ICC World Cup 2023 : ಪತ್ರಿಕಾಗೋಷ್ಠಿಯಲ್ಲಿ ಸಿಟ್ಟಿಗೆದ್ದ ರೋಹಿತ್ ಶರ್ಮಾ Vistara News

ಕ್ರಿಕೆಟ್

ICC World Cup 2023 : ಪತ್ರಿಕಾಗೋಷ್ಠಿಯಲ್ಲಿ ಸಿಟ್ಟಿಗೆದ್ದ ರೋಹಿತ್ ಶರ್ಮಾ

ವಿಶ್ವ ಕಪ್​ ಫೈನಲ್ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿ ವೇಳೆ (ICC World Cup 2023) ಪತ್ರಕರ್ತರೊಬ್ಬರ ಫೋನ್​ ರಿಂಗ್ ಆಗಿದ್ದರಿಂದ ಸಿಟ್ಟಿಗೆದ್ದ ರೋಹಿತ್ ಶರ್ಮಾ ಸ್ವಿಚ್ ಆಫ್ ಮಾಡುವಂತೆ ಅಸಮಧಾನದಿಂದಲೇ ಹೇಳಿದರು.

VISTARANEWS.COM


on

Rohit Sharma 1
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಹಮದಾಬಾದ್​​: ನವೆಂಬರ್ 19 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್ 2023ರ (ICC World Cup 2023) ಫೈನಲ್​ನಲ್ಲಿ ಭಾರತವು ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅಹ್ಮದಾಬಾದ್​ನಲ್ಲಿ ಶನಿವಾರ (ನವೆಂಬರ್​ 18ರಂದು) ನಡೆದ ಪಂದ್ಯದ ಪತ್ರಿಕಾಗೋಷ್ಠಿಯನ್ನು ಉದ್ದೇಶಿದ ಮಾತನಾಡಿದರು. ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸುವಾಗ ರೆಕಾರ್ಡಿಂಗ್​ಗಾಗಿ ಅವರ ಮುಂದೆ ಇಟ್ಟಿದ್ದ ಫೋನ್ ರಿಂಗ್ ಆಯಿತು. ಇದರಿಂದ ರೋಹಿತ್ ಕೋಪಗೊಂಡು ಸ್ವಿಚ್ ಆಫ್​ ಮಾಡುವಂತೆ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ರೋಹಿತ್ ತಮ್ಮ ತಂಡದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಒತ್ತಡದ ಸಂದರ್ಭಗಳನ್ನು ನಿಭಾಯಿಸುವ ಸಾಮರ್ಥ್ಯವನ್ನು ದೃಢಪಡಿಸಿದರು. ತಂಡದಲ್ಲಿ ಸಾಕಷ್ಟು ಅನುಭವಿಗಳಿದ್ದಾರೆ ಎಂದು ಹೇಳಿದರು. ತಮ್ಮ ಮನಸ್ಥಿತಿ ಮತ್ತು ಬ್ಯಾಟಿಂಗ್ ವಿಧಾನದಲ್ಲಿನ ಬದಲಾವಣೆಯ ಬಗ್ಗೆಯೂ ಮಾತನಾಡಿದರು. “ನಾವು ಅನೇಕ ಪಂದ್ಯಗಳನ್ನು ಆಡಿದ್ದೇವೆ. ಈ ಹಿಂದೆ ವಿಶ್ವಕಪ್ ಫೈನಲ್​ನಲ್ಲಿ ಆಡುವುದಕ್ಕಿಂತ ಪ್ರಸ್ತುತ ಸ್ವರೂಪದ ಆಟಗಾರರು ಹೆಚ್ಚು ಮುಖ್ಯವಾಗಿದೆ.. ನಾವು 2011 ರಿಂದ ವಿಶ್ವಕಪ್ ಫೈನಲ್​​ನಲ್ಲಿ ಭಾಗವಾಗಿದ್ದ ಇಬ್ಬರು ಆಟಗಾರರನ್ನು ಹೊಂದಿದ್ದೇವೆ. ಒತ್ತಡವನ್ನು ಹೇಗೆ ನಿಭಾಯಿಸಬೇಕೆಂದು ನಮಗೆ ತಿಳಿದಿದೆ. ನಾವು ಇಲ್ಲಿಯವರೆಗೆ ಆಡಿದ ರೀತಿಯನ್ನು ಮುಂದುವರಿಸಲು ಬಯಸುತ್ತೇವೆ ಎಂದು ಅವರು ಹೇಳಿದರು.

“ವಿಶ್ವಕಪ್ ಆರಂಭಕ್ಕೂ ಮುನ್ನ. ನಾನು ಹೊಡಿಬಡಿ ಕ್ರಿಕೆಟ್ ಆಡುವ ಯೋಜನೆಯನ್ನು ಹೊಂದಿದ್ದೆ. ಅದು ಕೆಲಸ ಮಾಡುತ್ತದೆಯೇ ಅಥವಾ ಇಲ್ಲವೇ ಎಂದು ನನಗೆ ತಿಳಿದಿರಲಿಲ್ಲ. ಸ್ವಲ್ಪ ಸ್ವಾತಂತ್ರ್ಯದೊಂದಿಗೆ ನಾನು ನನ್ನನ್ನು ವ್ಯಕ್ತಪಡಿಸಲು ಬಯಸಿದೆ. ಆದರೆ ಇಂಗ್ಲೆಂಡ್ ಪಂದ್ಯದ ಸಮಯದಲ್ಲಿಯೂ ನಾನು ನನ್ನ ವಿಧಾನವನ್ನು ಬದಲಾಯಿಸಿದೆ. ಹಿರಿಯ ಆಟಗಾರರು ಅದನ್ನೇ ಮಾಡುತ್ತಾರೆ. ನಾನು ನನ್ನ ತಂತ್ರಗಳನ್ನು ಬದಲಾಯಿಸಿದೆ. ಸುಲಭವಾಗಿ ಮತ್ತು ಶಾಂತವಾಗಿಡುವುದು ಉತ್ತಮ ಎಂದು ನಂಬುತ್ತೇನೆ. ಅದಕ್ಕಾಗಿ ನಾವು ಕಷ್ಟಪಟ್ಟು ಕೆಲಸ ಮಾಡಿದ್ದೇವೆ. ನಾನು ಉತ್ಸುಕನಾಗಲು ಮತ್ತು ಆಟದ ಮೇಲೆ ಹೆಚ್ಚು ಒತ್ತಡ ಹೇರಲು ಬಯಸುವುದಿಲ್ಲ. ಡ್ರೆಸಿಂಗ್​ ರೂಮ್​ನ ಆಟಗಾರರು ಇದೇ ತಂತ್ರವನ್ನು ಹೊಂದಿದ್ದೆವು, “ಎಂದು ರೋಹಿತ್ ಹೇಳಿಕೊಂಡಿದ್ದಾರೆ.

ಶಮಿ ಆಯ್ಕೆ ಮಾಡದಿರುವುದು ಕಷ್ಟದ ನಿರ್ಧಾರ

ಆಟಗಾರರ ವೃತ್ತಿಜೀವನದಲ್ಲಿ ಈ ಕ್ಷಣದ ಅಗಾಧತೆಯನ್ನು ರೋಹಿತ್ ಒಪ್ಪಿಕೊಂಡರು, ಅಂತಿಮ ಪ್ರಯತ್ನ ಮಾಡುವ ತಂಡದ ಅಗತ್ಯವನ್ನು ಒತ್ತಿ ಹೇಳಿದರು. ಈ ಸಂದರ್ಭದ ಅವರು ಈ ವಿಶ್ವಕಪ್​ನಲ್ಲಿ ಅಸಾಧಾರಣ ಫಾರ್ಮ್ ಪ್ರದರ್ಶಿಸಿದ ಹೊರತಾಗಿಯೂ ಪಂದ್ಯಾವಳಿಯ ಆರಂಭಿಕ ಪಂದ್ಯಗಳನ್ನು ತಪ್ಪಿಸಿಕೊಂಡ ಮೊಹಮ್ಮದ್ ಶಮಿಯ ಕುರಿತು ಮಾತನಾಡಿದರು. ಅವರನ್ನು ತಂಡದಿಂದ ಹೊರಕ್ಕೆ ಇಟ್ಟಿರುವುದು ಕಷ್ಟದ ನಿರ್ಧಾರವಾಗಿತ್ತು ಎಂದು ಹೇಳಿದರು.

ಇದನ್ನೂ ಓದಿ : ICC World Cup 2023 : ಭಾರತದ ಅಭಿಮಾನಿಗಳ ಬಾಯಿ ಮುಚ್ಚಿಸ್ತೇವೆ; ಕಮಿನ್ಸ್​​ ಮಾತಿನ ಅರ್ಥವೇನು?

2003 ರ ಫೈನಲ್ ಪಂದ್ಯದಲ್ಲಿ ಅನುಭವಿಸಿದ ಆಘಾತಕಾರಿ ಸೋಲಿಗೆ ಪ್ರತೀಕಾರ ತೀರಿಸಿಕೊಳ್ಳಲು ಭಾರತವು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ ಫೈನಲ್​ನಲ್ಲಿ ಮತ್ತೆ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ರಿಕಿ ಪಾಂಟಿಂಗ್ ನೇತೃತ್ವದ ಆಸ್ಟ್ರೇಲಿಯಾ ತಂಡವು ಏಕದಿನ ವಿಶ್ವಕಪ್ ಫೈನಲ್​ನಲ್ಲಿ ಭಾರತವನ್ನು 125 ರನ್​ಗಳಿಂದ ಸೋಲಿಸಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

ಚೆನ್ನೈ ತಂಡದ ಕಟ್ಟರ್‌ ಅಭಿಮಾನಿಯನ್ನು ಖರೀದಿ ಮಾಡಿದ ಆರ್​ಸಿಬಿ ಫ್ರಾಂಚೈಸಿ

ಇಂಗ್ಲೆಂಡ್ ಆಟಗಾರ್ತಿ ಕೇಟ್ ಕ್ರಾಸ್ (Kate Cross) ಅವರನ್ನು ಆರ್​ಸಿಬಿ ತಂಡ ಖರೀದಿ ಮಾಡಿದ್ದು ಆರ್​ಸಿಬಿ ಅಭಿಮಾನಿಗಳಿಗೆ ಬೇಸರ ತಂದಿದೆ.

VISTARANEWS.COM


on

Kate Cross reveals ‘soft spot for RCB’ after bagging deal
Koo

ಬೆಂಗಳೂರು: ಮುಂದಿನ ವರ್ಷ ನಡೆಯುವ ಮಹಿಳಾ ಪ್ರೀಮಿಯರ್ ಲೀಗ್(Women’s Premier League) 2024ರ ಆಟಗಾರ್ತಿಯರ ಹರಾಜು(WPL Auction 2024) ಪ್ರಕ್ರಿಯೆ ಈಗಾಗಲೇ ಮುಕ್ತಾಯ ಕಂಡಿದೆ. ಶನಿವಾರ (ಡಿ.9) ಮುಂಬೈಯಲ್ಲಿ ಹರಾಜು ಪ್ರಕ್ರಿಯೆ ನಡೆದಿತ್ತು. ಎಲ್ಲ 5 ಫ್ರಾಂಚೈಸಿಗಳು ಕೂಡ ತಮಗೆ ಬೇಕಿದ್ದ ಆಟಗಾರ್ತಿಯನ್ನು ಹರಾಜಿನಲ್ಲಿ ಕೊಂಡುಕೊಂಡಿದೆ. ಆದರೆ ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಕಟ್ಟರ್‌ ಅಭಿಮಾನಿಯಾಗಿರುವ(CSK fan Kate Cross) ಇಂಗ್ಲೆಂಡ್ ಆಟಗಾರ್ತಿ ಕೇಟ್ ಕ್ರಾಸ್ (Kate Cross) ಅವರನ್ನು ಆರ್​ಸಿಬಿ ತಂಡ ಖರೀದಿ ಮಾಡಿದ್ದು ಆರ್​ಸಿಬಿ ಅಭಿಮಾನಿಗಳಿಗೆ ಬೇಸರ ತಂದಿದೆ.

ಮಿನಿ ಹರಾಜಿನಲ್ಲಿ ಇಂಗ್ಲೆಂಡ್​ ತಂಡದ ಆಲ್​ರೌಂಡರ್​ ಆಗಿರುವ ಕೇಟ್​ ಕ್ರಾಸ್​ ಅವರನ್ನು ಆರ್​ಸಿಬಿ 30 ಲಕ್ಷ ರೂ. ಖರೀದಿ ಮಾಡಿದೆ. ಇದರ ಬೆನ್ನಲ್ಲೇ ಅವರು ತಮ್ಮ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಆರ್​ಸಿಬಿ ಸೇರಿದಕ್ಕೆ ಸಂತಸಗೊಂಡಿದ್ದೇನೆ. ಆದರೂ ನಾನು ಚೆನ್ನೈ ಸೂಪರ್ ಕಿಂಗ್ಸ್​ನ ಅಪ್ಪಟ್ಟ ಅಭಿಮಾನಿಯಾಗಿಯೇ ಮುಂದುವರಿಯುತ್ತೇನೆ ಎಂದು ಬರೆದಿದ್ದಾರೆ. ಇದು ಆರ್​ಸಿಬಿ ಅಭಿಮಾನಿಗಳಿಗೆ ಕೆರಳಿಸುವಂತೆ ಮಾಡಿದೆ.

​ಐಪಿಎಲ್​ನ ಬದ್ಧ ಎದುರಾಳಿ ತಂಡಗಳೆಂದರೆ ಅದು ಚೆನ್ನೈ ಸೂಪರ್​ ಕಿಂಗ್ಸ್​ ಮತ್ತು ರಾಯಲ್​ ಚಾಲೆಂಜರ್ಸ್ ಬೆಂಗಳೂರು. ಇತ್ತಂಡಗಳ ಪಂದ್ಯ ಬಂತೆಂದರೆ ಸಾಕು ಇಂಡೋ-ಪಾಕ್​ ಪಂದ್ಯದಂತೆ ಅಭಿಮಾನಿಗಳು ಈ ಪಂದ್ಯವನ್ನು ನೋಡಲು ಕಾತರಗೊಳ್ಳುತ್ತಾರೆ. ಅಲ್ಲದೆ ಪಂದ್ಯದ ಬಳಿಕ ಅಭಿಮಾನಿಗಳು ಹಲವು ಬಾರಿ ಹೊಡೆದಾಟ ಕೂಟ ನಡೆಸಿದ ಹಲವು ನಿದರ್ಶನಗಳಿಗೆ. ಹೀಗಿರುವಾಗ ಆರ್​ಸಿಬಿ ಸೇರಿಯೂ ಚೆನ್ನೈ ತಂಡದ ಅಭಿಮಾನಿ ಎಂದು ಕೇಟ್ ಕ್ರಾಸ್ ಹೇಳಿರುವುದು ಆರ್​ಸಿಬಿ ಫ್ಯಾನ್ಸ್​ ಪಿತ್ತ ನೆತ್ತಿಗೇರುವಂತೆ ಮಾಡಿದೆ.

ಬೆಂಚ್​​ ಕಾಯಿಸಿ ಎಂದ ನೆಟ್ಟಿಗರು

ಚೆನ್ನೈ ಅಭಿಮಾನಿಯಾಗಿರುವ ಕೇಟ್ ಕ್ರಾಸ್ ಅವರನ್ನು ಆಡುವ ಬಳಗದಲ್ಲಿ ಅವಕಾಶ ನೀಡದೆ ಅವರನ್ನು ಟೂರ್ನಿಯುದ್ದಕ್ಕೂ ಬೆಂಚ್​ ಕಾಯಿಸಿ ಎಂದು ನೆಟ್ಟಿಗರೊಬ್ಬರು ಆರ್​ಸಿಬಿ ಫ್ರಾಂಚೈಸಿಗೆ ಸಲಹೆ ನೀಡಿದ್ದಾರೆ. ಇನ್ನು ಕೆಲ ಅಭಿಮಾನಿಗಳು ಆರ್​ಸಿಬಿ ಫ್ರಾಂಚೈಸಿ ಮೇಲೆಯ ಕಿಡಿಕಾರಿದ್ದಾರೆ. ಈ ಹಿಂದೆಯೇ ಕೇಟ್ ಕ್ರಾಸ್ ಅವರು ಚೆನ್ನೈ ಸೂಪರ್​ ಕಿಂಗ್ಸ್​ ಅಭಿಮಾನಿ ಎನ್ನುವುದನ್ನು ತಿಳಿದಿದ್ದರೂ ಕೂಡ ಅವರನ್ನು ಖರೀದಿ ಮಾಡಿದ್ದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಟ್ ಕ್ರಾಸ್ ಕಳದ ಕೆಲ ವರ್ಷಗಳಿಂದ ಐಪಿಎಲ್​ ಟೂರ್ನಿ ಆರಂಭವಾಗುವ ಸಂದರ್ಭದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ತಂಡ ಜರ್ಸಿ ಧರಿಸಿ ತಂಡಕ್ಕೆ ಬೆಂಬಲ ಸೂಚಿಸುತ್ತಲೇ ಬಂದಿದ್ದರು. ಇದರ ಫೋಟೊಗಳು ಕೂಡ ವೈರಲ್​ ಆಗಿತ್ತು.

ಇದನ್ನೂ ಓದಿ RCB WPL 2024: ಬಲಿಷ್ಠ ತಂಡ ಕಟ್ಟಿದ ಮಹಿಳಾ ಆರ್​ಸಿಬಿ; ಆಟಗಾರ್ತಿಯರ ಫುಲ್​ ಲೀಸ್ಟ್​ ಇಲ್ಲಿದೆ 

ಆರ್​ಸಿಬಿ ತಂಡ

ಆಶಾ ಶೋಬನಾ, ದಿಶಾ ಕಸತ್, ಎಲ್ಲಿಸ್ ಪೆರಿ, ಹೀದರ್ ನೈಟ್, ಇಂದ್ರಾಣಿ ರಾಯ್, ಕನಿಕಾ ಅಹುಜಾ, ರೇಣುಕಾ ಸಿಂಗ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಸ್ಮೃತಿ ಮಂಧಾನ, ಸೋಫಿ ಡಿವೈನ್, ಜಾರ್ಜಿಯಾ ವೇರ್ಹ್ಯಾಮ್, ಕೇಟ್ ಕ್ರಾಸ್, ಏಕ್ತಾ ಬಿಶ್ತ್, ಶುಭಾ ಸತೀಶ್, ಎಸ್ ಮೇಘನಾ, ಸಿಮ್ರಾನ್ ಬಹದ್ದೂರ್, ಸೋಫಿ ಮೊಲಿನೆಕ್ಸ್.

Continue Reading

ಕ್ರಿಕೆಟ್

IPL 2024: ಕ್ರಿಕೆಟ್​ ಪ್ರಿಯರಿಗೆ ಗುಡ್​ ನ್ಯೂಸ್​; ಐಪಿಎಲ್​ ಆರಂಭಕ್ಕೆ ಡೇಟ್​ ಫಿಕ್ಸ್!​

ಶನಿವಾರ ಮುಂಬೈಯಲ್ಲಿ ನಡೆದಿದ್ದ ಮಹಿಳಾ ಪ್ರೀಮಿಯರ್​ ಲೀಗ್​ನ ಮಿನಿ ಹರಾಜು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜಯ್​ ಶಾ ಅವರು ಪುರುಷರ 17ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭದ ಬಗ್ಗೆ ಮಾಹಿತಿ ನೀಡಿದ್ದಾರೆ.​

VISTARANEWS.COM


on

ipl fans
Koo

ಮುಂಬಯಿ: ಬಹುನಿರೀಕ್ಷಿತ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ 2024 (IPL 2024)ರ ಆಟಗಾರರ ಮಿನಿ ಹರಾಜು(IPL Auction 2024) ಡಿಸೆಂಬರ್ 19 ರಂದು ದುಬೈನಲ್ಲಿ ನಡೆಯಲಿದೆ. ಆದರೆ ಟೂರ್ನಿ ಯಾವಾಗ ಆರಂಭವಾಗಲಿದೆ ಎನ್ನುವುದು ಕ್ರಿಕೆಟ್​ ಅಭಿಮಾನಗಳ ಚಿಂತೆಯಾಗಿತ್ತು. ಇದಕ್ಕೆ ಈ ಉತ್ತರ ಸಿಕ್ಕಿದೆ. ಟೂರ್ನಿ ಆರಂಭದ ಸುಳಿವನ್ನು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ(jay shah) ಬಿಟ್ಟುಕೊಟ್ಟಿದ್ದಾರೆ.

ಹೌದು, ಶನಿವಾರ ಮುಂಬೈಯಲ್ಲಿ ನಡೆದಿದ್ದ ಮಹಿಳಾ ಪ್ರೀಮಿಯರ್​ ಲೀಗ್​ನ ಮಿನಿ ಹರಾಜು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜಯ್​ ಶಾ ಅವರು ಪುರುಷರ 17ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭದ ಬಗ್ಗೆ ಮಾಹಿತಿ ನೀಡಿದ್ದಾರೆ.​

ಪ್ರತಿ ವರ್ಷ ಐಪಿಎಲ್​ ಆರಂಭವಾಗುವುದು ಮಾರ್ಚ್​ ಅಂತಿಮ ವಾರದಲ್ಲಿ. ಮೇ ತನಕ ಪಂದ್ಯಾವಳಿಗಳು ಸಾಗುತ್ತದೆ. ಆದರೆ ಈ ಬಾರಿ 2024 ಲೋಕಸಭಾ ಚುನಾವಣೆ ಇದೇ ಸಮಯದಲ್ಲಿ ಇರುವುದರಿಂದ ಟೂರ್ನಿಯನ್ನು ಭಾರತದಲ್ಲಿ ನಡೆಸುವುದು ಕಷ್ಟ. ಹೀಗಾಗಿ ಐಪಿಎಲ್​ ಅಭಿಮಾನಿಗಳಿಗೆ ಟೂರ್ನಿ ಆರಂಭದ ಬಗ್ಗೆ ಹಲವು ಗೊಂದಲ ಕಾಡಿತ್ತು. ಇದೀಗ ಜಯ್​ ಶಾ ಅವರು ಮಾರ್ಚ್ ಕೊನೆಯ ವಾರದಲ್ಲಿ ಐಪಿಎಲ್ ಪ್ರಾರಂಭವಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಆದರೆ ದಿನಾಂಕ ಮತ್ತು ಈ ಟೂರ್ನಿಯನ್ನು ಎಲ್ಲಿ ನಡೆಸಲಾಗುವುದು ಎನ್ನುವ ಅಧಿಕೃತ ಮಾಹಿತಿಯನ್ನು ನೀಡಿಲ್ಲ.

ಈ ಹಿಂದೆಯೂ ವಿದೇಶದಲ್ಲಿ ನಡೆದಿತ್ತು ಟೂರ್ನಿ

2009ರಲ್ಲಿ ಮಹಾಚುನಾವಣೆಯ ಕಾರಣದಿಂದ ಇಡೀ ಕೂಟವನ್ನು ದಕ್ಷಿಣ ಆಫ್ರಿಕಾದಲ್ಲಿ ನಡೆಸಲಾಗಿತ್ತು. ಹಾಗೆಯೇ 2014ರಲ್ಲಿಯೂ ಒಂದು ಹಂತದ ಪಂದ್ಯಗಳು ಯುಎಇಯಲ್ಲಿ ನಡೆದಿದ್ದವು. ಆದರೆ ಈ ಬಾರಿ ಬಿಸಿಸಿಐ ಸಂಪೂರ್ಣವಾಗಿ ಟೂರ್ನಿಯನ್ನು ವಿದೇಶದಲ್ಲಿ ನಡೆಸುವುದು ಕಷ್ಟ ಸಾಧ್ಯ. ಚುನಾವಣೆಯ ದಿನಾಂಕ ಘೋಷಣೆಯಾದ ಬಳಿಕ ವೇಳಾಪಟ್ಟಿಯನ್ನು ಸಿದ್ಧಪಡಿಸಿ ಒಂದು ಹಂತದ ಪಂದ್ಯಗಳನ್ನು ವಿದೇಶದಲ್ಲಿ ನಡೆಸುವ ಸಾಧ್ಯತೆ ಇದೆ. ಆದರೆ ಈ ತಾಣ ಯಾವುದೆಂಬುದು ಕುತೂಹಲ. ಸದ್ಯದ ಪ್ರಕಾರ ಬಿಸಿಸಿಐ ಯುಎಇಯಲ್ಲಿ ನಡೆಸುವ ಸಾಧ್ಯತೆ ಅಧಿಕ. ಏಕೆಂದರೆ ಪ್ರಯಾಣದ ದೃಷ್ಟಿಯಲ್ಲಿ ಹತ್ತಿರವಿರುವುದರಿಂದ ಯುಎಇಯನ್ನು ಮೊದಲ ಆಧ್ಯತೆಯಾಗಿ ಆಯ್ಕೆ ಮಾಡಿಕೊಳ್ಳಬಹುದು.

ಇದನ್ನೂ ಓದಿ IPL 2024 : ಹರಾಜಿನಲ್ಲಿ ಬೇಡಿಕೆ ಪಡೆಯಲಿರುವ ಆರ್​ಸಿಬಿಯ ಮೂವರು ಮಾಜಿ ಆಟಗಾರರು ಇವರು

1166 ಆಟಗಾರರು ಹೆಸರು ನೋಂದಣಿ

ಈ ಬಾರಿಯ ಐಪಿಎಲ್​ ಮಿನಿ ಹರಾಜಿಗೆ 1,166 ಆಟಗಾರರು ತಮ್ಮ ಹೆಸರನ್ನು ನೋಂದಾಯಿಸಿದ್ದಾರೆ ಎಂದು ವರದಿಗಳು ಸೂಚಿಸಿವೆ. ಈ ಪಟ್ಟಿಯಲ್ಲಿ 212 ಅಂತಾರಾಷ್ಟ್ರೀಯ ಪಂದ್ಯವಾಡಿದವರು , 909 ಅಂತಾರಾಷ್ಟ್ರೀಯ ಕ್ರಿಕೆಟ್ ಆಡದವರು ಮತ್ತು 45 ಅಸೋಸಿಯೇಟ್ ಆಟಗಾರರು ಇದ್ದಾರೆ. ಈ ಪೈಕಿ ವಿದೇಶಿ ಆಟಗಾರರ ಸಂಖ್ಯೆ 336 ಎಂದು ತಿಳಿದುಬಂದಿದೆ.

ಫ್ರಾಂಚೈಸಿಗಳಿಗೆ ಸೂಚನೆ

ಹರಾಜು ರಿಜಿಸ್ಟರ್​ನಲ್ಲಿ ಪಟ್ಟಿ ಮಾಡದ ಹೆಚ್ಚುವರಿ ಆಟಗಾರರ ವಿನಂತಿಗಳೊಂದಿಗೆ ಪ್ರತಿಕ್ರಿಯಿಸುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಫ್ರಾಂಚೈಸಿಗಳನ್ನು ವಿನಂತಿಸಿದೆ. ವಿನಂತಿಸಿದ ಆಟಗಾರರು ಅರ್ಹರಾಗಿದ್ದರೆ ಮತ್ತು ಆಸಕ್ತಿ ಹೊಂದಿದ್ದರೆ ಸ್ವಯಂಚಾಲಿತವಾಗಿ ಹರಾಜಿನಲ್ಲಿ ಸೇರಿಕೊಳ್ಳಲಿದ್ದಾರೆ. ಹರಾಜಿನಲ್ಲಿ ಸೇರಿಸಲು ಬಯಸುವ ಆಟಗಾರರ ಪಟ್ಟಿಯೊಂದಿಗೆ ಪ್ರತಿಕ್ರಿಯಿಸಲು ಫ್ರಾಂಚೈಸಿಗಳಿಗೆ ಸೂಚನೆ ನೀಡಲಾಗಿದೆ. ಕೇವಲ 77 ಸ್ಲಾಟ್​ಗಳನ್ನು ಮಾತ್ರ ಭರ್ತಿ ಮಾಡಬೇಕಾಗಿದೆ, ಅದರಲ್ಲಿ ಗರಿಷ್ಠ 30 ವಿದೇಶಿ ಆಟಗಾರರು ಇರಬಹುದು. ಐಪಿಎಲ್ ನಿಯಮದ ಪ್ರಕಾರ ಒಂದು ತಂಡದಲ್ಲಿ ಕನಿಷ್ಠ 18 ಹಾಗೂ ಗರಿಷ್ಠ 25 ಆಟಗಾರರಿಗೆ ಮಾತ್ರ ಅವಕಾಶ ಇರಲಿದೆ.

Continue Reading

ಕ್ರಿಕೆಟ್

Rohit Sharma: ಜಯ್​ ಶಾ ಕೈಯಲ್ಲಿದೆ ರೋಹಿತ್​ ಟಿ20 ವಿಶ್ವಕಪ್ ಭವಿಷ್ಯ!

ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮ ಅವರ ಸ್ಥಾನದ ಬಗ್ಗೆ ಈಗಲೇ ಭರವಸೆ ನೀಡಲಾಗುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಖಚಿತಪಡಿಸಿದ್ದಾರೆ.

VISTARANEWS.COM


on

rohit sharma jay shah
Koo

ಮುಂಬಯಿ: ಭಾರತ ಕ್ರಿಕೆಟ್​ ತಂಡ ಏಕದಿನ ವಿಶ್ವಕಪ್​ ಫೈನಲ್​ನಲ್ಲಿ ಸೋಲು ಕಂಡ ಬಳಿಕ ಎಲ್ಲಡೆ ಚರ್ಚೆಯಾಗುತ್ತಿರುವ ವಿಚಾರವೆಂದರೆ, ವಿರಾಟ್​ ಕೊಹ್ಲಿ(virat kohli) ಮತ್ತು ರೋಹಿತ್​ ಶರ್ಮ(Rohit Sharma) ಅವರು 2024ರ ಟಿ20 ವಿಶ್ವಕಪ್​ನಲ್ಲಿ(T20 World Cup 2024) ಆಡಲಿದ್ದಾರಾ ಎನ್ನುವುದು. ಇದೀಗ ರೋಹಿತ್​ ಶರ್ಮ ಅವರ ಟಿ20 ಭವಿಷ್ಯದ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ(Jay Shah) ಹೇಳಿಕೆಯೊಂದನ್ನು ನೀಡಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಬಿಸಿಸಿಐ(BCCI) ಮುಂದಿನ ವಾರ ಕೊಹ್ಲಿ ಮತ್ತು ರೋಹಿತ್(Virat Kohli-Rohit Sharma)​ ಜತೆ ತಮ್ಮ ಟಿ20 ಕ್ರಿಕೆಟ್​ ಭವಿಷ್ಯದ ಬಗ್ಗೆ ಚರ್ಚಿಸಿ ಸ್ಪಷ್ಟ ನಿರ್ಧಾರವೊಂದನ್ನು ಕೈಗೊಳ್ಳಲಿದೆ ಎಂದು ವರದಿಯಾಗಿತ್ತು. ಆದರೆ ಇದೀಗ ಹೇಳಿಕೆ ನೀಡಿರುವ ಜಯ್​ ಶಾ, ‘ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮ ಅವರ ಸ್ಥಾನದ ಬಗ್ಗೆ ಈಗಲೇ ಭರವಸೆ ನೀಡಲಾಗುವುದಿಲ್ಲ’ ಎಂದು ಖಚಿತಪಡಿಸಿದ್ದಾರೆ. ಪಿಟಿಐ ಜತೆಗಿನ ಸಂದರ್ಶನದಲ್ಲಿ ಅವರು ಈ ವಿಚಾರವನ್ನು ತಿಳಿಸಿದ್ದಾರೆ.

ಟಿ20 ವಿಶ್ವಕಪ್​ ಮುಂದಿನ ವರ್ಷ ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎ ಆತಿಥ್ಯದಲ್ಲಿ ನಡೆಯಲಿದೆ. ಸದ್ಯದ ಪ್ರಕಾರ ಈ ಟೂರ್ನಿ ಜೂನ್​ನಲ್ಲಿ ನಡೆಯುವ ಸಾಧ್ಯತೆ ಇದೆ. “ಟಿ20 ವಿಶ್ವಕಪ್​ಗೂ ಮುನ್ನ ನಮ್ಮ ತಂಡ ಐಪಿಎಲ್ ಮತ್ತು ಅಫಘಾನಿಸ್ತಾನ ವಿರುದ್ಧ ಸರಣಿ ಟಿ20 ಸರಣಿಯನ್ನಾಡಲಿದೆ. ಹೀಗಾಗಿ ಇಲ್ಲಿ ಆಟಗಾರರು ನೀಡುವ ಪ್ರದರ್ಶನದ ಮೇಲೆ ವಿಶ್ವಕಪ್​ ಭವಿಷ್ಯ ನಿರ್ಧಾರವಾಗಲಿದೆ” ಎಂದು ಹೇಳುವ ಮೂಲಕ ಜಯ್​ ಶಾ ಅವರು ಹಿರಿಯ ಆಟಗಾರರಿಗೆ ವಿಶ್ವಕಪ್​ ಆಯ್ಕೆಯ ಸ್ಪಷ್ಟ ಸಂದೇಶ ನೀಡಿದ್ದಾರೆ.

ಇದನ್ನೂ ಓದಿ ದ್ರಾವಿಡ್​ ಕೋಚಿಂಗ್​ ನಿರ್ಧಾರದ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಜಯ್ ಶಾ

ವಿಶ್ವಕಪ್​ ಬಳಿಕ ಟಿ20 ಆಡಿಲ್ಲ

2022ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಸೆಮಿಫೈನಲ್​ನಲ್ಲಿ ನಿರ್ಗಮಿಸಿತ್ತು. ರೋಹಿತ್​ ಶರ್ಮ ಸಾರಥ್ಯದಲ್ಲಿ ಭಾರತ ತಂಡ ಕಣಕ್ಕಿಳಿದಿತ್ತು. ಆದರೆ ಈ ಸೋಲಿನ ಬಳಿಕ ರೋಹಿತ್ ಇದುವರೆಗೂ ಒಂದೇ ಒಂದು ಟಿ20 ಪಂದ್ಯವನ್ನು ಕೂಡ ಆಡಿಲ್ಲ. ಅಂದಿನಿಂದಲೂ ಟಿ20 ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಜತೆಗೆ ಯುವ ಆಟಗಾರರೇ ಕಣಕ್ಕಿಳಿಯುತ್ತಿದ್ದಾರೆ. ಹೀಗಾಗಿ ಮುಂದಿನ ಟಿ20 ವಿಶ್ವಕಪ್​ ಟೂರ್ನಿಯಲ್ಲೂ ರೋಹಿತ್ ಸೇರಿ ಕೆಲ ಹಿರಿಯ ಆಟಗಾರರು ಆಡುವುದು ಬಹುತೇಕ ಅನುಮಾನ ಎನ್ನಲಾಗಿದೆ.

ರೋಹಿತ್​ಗೂ ಮನಸ್ಸಿಲ್ಲ

ಇನ್ನೊಂದು ಮೂಲಗಳ ಪ್ರಕಾರ ರೋಹಿತ್​ ಶರ್ಮ ಮತ್ತು ವಿರಾಟ್​ ಕೊಹ್ಲಿ ಟಿ20 ಕ್ರಿಕೆಟ್​ನಿಂದ ಈಗಾಗಲೇ ದೂರ ಉಳಿಯಲು ನಿರ್ಧರಿಸಿದ್ದು ಕೇವಲ ಟೆಸ್ಟ್​ ಮತ್ತು ಏಕದಿನ ಕ್ರಿಕೆಟ್​ಗೆ ಮಾತ್ರ ಗಮನ ನೀಡಲು ನಿರ್ಧರಿಸಿರುವುದಾಗಿ ವರದಿಯೊಂದು ತಿಳಿಸಿದೆ. ಏಕದಿನ ವಿಶ್ವಕಪ್​ ಸೋಲಿನ ಬಳಿಕವೇ ಉಭಯ ಆಟಗಾರರು ಈ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಆದರೆ, ಉಭಯ ಆಟಗಾರರು ಈ ವಿಚಾರವನ್ನು ಅಧಿಕೃತವಾಗಿ ಎಲ್ಲಿಯೂ ಇದುವರೆಗೆ ಹೇಳಿಲ್ಲ. ಕೆಲ ದಿನಗಳಲ್ಲಿ ಈ ನಿರ್ಧಾರ ಪ್ರಕಟಿಸಿದರೂ ಅಚ್ಚರಿಯಿಲ್ಲ.

Continue Reading

ಕ್ರಿಕೆಟ್

WI vs ENG: ಇಂಗ್ಲೆಂಡ್​ ವಿರುದ್ಧ 25 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ವೆಸ್ಟ್​ ಇಂಡೀಸ್​

ಅಂತಿಮ ಏಕದಿನ ಪಂದ್ಯದಲ್ಲಿ ವೆಸ್ಟ್​ ಇಂಡೀಸ್​ ತಂಡ(WI vs ENG) ಪ್ರವಾಸಿ ಇಂಗ್ಲೆಂಡ್​ ವಿರುದ್ಧ 4 ವಿಕೆಟ್​ಗಳ ಗೆಲುವು ಸಾಧಿಸಿ ಸರಣಿ ಗೆದ್ದ ಸಾಧನೆ ಮಾಡಿದೆ.

VISTARANEWS.COM


on

England vs West Indies, 3rd ODI
Koo

ಬಾರ್ಬಡೊಸ್: ತವರಿನಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ವೆಸ್ಟ್​ ಇಂಡೀಸ್​ ತಂಡ(WI vs ENG) ಪ್ರವಾಸಿ ಇಂಗ್ಲೆಂಡ್​ ವಿರುದ್ಧ 4 ವಿಕೆಟ್​ಗಳ ಗೆಲುವು ಸಾಧಿಸಿ ಸರಣಿ ಗೆದ್ದ ಸಾಧನೆ ಮಾಡಿದೆ. ಈ ಮೂಲಕ 25 ವರ್ಷಗಳ ಸುದೀರ್ಘ ಅಂತರದ ಬಳಿಕ ವಿಂಡೀಸ್​ ತನ್ನ ನೆಲದಲ್ಲಿ ಇಂಗ್ಲೆಂಡ್ ವಿರುದ್ಧ ಮೊದಲ ಏಕದಿನ ಸರಣಿ ಗೆದ್ದ ದಾಖಲೆ ಬರೆದಿದೆ.

ಸರಣಿಯಲ್ಲಿ ಮೊದಲ ಪಂದ್ಯ ಗೆದ್ದಿದ್ದ ವಿಂಡೀಸ್​ ದ್ವಿತೀಯ ಪಂದ್ಯದಲ್ಲಿ ಸೋಲು ಕಂಡಿತ್ತು. ಹೀಗಾಗಿ ಸರಣಿ 1-1 ಸಮಬಲಗೊಂಡಿತ್ತು. ಅಂತಿಮ ಮತ್ತು ಸರಣಿ ನಿರ್ಣಾಯಕ ಪಂದ್ಯದಲ್ಲಿ ವಿಂಡೀಸ್​ ಮತ್ತೆ ಗೆಲುವು ಸಾಧಿಸಿ ಸರಣಿಯನ್ನು ಗೆದ್ದು ಬೀಗಿದೆ.

ಶನಿವಾರ ರಾತ್ರಿ ನಡೆದ ಇತ್ತಂಡಗಳ ಈ ಪಂದ್ಯ ಮಳೆಯ ಕಾರಣದಿಂದ 40 ಓವರ್​ಗೆಗೆ ಇಳಿಸಲ್ಪಟ್ಟಿತು. ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್ ಆಹ್ವಾನ ಪಡೆದ ಇಂಗ್ಲೆಂಡ್ 9 ವಿಕೆಟ್ ನಷ್ಟಕ್ಕೆ 206 ರನ್ ಗಳಿಸಿತು. ಜವಾಬಿತ್ತ ವೆಸ್ಟ್​ ವಿಂಡೀಸ್ 31.4 ಓವರ್​ಗಳಲ್ಲಿ ಆರು ವಿಕೆಟ್ ಕಳೆದುಕೊಂಡು 191 ರನ್​ ಬಾರಿಸಿ ಜಯ ಸಾಧಿಸಿತು. ಕಳೆದ ಏಕದಿನ ವಿಶ್ವಕಪ್​ನಲ್ಲಿ ನೀರಸ ಪ್ರದರ್ಶನ ನೀಡಿದ್ದ ಇಂಗ್ಲೆಂಡ್ ತಂಡ ವಿಂಡೀಸ್​ ವಿರುದ್ಧವೂ ಇದೇ ಪ್ರದರ್ಶನ ತೋರಿತು.

ಇಂಗ್ಲೆಂಡ್ ತಂಡದ ಪರ ಡಕ್ಕೆಟ್ 71 ರನ್ ಗಳಿಸಿದರೆ, ಲಿವಿಂಗ್​ಸ್ಟೋನ್ 45 ರನ್ ಮಾಡಿದರು. ನಾಯಕ ಜಾಸ್​ ಬಟ್ಲರ್ ಅವರ ವೈಫಲ್ಯತೆ ಇಲ್ಲಿಯೂ ಮುಂದುವರಿಯಿತು. ಅವರು ಗೋಲ್ಡನ್ ಡಕ್​ಗೆ ಬಲಿಯಾದರು. ವಿಂಡೀಸ್ ಪರ ಮ್ಯಾಥ್ಯೂ ಫೊರ್ಡೆ ಮತ್ತು ಅಲ್ಜಾರಿ ಜೋಸೆಫ್ ತಲಾ ಮೂರು ವಿಕೆಟ್ ಕಿತ್ತರೆ, ಶೆಫರ್ಡ್ ಎರಡು ವಿಕೆಟ್ ಪಡೆದರು.

ಚೇಸಿಂಗ್​ ವೇಳೆ ಮಳೆಯ ಕಾರಣದಿಂದ ವಿಂಡೀಸ್​ಗೆ 34 ಓವರ್ ಗಳಲ್ಲಿ 188 ರನ್ ಗುರಿ ನೀಡಲಾಯಿತು. ವಿಂಡೀಸ್ ಪರ ಅಥನಾಜೆ 45 ರನ್, ಕೀಸಿ ಕಾರ್ಟಿ 50 ರನ್ ಗಳಿಸಿದರು. ರೊಮಾರಿಯೊ ಶೆಫರ್ಡ್ ಅವರು ಅಜೇಯ 41 ರನ್ ಗಳಿಸಿದರು.

2 ವರ್ಷಗಳ ಬಳಿಕ ತಂಡ ಸೇರಿದ ರಸೆಲ್​

ಇಂಗ್ಲೆಂಡ್​ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಗೆದ್ದು ಬೀಗಿದ ವೆಸ್ಟ್​ ಇಂಡೀಸ್​ ಇನ್ನು ಟಿ20 ಸರಣಿಯನ್ನಾಡಲು ಸಜ್ಜಾಗಿದೆ. ಅಚ್ಚರಿ ಎಂದರೆ ವಿಸ್ಫೋಟಕ ಬ್ಯಾಟರ್​ ಆಂಡ್ರೆ ರಸೆಲ್ ಅವರು 2 ವರ್ಷಗಳ ಬಳಿಕ ತಂಡಕ್ಕೆ ಎಂಟ್ರಿಕೊಟ್ಟಿದ್ದಾರೆ. ಆಂಡ್ರೆ ರಸೆಲ್ ಅವರು 2021 ರಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ವೆಸ್ಟ್ ಇಂಡೀಸ್‌ ಪರ ಕೊನೆ ಪಂದ್ಯ ಆಡಿದ್ದರು. ಇದಾದ ಬಳಿಕ ಅವರು ತಂಡದಿಂದ ಹೊರಗುಳಿದ್ದರು. ಇದೀಗ ಮತ್ತೆ ತಂಡದಲ್ಲಿ ಸ್ಥಾನ ಸಿಕ್ಕಿದೆ. ಇವರ ಜತೆ ಮ್ಯಾಥ್ಯೂ ಫೋರ್ಡ್ ಕೂಡ ಅವಕಾಶ ಪಡೆದಿದ್ದಾರೆ.

Continue Reading
Advertisement
Bus-jeep accident
ಉಡುಪಿ6 mins ago

Road Accident: ಕಾರ್ಕಳ ಬಳಿ ಖಾಸಗಿ ಬಸ್‌-ಜೀಪ್ ನಡುವೆ ಭೀಕರ ಅಪಘಾತ; 12 ಮಂದಿಗೆ ಗಂಭೀರ ಗಾಯ

Killers who killed lawyer for property in kalaburagi
ಕರ್ನಾಟಕ30 mins ago

ವಕೀಲನ ಹತ್ಯೆ ಮಾಡಿ ರಕ್ತದ ಕೈಯಲ್ಲೇ ದಂಪತಿಯಿಂದ ಹಣ ಪಡೆದಿದ್ದ ಸುಪಾರಿ ಕಿಲ್ಲರ್ಸ್‌!

air india
ಉದ್ಯೋಗ31 mins ago

Job Alert: ಏರ್‌ ಇಂಡಿಯಾದಲ್ಲಿದೆ ಉದ್ಯೋಗಾವಕಾಶ; ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

man accused of murder wins acquittal after studying law and fighting own Case
ದೇಶ34 mins ago

ಜೋಡಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಅಮಾಯಕ, ಲಾ ಓದಿ ತನ್ನ ಕೇಸನ್ನು ತಾನೇ ಗೆದ್ದ!

Kate Cross reveals ‘soft spot for RCB’ after bagging deal
ಕ್ರಿಕೆಟ್35 mins ago

ಚೆನ್ನೈ ತಂಡದ ಕಟ್ಟರ್‌ ಅಭಿಮಾನಿಯನ್ನು ಖರೀದಿ ಮಾಡಿದ ಆರ್​ಸಿಬಿ ಫ್ರಾಂಚೈಸಿ

Mysore people
ಕರ್ನಾಟಕ43 mins ago

Congress Guarantee: ಸಿಎಂ ಸಿದ್ದರಾಮಯ್ಯ ತವರಲ್ಲೇ ಸಿಗದ ಗ್ಯಾರಂಟಿ ಯೋಜನೆಗಳು; ಸ್ಲಂ ನಿವಾಸಿಗಳ ಪರದಾಟ

Winter Food Tips
ಆಹಾರ/ಅಡುಗೆ58 mins ago

Winter Food Tips: ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡುವ ದೇಸೀ ಸಿಹಿತಿಂಡಿಗಳಿವು!

ipl fans
ಕ್ರಿಕೆಟ್1 hour ago

IPL 2024: ಕ್ರಿಕೆಟ್​ ಪ್ರಿಯರಿಗೆ ಗುಡ್​ ನ್ಯೂಸ್​; ಐಪಿಎಲ್​ ಆರಂಭಕ್ಕೆ ಡೇಟ್​ ಫಿಕ್ಸ್!​

Moral policing
ಕರ್ನಾಟಕ2 hours ago

Moral Policing: ಉಪ್ಪಿನಂಗಡಿಯಲ್ಲಿ ಮುಸ್ಲಿಂ ವಿದ್ಯಾರ್ಥಿ ಜೋಡಿಗೆ ತಡೆದು ಧಮಕಿ!

Akash anand is BSP Leader mayawati's political heir
ದೇಶ2 hours ago

Akash Anand: ಯಾರಿವರು ಮಾಯಾವತಿ ಉತ್ತರಾಧಿಕಾರಿ ಆಕಾಶ್ ಆನಂದ್?

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ1 week ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

DCC Bank Recruitment 2023
ಉದ್ಯೋಗ11 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ3 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Actor Shivarajkumar rejects DKS offer
ಕರ್ನಾಟಕ3 hours ago

Shiva Rajkumar: ಲೋಕಸಭೆಗೆ ಸ್ಪರ್ಧಿಸಿ ಎಂದ ಡಿಕೆಶಿ; ನಾನು ರಾಜಕೀಯಕ್ಕೆ ಬರಲ್ಲ ಎಂದ ಶಿವರಾಜ್‌ಕುಮಾರ್!

HD Kumaraswamy attack on congress
ಕರ್ನಾಟಕ6 hours ago

HD Kumaraswamy: ಬಿಜೆಪಿಗೆ ‌50 ಶಾಸಕರ ಕರ್ಕೊಂಡು ಬರ್ತೇವೆ ಎಂದಿರುವ ಕಾಂಗ್ರೆಸ್‌ ನಾಯಕ!

Dina Bhavishya
ಪ್ರಮುಖ ಸುದ್ದಿ14 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

read your daily horoscope predictions for december 9 2023
ಪ್ರಮುಖ ಸುದ್ದಿ2 days ago

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Actress Leelavathi felicitated
South Cinema2 days ago

Actress Leelavathi: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದ ಫಿಲ್ಮ್‌ ಚೇಂಬರ್

Actress Leelavati and Rajkumar film
South Cinema2 days ago

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film
South Cinema2 days ago

Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

PM Narenda modi and Moulvi thanveer Peera
ಕರ್ನಾಟಕ2 days ago

CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ3 days ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

ಟ್ರೆಂಡಿಂಗ್‌