Site icon Vistara News

Rohit Sharma: ಗೆದ್ದೇ ಗೆಲ್ಲುವೆವು ಏಷ್ಯಾಕಪ್​; ರೋಹಿತ್​ ಶರ್ಮ ವಿಶ್ವಾಸ

Rohit Sharma's Epic One-Word Reply To Reporters

ಮುಂಬಯಿ: ಏಷ್ಯಾಕಪ್​ ಟೂರ್ನಿ(Asia Cup 2023) ಆರಂಭಕ್ಕೆ ಇನ್ನು ಭರ್ತಿ 6 ದಿನಗಳು ಮಾತ್ರ ಬಾಕಿ ಉಳಿದಿವೆ. ಭಾರತ ತನ್ನ ಮೊದಲ ಪಂದ್ಯವನ್ನು ಸೆಪ್ಟೆಂಬರ್​ 2ರಂದು ಸಾಂಪ್ರದಾಯಿಕ ಬದ್ದ ಎದುರಾಳಿ ಪಾಕಿಸ್ತಾನ(asia cup 2023 india vs pakistan) ವಿರುದ್ಧ ಆಡಲಿದೆ. ಈ ಪಂದ್ಯ ಶ್ರೀಲಂಕಾದ ಕ್ಯಾಂಡಿಯಲ್ಲಿ ನಡೆಯಲಿದೆ. ಟೂರ್ನಿ ಆರಂಭಕ್ಕೂ ಮುನ್ನವೇ ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮ(Rohit Sharma) ಈ ಬಾರಿ ನಾವು ಕಪ್​​ ಗೆದ್ದೇ ಗೆಲ್ಲುತ್ತೇವೆ ಎಂದು ಘೋಷಣೆ ಕೂಗಿದ್ದಾರೆ.

ಬುಧವಾರ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿ(NCA)ಯಲ್ಲಿ ಅಭ್ಯಾಸ ಶಿಬಿರ ಆರಂಭಿಸಲು ಮುಂಬಯಿಂದ ಬೆಂಗಳೂರಿಗೆ ಪ್ರಯಾಣಿಸಲು ವಿಮಾನ ನಿಲ್ದಾಣಕ್ಕೆ ಬರುತ್ತಿದ್ದ ವೇಳೆ ಅಭಿಮಾನಿಗಳು ರೋಹಿತ್​ ಸರ್​.. ಏಷ್ಯಾಕಪ್​ ಟೂರ್ನಿಗಾಗಿ ಕಾತರದಿಂದ ಕಾಯುತ್ತಿದ್ದೇವೆ ಎಂದು ಕೂಗಿದ್ದಾರೆ. ಇದಕ್ಕೆ ನಗು ಮುಗದಿಂದಲೇ ಪ್ರತಿಕ್ರಿಯೆ ನೀಡಿದ ರೋಹಿತ್. ‘ಜೀತೇಂಗೆ, ಜೀತೆಂಗೆ’ (ಏಷ್ಯಾಕಪ್ ಗೆಲ್ಲುತ್ತೇವೆ) ಎಂದು ಆತ್ಮವಿಶ್ವಾಸದಿಂದಲೇ ಘೋಷಣೆ ಕೂಗಿದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್(viral video)​ ಆಗಿದೆ.

ರೋಹಿತ್​ಗೆ ಅಗ್ನಿ ಪರೀಕ್ಷೆ

ಏಷ್ಯಾಕಪ್​ನಲ್ಲಿ 7 ಬಾರಿಯ ಚಾಂಪಿಯನ್ ಆಗಿರುವ ಭಾರತ ತಂಡಕ್ಕೆ 2023ರ ನಿರ್ಣಾಯಕ ವಿಶ್ವಕಪ್​ಗೆ ಮುಂಚಿತವಾಗಿ ನಡೆಯುವ ಅಗ್ನಿಪರೀಕ್ಷೆ ಇದಾಗಿದೆ. ಇಲ್ಲಿ ತಂಡ ಯಾವ ರೀತಿ ಪ್ರದರ್ಶನ ತೋರಲಿದೆ ಎನ್ನುವುದ ಮೇಲೆ ವಿಶ್ವಕಪ್​ ಭವಿಷ್ಯ ನಿರ್ಧರವಾಗಲಿದೆ. ರೋಹಿತ್ ಶರ್ಮಾ(Rohit Sharma) ಈಗಾಗಲೇ ಭಾರತ ತಂಡಕ್ಕೆ ಏಷ್ಯಾಕಪ್ ಪ್ರಶಸ್ತಿ ತಂದುಕೊಟ್ಟಿದ್ದಾರೆ. ಈ ಬಾರಿ ಗೆದ್ದರೆ ಎರಡನೇ ಪ್ರಶಸ್ತಿಯಾಗಲಿದೆ. 2018ರಲ್ಲಿ ಯುಎಇಯಲ್ಲಿ ಬಾಂಗ್ಲಾದೇಶವನ್ನು 3 ವಿಕೆಟ್​​ಗಳಿಂದ ಸೋಲಿಸಿ ಪ್ರಶಸ್ತಿ ಎತ್ತಿ ಹಿಡಿದಿತ್ತು. ಚೊಚ್ಚಲ ಆವೃತ್ತಿಯಲ್ಲೇ ಚಾಂಪಿಯನ್ ಪಟ್ಟ ಅಲಂಕರಿಸಿದ ಹಿರಿಮೆಯೂ ಭಾರತ ತಂಡದ್ದಾಗಿದೆ. ಈ ಬಾರಿಯೂ ಗೆದ್ದರೆ ವಿಶ್ವ ಕಪ್​ನಲ್ಲಿ ಭಾರತ ತಂಡದ ಮೇಲೆ ನಿರಿಕ್ಷೆಯೊಂದನ್ನು ಮಾಡಬಹುದಾಗಿದೆ.

ಇದನ್ನೂ ಓದಿ Asia Cup 2023: ಏಷ್ಯಾಕಪ್​ಗೆ ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಟೀಮ್ ಇಂಡಿಯಾ

ರೋಹಿತ್​ ಶರ್ಮ ವಿಡಿಯೊ

ಏಷ್ಯಾಕಪ್​ಗೆ ಭಾರತ ತಂಡ

ರೋಹಿತ್‌ ಶರ್ಮಾ (ನಾಯಕ), ಶುಭಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್, ಕೆ.ಎಲ್‌.ರಾಹುಲ್‌, ಹಾರ್ದಿಕ್‌ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಜಸ್‌ಪ್ರಿತ್‌ ಬುಮ್ರಾ, ಕುಲದೀಪ್‌ ಯಾದವ್‌, ಮೊಹಮ್ಮದ್‌ ಸಿರಾಜ್‌, ಮೊಹಮ್ಮದ್‌ ಶಮಿ, ಇಶಾನ್‌ ಕಿಶನ್‌, ಶಾರ್ದೂಲ್‌ ಠಾಕೂರ್‌, ಅಕ್ಷರ್​ ಪಟೇಲ್‌, ಸೂರ್ಯಕುಮಾರ್‌ ಯಾದವ್‌, ತಿಲಕ್‌ ವರ್ಮಾ, ಪ್ರಸಿದ್ಧ್‌ ಕೃಷ್ಣ, ಸಂಜು ಸ್ಯಾಮ್ಸನ್‌ (ಮೀಸಲು ಆಟಗಾರ).

ಆಗಸ್ಟ್​ 30ಕ್ಕೆ ಟೂರ್ನಿ ಆರಂಭ

ಏಷ್ಯಾಕಪ್​ ಟೂರ್ನಿ ಆಗಸ್ಟ್​ 30 ರಿಂದ ಆರಂಭವಾಗಲಿದೆ. ಭಾರತ, ನೇಪಾಳ ಮತ್ತು ಪಾಕಿಸ್ತಾನ ʼಎʼ ಗುಂಪಿನಲ್ಲಿ ಸ್ಥಾನ ಪಡೆದಿದೆ. ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಅಫಘಾನಿಸ್ತಾನ ʼಬಿʼ ಗುಂಪಿನಲ್ಲಿ ಕಾಣಿಸಿಕೊಂಡಿದೆ. ಒಟ್ಟು 13 ಪಂದ್ಯಗಳು ನಡೆಯಲಿದ್ದು ಇದರಲ್ಲಿ ನಾಲ್ಕು ಪಂದ್ಯಗಳು ಪಾಕಿಸ್ತಾನದಲ್ಲಿ ನಡೆದರೆ ಫೈನಲ್‌ ಸೇರಿ 9 ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿದೆ. 50 ಓವರ್‌ ಮಾದರಿಯಲ್ಲಿ ಟೂರ್ನಿ ನಡೆಯಲಿದೆ.

Exit mobile version