Rohit Sharma : ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ - Vistara News

ಕ್ರಿಕೆಟ್

Rohit Sharma : ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ

Rohit Sharma : ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಮಾದರಿಯಲ್ಲಿ 150 ಪಂದ್ಯಗಳನ್ನು ಆಡಿದ ಮೊದಲ ಪುರುಷ ಕ್ರಿಕೆಟಿಗ ಎಂಬ ಖ್ಯಾತಿ ಪಡೆದುಕೊಂಡಿದ್ದಾರೆ.

VISTARANEWS.COM


on

Rohit Sharma
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಸ್ತಾರ ನ್ಯೂಸ್​ ಬೆಂಗಳೂರು: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಸಂಕ್ಷಿಪ್ತ ರೂಪದ ಕ್ರಿಕೆಟ್​ನಲ್ಲಿ ದಾಖಲೆಯೊಂದನ್ನು ಬರೆದಿದ್ದಾರೆ. ಅವರು ಪುರುಷರ ಅಂತಾರಾಷ್ಟ್ರೀಯ ಟಿ20 ಮಾದರಿಯಲ್ಲಿ 150 ಪಂದ್ಯಗಳನ್ನು ಆಡಿದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಈ ಸಾಧನೆ ಮಾಡಿದ್ದಾರೆ. ಇಂದೋರ್​ನ ಹೋಳ್ಕರ್ ಕ್ರೀಡಾಂಗಣದಲ್ಲಿ ಉಭಯ ತಂಡಗಳ ನಡುವಿನ ಪಂದ್ಯ ನಡೆಯುತ್ತಿದೆ. ಇದು ಬ್ಯಾಟರ್​ಗೆ ವಿಶೇಷ ದಿನವಾಗಿದೆ. ಏಕೆಂದರೆ ಅವರ 150 ಪಂದ್ಯಗಳನ್ನು ಆಡುವ ಜತೆಗೆ ಪಂದ್ಯದಲ್ಲಿ ತಂಡವನ್ನು ಮುನ್ನಡೆಸುತ್ತಿದ್ದಾರೆ.

ಟಿ20 ಮಾದರಿಯಲ್ಲಿ ಭಾರತೀಯ ಕ್ರಿಕೆಟ್ ಮಿನುಗಲು ರೋಹಿತ್ ಶರ್ಮಾ ಕೂಡ ಒಬ್ಬರು. ಅವರು 2007ರಲ್ಲಿ ಈ ಮಾದರಿಗೆ ಪದಾರ್ಪಣೆ ಮಾಡಿದ್ದು. ಅಂದಿನಿಂದ ಈ ಮಾದರಿಯಲ್ಲಿ ಸಾಕಷ್ಟು ಎತ್ತರಕ್ಕೆ ಬೆಳೆದಿದ್ದಾರೆ. ಟಿ20 ಪಂದ್ಯಗಳಲ್ಲಿ ಮಾತ್ರವಲ್ಲದೆ ಇತರ ಎರಡು ಸ್ವರೂಪಗಳಲ್ಲಿಯೂ ವಿಶ್ವದ ಅತ್ಯುತ್ತಮ ಆಟಗಾರರಲ್ಲಿ ಒಬ್ಬರಾಗಿದ್ದಾರೆ.

ಹಲವು ವರ್ಷಗಳಿಂದ, ರೋಹಿತ್ ಶರ್ಮಾ ಆಟದ ಅತ್ಯುತ್ತಮ ಪವರ್ ಹಿಟ್ಟರ್​ ಆಗಿ ಗುರುತಿಸಿಕೊಂಡಿದ್ದಾರೆ. ಸಾಕಷ್ಟು ಸಮಯದಿಂದ ತಂಡದ ಬೆನ್ನೆಲುಬಾಗಿದ್ದಾರೆ. ಬ್ಯಾಟರ್​​ ಅನೇಕ ವಿಶ್ವ ಪ್ರಸಿದ್ಧ ಇನಿಂಗ್ಸ್​ಗಳನ್ನು ಆಡಿದ್ದಾರೆ. ತಂಡವನ್ನು ವಿಶೇಷ ಗೆಲುವುಗಳ ಕಡೆಗೆ ಕೊಂಡೊಯ್ದಿದ್ದಾರೆ.

ರೋಹಿತ್ ಶರ್ಮಾ ಇತ್ತೀಚೆಗೆ ಟಿ20 ಪಂದ್ಯಗಳಲ್ಲಿ 100 ಗೆಲುವುಗಳ ಭಾಗವಾಗಿದ್ದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರಾ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ತಂಡವು 6 ವಿಕೆಟ್​ಗಳ ವಿಜಯ ಸಾಧಿಸಿದ ನಂತರ ಅವರು ಈ ಸಾಧನೆ ಮಾಡಿದ್ದಾರೆ.

ಉತ್ತಮ ರನ್​ ಗಳಿಕೆ

ಟಿ20 ಕ್ರಿಕೆಟ್​​ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಲ್ಲಿ ರೋಹಿತ್ ಶರ್ಮಾ ಕೂಡ ಒಬ್ಬರು. 149 ಪಂದ್ಯಗಳಿಂದ 140ರ ಸ್ಟ್ರೈಕ್ ರೇಟ್ನಲ್ಲಿ 3853 ರನ್ ಗಳಿಸಿದ್ದಾರೆ. ಗ್ಲೆನ್ ಮ್ಯಾಕ್ಸ್​ವೆಲ್​ ಮತ್ತು ಸೂರ್ಯಕುಮಾರ್ ಯಾದವ್ ಅವರೊಂದಿಗೆ ಟಿ20 ಪಂದ್ಯಗಳಲ್ಲಿ ಜಂಟಿಯಾಗಿ ನಾಲ್ಕು ಶತಕಗಳನ್ನು ಬಾರಿಸಿದ್ದಾರೆ. ರೋಹಿತ್ ಶರ್ಮಾ 14 ತಿಂಗಳ ಬಳಿಕ ಟಿ20 ಕ್ರಿಕೆಟ್​ಗೆ ಮರಳಿದ್ದಾರೆ. ಕಳೆದ ಟಿ20 ವಿಶ್ವಕಪ್ ನಂತರ ಅವರು ಈ ಮಾದರಿಯಲ್ಲಿ ಯಾವುದೇ ಪಂದ್ಯವನ್ನು ಆಡಿರಲಿಲ್ಲ. ಆದಾಗ್ಯೂ, ಅವರು ರನ್​ಔಟ್ ಆಗಿ ಶೂನ್ಯಕ್ಕೆ ನಿರ್ಗಮಿಸಿದ್ದರು. ಎರನಡೇ ಪಂದ್ಯದಲ್ಲೂ ಶೂನ್ಯಕ್ಕೆ ಔಟಾಗಿದ್ದಾರೆ.

150 ಪಂದ್ಯಗಳ ಸಾಧನೆ

ಪುರುಷರ ವಿಭಾಗದಲ್ಲಿ 150 ಟಿ 20 ಪಂದ್ಯಗಳನ್ನು ಆಡಿರುವ ರೋಹಿತ್ ಶರ್ಮಾ, ಪಾಲ್ ಸ್ಟಿರ್ಲಿಂಗ್ ಮತ್ತು ಜಾರ್ಜ್ ಡಾಕ್ರೆಲ್ ಅವರಿಗಿಂತ ಮೇಲಿನ ಸ್ಥಾನದಲ್ಲಿದ್ದಾರೆ. ಸ್ಟಿರ್ಲಿಂಗ್ ಮತ್ತು ಜಾರ್ಜ್ ಟಿ 20 ಐ ಕ್ರಿಕೆಟ್​ನಲ್ಲಿ ತಮ್ಮ ತಂಡದ ಪರವಾಗಿ 134 ಮತ್ತು 128 ಪಂದ್ಯಗಳನ್ನು ಆಡಿದ್ದಾರೆ. ರೋಹಿತ್ ಶರ್ಮಾ 150 ಟಿ20 ಪಂದ್ಯಗಳನ್ನು ಆಡಿದ ನಾಲ್ಕನೇ ಕ್ರಿಕೆಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಹಿಳಾ ಕ್ರಿಕೆಟರ್​ಗಳಾದ ಹರ್ಮನ್ ಪ್ರೀತ್ ಕೌರ್ (161), ಸುಜಿ ಬೇಟ್ಸ್ (152), ಡ್ಯಾನಿ ವ್ಯಾಟ್ (151) ಮತ್ತು ಅಲಿಸ್ಸಾ ಹೀಲಿ (150) ಅವರ ಸಾಲಿಗೆ ಸೇರಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup 2024: ಪಾಕ್​ ಉಗ್ರರ ಭೀತಿ; ಬಿಗಿ ಭದ್ರತೆ ಕೈಗೊಂಡ ವಿಂಡೀಸ್​ ಕ್ರಿಕೆಟ್​ ಮಂಡಳಿ

T20 World Cup 2024:ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ.

VISTARANEWS.COM


on

T20 World Cup 2024
Koo

ಬಾರ್ಬಡಾಸ್​: ಇದೇ ಜೂನ್​ 1ರಿಂದ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್​ ಪಂದ್ಯಾವಳಿಗೆ(T20 World Cup 2024) ಕೆಲವು ದಿನಗಳ ಹಿಂದೆ ಪಾಕಿಸ್ತಾನದ ಉಗ್ರರಿಂದ ದಾಳಿಯ ಬೆದರಿಕೆಯೊಂದು(Terror Threat to T20 World Cup) ಬಂದಿತ್ತು. ಇದೀಗ ವೆಸ್ಟ್​ ಇಂಡೀಸ್​ ಕ್ರಿಕೆಟ್​ ಮಂಡಳಿ ಕಟ್ಟುನಿಟ್ಟಾದ ಭದ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ಭದ್ರತಾ ಸಿಬ್ಬಂದಿಗಳು ಕೆನ್ಸಿಂಗ್ಟನ್ ಓವಲ್(Kensington Oval Cricket Ground) ಕ್ರಿಕೆಟ್ ಮೈದಾನ, ಬಾರ್ಬಡೋಸ್​ನಲ್ಲಿ(Barbados) ಅಣುಕು ಪ್ರದರ್ಶನ ಮಾಡುತ್ತಿರುವ ಫೋಟೊ ವೈರಲ್​ ಆಗಿದೆ.

ಪ್ರೊ-ಇಸ್ಲಾಮಿಕ್ ಸ್ಟೇಟ್ (ಐಎಸ್)ನಿಂದ ಭದ್ರತಾ ಬೆದರಿಕೆ ಬಂದಿತ್ತು. ಇದೇ ವಿಚಾರವಾಗಿ ಅಂದು ಮಾತನಾಡಿದ್ದ ಕ್ರಿಕೆಟ್ ವೆಸ್ಟ್ ಇಂಡೀಸ್‌ನ ಸಿಇಒ ಜಾನಿ ಗ್ರೇವ್ಸ್, ಐಸಿಸಿ ಪುರುಷರ ಟಿ20 ವಿಶ್ವಕಪ್‌ನಲ್ಲಿ ಪ್ರತಿಯೊಬ್ಬರ ಸುರಕ್ಷತೆ ನಮ್ಮ ಮೊದಲ ಆದ್ಯತೆಯಾಗಿದೆ ಮತ್ತು ನಾವು ಸಮಗ್ರ ಮತ್ತು ದೃಢವಾದ ಭದ್ರತಾ ಯೋಜನೆಯನ್ನು ಹೊಂದಿದ್ದೇವೆ ಎಂದು ನಾವು ಎಲ್ಲ ಪಾಲುದಾರರಿಗೆ ಭರವಸೆ ನೀಡಲು ಬಯಸುತ್ತೇವೆ ಎಂದು ಹೇಳಿದ್ದರು. ಈ ಮಾತಿಗೆ ತಕ್ಕಂತೆ ಇದೀಗ ವಿಶ್ವಕಪ್​ ಪಂದ್ಯಾವಳಿಗಳು ನಡೆಯುವ ಸ್ಟೇಡಿಯಂಗಳಲ್ಲಿ ಭಾರೀ ಭದ್ರತೆ ಮಾಡಲಾಗಿದೆ.

ವೆಸ್ಟ್ ಇಂಡೀಸ್‌ನಲ್ಲಿ ಆಂಟಿಗುವಾ ಬಾರ್ಬುಡಾ, ಬಾರ್ಬಡೋಸ್, ಗಯಾನಾ, ಸೇಂಟ್ ಲೂಸಿಯಾ, ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್, ಟ್ರಿನಿಡಾಡ್ ಮತ್ತು ಟೊಬಾಗೊ ಸೇರಿದಂತೆ ಆರು ಸ್ಥಳಗಳಲ್ಲಿ ಟಿ20 ವಿಶ್ವಕಪ್ ಪಂದ್ಯಗಳು ಆಯೋಜನೆಗೊಂಡಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಟಿ20 ವಿಶ್ವಕಪ್​ಗಾಗಿ(T20 World Cup 2024) ಟೀಮ್​ ಇಂಡಿಯಾದ(team india) ಮೊದಲ ಬ್ಯಾಚ್​ ಮೇ 25ರಂದು ನ್ಯೂಯಾರ್ಕ್(New York)​ಗೆ ಪ್ರಯಾಣಿಸಲಿದೆ. ಈ ಬ್ಯಾಚ್​ನಲ್ಲಿ ನಾಯಕ ರೋಹಿತ್​ ಶರ್ಮ(Rohit Sharma), ಉಪನಾಯಕ ಹಾರ್ದಿಕ್​ ಪಾಂಡ್ಯ, ರಿಷಭ್​ ಪಂತ್​, ಜಸ್​ಪ್ರೀತ್​ ಬುಮ್ರಾ, ಸೂರ್ಯಕುಮಾರ್​ ಯಾದವ್​ ಸೇರಿ ಐಪಿಎಲ್​ ಪ್ಲೇ ಆಫ್​ನಿಂದ ಹೊರಬಿದ್ದ ತಂಡದ ಆಟಗಾರರು ಪ್ರಯಾಣಿಸಲಿದ್ದಾರೆ. ಉಳಿದ ಆಟಗಾರರು ಮೇ 26 ಐಪಿಎಲ್​ ಫೈನಲ್​ ಬಳಿಕ ವಿಮಾನ ಏರಲಿದ್ದಾರೆ. ಒಟ್ಟು 2 ಬ್ಯಾಚ್​ಗಳಾಗಿ ಭಾರತೀಯ ಆಟಗಾರರು ಪ್ರಯಾಣಿಸಲಿದ್ದಾರೆ.

Continue Reading

ಕ್ರೀಡೆ

T20 World Cup 2024: ಮೇ 25ಕ್ಕೆ ನ್ಯೂಯಾರ್ಕ್​ಗೆ ತೆರಳಲಿದೆ ಟೀಮ್ ಇಂಡಿಯಾದ ಮೊದಲ ಬ್ಯಾಚ್​

T20 World Cup 2024: ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿದೆ.

VISTARANEWS.COM


on

T20 World Cup 2024
Koo

ಮುಂಬಯಿ: ಮುಂದಿನ ತಿಂಗಳು ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​ಗಾಗಿ(T20 World Cup 2024) ಟೀಮ್​ ಇಂಡಿಯಾದ(team india) ಮೊದಲ ಬ್ಯಾಚ್​ ಮೇ 25ರಂದು ನ್ಯೂಯಾರ್ಕ್(New York)​ಗೆ ಪ್ರಯಾಣಿಸಲಿದೆ. ಈ ಬ್ಯಾಚ್​ನಲ್ಲಿ ನಾಯಕ ರೋಹಿತ್​ ಶರ್ಮ(Rohit Sharma), ಉಪನಾಯಕ ಹಾರ್ದಿಕ್​ ಪಾಂಡ್ಯ, ರಿಷಭ್​ ಪಂತ್​, ಜಸ್​ಪ್ರೀತ್​ ಬುಮ್ರಾ, ಸೂರ್ಯಕುಮಾರ್​ ಯಾದವ್​ ಸೇರಿ ಐಪಿಎಲ್​ ಪ್ಲೇ ಆಫ್​ನಿಂದ ಹೊರಬಿದ್ದ ತಂಡದ ಆಟಗಾರರು ಪ್ರಯಾಣಿಸಲಿದ್ದಾರೆ. ಉಳಿದ ಆಟಗಾರರು ಮೇ 26 ಐಪಿಎಲ್​ ಫೈನಲ್​ ಬಳಿಕ ವಿಮಾನ ಏರಲಿದ್ದಾರೆ. ಒಟ್ಟು 2 ಬ್ಯಾಚ್​ಗಳಾಗಿ ಭಾರತೀಯ ಆಟಗಾರರು ಪ್ರಯಾಣಿಸಲಿದ್ದಾರೆ.

ಮೂಲ ವೇಳಾಪಟ್ಟಿಯ ಪ್ರಕಾರ ಭಾರತ ತಂಡದ ಆಟಗಾರರು ಮೇ 21ರಂದು ನ್ಯೂಯಾರ್ಕ್​ಗೆ ತೆರಳಬೇಕಿತ್ತು. ಆದರೆ ಐಪಿಎಲ್​ ಟೂರ್ನಿಯಿಂದಾಗಿ ಇದು ಸಾಧ್ಯವಾಗಲಿಲ್ಲ. ಇದು ಮಾತ್ರವಲ್ಲದೆ ಭಾರತ ಏಕೈಕ ಅಭ್ಯಾಸ ಪಂದ್ಯ ಮಾತ್ರ ಆಡಲಿದೆ. ಭಾರತೀಯ ಆಟಗಾರರು ವ್ಯಾಪಕ ಪ್ರಯಾಣ ಮತ್ತು ಐಪಿಎಲ್​ನಿಂದ ದಣಿದಿರುವ ಕಾರಣ ಕೇವಲ ಒಂದು ಅಭ್ಯಾಸ ಪಂದ್ಯಕ್ಕೆ ಮೊರೆ ಹೋಗಿದ್ದಾರೆ. ಜೂನ್​ 1 ರಂದು ಬಾಂಗ್ಲಾದೇಶ ವಿರುದ್ಧ ಭಾರತ ಈ ಪಂದ್ಯವನ್ನು ಆಡಲಿದೆ. ಅಭ್ಯಾಸ ಪಂದ್ಯಗಳು ಮೇ 27ರಿಂದ ಜೂನ್ 1ರವರೆಗೆ ನಡೆಯಲಿದೆ.

ಇದನ್ನೂ ಓದಿ T20 World Cup 2024: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತದ ಎದುರಾಳಿ ಯಾರು?

ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

ಭಾರತದ ಪಂದ್ಯಗಳು

ದಿನಾಂಕಎದುರಾಳಿಸ್ಥಳ
ಜೂನ್​ 5ಐರ್ಲೆಂಡ್​ನ್ಯೂಯಾರ್ಕ್​
ಜೂನ್​ 9ಪಾಕಿಸ್ತಾನನ್ಯೂಯಾರ್ಕ್​
ಜೂನ್​ 12ಅಮೆರಿಕನ್ಯೂಯಾರ್ಕ್
ಜೂನ್​ 15ಕೆನಡಾಫ್ಲೋರಿಡಾ

Continue Reading

ಕ್ರೀಡೆ

RCB vs CSK: 11 ವರ್ಷಗಳ ಹಿಂದಿನ ಇತಿಹಾಸ ಮರುಕಳಿಸಿದರೆ ಆರ್​ಸಿಬಿಗೆ ಇಂದು ಗೆಲುವು ಖಚಿತ

RCB vs CSK: ಒಂದೊಮ್ಮೆ ಆರ್​ಸಿಬಿ ತಂಡ ಚೆನ್ನೈ ವಿರುದ್ಧ ಗೆದ್ದರೂ ಕೂಡ ಪ್ಲೇ ಆಫ್​ ಟಿಕೆಟ್​ ಖಚಿತವಾಗುವುದಿಲ್ಲ. ರನ್‌ರೇಟ್‌ ಲೆಕ್ಕಾಚಾರದಲ್ಲಿ ಚೆನ್ನೈಯನ್ನು ಆರ್‌ಸಿಬಿ ಕನಿಷ್ಠ 18 ರನ್ನುಗಳಿಂದ ಮಣಿಸಬೇಕಿದೆ. ಚೇಸಿಂಗ್‌ ಲೆಕ್ಕಾಚಾರ ಬೇರೆಯೇ ಇದೆ. ಕನಿಷ್ಠ 11 ಎಸೆತ ಬಾಕಿ ಇರುವಾಗಲೇ ಗುರಿ ಮುಟ್ಟಬೇಕು. ಸಣ್ಣ ಅಂತರದ ಗೆಲುವು ಕಂಡರೆ ಕಷ್ಟ.

VISTARANEWS.COM


on

RCB vs CSK
Koo

ಬೆಂಗಳೂರು: ಸಾಂಪ್ರದಾಯಿಕ ಬದ್ಧವೈರಿಗಳಾದ ಆರ್‌ಸಿಬಿ(RCB vs CSK) ಹಾಗೂ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್‌ ಕಿಂಗ್ಸ್‌ ನಡುವಿನ ನಿರ್ಣಾಯಕ ಹಣಾಹಣಿ ಇನ್ನೇಮು ಕೆಲವೇ ಗಂಟೆಗಳಲ್ಲಿ ಆರಂಭಗೊಳ್ಳಲಿದೆ. ಇತ್ತಂಡಗಳ ನಡುವಣ ಈ ಕಾದಾಟಕ್ಕೆ ನಗರದ ಚಿನ್ನಸ್ವಾಮಿ(Chinnaswamy) ಕ್ರೀಡಾಂಗಣ ಸಜ್ಜಾಗಿ ನಿಂತಿದೆ. ಆದರೆ ಮತ್ತೊಂದೆಡೆ ಭಾರೀ ಮೋಡ ಕವಿದ ವಾತಾವರಣ ಕಂಡು ಬಂದಿದ್ದು ಮಳೆ ಭೀತಿಯೂ(RCB vs CSK rain prediction) ಎದುರಾಗಿದೆ. 11 ವರ್ಷಗಳ ಹಿಂದೆಯೂ ಉಭಯ ತಂಡಗಳ ನಡುವಣ ಪಂದ್ಯಕ್ಕೂ ಮಳೆ ಎದುರಾಗಿತ್ತು. ಕಾಕತಾಳೀಯವೆಂದರೆ ಆ ಪಂದ್ಯ ಕೂಡ ಮೇ 18, ಶನಿವಾರ ನಡೆದಿತ್ತು.

ಹೌದು, ಆರ್​ಸಿಬಿ ಮತ್ತು ಚೆನ್ನೈ 2013ರಲ್ಲಿ(2013 IPL) ತನ್ನ ಕೊನೆಯ ಲೀಗ್​ ಪಂದ್ಯವನ್ನು ಮೇ 18ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ಆಡಿತ್ತು. ಈ ಪಂದ್ಯ ಕೂಡ ಶನಿವಾರವೇ ಆಗಿತ್ತು. ಅಲ್ಲದೆ ಪಂದ್ಯಕ್ಕೆ ಮಳೆಯ ಭೀತಿಯೂ ಎದುರಾಗಿತ್ತು. ಹವಾಮಾನ ಇಲಾಖೆ ನೀಡಿದ ಎಚ್ಚರಿಕೆಯಂತೆ ಪಂದ್ಯಕ್ಕೆ ಮಳೆ ಕೂಡ ಅಡ್ಡಿಪಡಿಸಿತ್ತು. ಬಳಿಕ ಡಕ್​ವರ್ತ್ ಲೂಯಿಸ್​ ನಿಯಮದ ಅನುಸಾರ ಈ ಪಂದ್ಯವನ್ನು 8 ಓವರ್​ಗೆ ಸೀಮಿತಗೊಳಿಸಿ ಆಡಿಸಲಾಗಿತ್ತು.

ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಆರ್​ಸಿಬಿ 8 ಓವರ್​ಗೆ ಕೇವಲ 2 ವಿಕೆಟ್​ ಕಳೆದುಕೊಂಡು 106 ರನ್​ ಪೇರಿಸಿತ್ತು. ಕಿಂಗ್​ ವಿರಾಟ್​ ಕೊಹ್ಲಿ ಅಜೇಯ 56 ರನ್​ ಬಾರಿಸಿದರೆ, ಕ್ರಿಸ್​ ಗೇಲ್​ 28 ರನ್​ ಬಾರಿಸಿದ್ದರು. ಗುರಿ ಬೆನ್ನಟ್ಟಿದ ಚೆನ್ನೈ ಸೂಪರ್​ ಕಿಂಗ್ಸ್​ 6 ವಿಕೆಟ್​ ಕಳೆದುಕೊಂಡು 82 ರನ್​ಗಳಿಸಲಷ್ಟೇ ಶಕ್ತವಾಗಿ 24 ರನ್​ಗಳ ಸೋಲು ಕಂಡಿತ್ತು.

ಇದೀಗ ಇಂದು ನಡೆಯುವ ಪಂದ್ಯವೂ ಕೂಡ ಮೇ 18 ಶನಿವಾರವಾಗಿದೆ. ಜತೆಗೆ ಪಂದ್ಯಕ್ಕೆ ಮಳೆಯ ಭೀತಿ ಕೂಡ ಇದೆ. ಅಂಕಿ ಸಂಖ್ಯೆಗಳ ಚಮತ್ಕಾರ ತಾಳೆಯಾಗುತ್ತಿದ್ದು ಈ ಆಧಾರದಲ್ಲಿ ಆರ್​ಸಿಬಿ ಇಂದು ಗೆಲುವು ಸಾಧಿಸಲಿದೆ ಎಂದು ಅಭಿಮಾನಿಗಳು ಪಂದ್ಯಕ್ಕೂ ಮುನ್ನವೇ ಭವಿಷ್ಯ ನುಡಿಯಲಾರಂಭಿಸಿದ್ದಾರೆ.

ಇದನ್ನೂ ಓದಿ IPL 2024 : ಬೆಂಗಳೂರಿನ ಬೀದಿ ಬೀದಿಗಳಲ್ಲಿ ‘ಧೋನಿ, ಧೋನಿ’ ಘೋಷಣೆ, ಇಲ್ಲಿದೆ ವಿಡಿಯೊ

ಎಷ್ಟೇ ಮಳೆಯಾದರೂ ಕೂಡ ಮಳೆ ನಿಂತ ಕೆಲವೇ ಕ್ಷಣದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ(M Chinnaswamy Stadium) ಪಂದ್ಯವನ್ನು ಆರಂಭಗೊಳ್ಳುವಂತೆ ಮಾಡುವ ವಿಶೇಷ ಸಬ್‌ ಏರ್‌ ಸಿಸ್ಟಮ್‌(SubAir facility) ತಂತ್ರಜ್ಞಾನ(SubAir facility Chinnaswamy)ವಿದೆ. ಸಬ್‌ ಏರ್‌ ಸಿಸ್ಟಮ್‌ ಅಳವಡಿಸಿಕೊಂಡ ವಿಶ್ವದ ಮೊದಲ ಕ್ರಿಕೆಟ್‌ ಕ್ರೀಡಾಂಗಣ ಎಂಬ ಖ್ಯಾತಿ ಚಿನ್ನಸ್ವಾಮಿ ಕ್ರೀಡಾಂಗಣದ್ದಾಗಿದೆ. ಉದಾಹರಣೆಗೆ ಒಂದು ಗಂಟೆ ಭಾರಿ ಮಳೆ ಸುರಿದರೆ 7 ನಿಮಿಷಗಳಲ್ಲಿ ಕ್ರೀಡಾಂಗಣ ಪಂದ್ಯಕ್ಕೆ ಸಿದ್ಧವಾಗಿರುತ್ತದೆ. ನೀರನ್ನು ಹೀರಿಕೊಂಡ ನಂತರ ಸಬ್‌ ಏರ್‌ ಯಂತ್ರದ ಮೂಲಕ ಅದೇ ಕೊಳವೆಗಳಲ್ಲಿ ಔಟ್‌ಫೀಲ್ಡ್‌ಗೆ ಬಿಸಿ ಗಾಳಿಯನ್ನು ಹಾಯಿಸಿ ಮೈದಾನವನ್ನು ಒಣಗಿಸುವ ವ್ಯವಸ್ಥೆಯಿದೆ. ಒಂದೊಮ್ಮೆ ಮಳೆಯ ಆರ್ಭಟ ನಿಲ್ಲದೇ ಹೋದಲ್ಲಿ, ಆಗ ಎಷ್ಟೇ ದೊಡ್ಡ ತಂತ್ರಜ್ಞಾನವಿದ್ದರೂ ಇದು ಉಪಯೋಗಕ್ಕೆ ಬಾರದು. ಹೀಗಾಗಿ ಪಂದ್ಯದ ಅಳಿವು ಉಳಿವಿನ ಭವಿಷ್ಯ ಮಳೆಯ ಕೈಯಲ್ಲಿದೆ.

ಒಂದೊಮ್ಮೆ ಆರ್​ಸಿಬಿ ತಂಡ ಚೆನ್ನೈ ವಿರುದ್ಧ ಗೆದ್ದರೂ ಕೂಡ ಪ್ಲೇ ಆಫ್​ ಟಿಕೆಟ್​ ಖಚಿತವಾಗುವುದಿಲ್ಲ. ರನ್‌ರೇಟ್‌ ಲೆಕ್ಕಾಚಾರದಲ್ಲಿ ಚೆನ್ನೈಯನ್ನು ಆರ್‌ಸಿಬಿ ಕನಿಷ್ಠ 18 ರನ್ನುಗಳಿಂದ ಮಣಿಸಬೇಕಿದೆ. ಚೇಸಿಂಗ್‌ ಲೆಕ್ಕಾಚಾರ ಬೇರೆಯೇ ಇದೆ. ಕನಿಷ್ಠ 11 ಎಸೆತ ಬಾಕಿ ಇರುವಾಗಲೇ ಗುರಿ ಮುಟ್ಟಬೇಕು. ಸಣ್ಣ ಅಂತರದ ಗೆಲುವು ಕಂಡರೆ ಕಷ್ಟ.

Continue Reading

ಕ್ರೀಡೆ

RCB FANS BIKE RALLY: ಪಂದ್ಯಕ್ಕೂ ಮುನ್ನವೇ ಬೃಹತ್​ ಬೈಕ್​ ರ‍್ಯಾಲಿ ಮಾಡಿದ ಆರ್​ಸಿಬಿ ಅಭಿಮಾನಿಗಳು; ವಿಡಿಯೊ ವೈರಲ್​​

RCB FANS BIKE RALLY: ಆರ್​ಸಿಬಿ ಮತ್ತು ಚೆನ್ನೈ ತಂಡ ಇದುವರೆಗೆ ಐಪಿಎಲ್​ನಲ್ಲಿ ಒಟ್ಟು 32 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಆರ್​ಸಿಬಿ 10 ಪಂದ್ಯ ಗೆದ್ದರೆ, ಚೆನ್ನೈ 21 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಕಳೆದ ಮೂರು ಪಂದ್ಯಗಳ ಮುಖಾಮುಖಿಯಲ್ಲೂ ಚೆನ್ನೈ ತಂಡವೇ ಗೆದ್ದಿದೆ.

VISTARANEWS.COM


on

RCB FANS BIKE RALLY
Koo

ಬೆಂಗಳೂರು: ಐಪಿಎಲ್​ನ(IPL 20124) ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಚೆನ್ನೈ ಸೂಪರ್(Chennai Super Kings)​ ಕಿಂಗ್ಸ್​ ಮತ್ತು ರಾಯಲ್​ ಚಾಲೆಂಜರ್ಸ್​ ಬೆಂಗಳೂರು(Royal Challengers Bengaluru) ತಂಡಗಳು ಇಂದು ನಡೆಯುವ ಪ್ಲೇ ಆಫ್​ ಪ್ರವೇಶದ ಮಹತ್ವದ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಪಂದ್ಯಕ್ಕೂ ಮುನ್ನವೇ ಆರ್​ಸಿಬಿ(RCB) ಅಭಿಮಾನಿಗಳು(Craze RCB FANS) ಚಿನ್ನಸ್ವಾಮಿ ಮೈದಾನದ ಬಳಿ ಬೃಹತ್​ ಬೈಕ್​ ರ‍್ಯಾಲಿ(RCB FANS BIKE RALLY) ನಡೆಸಿ ತಮ್ಮ ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಪಂದ್ಯಕ್ಕೆ ಮಳೆಯ ಭೀತಿಯೂ ಇದ್ದು ಸಸ್ಯ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದೆ. ಅಲ್ಲದೆ ರಾತ್ರಿ ಮಳೆಯಾಗುವುದು ಬಹುತೇಕ ಖಚಿತ ಎನ್ನುವಂತಿದೆ. ಒಂದೆಡೆ ಆರ್​ಸಿಬಿ ಅಭಿಮಾನಿಗಳು ಮಳೆ ಬಾರದಂತೆ ಪ್ರಾರ್ಥಿಸುತ್ತಿದ್ದರೆ, ಮತ್ತೊಂದು ಕಡೆ ಚೆನ್ನೈ ಅಭಿಮಾನಿಗಳಿ ಮಳೆ ಬಂದು ಪಂದ್ಯ ರದ್ದಾಗಲಿ ಎಂದು ಪ್ರಾರ್ಥಿಸುತ್ತಿದ್ದರೆ. ಪಂದ್ಯ ರದ್ದಾದರೆ ಚೆನ್ನೈ 4ನೇ ತಂಡವಾಗಿ ಅಧಿಕೃತ ಪ್ಲೇ ಆಫ್​ಗೆ ಎಂಟ್ರಿ ಕೊಡಲಿದೆ. ಒಟ್ಟಾರೆ ಮಳೆ ಯಾರಿಗೆ ಅನುವು ಮಾಡಿಕೊಡಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

ಸಬ್‌ ಏರ್‌ ಸಿಸ್ಟಮ್‌


ಎಷ್ಟೇ ಮಳೆಯಾದರೂ ಕೂಡ ಮಳೆ ನಿಂತ ಕೆಲವೇ ಕ್ಷಣದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ(M Chinnaswamy Stadium) ಪಂದ್ಯವನ್ನು ಆರಂಭಗೊಳ್ಳುವಂತೆ ಮಾಡುವ ವಿಶೇಷ ಸಬ್‌ ಏರ್‌ ಸಿಸ್ಟಮ್‌(SubAir facility) ತಂತ್ರಜ್ಞಾನ(SubAir facility Chinnaswamy)ವಿದೆ. ಸಬ್‌ ಏರ್‌ ಸಿಸ್ಟಮ್‌ ಅಳವಡಿಸಿಕೊಂಡ ವಿಶ್ವದ ಮೊದಲ ಕ್ರಿಕೆಟ್‌ ಕ್ರೀಡಾಂಗಣ ಎಂಬ ಖ್ಯಾತಿ ಚಿನ್ನಸ್ವಾಮಿ ಕ್ರೀಡಾಂಗಣದ್ದಾಗಿದೆ. ಉದಾಹರಣೆಗೆ ಒಂದು ಗಂಟೆ ಭಾರಿ ಮಳೆ ಸುರಿದರೆ 7 ನಿಮಿಷಗಳಲ್ಲಿ ಕ್ರೀಡಾಂಗಣ ಪಂದ್ಯಕ್ಕೆ ಸಿದ್ಧವಾಗಿರುತ್ತದೆ. ನೀರನ್ನು ಹೀರಿಕೊಂಡ ನಂತರ ಸಬ್‌ ಏರ್‌ ಯಂತ್ರದ ಮೂಲಕ ಅದೇ ಕೊಳವೆಗಳಲ್ಲಿ ಔಟ್‌ಫೀಲ್ಡ್‌ಗೆ ಬಿಸಿ ಗಾಳಿಯನ್ನು ಹಾಯಿಸಿ ಮೈದಾನವನ್ನು ಒಣಗಿಸುವ ವ್ಯವಸ್ಥೆಯಿದೆ. ಒಂದೊಮ್ಮೆ ಮಳೆಯ ಆರ್ಭಟ ನಿಲ್ಲದೇ ಹೋದಲ್ಲಿ, ಆಗ ಎಷ್ಟೇ ದೊಡ್ಡ ತಂತ್ರಜ್ಞಾನವಿದ್ದರೂ ಇದು ಉಪಯೋಗಕ್ಕೆ ಬಾರದು. ಹೀಗಾಗಿ ಪಂದ್ಯದ ಅಳಿವು ಉಳಿವಿನ ಭವಿಷ್ಯ ಮಳೆಯ ಕೈಯಲ್ಲಿದೆ.

ಇದನ್ನೂ ಓದಿ RCB vs CSK: ವಾಹನ ಸವಾರರೇ ಗಮನಿಸಿ, ಇಂದು ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

ಚಿನ್ನಸ್ವಾಮಿಯಲ್ಲಿ ಆರ್​ಸಿಬಿ-ಚೆನ್ನೈ ದಾಖಲೆ


ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ಮತ್ತು ಆರ್​ಸಿಬಿ ಇದುವರೆಗೆ 10 ಪಂದ್ಯಗಳನ್ನು ಆಡಿವೆ. ಈ ಪೈಕಿ ಚೆನ್ನೈ ಐದರಲ್ಲಿ ಗೆದ್ದರೆ, ಆರ್​ಸಿಬಿ ನಾಲ್ಕರಲ್ಲಿ ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಈ ಲೆಕ್ಕಾಚಾರದಲ್ಲಿ ಚೆನ್ನೈ ಬಲಿಷ್ಠ ಎನ್ನಲಡ್ಡಿಯಿಲ್ಲ. ಇಲ್ಲಿ ನಡೆದ ಕಳೆದ 10 ಪಂದ್ಯಗಳ ಫಲಿತಾಂಶ ನೋಡುವುದಾದರೆ 6 ಬಾರಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಗೆಲುವು ಸಾಧಿಸಿದೆ. ಈ ಆವೃತ್ತಿಯ 6 ಪಂದ್ಯಗಳ ಪೈಕಿ ಸಮಾನಾಗಿ 3 ಬಾರಿ ಚೇಸಿಂಗ್​ ಮತ್ತು ಮೊದಲು ಬ್ಯಾಟಿಂಗ್​ ನಡೆಸಿದ ತಂಡಗಳು ಜಯಿಸಿದೆ.

ಇತ್ತಂಡಗಳ ಒಟ್ಟು ಐಪಿಎಲ್​ ಮುಖಾಮುಖಿ


ಆರ್​ಸಿಬಿ ಮತ್ತು ಚೆನ್ನೈ ತಂಡ ಇದುವರೆಗೆ ಐಪಿಎಲ್​ನಲ್ಲಿ ಒಟ್ಟು 32 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಆರ್​ಸಿಬಿ 10 ಪಂದ್ಯ ಗೆದ್ದರೆ, ಚೆನ್ನೈ 21 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಕಳೆದ ಮೂರು ಪಂದ್ಯಗಳ ಮುಖಾಮುಖಿಯಲ್ಲೂ ಚೆನ್ನೈ ತಂಡವೇ ಗೆದ್ದಿದೆ. ಹೀಗಾಗಿ ನಾಳಿನ ಪಂದ್ಯದಲ್ಲಿಯೂ ಚೆನ್ನೈ ಗೆಲುವಿನ ಫೇವರಿಟ್​ ಆಗಿದೆ. ಈ ಬಾರಿಯ ಉದ್ಘಾಟನ ಪಂದ್ಯದಲ್ಲಿಯೂ ಚೆನ್ನೈ ಆರ್​ಸಿಬಿಗೆ ಸೋಲುಣಿಸಿತ್ತು.

Continue Reading
Advertisement
Health Tips in Kannada tomato juice is good for health
ಆರೋಗ್ಯ54 seconds ago

Health Tips in Kannada: ಟೊಮ್ಯಾಟೊ ಜ್ಯೂಸ್‌ ಆರೋಗ್ಯಕ್ಕೇಕೆ ಒಳ್ಳೆಯದು ಗೊತ್ತೆ?

T20 World Cup 2024
ಕ್ರೀಡೆ2 mins ago

T20 World Cup 2024: ಪಾಕ್​ ಉಗ್ರರ ಭೀತಿ; ಬಿಗಿ ಭದ್ರತೆ ಕೈಗೊಂಡ ವಿಂಡೀಸ್​ ಕ್ರಿಕೆಟ್​ ಮಂಡಳಿ

Cannes 2024 Indian influencer who stitched a 20 kg dress
ಬಾಲಿವುಡ್7 mins ago

Cannes 2024: 20 ಕೆಜಿ ತೂಕದ ಗೌನ್ ಧರಿಸಿ ಬೆರಗುಗೊಳಿಸಿದ ನ್ಯಾನ್ಸಿ ತ್ಯಾಗಿ!

ಕರ್ನಾಟಕ9 mins ago

Prajwal Revanna Case: ನಾನು ಹೊರಬಂದ್ರೆ ಸರ್ಕಾರ ಪತನ ಎಂದ ದೇವರಾಜೇಗೌಡ; ಹಾಗಾದ್ರೆ ಜೈಲಲ್ಲೇ ಇರ್ತಾರೆ ಎಂದ ಪರಮೇಶ್ವರ್‌

Woman
ದೇಶ10 mins ago

ಪತ್ನಿಯ ಶೀಲ ಶಂಕಿಸಿ, ಆಕೆಯ ಗುಪ್ತಾಂಗಕ್ಕೆ ಮೊಳೆ ಜಡಿದು, ಬೀಗ ಹಾಕಿದ ದುಷ್ಟ; ಏನು ಮಾಡಬೇಕು ಇಂಥವರಿಗೆ?

murder case
ಕ್ರೈಂ13 mins ago

Murder case : ಕುಡಿದ ನಶೆಯಲ್ಲಿ ಗೆಳೆಯನ ಕೊಂದ; ಸೇಡಿಗಾಗಿ ಗ್ರಾ.ಪಂ ಸದಸ್ಯನ ಮನೆ ಮೇಲೆ ಅಟ್ಯಾಕ್‌

Pavitra Jayaram Relationship With Chandu Shilpa Prema statement
ಕಿರುತೆರೆ39 mins ago

Pavithra Jayaram: ನನ್ನ ಗಂಡನಿಗೂ ಪವಿತ್ರಾಗೂ ‘ಸಂಬಂಧ’ ಇದ್ದದ್ದು ನಿಜ ಎಂದ ಚಂದ್ರಕಾಂತ್‌ ಪತ್ನಿ!

Money Guide
ಮನಿ-ಗೈಡ್41 mins ago

Ration Card: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ? ಇಲ್ಲಿದೆ ಸಂಪೂರ್ಣ ವಿವರ

T20 World Cup 2024
ಕ್ರೀಡೆ44 mins ago

T20 World Cup 2024: ಮೇ 25ಕ್ಕೆ ನ್ಯೂಯಾರ್ಕ್​ಗೆ ತೆರಳಲಿದೆ ಟೀಮ್ ಇಂಡಿಯಾದ ಮೊದಲ ಬ್ಯಾಚ್​

Mallikarjun Kharge
Lok Sabha Election 202446 mins ago

Mallikarjun Kharge: ಬುಲ್ಡೋಜರ್‌ ಹೇಳಿಕೆ ನೀಡಿದ ಮೋದಿ ವಿರುದ್ಧ ಕ್ರಮ ಕೈಗೊಳ್ಳಿ; ಚುನಾವಣಾ ಆಯೋಗಕ್ಕೆ ಖರ್ಗೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ21 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌