ಇಂದೋರ್: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ(Rohit sharma) ನ್ಯೂಜಿಲ್ಯಾಂಡ್(IND VS NZ) ವಿರುದ್ಧ ಶತಕ ಬಾರಿಸುವ ಮೂಲಕ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ.
ಇಂದೋರ್ನಲ್ಲಿ ನಡೆದ ಕಿವೀಸ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ 101 ರನ್ ಗಳಿಸಿ ಶತಕ ಬಾರಿಸಿದರು. ಇದೇ ವೇಳೆ ಅವರು ತಮ್ಮ ವೃತ್ತಿ ಜೀವನದ 30ನೇ ಏಕದಿನ ಶತಕ ಪೂರೈಸಿದರು. ಈ ಮೂಲಕ ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ದಾಖಲೆಯನ್ನು ಸರಿಗಟ್ಟಿದರು. ಪಾಂಟಿಂಗ್ ಕೂಡ 30 ಏಕದಿನ ಶತಕ ಬಾರಿಸಿದ್ದಾರೆ. ಆದರೆ ಕಡಿಮೆ ಇನಿಂಗ್ಸ್ನಲ್ಲಿ ಈ ಸಾಧನೆ ಮಾಡಿದ ಕಾರಣ ಅತಿ ಹೆಚ್ಚು ಶತಕ ಬಾರಿಸಿದವರ ಪಟ್ಟಿಯಲ್ಲಿ ರೋಹಿತ್ ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.
ಅತಿ ಹೆಚ್ಚು ಶತಕ ಸಿಡಿಸಿದ ಸಾಧಕರ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್(49), ವಿರಾಟ್ ಕೊಹ್ಲಿ(46*) ಮೊದಲೆರಡು ಸ್ಥಾನದಲ್ಲಿದ್ದಾರೆ. ಸದ್ಯ ಈ ಪಟ್ಟಿಯಲ್ಲಿ ಮೊದಲ ಮೂರು ಸ್ಥಾನದಲ್ಲಿ ಭಾರತೀಯ ಆಟಗಾರರೆ ಗುರುತಿಸಿಕೊಂಡಿದ್ದಾರೆ. ಪಾಂಟಿಂಗ್ 4ನೇ ಸ್ಥಾನದಲ್ಲಿದ್ದಾರೆ.
ಇದನ್ನೂ ಓದಿ | IND VS NZ: ಶಿಖರ್ ಧವನ್ ದಾಖಲೆ ಮುರಿದ ಶುಭಮನ್ ಗಿಲ್