ಮುಂಬಯಿ: ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮ(Rohit Sharma) ಅವರು ಸೋಮವಾರ ನಡೆದ ಸನ್ರೈಸರ್ಸ್ ಹೈದರಾಬಾದ್(IPL 2024) ವಿರುದ್ಧದ ಪಂದ್ಯದ ವೇಳೆ ಡ್ರೆಸ್ಸಿಂಗ್ ರೋಮ್ನಲ್ಲಿ(Rohit Sharma’s MI Dugout Video) ಕಣ್ಣೀರು ಹಾಕಿದ ಘಟನೆ ನಡೆದಿದೆ. ಈ ವಿಡಿಯೊ ವೈರಲ್ ಆಗಿದ್ದು, ತಮ್ಮ ಸತತ ಬ್ಯಾಟಿಂಗ್ ವೈಫಲ್ಯದಿಂದ ಮನನೊಂದು ಅವರು ಕಣ್ಣಿರು ಹಾಕಿದ್ದು ಎನ್ನಲಾಗಿದೆ.
ರೋಹಿತ್ ಹೈದರಾಬಾದ್ ವಿರುದ್ಧ 5 ಎಸೆತ ಎದುರಿಸಿ ಕೇವಲ 4 ರನ್ಗಳಿಗೆ ವಿಕೆಟ್ ಒಪ್ಪಿಸಿದರು. ಔಟಾಗಿ ಡ್ರೆಸ್ಸಿಂಗ್ ರೋಮ್ಗೆ ತೆರಳಿದ ರೋಹಿತ್ ಕಣ್ಣೀರು ಸುರಿಸಿದ್ದಾರೆ. ಈ ಬಾರಿಯ ಟೂರ್ನಿಯಲ್ಲಿ ರೋಹಿತ್ ಒಟ್ಟು 326 ರನ್ ಮಾತ್ರ ಗಳಿಸಿದ್ದಾರೆ. ಇದರಲ್ಲಿ ಒಂದು ಶತಕ ಸೇರಿದೆ. ಶತಕ ಬಾರಿಸಿದ ಬಳಿಕ ಬಹುತೇಕ ಎಲ್ಲ ಪಂದ್ಯಗಳಲ್ಲಿಯೂ ಅವರು ವಿಫಲರಾಗಿದ್ದಾರೆ. ಮುಂದಿನ ತಿಂಗಳು ಟಿ20 ವಿಶ್ವಕಪ್ ಕೂಡ ಇರುವುದರಿಂದ ಬ್ಯಾಟಿಂಗ್ ಫಾರ್ಮ್ ಕಳೆದುಕೊಂಡ ಬೆಸರದಲ್ಲಿ ಅವರು ಕಣ್ಣೀರು ಹಾಕಿದ್ದಾರೆ.
ಕಳೆದ ಕೆಕೆಆರ್ ವಿರುದ್ಧದ ಪಂದ್ಯದ ವೇಳೆ ರೋಹಿತ್ಗೆ ಸಣ್ಣ ಮಟ್ಟಿನ ಬೆನ್ನು ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಅವರು ಆ ಪಂದ್ಯದಲ್ಲಿ ಕೇವಲ ಇಂಪ್ಯಾಕ್ಟ್ ಆಟಗಾರನಾಗಿ ಬ್ಯಾಟಿಂಗ್ ಮಾತ್ರ ಮಾಡಿದ್ದರು. ಫೀಲ್ಡಿಂಗ್ ಮಾಡಿರಲಿಲ್ಲ. ಹೀಗಾಗಿ ಹೈದರಾಬಾದ್ ವಿರುದ್ಧ ರೋಹಿತ್ ಆಡುವುದು ಅನುಮಾನ ಎನ್ನಲಾಗಿತ್ತು. ಆದರೆ ಅವರು ಪಂದ್ಯವನ್ನಾಡಿದ್ದರು. ಇದೀಗ ಬ್ಯಾಟಿಂಗ್ ವೈಫಲ್ಯದಿಂದ ಮಾನಸಿಕವಾಗಿ ಕುಗ್ಗಿರುವ ರೋಹಿತ್ಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಅತಿಯಾದ ಕ್ರಿಕೆಟ್ ಕೂಡ ಕೆಲವೊಮ್ಮೆ ಆಟಗಾರಿಗೆ ಒತ್ತಡ ಉಂಟಾಗಿ ಫಾರ್ಮ್ ಕಳೆದುಕೊಳ್ಳುವ ಸಾಧ್ಯತೆಯೂ ಅಧಿಕವಾಗಿದೆ.
ಪಂದ್ಯ ಗೆದ್ದ ಮುಂಬೈ
ವಾಂಖೆಡೆ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಹಣಾಹಣಿಯಲ್ಲಿ ಟಾಸ್ ಗೆದ್ದ ಮುಂಬಯಿ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಸನ್ ರೈಸರ್ಸ್ ತಂಡ ತನ್ನ ಪಾಲಿನ 20 ಓವರ್ಗಳಲ್ಲಿ 8 ವಿಕೆಟ್ಗೆ 173 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬೈ ತಂಡ ಆರಂಭಿಕ ಹಿನ್ನಡೆ ಹೊರತಾಗಿಯೂ ಸೂರ್ಯಕುಮಾರ್ ಯಾದವ್ ಅವರ ಅದ್ಭುತ್ ಇನಿಂಗ್ಸ್ ನೆರವಿನಿಂದ ಇನ್ನೂ 7 ಎಸೆತಗಳು ಬಾಕಿ ಇರುವಂತೆಯೇ 3 ವಿಕೆಟ್ ಕಳೆದುಕೊಂಡು 174 ರನ್ ಬಾರಿಸಿ ಗೆಲುವು ಸಾಧಿಸಿತು.
ಇದನ್ನೂ ಓದಿ Rohit Sharma: ಐಪಿಎಲ್ನಿಂದ ಹೊರಗುಳಿಯಲಿದ್ದಾರೆ ರೋಹಿತ್ ಶರ್ಮ!
ಟಿ20 ವಿಶ್ವಕಪ್ನಲ್ಲಿ ರೋಹಿತ್ ಭಾರತ ತಂಡವನ್ನು ಮುನ್ನಡೆಸಲಿದ್ದು, ಅವರ ಜತೆ ಯಶಸ್ವಿ ಜೈಸ್ವಾಲ್ ಇನಿಂಗ್ಸ್ ಆರಂಭಿಸಲಿದ್ದಾರೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್ 9 ರಂದು ಪಾಕ್ ವಿರುದ್ಧ ಆಡಲಿದ. ಭಾರತ ತನ್ನ ಎಲ್ಲ ಲೀಗ್ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.