ಸಿಡ್ನಿ: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ(Rohit Sharma) ಟಿ20 ವಿಶ್ವ ಕಪ್ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ. ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಮೂರು ಸಿಕ್ಸರ್ ಸಿಡಿಸಿದ ರೋಹಿತ್, ಟಿ20 ವಿಶ್ವ ಕಪ್‌ನಲ್ಲಿ ಒಟ್ಟಾರೆ 34 ಸಿಕ್ಸರ್ ಸಿಡಿಸುವ ಮೂಲಕ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ಬರೆದರು. ಈ ಮೂಲಕ 33 ಸಿಕ್ಸರ್ ಸಿಡಿಸಿದ್ದ ಯುವರಾಜ್ ಸಿಂಗ್ ದಾಖಲೆಯನ್ನು ಅಳಿಸಿ ಹಾಕಿದರು.
ಸಿಡ್ನಿ ಮೈದಾನದಲ್ಲಿ ಗುರುವಾರ ನಡೆದ ಈ ಮುಖಾಮುಖಿಯಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಭಾರತ ತಂಡ. ಟಿ20 ವಿಶ್ವ ಕಪ್ನ ಸೂಪರ್ 12 ಹಂತದ ಪಂದ್ಯದಲ್ಲಿ ನೆದರ್ಲೆಂಡ್ಸ್(India vs Netherlands) ತಂಡವನ್ನು ಭರ್ಜರಿ 56 ರನ್ ಅಂತರದಿಂದ ಮಣಿಸಿ ಗೆಲುವಿನ ನಾಗಾಲೋಟವನ್ನು ಮುಂದುವರಿಸಿದೆ. ಜತೆಗೆ ಬಿ ಗ್ರೂಪ್ನ ಅಂಕಪಟ್ಟಿಯಲ್ಲಿ 4 ಅಂಕದೊಂದಿಗೆ ಮೊದಲ ಸ್ಥಾನ ಕಾಯ್ದುಕೊಂಡಿದೆ.
ಪಾಕಿಸ್ತಾನ ಎದುರು 4 ರನ್‌ಗೆ ವಿಕೆಟ್ ಕೈಚೆಲ್ಲಿದ್ದ ರೋಹಿತ್, ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದರು. ಮೂರು ಸಿಕ್ಸರ್ ಮತ್ತು ನಾಲ್ಕು ಬೌಂಡರಿ ಸಹಿತ 53 ರನ್ ಪೇರಿಸಿದರು.
ಇದನ್ನೂ ಓದಿ | India vs Netherlands | ನೆದರ್ಲೆಂಡ್ಸ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ! ರೋಹಿತ್, ವಿರಾಟ್, ಸೂರ್ಯ, ಭುವಿ ಮಿಂಚಿಂಗ್!