Site icon Vistara News

Rohit Sharma: ಅರ್ಧಶತಕ ಬಾರಿಸಿ 2 ದಾಖಲೆ ಬರೆದ ರೋಹಿತ್​ ಶರ್ಮ

rohit sharma

ಲಕ್ನೋ: 100ನೇ ನಾಯಕತ್ವದ ಪಂದ್ಯದಲ್ಲಿ ಆಡುತ್ತಿರುವ ರೋಹಿತ್​ ಶರ್ಮ(Rohit Sharma) ಅವರು ಈ ಒಂದ್ಯದಲ್ಲಿ ಎರಡು ದಾಖಲೆಯನ್ನು ಬರೆದಿದ್ದಾರೆ. ಏಕದಿನ ಕ್ರಿಕೆಟ್​ನ ಕ್ಯಾಲೆಂಡರ್​ ವರ್ಷದಲ್ಲಿ ಸಾವಿರ ರನ್​ ಪೂರೈಸಿದ್ದು ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 18 ಸಾವಿರ ರನ್​ ಪೂರೈಸಿದ ಸಾಧನೆ ಮಾಡಿದರು. ರೋಹಿತ್ ಕ್ಯಾಲೆಂಡರ್ ವರ್ಷದಲ್ಲಿ 1000 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ಐದನೇ ನಿದರ್ಶನ. 2013, 2017, 2018 ಮತ್ತು 2019 ರಲ್ಲಿ ಈ ಸಾಧನೆ ಮಾಡಿದ್ದರು. ಇದೀಗ 2023ರಲ್ಲಿಯೂ ಈ ಸಾಧನೆ ಮಾಡಿದರು.

ಭಾರತ ಪರ ಕ್ಯಾಲೆಂಡರ್​ ವರ್ಷವೊಂದರಲ್ಲಿ ಮೊದಲ ಬಾರಿ 1000 ರನ್​ ಪೂರೈಸಿದ ದಾಖಲೆ ಸಚಿನ್​ ತೆಂಡೂಲ್ಕರ್​ ಹೆಸರಿನಲ್ಲಿದೆ. ಸಚಿನ್​ ಅವರು 1997ರಲ್ಲಿ ಈ ಸಾಧನೆ ಮಾಡಿದ್ದರು. ಇದಾದ ಬಳಿಕ ಮೊಹಮ್ಮದ್​ ಅಜರುದ್ದೀನ್​ 1998ರಲ್ಲಿ ಈ ದಾಖಲೆ ಬರೆದಿದ್ದರು.

ಟೀಮ್​ ಇಂಡಿಯಾದ ಮಾಜಿ ಆಟಗಾರ ಸೌರವ್​ ಗಂಗೂಲಿ ಅವರು 2 ಬಾರಿ ಈ ಸಾಧನೆ ಮಾಡಿದಾರೆ. 2000 ಮತ್ತು 2002ರಲ್ಲಿ ಈ ಮೈಲಿಗಲ್ಲು ನಿರ್ಮಿಸಿದ್ದರು. ಧೋನಿ ಕೂಡ 2 ಬಾರಿ ಈ ಸಾಧನೆ ಮಾಡಿದ್ದಾರೆ. ಕಿಂಗ್​ ಕೊಹ್ಲಿ ಅವರು ಮೂರು ಬಾರಿ ಈ ಸಾಧನೆ ಮಾಡಿದ್ದಾರೆ.

18 ಸಾವಿರ ರನ್​ ಪೂರ್ತಿ

ರೋಹಿತ್ ಶರ್ಮಾ ಅವರು ಇದೇ ಪಂದ್ಯದಲ್ಲಿ 18,000 ಅಂತಾರಾಷ್ಟ್ರೀಯ ರನ್ ಪೂರೈಸಿದ ದಾಖಲೆ ಬರೆದಿದ್ದಾರೆ. ರೋಹಿತ್​ ಅವರು 477ನೇ ಇನ್ನಿಂಗ್ಸ್‌ನಲ್ಲಿ ಈ ಸಾಧನೆಯನ್ನು ನಿರ್ಮಿಸಿದರು. ಈ ಸಾಧನೆ ಮಾಡಿದ ಐದನೇ ಭಾರತೀಯ ಆಟಗಾರ ಎನಿಸಿದರು. ರೋಹಿತ್‌ಗಿಂತ ಮೊದಲು ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ಸೌರವ್ ಗಂಗೂಲಿ ಮತ್ತು ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದರು.

ಇದನ್ನೂ ಓದಿ IND vs ENG: ಕಪ್ಪು ಪಟ್ಟಿ ಧರಿಸಿ ಆಡಲಿಳಿದ ಟೀಮ್​ ಇಂಡಿಯಾ ಆಟಗಾರರು

ರೋಹಿತ್​ ಅವರ 18000 ರನ್‌ಗಳಲ್ಲಿ, 3677 ರನ್​ ಟೆಸ್ಟ್‌ ಕ್ರಿಕೆಟ್​ನಲ್ಲಿ 3853 ಟಿ20ಯಲ್ಲಿ, 10470 ಏಕದಿನ ಕ್ರಿಕೆಟ್​ನಲ್ಲಿ ಗಳಿಸಿದ್ದಾರೆ. ರೋಹಿತ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸದ್ಯ 45 ಶತಕ ಮತ್ತು 98 ಅರ್ಧಶತಕಗಳನ್ನು ಗಳಿಸಿದ್ದಾರೆ.

100ನೇ ನಾಯಕತ್ವದ ಪಂದ್ಯ

ರೋಹಿತ್​ ಶರ್ಮ(Rohit Sharma) ಅವರು ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿಶೇಷ ಮೈಲಿಗಲ್ಲೊಂದನ್ನು ತಲುಪಿದ್ದಾರೆ. ನಾಯಕನಾಗಿ 100ನೇ ಪಂದ್ಯವನ್ನು ಮುನ್ನಡೆಸಿದ ದಾಖಲೆ ಬರೆದರು.

ರೋಹಿತ್​ ಇಂಗ್ಲೆಂಡ್​ ವಿರುದ್ಧ ಕಣಕಿಯುವ ಮೂಲಕ 100ನೇ ಪಂದ್ಯವನ್ನು ಮುನ್ನಡೆಸಿದ 7ನೇ ಭಾರತೀಯ ನಾಯಕ ಎನಿಸಿಕೊಳ್ಳಲಿದ್ದಾರೆ. ಅತಿ ಹೆಚ್ಚು ಪಂದ್ಯಗಳಲ್ಲಿ ಭಾರತ ತಂಡವನ್ನು ನಾಯಕನಾಗಿ ಮುನ್ನಡೆಸಿದ ದಾಖಲೆ ವಿಶ್ವಕಪ್​ ವಿಜೇತ ಮಹೇಂದ್ರ ಸಿಂಗ್​ ಧೋನಿ ಅವರ ಹೆಸರಿನಲ್ಲಿದೆ. ಧೋನಿ ಅವರು 332 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದಾರೆ. ಆ ಬಳಿಕದ ಸ್ಥಾನ ಮೊಹಮ್ಮದ್ ಅಜರುದ್ದೀನ್ (221), ವಿರಾಟ್ ಕೊಹ್ಲಿ (213), ಸೌರವ್ ಗಂಗೂಲಿ (196), ಕಪಿಲ್ ದೇವ್ (108) ಮತ್ತು ರಾಹುಲ್ ದ್ರಾವಿಡ್ (104) ಹೆಸರಿನಲ್ಲಿದೆ. ಒಟ್ಟಾರೆಯಾಗಿ, ಪುರುಷರ ಕ್ರಿಕೆಟ್‌ನಲ್ಲಿ 49 ಕ್ರಿಕೆಟಿಗರು ತಮ್ಮ ರಾಷ್ಟ್ರೀಯ ತಂಡಗಳನ್ನು 100 ಅಥವಾ ಅದಕ್ಕಿಂತ ಹೆಚ್ಚಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ.

ಉತ್ತಮ ಪ್ರದರ್ಶನ

ರೋಹಿತ್​ ಅವರ ನಾಯಕತ್ವದಲ್ಲಿ ಭಾರತ ತಂಡ ಪ್ರಸಕ್ತ ಸಾಗುತ್ತಿರುವ ವಿಶ್ವಕಪ್​ನಲ್ಲಿ ಉತ್ತಮ ಪ್ರದರ್ಶನ ತೋರುತ್ತಿದೆ. ಆಡಿದ ಎಲ್ಲ 5 ಪಂದ್ಯಗಳನ್ನು ಗೆದ್ದು ಅಜೇಯ ಓಟ ಕಾಯ್ದುಕೊಂಡಿದೆ. ಇಂಗ್ಲೆಂಡ್​ ವಿರುದ್ಧವೂ ಗೆದ್ದರೆ ತಂಡ ಅಧಿಕೃತವಾಗಿ ಸೆಮಿಫೈನಲ್​ ಪ್ರಬವೇಶ ಪಡೆಯಲಿದೆ. ಅಲ್ಲದೆ ಈ ಬಾರಿಯ ಟೂರ್ನಿಯಲ್ಲಿ ಸೆಮಿ ಪ್ರವೇಶಿಸಿದ ಮೊದಲ ತಂಡ ಎಂಬ ಹಿರಿಮೆಗೂ ಪಾತ್ರವಾಗಲಿದೆ.

Exit mobile version