ನವ ದೆಹಲಿ : ಅಫ್ಘಾನಿಸ್ತಾನ ವಿರುದ್ಧ ಅಬ್ಬರದ ಶತಕ ಬಾರಿಸುವ ಮೂಲಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಹಲವು ದಾಖಲೆಗಳನ್ನು ಮಾಡಿದ್ದಾರೆ. ಅದರಲ್ಲೊಂದು ವಿಶ್ವ ಕಪ್ ಇತಿಹಾಸದಲ್ಲಿ ಅತಿ ಹೆಚ್ಚು ಶತಕಗಳ ದಾಖಲೆ. ಅವರಿಗೆ ಇದು ವಿಶ್ವ ಕಪ್ನಲ್ಲಿ ಏಳನೇ ದಾಖಲೆಯಾಗಿದೆ. ಈ ಮೂಲಕ ಅವರು ಕ್ರಿಕೆಟ್ ಇತಿಹಾಸದಲ್ಲಿ ಏಕ ದಿನ ವಿಶ್ವ ಕಪ್ನಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಇದೇ ವೇಳೆ ಅವರು ಭಾರತದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಹಿಮ್ಮೆಟ್ಟಿಸಿದ್ದಾರೆ. ಸಚಿನ್ ಅವರು ವಿಶ್ವ ಕಪ್ನಲ್ಲಿ 6 ಶತಕಗಳನ್ನು ಬಾರಿಸಿದ್ದರು.
ರೋಹಿತ್ ಕೇವಲ 63 ಎಸೆತಗಳಲ್ಲಿ 12 ಬೌಂಡರಿ ಮತ್ತು 4 ಸಿಕ್ಸರ್ಗಳೊಂದಿಗೆ ಈ ಮೈಲಿಗಲ್ಲನ್ನು ತಲುಪಿದರು. ಕೇವಲ 19 ಇನ್ನಿಂಗ್ಸ್ಗಳಲ್ಲಿ 1000 ರನ್ ಪೂರೈಸಿದ ವೇಗದ ಬ್ಯಾಟ್ಸ್ಮನ್ ಎಂಬ ದಾಖಲೆಯನ್ನು 36 ವರ್ಷದ ಆಟಗಾರ ಸರಿಗಟ್ಟಿದರು.
ರೋಹಿತ್ ಶತಕಗಳ ವಿವರ ಇಲ್ಲಿದೆ
2015ರ ವಿಶ್ವಕಪ್ ನಲ್ಲಿ 137 ರನ್
2019ರ ವಿಶ್ವಕಪ್ ನಲ್ಲಿ 122* ರನ್
2019ರ ವಿಶ್ವಕಪ್ ನಲ್ಲಿ 140 ರನ್
2019ರ ವಿಶ್ವಕಪ್ ನಲ್ಲಿ 102 ರನ್
2019ರ ವಿಶ್ವಕಪ್ ನಲ್ಲಿ 104 ರನ್
2019ರ ವಿಶ್ವಕಪ್ ನಲ್ಲಿ 103 ರನ್
2023ರ ವಿಶ್ವಕಪ್ ನಲ್ಲಿ 131 ರನ್
137 in 2015 World Cup
— Johns. (@CricCrazyJohns) October 11, 2023
122* in 2019 World Cup
140 in 2019 World Cup
102 in 2019 World Cup
104 in 2019 World Cup
103 in 2019 World Cup
131 in 2023 World Cup
Rohit Sharma has scored 7 hundreds in the last 13 innings in World Cup history. pic.twitter.com/m1EqrLuLTo
ಅತಿ ಹೆಚ್ಚು ಸಿಕ್ಸರ್ಗಳ ದಾಖಲೆ
ಅಫ್ಘಾನಿಸ್ತಾನ ವಿರುದ್ಧದ ಐಸಿಸಿ ವಿಶ್ವಕಪ್ 2023 ರ ಪಂದ್ಯದ ವೇಳೆ ಭಾರತದ ಬ್ಯಾಟರ್ ರೋಹಿತ್ ಶರ್ಮಾ (Rohit Sharma ) ಎಲ್ಲಾ ಸ್ವರೂಪಗಳ ಕ್ರಿಕೆಟ್ ಸೇರಿ ಅತಿ ಹೆಚ್ಚು ಅಂತಾರಾಷ್ಟ್ರೀಯ ಸಿಕ್ಸರ್ಗಳನ್ನು ಬಾರಿಸಿದ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ವೆಸ್ಟ್ ಇಂಡೀಸ್ನ ಸ್ಫೋಟಕ ಬ್ಯಾಟರ್ ಕ್ರಿಸ್ ಗೇಲ್ 553 ಸಿಕ್ಸರ್ಗಳ (551 ಇನ್ನಿಂಗ್ಸ್) ಈ ಹಿಂದೆ ಈ ದಾಖಲೆಯನ್ನು ಹೊಂದಿದ್ದರು. ರೋಹಿತ್ ಅಫಘಾನಿಸ್ತಾನ ವಿರುದ್ಧ ಮೂರನೇ ಸಿಕ್ಸರ್ ಬಾರಿಸುವ ಮೂಲಕ ಒಟ್ಟು 554 ಸಿಕ್ಸರ್ಗಳೊಂದಿಗೆ ಅಗ್ರಸ್ಥಾನ ಪಡೆದರು.
ರೋಹಿತ್ ಶರ್ಮಾ ಕೇವಲ 473 ಇನ್ನಿಂಗ್ಸ್ಗಳಲ್ಲಿ ಈ ಸಾಧನೆ ಮಾಡಿ ಗೇಲ್ ಅವರನ್ನು ಹಿಂದಿಕ್ಕಿದ್ದಾರೆ. ಏಕದಿನ ಪಂದ್ಯಗಳಲ್ಲಿ ಶಾಹಿದ್ ಅಫ್ರಿದಿ ಮತ್ತು ಗೇಲ್ ನಂತರ ರೋಹಿತ್ ಮೂರನೇ ಸ್ಥಾನದಲ್ಲಿದ್ದಾರೆ. ಆದರೆ ಟಿ 20 ಐನಲ್ಲಿ 140 ಇನಿಂಗ್ಸ್ಗಳಲ್ಲಿ 182 ಸಿಕ್ಸರ್ಗಳನ್ನು ಬಾರಿಸಿದ ರೋಹಿತ್ ಅಗ್ರಸ್ಥಾನದಲ್ಲಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ 77 ಸಿಕ್ಸ್ಗಳೊಂದಿಗೆ ರೋಹಿತ್ ಮೂರನೇ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಭಾರತೀಯರಾಗಿದ್ದು, ವೀರೇಂದ್ರ ಸೆಹ್ವಾಗ್ (91) ಮತ್ತು ಎಂಎಸ್ ಧೋನಿ (78) ನಂತರದ ಸ್ಥಾನದಲ್ಲಿದ್ದಾರೆ.
ಅತಿವೇಗದ 1000 ರನ್
ವಿಶ್ವಕಪ್ ನಲ್ಲಿ ಅತಿ ವೇಗವಾಗಿ 1000 ರನ್ ಪೂರೈಸಿದ ದಾಖಲೆಯನ್ನೂ ರೋಹಿತ್ ಶರ್ಮಾ ಮಾಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಡಕ್ ಔಟ್ ಆದ ನಂತರ ಕೇವಲ 21 ರನ್ಗಳ ಅಗತ್ಯವಿದ್ದ ರೋಹಿತ್, ಇದೀಗ ಅಫ್ಘಾನಿಸ್ತಾನ ವಿರುದ್ಧ 1,000 ರನ್ ಪೂರೈಸಿದರು. ಡೇವಿಡ್ ವಾರ್ನರ್ ಅವರೊಂದಿಗೆ 19 ಇನಿಂಗ್ಸ್ಗಳಲ್ಲಿ ವೇಗವಾಗಿ ಈ ಸಾಧನೆ ಮಾಡಿದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ವಿಶ್ವ ಕಪ್ನಲ್ಲಿ ಭಾರತ ಪರ ಅತಿ ವೇಗದ ಶತಕ
ರೋಹಿತ್ ಶರ್ಮಾ ಕೇವಲ 63 ಎಸೆತಗಳಲ್ಲಿ ಶತಕ ಬಾರಿಸಿದ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು, ಈ ಹಿಂದೆ ಕಪಿಲ್ ದೇವ್ 72 ಎಸೆತಗಳಲ್ಲಿ ಶತಕ ಬಾರಿಸಿದ್ದರು. ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಎಲ್ಲರೂ ರೋಹಿತ್ ಶರ್ಮಾ ಅವರ ದೊಡ್ಡ ದಾಖಲೆಯನ್ನು ಶ್ಲಾಘಿಸಿದ್ದಾರೆ.