ಮುಂಬಯಿ: ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ(Rohit Sharma) ತಮ್ಮ ಪತ್ನಿ ರಿತಿಕಾ ಸಜ್ದೇಹ್ ಅವರ ಸಹೋದರನ ಮದುವೆಯಲ್ಲಿ ಡ್ಯಾನ್ಸ್ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ರೋಹಿತ್ ಅವರು ಪತ್ನಿ ರಿತಿಕಾ ಸಜ್ದೇಹ್ ಅವರ ಸಹೋದರನ ಮದುವೆಯಲ್ಲಿ ಪಾಲ್ಗೊಳ್ಳುವ ಕಾರಣದಿಂದಲೇ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದರು. ಇವರ ಅನುಪಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯ(Hardik Pandya) ಅವರು ಟೀಮ್ ಇಂಡಿಯಾದ ನಾಯಕತ್ವ ವಹಿಸಿಕೊಂಡರು.
ಇದೀಗ ರೋಹಿತ್ ಅವರು ಮದುವೆ ಸಮಾರಂಭದಲ್ಲಿ ಹಿಂದಿ ಸಿನೆಮಾದ ಹಾಡಿಗೆ ಭರ್ಜರಿಯಾಗಿ ಕುಣಿದು ಕುಪ್ಪಳಿಸಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ರೋಹಿತ್ ಡ್ಯಾನ್ಸ್ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ.
ಇದನ್ನೂ ಓದಿ IND vs WI T20 | ಟೀಮ್ ಇಂಡಿಯಾದ ನಾಯಕ ವಿಶ್ವ ದಾಖಲೆಯ ಒಡೆಯ
ರೋಹಿತ್ ಶರ್ಮಾ ಅವರು ಆಸ್ಟ್ರೇಲಿಯಾ ವಿರುದ್ಧ ಮಾರ್ಚ್ 19 ರಂದು ವಿಶಾಖಪಟ್ಟಣದಲ್ಲಿ ನಡೆಯುವ ದ್ವಿತೀಯ ಏಕದಿನ ಪಂದ್ಯದ ವೇಳೆ ತಂಡ ಸೇರಿಕೊಳ್ಳಲಿದ್ದು ಮತ್ತೆ ನಾಯಕತ್ವ ವಹಿಸಿಕೊಳ್ಳಲಿದ್ದಾರೆ.