಮೂರು ಸ್ಟೇಡಿಯಂಗಳು ಆತಿಥ್ಯ ವಹಿಸಿವೆ. ಇಲ್ಲಿ 16 ಪಂದ್ಯಗಳು ನಡೆಯಲಿದೆ.

VISTARANEWS.COM


on

T20 World Cup 2024
Koo

ನ್ಯೂಯಾರ್ಕ್​: ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್​(T20 World Cup 2024) ಟೂರ್ನಿ ಆರಂಭಕ್ಕೆ ಇನ್ನು ಕೇವಲ 12 ದಿನಗಳು ಮಾತ್ರ ಬಾಕಿ ಉಳಿದಿವೆ. ಜೂನ್​ 1ರಿಂದ ಆರಂಭವಾಗಿ ಜೂನ್​ 29ರ ತನಕ ಈ ಟೂರ್ನಿ ನಡೆಯಲಿದೆ. ಮೊದಲ ಬಾರಿಗೆ ಅಮೆರಿಕ ವಿಂಡೀಸ್​ ಜತೆ ಸೇರಿ ಟೂರ್ನಿಯ ಆತಿಥ್ಯವಹಿಸಿಕೊಂಡಿದೆ. ವಿಶ್ವಕಪ್​ ಸಲುವಾಗಿಯೇ ನ್ಯೂಯಾರ್ಕ್​ನಲ್ಲಿ ನಿಮಾರ್ಣ ಮಾಡಲಾಗಿರುವ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂ(Nassau County International Cricket Stadium)ಯಂನ ವಿಡಿಯೊವೊಂದು ವೈರಲ್​ ಆಗಿದೆ.

34 ಸಾವಿರ ಪ್ರೇಕ್ಷಕರು ಕೂರುವಷ್ಟು ಸಾಮರ್ಥ್ಯದ ಸ್ಟೇಡಿಯಂ ಅನ್ನು ಕೇವಲ 5 ತಿಂಗಳಲ್ಲಿ ನಿರ್ಮಿಸಲಾಯಿತು. ಈ ವೇಳೆ ಹಲವು ಅಡಚಣೆಗಳು ಕೂಡ ಎದುರಾಗಿತ್ತು. ಸ್ಟೇಡಿಯಂ ನಿರ್ಮಾಣದ ವೇಳೆ ವಿಪರೀತ ಮಂಚು ಬಿದ್ದು ನಿರ್ಮಾಣ ಕಾರ್ಯ ಹಲವು ಬಾರಿ ಸ್ಥಗಿತಗೊಂಡಿತ್ತು. ಆದರೂ ಹಠ ಬಿಡದ ಸಂಘಟಕರು ಅಂತಿಮವಾಗಿ ಈ ಸ್ಟೇಡಿಯಂ ನಿರ್ಮಾಣ ಮಾಡಿಯೇ ಬಿಟ್ಟಿದ್ದಾರೆ. ಪ್ರತಿ ತಿಂಗಳು ಕೂಡ ಈ ಮೈದಾನದ ಕಾಮಗಾರಿಯ ವಿಡಿಯೊವನ್ನು ಐಸಿಸಿ ಕೂಡ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಳ್ಳುತ್ತಿತ್ತು.

ಈ ಸ್ಟೇಡಿಯಂ ಭಾರತ-ಪಾಕ್​ ಪಂದ್ಯಕ್ಕಾಗಿಯೇ ತಾತ್ಕಾಲಿಕವಾಗಿ ನಿರ್ಮಿಸಲಾಗಿದೆ ಎನ್ನಲಾಗಿದೆ. ಪಂದ್ಯದ ನಂತರ ಇದನ್ನು ಕೆಡವಲಾಗುತ್ತದೆ ಎಂದು ತಿಳಿಸಲಾಗಿದೆ. ವಿಶ್ವಕಪ್ ಟೂರ್ನಿಗೆ ಅಮೆರಿಕದ ಮೂರು ಸ್ಟೇಡಿಯಂಗಳು ಆತಿಥ್ಯ ವಹಿಸಿವೆ. ಇಲ್ಲಿ 16 ಪಂದ್ಯಗಳು ನಡೆಯಲಿದೆ. ಭಾರತ ಮತ್ತು ಪಾಕಿಸ್ತಾನ ಜೂನ್​ 9ರಂದು ಪಂದ್ಯವನ್ನಾಡಲಿದೆ.

ಇದನ್ನೂ ಓದಿ T20 World Cup 2024: ಪಾಕ್​ ಉಗ್ರರ ಭೀತಿ; ಬಿಗಿ ಭದ್ರತೆ ಕೈಗೊಂಡ ವಿಂಡೀಸ್​ ಕ್ರಿಕೆಟ್​ ಮಂಡಳಿ

ಅಮೆರಿಕದಲ್ಲಿ ಸುಸಜ್ಜಿತ ಕ್ರಿಕೆಟ್​ ಪಿಚ್ ಇಲ್ಲದ ಕಾರಣ ಆಸ್ಟ್ರೇಲಿಯಾದಿಂದ ಈ ಪಿಚ್​ಗಳನ್ನು ತರಿಸಲಾಗಿದೆ. ಡ್ರಾಪ್ ಇನ್ ಪಿಚ್‌ಗಳ(Drop-In Pitches) ಅಳವಡಿ ಕೂಡ ಸಂಪೂರ್ಣಗೊಂಡಿದೆ. ಪಿಚ್ ಸಂಪೂರ್ಣವಾಗಿ ಅಡಿಲೇಡ್‌ನಲ್ಲಿ ತಯಾರಿಸಲಾಗಿದ್ದು, ಅದನ್ನು ಹಡಗಿನಲ್ಲೇ 22,500 ಕಿಲೋಮೀಟರ್ ದೂರದ ಫ್ಲೋರಿಡಾ ಮೂಲಕ ನ್ಯೂಯಾರ್ಕ್‌ಗೆ ತರಲಾಗಿತ್ತು.

ಅಮೆರಿಕದ ಈ ಮೂರು ಕ್ರೀಡಾಂಗಣಗಳಲ್ಲಿ 16 ಪಂದ್ಯಗಳು ನಡೆಯಲಿದೆ. ಉಳಿದ 39 ಪಂದ್ಯಗಳಿಗೆ ವೆಸ್ಟ್ ಇಂಡೀಸ್ ಆತಿಥ್ಯ ವಹಿಸಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ನ್ಯೂಯಾರ್ಕ್ ಮತ್ತು ನವದೆಹಲಿ ನಡುವೆ 10.5 ಗಂಟೆಗಳ ಸಮಯದ ವ್ಯತ್ಯಾಸವಿರುವುದರಿಂದ, ಸಂಘಟಕರು ಕೆಲವು ಪಂದ್ಯಗಳನ್ನು, ವಿಶೇಷವಾಗಿ ಭಾರತವನ್ನು ಒಳಗೊಂಡ ಪಂದ್ಯಗಳನ್ನು ಬೆಳಗ್ಗೆ ಪ್ರಾರಂಭಿಸಲು ಚರ್ಚಿಸಿದ್ದಾರೆ ಎನ್ನಲಾಗಿದೆ. ಇದು ಭಾರತೀಯ ದೂರದರ್ಶನ ಪ್ರೇಕ್ಷಕರಿಗೆ ತಮ್ಮ ಅನುಕೂಲದ ಸಮಯದಲ್ಲಿ ಪಂದ್ಯವನ್ನು ನೋಡಲು ಸಹಾಯ ಮಾಡಲಿದೆ. ಜೂನ್​ 9 ಕೂಡ ಭಾನುವಾರವಾಗಿದೆ. ಅಮೆರಿಕದಲ್ಲಿ ರಾತ್ರಿ ಪಂದ್ಯ ಆಯೋಜಿಸಿದರೆ, ಭಾರತದಲ್ಲಿ ಸೋಮವಾರ ಮುಂಜಾನೆ ಪಂದ್ಯ ಪ್ರಸಾರವಾಗುತ್ತದೆ. ಹೀಗಾಗಿ ಅಮೆರಿಕದಲ್ಲಿ ರಾತ್ರಿ ಪಂದ್ಯ ನಡೆಸುವುದಾದರೆ ಜೂನ್​ 8ರಂದೇ ನಡೆಯಲಿದೆ. ಆಗ ಭಾರತದಲ್ಲಿ ಭಾನುವಾರ ಬೆಳಗ್ಗೆ ಪಂದ್ಯ ಪ್ರಸಾರವಾಗಲಿದೆ.

Continue Reading

ಕ್ರೀಡೆ

T20 World Cup 2024: ಪಾಕ್​ ಉಗ್ರರ ಭೀತಿ; ಬಿಗಿ ಭದ್ರತೆ ಕೈಗೊಂಡ ವಿಂಡೀಸ್​ ಕ್ರಿಕೆಟ್​ ಮಂಡಳಿ

T20 World Cup 2024:ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ.

VISTARANEWS.COM


on

T20 World Cup 2024
Koo

ಬಾರ್ಬಡಾಸ್​: ಇದೇ ಜೂನ್​ 1ರಿಂದ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್​ ಪಂದ್ಯಾವಳಿಗೆ(T20 World Cup 2024) ಕೆಲವು ದಿನಗಳ ಹಿಂದೆ ಪಾಕಿಸ್ತಾನದ ಉಗ್ರರಿಂದ ದಾಳಿಯ ಬೆದರಿಕೆಯೊಂದು(Terror Threat to T20 World Cup) ಬಂದಿತ್ತು. ಇದೀಗ ವೆಸ್ಟ್​ ಇಂಡೀಸ್​ ಕ್ರಿಕೆಟ್​ ಮಂಡಳಿ ಕಟ್ಟುನಿಟ್ಟಾದ ಭದ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ಭದ್ರತಾ ಸಿಬ್ಬಂದಿಗಳು ಕೆನ್ಸಿಂಗ್ಟನ್ ಓವಲ್(Kensington Oval Cricket Ground) ಕ್ರಿಕೆಟ್ ಮೈದಾನ, ಬಾರ್ಬಡೋಸ್​ನಲ್ಲಿ(Barbados) ಅಣುಕು ಪ್ರದರ್ಶನ ಮಾಡುತ್ತಿರುವ ಫೋಟೊ ವೈರಲ್​ ಆಗಿದೆ.

ಪ್ರೊ-ಇಸ್ಲಾಮಿಕ್ ಸ್ಟೇಟ್ (ಐಎಸ್)ನಿಂದ ಭದ್ರತಾ ಬೆದರಿಕೆ ಬಂದಿತ್ತು. ಇದೇ ವಿಚಾರವಾಗಿ ಅಂದು ಮಾತನಾಡಿದ್ದ ಕ್ರಿಕೆಟ್ ವೆಸ್ಟ್ ಇಂಡೀಸ್‌ನ ಸಿಇಒ ಜಾನಿ ಗ್ರೇವ್ಸ್, ಐಸಿಸಿ ಪುರುಷರ ಟಿ20 ವಿಶ್ವಕಪ್‌ನಲ್ಲಿ ಪ್ರತಿಯೊಬ್ಬರ ಸುರಕ್ಷತೆ ನಮ್ಮ ಮೊದಲ ಆದ್ಯತೆಯಾಗಿದೆ ಮತ್ತು ನಾವು ಸಮಗ್ರ ಮತ್ತು ದೃಢವಾದ ಭದ್ರತಾ ಯೋಜನೆಯನ್ನು ಹೊಂದಿದ್ದೇವೆ ಎಂದು ನಾವು ಎಲ್ಲ ಪಾಲುದಾರರಿಗೆ ಭರವಸೆ ನೀಡಲು ಬಯಸುತ್ತೇವೆ ಎಂದು ಹೇಳಿದ್ದರು. ಈ ಮಾತಿಗೆ ತಕ್ಕಂತೆ ಇದೀಗ ವಿಶ್ವಕಪ್​ ಪಂದ್ಯಾವಳಿಗಳು ನಡೆಯುವ ಸ್ಟೇಡಿಯಂಗಳಲ್ಲಿ ಭಾರೀ ಭದ್ರತೆ ಮಾಡಲಾಗಿದೆ.

ವೆಸ್ಟ್ ಇಂಡೀಸ್‌ನಲ್ಲಿ ಆಂಟಿಗುವಾ ಬಾರ್ಬುಡಾ, ಬಾರ್ಬಡೋಸ್, ಗಯಾನಾ, ಸೇಂಟ್ ಲೂಸಿಯಾ, ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್, ಟ್ರಿನಿಡಾಡ್ ಮತ್ತು ಟೊಬಾಗೊ ಸೇರಿದಂತೆ ಆರು ಸ್ಥಳಗಳಲ್ಲಿ ಟಿ20 ವಿಶ್ವಕಪ್ ಪಂದ್ಯಗಳು ಆಯೋಜನೆಗೊಂಡಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಟಿ20 ವಿಶ್ವಕಪ್​ಗಾಗಿ(T20 World Cup 2024) ಟೀಮ್​ ಇಂಡಿಯಾದ(team india) ಮೊದಲ ಬ್ಯಾಚ್​ ಮೇ 25ರಂದು ನ್ಯೂಯಾರ್ಕ್(New York)​ಗೆ ಪ್ರಯಾಣಿಸಲಿದೆ. ಈ ಬ್ಯಾಚ್​ನಲ್ಲಿ ನಾಯಕ ರೋಹಿತ್​ ಶರ್ಮ(Rohit Sharma), ಉಪನಾಯಕ ಹಾರ್ದಿಕ್​ ಪಾಂಡ್ಯ, ರಿಷಭ್​ ಪಂತ್​, ಜಸ್​ಪ್ರೀತ್​ ಬುಮ್ರಾ, ಸೂರ್ಯಕುಮಾರ್​ ಯಾದವ್​ ಸೇರಿ ಐಪಿಎಲ್​ ಪ್ಲೇ ಆಫ್​ನಿಂದ ಹೊರಬಿದ್ದ ತಂಡದ ಆಟಗಾರರು ಪ್ರಯಾಣಿಸಲಿದ್ದಾರೆ. ಉಳಿದ ಆಟಗಾರರು ಮೇ 26 ಐಪಿಎಲ್​ ಫೈನಲ್​ ಬಳಿಕ ವಿಮಾನ ಏರಲಿದ್ದಾರೆ. ಒಟ್ಟು 2 ಬ್ಯಾಚ್​ಗಳಾಗಿ ಭಾರತೀಯ ಆಟಗಾರರು ಪ್ರಯಾಣಿಸಲಿದ್ದಾರೆ.

Continue Reading

ಕ್ರೀಡೆ

T20 World Cup 2024: ಮೇ 25ಕ್ಕೆ ನ್ಯೂಯಾರ್ಕ್​ಗೆ ತೆರಳಲಿದೆ ಟೀಮ್ ಇಂಡಿಯಾದ ಮೊದಲ ಬ್ಯಾಚ್​

T20 World Cup 2024: ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿದೆ.

VISTARANEWS.COM


on

T20 World Cup 2024
Koo

ಮುಂಬಯಿ: ಮುಂದಿನ ತಿಂಗಳು ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​ಗಾಗಿ(T20 World Cup 2024) ಟೀಮ್​ ಇಂಡಿಯಾದ(team india) ಮೊದಲ ಬ್ಯಾಚ್​ ಮೇ 25ರಂದು ನ್ಯೂಯಾರ್ಕ್(New York)​ಗೆ ಪ್ರಯಾಣಿಸಲಿದೆ. ಈ ಬ್ಯಾಚ್​ನಲ್ಲಿ ನಾಯಕ ರೋಹಿತ್​ ಶರ್ಮ(Rohit Sharma), ಉಪನಾಯಕ ಹಾರ್ದಿಕ್​ ಪಾಂಡ್ಯ, ರಿಷಭ್​ ಪಂತ್​, ಜಸ್​ಪ್ರೀತ್​ ಬುಮ್ರಾ, ಸೂರ್ಯಕುಮಾರ್​ ಯಾದವ್​ ಸೇರಿ ಐಪಿಎಲ್​ ಪ್ಲೇ ಆಫ್​ನಿಂದ ಹೊರಬಿದ್ದ ತಂಡದ ಆಟಗಾರರು ಪ್ರಯಾಣಿಸಲಿದ್ದಾರೆ. ಉಳಿದ ಆಟಗಾರರು ಮೇ 26 ಐಪಿಎಲ್​ ಫೈನಲ್​ ಬಳಿಕ ವಿಮಾನ ಏರಲಿದ್ದಾರೆ. ಒಟ್ಟು 2 ಬ್ಯಾಚ್​ಗಳಾಗಿ ಭಾರತೀಯ ಆಟಗಾರರು ಪ್ರಯಾಣಿಸಲಿದ್ದಾರೆ.

ಮೂಲ ವೇಳಾಪಟ್ಟಿಯ ಪ್ರಕಾರ ಭಾರತ ತಂಡದ ಆಟಗಾರರು ಮೇ 21ರಂದು ನ್ಯೂಯಾರ್ಕ್​ಗೆ ತೆರಳಬೇಕಿತ್ತು. ಆದರೆ ಐಪಿಎಲ್​ ಟೂರ್ನಿಯಿಂದಾಗಿ ಇದು ಸಾಧ್ಯವಾಗಲಿಲ್ಲ. ಇದು ಮಾತ್ರವಲ್ಲದೆ ಭಾರತ ಏಕೈಕ ಅಭ್ಯಾಸ ಪಂದ್ಯ ಮಾತ್ರ ಆಡಲಿದೆ. ಭಾರತೀಯ ಆಟಗಾರರು ವ್ಯಾಪಕ ಪ್ರಯಾಣ ಮತ್ತು ಐಪಿಎಲ್​ನಿಂದ ದಣಿದಿರುವ ಕಾರಣ ಕೇವಲ ಒಂದು ಅಭ್ಯಾಸ ಪಂದ್ಯಕ್ಕೆ ಮೊರೆ ಹೋಗಿದ್ದಾರೆ. ಜೂನ್​ 1 ರಂದು ಬಾಂಗ್ಲಾದೇಶ ವಿರುದ್ಧ ಭಾರತ ಈ ಪಂದ್ಯವನ್ನು ಆಡಲಿದೆ. ಅಭ್ಯಾಸ ಪಂದ್ಯಗಳು ಮೇ 27ರಿಂದ ಜೂನ್ 1ರವರೆಗೆ ನಡೆಯಲಿದೆ.

ಇದನ್ನೂ ಓದಿ T20 World Cup 2024: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತದ ಎದುರಾಳಿ ಯಾರು?

ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

ಭಾರತದ ಪಂದ್ಯಗಳು

ದಿನಾಂಕಎದುರಾಳಿಸ್ಥಳ
ಜೂನ್​ 5ಐರ್ಲೆಂಡ್​ನ್ಯೂಯಾರ್ಕ್​
ಜೂನ್​ 9ಪಾಕಿಸ್ತಾನನ್ಯೂಯಾರ್ಕ್​
ಜೂನ್​ 12ಅಮೆರಿಕನ್ಯೂಯಾರ್ಕ್
ಜೂನ್​ 15ಕೆನಡಾಫ್ಲೋರಿಡಾ

Continue Reading
Advertisement
Prajwal Revanna Case
ಕರ್ನಾಟಕ5 hours ago

Prajwal Revanna Case: ಪ್ರಜ್ವಲ್ ರೇವಣ್ಣ ಪಾಸ್‌ ಪೋರ್ಟ್ ರದ್ದು ಮಾಡಲು ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

Mobile
ದೇಶ5 hours ago

ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ನೋಡಿ 15 ವರ್ಷದ ಅಕ್ಕನನ್ನೇ ಗರ್ಭಿಣಿ ಮಾಡಿದ 13 ವರ್ಷದ ಬಾಲಕ!

Army Officer
Lok Sabha Election 20245 hours ago

101ನೇ ವಯಸ್ಸಿನಲ್ಲೂ ‘ಕರ್ತವ್ಯ’ ಮರೆಯದೆ ವೋಟ್‌ ಮಾಡಿದ ನಿವೃತ್ತ ಯೋಧ; ಸೆಲ್ಯೂಟ್‌ ಎಂದರು ಜನ

Congress Guarantee
ಪ್ರಮುಖ ಸುದ್ದಿ5 hours ago

Congress Guarantee: ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ ಸರ್ಕಾರ ಮಾಡಿದ ಖರ್ಚು ಎಷ್ಟು ಸಾವಿರ ಕೋಟಿ?

Malaysia Masters
ಕ್ರೀಡೆ6 hours ago

Malaysia Masters: ವಿಶ್ರಾಂತಿ ಬಳಿಕ ಮಲೇಷ್ಯಾ ಮಾಸ್ಟರ್ಸ್​ನಲ್ಲಿ ಕಣಕ್ಕಿಳಿಯಲು ಸಜ್ಜಾದ ಸಿಂಧು

Rahul Gandhi
ದೇಶ6 hours ago

Rahul Gandhi: ರಾಯ್‌ಬರೇಲಿಯಲ್ಲಿ ಜನ ಜೈ ಶ್ರೀರಾಮ್‌ ಎನ್ನುತ್ತಲೇ ಕಾಲ್ಕಿತ್ತ ರಾಹುಲ್‌ ಗಾಂಧಿ! Video ಇದೆ

MS Dhoni Bike Riding
ಕ್ರೀಡೆ6 hours ago

MS Dhoni Bike Riding: ಐಪಿಎಲ್​ ಮುಗಿಸಿ ತವರಿಗೆ ಮರಳಿದ್ದೇ ತಡ, ಬೈಕ್ ರೈಡಿಂಗ್​ ಮಾಡಿದ ಧೋನಿ​

Self Harming
ಕರ್ನಾಟಕ7 hours ago

Self Harming: ಟಿಸಿ ಕೊಟ್ಟಿಲ್ಲವೆಂದು ಬೇಸರಗೊಂಡು ವಿದ್ಯಾರ್ಥಿ ಆತ್ಮಹತ್ಯೆ

AAP Funds
ದೇಶ7 hours ago

AAP Funds: ನಿಯಮ ಉಲ್ಲಂಘಿಸಿ ಬೇರೆ ದೇಶಗಳಿಂದ ಆಪ್‌ 7 ಕೋಟಿ ರೂ. ದೇಣಿಗೆ ಸ್ವೀಕಾರ; ಇ.ಡಿ ಸ್ಫೋಟಕ ಮಾಹಿತಿ!

Karnataka weather Forecast
ಕರ್ನಾಟಕ7 hours ago

Coastal Weather: ದಕ್ಷಿಣ ಕನ್ನಡ, ಉಡುಪಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ15 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌