ಕೊಲಂಬೊ: ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮ(Rohit Sharma) ಅವರು ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಶೇಷ ದಾಖಲೆಯೊಂದನ್ನು ನಿರ್ಮಿಸುವ ಸನಿಹದಲ್ಲಿದ್ದಾರೆ. ರೋಹಿತ್ ಈ ಸರಣಿಯಲ್ಲಿ 2 ಶತಕ ಬಾರಿಸಿದರೆ, ವಿರಾಟ್ ಕೊಹ್ಲಿ(Virat Kohli) ಮತ್ತು ಸಚಿನ್ ತೆಂಡೂಲ್ಕರ್(Sachin Tendulkar) ಜತೆ ಎಲೈಟ್ ಪಟ್ಟಿಗೆ ಸೇರ್ಪಡೆಗೊಳ್ಳಲಿದ್ದಾರೆ.
ರೋಹಿತ್ 2 ಶತಕ ಬಾರಿಸಿದರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 50 ಶತಕ ಪೂರ್ತಿಗೊಳಿಸಿದ ಸಾಧನೆ ಮಾಡಲಿದ್ದಾರೆ. ಈ ಸಾಧನೆ ಮಾಡಿದ ಮೂರನೇ ಕ್ರಿಕೆಟಿಗ ಎನಿಸಿಕೊಳ್ಳಲಿದ್ದಾರೆ. ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ ಮೊದಲಿಗರು. ರೋಹಿತ್ ಸದ್ಯ 48 ಶತಕ ಬಾರಿಸಿದ್ದಾರೆ. ಏಕದಿನದಲ್ಲಿ 31, ಟೆಸ್ಟ್ನಲ್ಲಿ 12, ಟಿ20ಯಲ್ಲಿ 5 ಶತಕ ಬಾರಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಒಟ್ಟು 100 ಶತಕ ಬಾರಿಸಿ ಅಗ್ರಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ 80 ಶತಕ ಬಾರಿಸಿ ದ್ವಿತೀಯ ಸ್ಥಾನಿಯಾಗಿದ್ದಾರೆ.
ರೋಹಿತ್ ಶರ್ಮ(Rohit sharma), ವಿರಾಟ್ ಕೊಹ್ಲಿ(virat kohli) ಮತ್ತು ಜಸ್ಪ್ರೀತ್ ಬುಮ್ರಾ(jasprit bumrah) ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್ ಫೈನಲ್ ಸೋಲಿನ ಬಳಿಕ ಆಡುತ್ತಿರುವ ಮೊದಲ ಪಂದ್ಯ ಇದಾಗಿದೆ. ಕಳೆದ ವರ್ಷ(2023) ನವೆಂಬರ್ 19ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದಿದ್ದ ಏಕದಿನ ಫೈನಲ್ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್ ಅಂತರದ ಸೋಲು ಕಂಡು ನಿರಾಸೆ ಅನುಭವಿಸಿತ್ತು. ಇದಾದ ಬಳಿಕ ಈ ಮೂವರು ಕ್ರಿಕೆಟಿಗರು ಯಾವುದೇ ಏಕದಿನ ಪಂದ್ಯವನ್ನಾಡಿರಲಿಲ್ಲ. ಇದೀಗ ಬರೋಬ್ಬರಿ 9 ತಿಂಗಳ ಬಳಿಕ ಏಕದಿನ ಸರಣಿಯನ್ನಾಡಲು ಸಜ್ಜಾಗಿದ್ದಾರೆ.
ಇದನ್ನೂ ಓದಿ Rohit Sharma : ಏಕ ದಿನ ಸರಣಿಗಾಗಿ ಶ್ರೀಲಂಕಾ ತಲುಪಿದ ರೋಹಿತ್, ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿಗೆ(Virat Kohli) ಶ್ರೀಲಂಕಾ(India tour of Sri Lanka) ವಿರುದ್ಧದ ಏಕದಿನ ಸರಣಿಯಲ್ಲಿ ವಿಶೇಷ ದಾಖಲೆಯೊಂದನ್ನು ಬರೆಯುವ ಅವಕಾಶವಿದೆ. ಹೌದು, ಕೊಹ್ಲಿ 152 ರನ್ ಗಳಿಸಿದರೆ ಏಕದಿನ ಕ್ರಿಕೆಟ್‌ನಲ್ಲಿ 14 ಸಾವಿರ ರನ್ ಪೂರೈಸಲಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
ಸದ್ಯ 292* ಏಕದಿನ ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ 13,848* ರನ್(virat kohli odi runs) ಬಾರಿಸಿದ್ದಾರೆ. ಲಂಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಕೊಹ್ಲಿ 152 ರನ್ ಬಾರಿಸಿದರೆ 14 ಸಾವಿರ ರನ್ ಮೈಲುಗಲ್ಲು ತಲುಪಲಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 14000ಕ್ಕೂ ಹೆಚ್ಚು ರನ್ ಗಳಿಸಿದ ಸಾರ್ವಕಾಲಿದ ದಾಖಲೆ ಸಚಿನ್ ತೆಂಡೂಲ್ಕರ್ ಮತ್ತು ಕುಮಾರ ಸಂಗಕ್ಕಾರ ಹೆಸರಿನಲ್ಲಿದೆ. ಸಚಿನ್ 463 ಏಕದಿನ ಪಂದ್ಯಗಳಲ್ಲಿ 18,426 ರನ್ ಗಳಿಸಿದ್ದರೆ, ಕುಮಾರ ಸಂಗಕ್ಕಾರ 404 ಪಂದ್ಯಗಳನ್ನಾಡಿ 14,234 ರನ್ ಬಾರಿಸಿದ್ದಾರೆ. ಕೊಹ್ಲಿಗೆ ಸಂಗಕ್ಕಾರ ದಾಖಲೆ ಮುರಿಯುವ ಅವಕಾಶವಿದೆ. ಆದರೆ ಸಚಿನ್ ದಾಖಲೆ ಮುರಿಯುವುದು ಕಷ್ಟ ಸಾಧ್ಯ.