ಹೈದರಾಬಾದ್: ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮ(Rohit Sharma) ಅವರು ವೇದಿಕೆಯೊಂದರಲ್ಲಿ ತೆಲುಗು ಮಾತನಾಡಿದ ವಿಡಿಯೊ ವೈರಲ್ ಆಗಿದೆ. ಅಭಿಮಾನಿಗಳಿಗೆ ರೋಹಿತ್, ಎಲಾ ಉನ್ನಾರು?(ಹೇಗಿದ್ದೀರಾ) ಎಂದು ಕೇಳಿದ್ದಾರೆ. ರೋಹಿತ್ ತೆಲುಗು ಮಾತನಾಡುತ್ತಿದ್ದಂತೆ ನೆರದಿದ್ದ ಅಭಿಮಾನಿಗಳು ಖಷಿಯಿಂದ ಜೋರಾಗಿ ಕಿರುಚಾಡಿದರು.
ಮುಂಬೈಕರ್ ಅಂತಲೇ ಫೇಮಸ್ ಆಗಿರುವ ರೋಹಿತ್ ಶರ್ಮ ಅವರಿಗೆ ಹೈದರಾಬಾದ್ ನಂಟು ಕೂಡ ಇದೆ. ಅಚ್ಚರಿ ಎಂದರೆ ಅವರ ಮಾತೃ ಭಾಷೆ ಕೂಡ ತೆಲುಗು. ಹೌದು, ರೋಹಿತ್ ಮೂಲತಃ ಆಂಧ್ರ ಪ್ರದೇಶದವರು. ಈ ವಿಚಾರವನ್ನು ಅವರು ಹಿಂದೊಮ್ಮೆ ಸಂದರ್ಶನದಲ್ಲಿಯೂ ಹೇಳಿದ್ದರು. ತಾಯಿಯ ಜತೆ ಮನೆಯಲ್ಲಿ ತೆಲುಗು ಭಾಷೆಯನ್ನೇ ಮಾತನಾಡುತ್ತೇನೆ ಎಂದಿದ್ದರು. ರೋಹಿತ್ ತಾಯಿ ವೈಜಾಗ್ನವರು.
ಹೈದರಾಬಾದ್ನಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ವೇಳೆ ರೋಹಿತ್ ನೆರದಿದ್ದ ಅಭಿಮಾನಿಗಳ ಬಳಿ ಎಲಾ ಉನ್ನಾರು?(ಹೇಗಿದ್ದೀರಾ), ಬನ್ನಿ ಉಪ್ಪಳ(ಹೈದರಾಬಾದ್) ಸ್ಟ್ರೇಡಿಯಂಗೆ ಹೋಗೋಣ ಎಂದು ತೆಲುಗಿನಲ್ಲೇ ಹೇಳಿದ್ದಾರೆ. ಸದ್ಯ ಈ ವಿಡಿಯೊವನ್ನು ಹೈದರಾಬಾದ್ನ ರೋಹಿತ್ ಅಭಿಮಾನಿಗಳು ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಶೇರ್ ಮಾಡುತ್ತಿದ್ದಾರೆ.
ಇದೇ ಕಾರ್ಯಕ್ರಮದಲ್ಲಿ ರೋಹಿತ್(rohit sharma retirement) ತಮ್ಮ ನಿವೃತ್ತಿಯ ವಿಚಾರದಲ್ಲಿ ಹರಿದಾಡುತ್ತಿದ್ದ ಎಲ್ಲ ಉಹಾಪೋಹಕ್ಕೆ ಸ್ಪಷ್ಟನೆ ನೀಡಿದ್ದರು. “ನಾನು ನಿವೃತ್ತಿಯ ಬಗ್ಗೆ ಈಗಲೇ ಏನೂ ಯೋಚನೆ ಮಾಡಿಲ್ಲ. ಜೀವನವು ನಮ್ಮನ್ನು ಎಲ್ಲಿಗೆ ಕರೆದೊಯ್ಯುತ್ತದೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ಪ್ರಸ್ತುತ ನಾನು ಚೆನ್ನಾಗಿ ಆಡುತ್ತಿದ್ದು, ಮುಂದಿನ ಕೆಲ ವರ್ಷಗಳ ಕಾಲ ಭಾರತ ಪರ ಟೆಸ್ಟ್ ಮತ್ತು ಏಕದಿನ ಆಡುವ ಯೋಜನೆಯಲ್ಲಿದ್ದೇನೆ ಎಂದು ಹೇಳುವ ತಮ್ಮ ನಿವೃತ್ತಿ ಕುರಿತ ಊಹಾಪೋಹಕ್ಕೆ ತೆರೆ ಎಳೆದಿದ್ದರು.
ಇದನ್ನೂ ಓದಿ Rohit Sharma: ಕ್ರಿಕೆಟ್ ನಿವೃತ್ತಿ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ರೋಹಿತ್ ಶರ್ಮ
ಸದ್ಯ ರೋಹಿತ್ ವಿಶ್ರಾಂತಿಯಲ್ಲಿದ್ದು ಶ್ರೀಲಂಕಾ ವಿರುದ್ಧದ ಸರಣಿಗೂ ಗೈರಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ರೋಹಿತ್ ನಾಯಕತ್ವದಲ್ಲಿ, ಜೂನ್ 29ರಂದು ಬಾರ್ಬಡೋಸ್‌ನಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್‌ಗಳ ಜಯದೊಂದಿಗೆ 11 ವರ್ಷಗಳ ಐಸಿಸಿ ಪ್ರಶಸ್ತಿ ಬರವನ್ನು ಕೊನೆಗೊಳಿಸಿತ್ತು. 2007 ರ ಉದ್ಘಾಟನಾ ಆವೃತ್ತಿಯ ನಂತರ ಇದು ಭಾರತಕ್ಕೆ ಒಲಿದ ಎರಡನೇ ಟಿ20 ವಿಶ್ವಕಪ್ ಪ್ರಶಸ್ತಿಯಾಗಿತ್ತು. ಮೆನ್ ಇನ್ ಬ್ಲೂ ಈ ಹಿಂದೆ ರೋಹಿತ್ ಅವರ ನಾಯಕತ್ವದಲ್ಲಿ ಎರಡು ಫೈನಲ್‌ಗಳನ್ನು ಆಡಿತ್ತು. ಏಕದಿನ ವಿಶ್ವಕಪ್ ಮತ್ತು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್. ಇಲ್ಲಿ ರನ್ನರ್-ಅಪ್ ಸ್ಥಾನ ಗಳಿಸಿತ್ತು.
ಏಕದಿನ ಮತ್ತು ಟೆಸ್ಟ್ ಮಾದರಿಗಳಲ್ಲಿ ರೋಹಿತ್ ಶರ್ಮ(Rohit Sharma) ಭಾರತ ತಂಡದ ನಾಯಕರಾಗಿ ಮುಂದುವರಿಯಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ(BCCI secretary Jay Shah) ಈಗಾಗಲೇ ಹೇಳಿಕೆ ನೀಡಿದ್ದಾರೆ. ಜತೆಗೆ ಮುಂದಿನ ವರ್ಷ ಪಾಕಿಸ್ತಾನ ಆತಿಥ್ಯದಲ್ಲಿ ನಡೆಯುವ ಚಾಂಪಿಯನ್ಸ್ ಟ್ರೋಫಿ(Champions Trophy) ಟೂರ್ನಿಯಲ್ಲಿಯೂ ರೋಹಿತ್ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.