Site icon Vistara News

Rohit Sharma: ಐಪಿಎಲ್ ಪ್ರಸಾರಕರ ವಿರುದ್ಧ ಕಿಡಿ ಕಾರಿದ ಹಿಟ್​ಮ್ಯಾನ್​ ರೋಹಿತ್​

Rohit Sharma

ಮುಂಬಯಿ: ಟೀಮ್​ ಇಂಡಿಯಾದ ನಾಯಕ ರೋಹಿತ್ ಶರ್ಮಾ (Rohit Sharma) ಅವರು ಐಪಿಎಲ್ ಬ್ರಾಡ್‌ಕಾಸ್ಟರ್(IPL Broadcaster) ಸ್ಟಾರ್ ಸ್ಪೋರ್ಟ್ಸ್(Star Sports) ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ ಹಿಂದೆ ರೋಹಿತ್​ ಅವರು ಧವಳ್ ಕುಲಕರ್ಣಿ ಅವರೊಂದಿಗೆ ಸಂಭಾಷಣೆ ನಡೆಸಿದ್ದರು. ಇದನ್ನು ರೆಕಾರ್ಡ್​ ಮಾಡುತ್ತಿರುವ ಕ್ಯಾಮೆರಾಮನ್​ಗೆ ಆಡಿಯೊ ಆಫ್​ ಮಾಡಿ ಎಂದು ಕೋರಿಕೊಂಡಿದ್ದರು. ಆದರೂ ಕೂಡ ಆಡಿಯೊ ರೆಕಾರ್ಡ್​ ಮಾಡಿ ಈ ತುಣುಕನ್ನು ಹರಿ ಬಿಟ್ಟು ಖಾಸಗಿತನವನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದ್ದಾರೆ.

ರೋಹಿತ್​ ಶರ್ಮ ಈ ಕುರಿತು ಟ್ವೀಟ್​ ಮಾಡಿದ್ದು, ‘ತನ್ನ ವಿನಂತಿಯ ಹೊರತಾಗಿಯೂ, ಸ್ಟಾರ್ ಸ್ಪೋರ್ಟ್ಸ್ ನಾನು ತಂಡದ ಸಹ ಆಟಗಾರರು ಮತ್ತು ಸಹೋದ್ಯೋಗಿಗಳೊಂದಿಗೆ ಆಡಿದ ವೈಯಕ್ತಿಕ ಮಾತುಕತೆಗಳ ಆಡಿಯೊ ಮತ್ತು ವಿಡಿಯೊ ತುಣುಕನ್ನು ಹಂಚಿಕೊಳ್ಳುವುದನ್ನು ಸ್ಟಾರ್ ಸ್ಪೋರ್ಟ್ಸ್ ಮುಂದುವರೆಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡ್​ ಹುಟ್ಟಿಸುವ ಸಲುವಾಗಿ ಪ್ರಸಾರಕರು ಈ ರೀತಿ ಕ್ರಿಕೆಟಿಗರ ಗೌಪ್ಯತೆಗೆ ಅಡ್ಡಿಪಡಿಸುವುದು ಸರಿಯಲ್ಲ. ಸ್ವಲ್ಪವಾದರೂ ಸಾಮಾನ್ಯ ಜ್ಞಾನ ಇರಬೇಕು” ಎಂದು ಟ್ವೀಟ್​ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಕ್ರಿಕೆಟಿಗರ ಜೀವನವು ಎಷ್ಟು ಗೊಂದಲವಾಗಿದೆ ಎಂದರೆ, ಈಗ ನಾವು ನಮ್ಮ ಸ್ನೇಹಿತರು ಮತ್ತು ಸಹೋದ್ಯೋಗಿಗಳೊಂದಿಗೆ, ತರಬೇತಿ ಅಥವಾ ಪಂದ್ಯದ ದಿನಗಳಲ್ಲಿ ಗೌಪ್ಯವಾಗಿ ಮಾತನಾಡು ಕೂಡ ಹೆದರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನಾನು ನಡೆಸುವ ಪ್ರತಿಯೊಂದು ಸಂಭಾಷಣೆಯನ್ನು ಕೂಡ ಕ್ಯಾಮೆರಾಗಳು ರೆಕಾರ್ಡ್ ಮಾಡುತ್ತಿವೆ. ಇದು ಒಳ್ಳೆಯ ವಾತಾವರಣವಲ್ಲ ಎಂದು ರೋಹಿತ್​ ಬೇಸರ ವ್ಯಕ್ತಪಡಿಸಿದ್ದಾರೆ.

ರೋಹಿತ್​ ಅವರು ಕೆಕೆಆರ್​ ತಂಡದ ಸಹಾಯಕ ಕೋಚ್ ಅಭಿಷೇಕ್ ನಾಯರ್ ಜತೆ ಮಾತನಾಡುತ್ತಿದ್ದಾಗಲೂ ಇದನ್ನು ರೆಕಾರ್ಡ್ ಮಾಡಿ ಪ್ರಸಾರ ಮಾಡಲಾಗಿತ್ತು. ಈಡನ್ ಗಾರ್ಡನ್ಸ್​​ನಲ್ಲಿ ನಡೆದಿದ್ದ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ನಡುವಿನ ಪಂದ್ಯಕ್ಕೂ ಮೊದಲು ರೋಹಿತ್ ಅವರು ನಾಯರ್ ಅವರೊಂದಿಗೆ ಸಂವಾದ ನಡೆಸಿದ್ದರು.

ಇದನ್ನೂ ಓದಿ IPL 2024 : ʻಅಶ್ವಿನಿ ದೊಡ್ಮನೆಯ ಅದೃಷ್ಟ ದೇವತೆ’: ತುಚ್ಛ ಪದ ಬಳಸಿದವರಿಗೆ ಭಾರೀ ತಿರುಗೇಟು!

ನಾಯಕತ್ವದ ಕರ್ತವ್ಯಗಳಿಂದ ಮುಕ್ತರಾದ ನಂತರ ರೋಹಿತ್ ಈ ಬಾರಿ ದೊಡ್ಡ ಸ್ಕೋರ್ ಮಾಡುತ್ತಾರೆ ಎಂದು ಅನೇಕರು ನಿರೀಕ್ಷಿಸಿದ್ದರು. ಆದರೆ ಈ ನಿರೀಕ್ಷೆಗಳಲ್ಲೆ ಹುಸಿಯಾಗಿತ್ತು. ರೋಹಿತ್​ ಈ ಬಾರಿ 1 ಶತಕ ಬಾರಿಸಿದ್ದು ಬಿಟ್ಟರೆ ಉಳಿದ ಬಹುತೇಕ ಪಂದ್ಯಗಳಲ್ಲಿಯೂ ಕಳಪೆ ಪ್ರದರ್ಶನ ತೋರಿದ್ದರು. ಐಪಿಎಲ್​​ ವೇದಿಕೆಯಲ್ಲಿ ಮಿಂಚಲು ಸಾಧ್ಯವಾಗದಿದ್ದರೂ, ಮುಂಬರುವ ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ ರೋಹಿತ್ ದೊಡ್ಡ ಮೊತ್ತವನ್ನು ಗಳಿಸಲು ಎದುರು ನೋಡುತ್ತಿದ್ದಾರೆ.

ಟೀಮ್​ ಇಂಡಿಯಾದ(team india) ಮೊದಲ ಬ್ಯಾಚ್​ ಮೇ 25ರಂದು ನ್ಯೂಯಾರ್ಕ್(New York)​ಗೆ ಪ್ರಯಾಣಿಸಲಿದೆ. ಈ ಬ್ಯಾಚ್​ನಲ್ಲಿ ನಾಯಕ ರೋಹಿತ್​ ಶರ್ಮ(Rohit Sharma), ಉಪನಾಯಕ ಹಾರ್ದಿಕ್​ ಪಾಂಡ್ಯ, ರಿಷಭ್​ ಪಂತ್​, ಜಸ್​ಪ್ರೀತ್​ ಬುಮ್ರಾ, ಸೂರ್ಯಕುಮಾರ್​ ಯಾದವ್​ ಸೇರಿ ಐಪಿಎಲ್​ ಪ್ಲೇ ಆಫ್​ನಿಂದ ಹೊರಬಿದ್ದ ತಂಡದ ಆಟಗಾರರು ಪ್ರಯಾಣಿಸಲಿದ್ದಾರೆ. ಉಳಿದ ಆಟಗಾರರು ಮೇ 26 ಐಪಿಎಲ್​ ಫೈನಲ್​ ಬಳಿಕ ವಿಮಾನ ಏರಲಿದ್ದಾರೆ. ಒಟ್ಟು 2 ಬ್ಯಾಚ್​ಗಳಾಗಿ ಭಾರತೀಯ ಆಟಗಾರರು ಪ್ರಯಾಣಿಸಲಿದ್ದಾರೆ.

ಟಿ20 ವಿಶ್ವಕಪ್​ನಲ್ಲಿ ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ.

Exit mobile version