ಬಾರ್ಬಡೋಸ್: ಭಾರತ ತಂಡದ ನಾಯಕ, ಹಿಟ್ಮ್ಯಾನ್(hitman rohit sharma) ಖ್ಯಾತಿಯ ರೋಹಿತ್ ಶರ್ಮ(Rohit Sharma) ಅವರು ವಿಂಡೀಸ್(West Indies vs India, 2ndODI) ವಿರುದ್ಧ ಉಳಿದಿರುವ ಎರಡು ಏಕದಿನ ಪಂದ್ಯಗಳಲ್ಲಿ ಇನ್ನು 163 ರನ್ ಬಾರಿಸಿದರೆ ನೂತನ ದಾಖಲೆಯೊಂದನ್ನು ಬರೆಯಲಿದ್ದಾರೆ.
ರೋಹಿತ್ ಈ ಸರಣಿಯಲ್ಲಿ 163 ರನ್ ಬಾರಿಸಿದರೆ ಏಕದಿನ ಕ್ರಿಕೆಟ್‌ನಲ್ಲಿ ವೇಗವಾಗಿ 10,000 ರನ್ ಗಳಿಸಿದ ಭಾರತದ ಎರಡನೇ ಆಟಗಾರ ಎನಿಸಿಕೊಳ್ಳಲಿದ್ದಾರೆ. ಈ ಮೂಲಕ ಎರಡನೇ ಸ್ಥಾನದಲ್ಲಿದ್ದ ಸಚಿನ್ ತೆಂಡೂಲ್ಕರ್(Sachin Tendulkar) ಅವರನ್ನು ಹಿಂದಿಕ್ಕಲಿದ್ದಾರೆ. ವಿರಾಟ್ ಕೊಹ್ಲಿ(virat kohli) ಮೊದಲ ಸ್ಥಾನದಲ್ಲಿದ್ದಾರೆ. ಕೊಹ್ಲಿ ಈ ಮೈಲುಗಲ್ಲನ್ನು ಕೇವಲ 213 ಪಂದ್ಯಗಳಲ್ಲಿ ಮಾಡಿದ್ದಾರೆ.
ರೋಹಿತ್ ಶರ್ಮ ಅವರು ಸದ್ಯ 243 ಏಕದಿನ ಪಂದ್ಯಗಳನ್ನು ಆಡಿದ್ದು 9825* ರನ್ ಬಾರಿಸಿದ್ದಾರೆ. ಇದರಲ್ಲಿ 30 ಶತಕ ಮತ್ತು 3 ದ್ವಿಶತಕ ಒಳಗೊಂಡಿದೆ. ಏಕದಿನದಲ್ಲಿ ಅತ್ಯಧಿಕ ದ್ವಿಶತಕ ಬಾರಿಸಿದ ಏಕೈಕ ಆಟಗಾರ ಎಂಬ ಹಿರಿಮೆಯೂ ರೋಹಿತ್ ಪಾಲಿಗಿದೆ. 264 ರನ್ ಅವರ ವೈಯಕ್ತಿಕ ಗರಿಷ್ಠ ಮೊತ್ತವಾಗಿದೆ.
ರೋಹಿತ್ ಅವರು ಏಕದಿನ ಕ್ರಿಕೆಟ್‌ನಲ್ಲಿ 10 ಸಾವಿರ ರನ್ಗಳ ಎಲೈಟ್ ಪಟ್ಟಿಗೆ ಸೇರ್ಪಡೆಗೊಂಡರೆ ಈ ಸಾಧನೆ ಮಾಡಿದ ಆರನೇ ಭಾರತೀಯ ಮತ್ತು ಒಟ್ಟಾರೆ 15ನೇ ಆಟಗಾರನೆಂಬ ದಾಖಲೆ ಬರೆಯಲ್ಲಿದ್ದಾರೆ. ಟೆಸ್ಟ್ ಸರಣಿಯಲ್ಲಿ ಶತಕ ಮತ್ತು ಅತಿ ವೇಗದ ಅರ್ಧಶತಕ ಬಾರಿಸಿ ದಾಖಲೆ ಬರೆದಿದ್ದ ರೋಹಿತ್ ಅವರ ಬ್ಯಾಟಿಂಗ್ ಫಾರ್ಮ್ ಉತ್ತಮವಾಗಿದೆ. ಮೊದಲ ಪಂದ್ಯದಲ್ಲಿ ಬ್ಯಾಟಿಂಗ್ ಕ್ರಮಾಂಕದ ಪ್ರಯೋಗದಿಂದಾಗಿ ಅವರು 7ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಅಜೇಯ 12 ರನ್ ಬಾರಿಸಿದ್ದರು. ಆದರೆ ಶನಿವಾರ ನಡೆಯುವ ದ್ವಿತೀಯ ಪಂದ್ಯದಲ್ಲಿ ಎಂದಿನಂತೆ ತಮ್ಮ ಆರಂಭಿಕ ಸ್ಥಾನದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಅಧಿಕವಾಗಿದೆ.
ಇದನ್ನೂ ಓದಿ ind vs wi : ವಿಂಡೀಸ್ ವಿರುದ್ಧದ 2ನೇ ಪಂದ್ಯ ನಡೆಯುವ ಕೆನ್ಸಿಂಗ್ಟನ್ ಓವಲ್ ಪಿಚ್ ಹೇಗಿದೆ?
ಭಾರತ ತಂಡ
ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ(ನಾಯಕ), ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಉಮ್ರಾನ್ ಮಲಿಕ್, ಯಜುವೇಂದ್ರ ಚಾಹಲ್, ಜಯದೇವ್ ಉನಾದ್ಕತ್, ಮುಖೇಶ್ ಕುಮಾರ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಇಶಾನ್ ಕಿಶನ್, ಋತುರಾಜ್ ಗಾಯಕ್ವಾಡ್.