ಪೋರ್ಟ್ ಆಫ್ ಸ್ಪೈನ್: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮ(Rohit Sharma) ಅವರು ವೆಸ್ಟ್ ಇಂಡೀಸ್ ವಿರುದ್ಧದ ದ್ವಿತೀಯ ಟೆಸ್ಟ್(IND vs WI 2nd Test) ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ತೋರಿದ್ದಾರೆ. 143 ಎಸೆತ ಎದುರಿಸಿದ ರೋಹಿತ್ 9 ಬೌಂಡರಿ ಮತ್ತು 2 ಸಿಕ್ಸರ್ ಮೂಲಕ 80 ರನ್ ಬಾರಿಸಿದರು. ಸಿಕ್ಸರ್ ಬಾರಿಸುವ ಮೂಲಕ ರೋಹಿತ್ ನೂತನ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದಿದ್ದಾರೆ.
ಪೋರ್ಟ್ ಆಫ್ ಸ್ಪೇನ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಗುರುವಾರ ಆರಂಭವಾದ ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಎರಡು ಸಿಕ್ಸರ್ ಬಾರಿಸಿದ ಕೂಡಲೇ ಟೆಸ್ಟ್ ಕ್ರಿಕೆಟ್‌ನಲ್ಲಿ 74 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಈ ಮೂಲಕ ಟೆಸ್ಟ್ ಮಾದರಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದವರ ಪಟ್ಟಿಯಲ್ಲಿ ರಿಕಿ ಪಾಂಟಿಂಗ್(ricky ponting) ಅವರ ದಾಖಲೆಯನ್ನು ರೋಹಿತ್ ಶರ್ಮಾ ಮುರಿದಿದ್ದಾರೆ. ರಿಕಿ ಪಾಂಟಿಂಗ್ 73 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಭಾರತ ಪರ ಟೆಸ್ಟ್ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಸಾಧನೆ ವೀರೇಂದ್ರ ಸೆಹವಾಗ್ ಹೆಸರಿನಲ್ಲಿದೆ. ಅವರು 91 ಸಿಕ್ಸರ್ ಚಚ್ಚಿದ್ದಾರೆ. ವಿಶ್ವ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆ ಇಂಗ್ಲೆಂಡ್ ತಂಡ ಬೆನ್ ಸ್ಟೋಕ್ಸ್ ಹೆಸರುನಲ್ಲಿದೆ. ಸ್ಟೋಕ್ಸ್ ಸದ್ಯ 123* ಸಿಕ್ಸರ್ ಬಾರಿಸಿದ್ದಾರೆ.
ಅರ್ಧಶತಕ ಬಾರಿಸಿದ ರೋಹಿತ್ ಶರ್ಮ(rohit sharma) ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಟೂರ್ನಿಯಲ್ಲಿ(World Test Championships) 2 ಸಾವಿರ ರನ್ ಪೂರ್ತಿಗೊಳಿಸಿದ ಮೊದಲ ಭಾರತೀಯ ಆಟಗಾರ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಜತೆಗೆ ಆರಂಭಿಕನಾಗಿ ಭಾರತ ಪರ 2 ಸಾವಿರ ರನ್ ಬಾರಿಸಿದ ಆಟಗಾರನಾಗಿಯೂ ಹೊರಹೊಮ್ಮಿದ್ದಾರೆ. 2019ರಲ್ಲಿ ಭಾರತ ಟೆಸ್ಟ್ ತಂಡದಲ್ಲಿ ಆರಂಭಿಕನಾಗಿ ಬಡ್ತಿ ಪಡೆದೆ ರೋಹಿತ್ ಶರ್ಮಾ ಇದುವರೆಗೆ ಆರಂಭಿನಾಗಿ 7 ಶತಕ ಹಾಗೂ 5 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಆ ಮೂಲಕ 2000 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ.
Milestone 🔓 – 2000 Test runs as an opener and counting for Captain @ImRo45 👏👏#WIvIND pic.twitter.com/rwbzgQ8v3b
— BCCI (@BCCI) July 20, 2023
ಜತೆಯಾಟದಲ್ಲಿಯೂ ದಾಖಲೆ ಬರೆದ ರೋಹಿತ್
ಜೈಸ್ವಾಲ್ ಮತ್ತು ರೋಹಿತ್ ಮೊದಲ ವಿಕೆಟ್‌ಗೆ 100ಕ್ಕೂ ಹೆಚ್ಚಿನ ರನ್‌ಗಳ ಜತೆಯಾಟವಾಡುವ ಮೂಲಕ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದಿದ್ದಾರೆ. ಸತತ ಎರಡನೇ ಬಾರಿ ಮೊದಲನೇ ವಿಕೆಟ್‌ಗೆ 100ಕ್ಕೂ ಹೆಚ್ಚಿನ ರನ್‌ಗಳ ಜತೆಯಾಟವಾಡಿದ ಭಾರತದ ಆರನೇ ಜೋಡಿ ಎನಿಸಿಕೊಂಡರು. ರೋಹಿತ್ ಮತ್ತು ಜೈಸ್ವಾಲ್ ಮೊದಲ ಪಂದ್ಯದಲ್ಲಿ ಬರೋಬ್ಬರಿ 229 ರನ್‌ಗಳ ಜತೆಯಾಟ ನಡೆಸಿದ್ದರು. ದ್ವಿತೀಯ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ರೋಹಿತ್ 143 ಎಸೆತಗಳಿಂದ 80 ರನ್ ಬಾರಿಸಿದರು. ಈ ಇನಿಂಗ್ಸ್ನಲ್ಲಿ 9 ಬೌಂಡರಿ ಮತ್ತು 2 ಸಿಕ್ಸರ್ ಸಿಡಿಯಿತು.