ಹೈದರಾಬಾದ್: ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ(Rohit Sharma) ದಾಖಲೆಯೊಂದನ್ನು ಬರೆದಿದ್ದಾರೆ. ಈ ಮೂಲಕ ಎಂ.ಎಸ್. ಧೋನಿ ದಾಖಲೆಯೊಂದು ಪತನಗೊಂಡಿದೆ.
ಹೈದರಾಬಾದ್ನ ರಾಜೀವ್ ಗಾಂಧಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ನಡೆಸುವ ನಿರ್ಧಾರ ಕೈಗೊಂಡಿತು. ಇನಿಂಗ್ಸ್ ಆರಂಭಿಸಿದ ರೋಹಿತ್ ಶರ್ಮಾ 38 ಎಸೆತ ಎದುರಿಸಿ 34 ರನ್ ಬಾರಿಸಿದರು. ಈ ಇನಿಂಗ್ಸ್ನಲ್ಲಿ ವೇಳೆ ಅವರು 2 ಸಿಕ್ಸರ್ ಬಾರಿಸಿದರು. ಈ ಸಿಕ್ಸರ್ ಮೂಲಕ ತವರಿನಲ್ಲಿ ನಡೆದ ಏಕದಿನ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಪರ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆ ಬರೆದರು.
ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ತವರಿನಲ್ಲಿ ನಡೆದ ಏಕದಿನ ಪಂದ್ಯಗಳಲ್ಲಿ ಒಟ್ಟು 123 ಸಿಕ್ಸರ್ ಬಾರಿಸಿದ್ದು ಇದುವರೆಗಿನ ಭಾರತೀಯ ಕ್ರಿಕೆಟಿಗನ ಸಾಧನೆಯಾಗಿತ್ತು. ಆದರೆ ಇದೀಗ ರೋಹಿತ್ 125* ಸಿಕ್ಸರ್ ಬಾರಿಸುವ ಮೂಲಕ ಧೋನಿಯ ದಾಖಲೆಯನ್ನು ಮುರಿದಿದ್ದಾರೆ.
ಇದನ್ನೂ ಓದಿ | IND VS NZ | ತವರಿನಲ್ಲಿ ಘಾತಕ ಬೌಲಿಂಗ್ ನಡೆಸುವ ಇರಾದೆಯಲ್ಲಿ ಮೊಹಮ್ಮದ್ ಸಿರಾಜ್!