Site icon Vistara News

Rohit Sharma: ಚಾಂಪಿಯನ್ಸ್​ ಟ್ರೋಫಿಗೂ ರೋಹಿತ್​ ನಾಯಕ; ಖಚಿತಪಡಿಸಿದ ಜಯ್​ ಶಾ

Rohit Sharma

Rohit Sharma: Rohit Sharma will lead India to Champions Trophy, WTC final wins: BCCI secretary Jay Shah

ಮುಂಬಯಿ: ಏಕದಿನ ಮತ್ತು ಟೆಸ್ಟ್ ಮಾದರಿಗಳಲ್ಲಿ ರೋಹಿತ್ ಶರ್ಮ(Rohit Sharma) ಭಾರತ ತಂಡದ ನಾಯಕರಾಗಿ ಮುಂದುವರಿಯಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ(BCCI secretary Jay Shah) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜತೆಗೆ ಮುಂದಿನ ವರ್ಷ ಪಾಕಿಸ್ತಾನ ಆತಿಥ್ಯದಲ್ಲಿ ನಡೆಯುವ ಚಾಂಪಿಯನ್ಸ್​ ಟ್ರೋಫಿ(Champions Trophy) ಟೂರ್ನಿಯಲ್ಲಿಯೂ ರೋಹಿತ್​ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

“ಮುಂಬರುವ ಚಾಂಪಿಯನ್ಸ್ ಟ್ರೋಫಿ 2025 ಮತ್ತು ಮುಂದಿನ ವರ್ಷ ನಡೆಯಲಿರುವ ಮೂರನೇ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ನಲ್ಲಿ ಭಾರತ ತಂಡ ರೋಹಿತ್​ ಶರ್ಮ ನಾಯಕತ್ವದಲ್ಲಿ ಚಾಂಪಿಯನ್​ ಆಗಲಿದೆ” ಎಂದು ಜಯ್​ ಶಾ ಹೇಳಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ಟಿ20 ವಿಶ್ವಕಪ್(T20 World Cup 2024 Final)​ ಟೂರ್ನಿಯ ಆರಂಭಕ್ಕೆ ತಂಡ ಪ್ರಕಟಿಸುವ ಮುನ್ನವೇ ಭಾರತ ತಂಡ ಜೂನ್​ 29ರಂದು ಬಾರ್ಬಡೋಸ್​ನಲ್ಲಿ ವಿಶ್ವಕಪ್​ ಗೆಲ್ಲಲಿದೆ ಎಂದು ವೇದಿಯಲ್ಲಿ ಮಾತನಾಡುವ ವೇಳೆ ಬಹಿರಂಗವಾಗಿಯೇ ಭವಿಷ್ಯ(Jay Shah Promise) ನುಡಿದಿದ್ದರು. ಅದರಂತೆ ಭಾರತ ಕಪ್​ ಗೆದ್ದಿತ್ತು. ಇದೀಗ ಮತ್ತೆ ಮುಂದಿನ ವರ್ಷ ನಡೆಯುವ ಟೆಸ್ಟ್​ ವಿಶ್ವಕಪ್​ ಮತ್ತು ಚಾಂಪಿಯನ್ಸ್​ ಟ್ರೋಫಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಇದು ಸತ್ಯವಾಗಲಿದೆಯಾ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ Jay Shah: ಕೊಹ್ಲಿಯನ್ನೇ ದಿಟ್ಟಿಸಿ ನೋಡುತ್ತಾ ನಿಂತ ಜಯ್​ ಶಾ; ವಿಡಿಯೊ ವೈರಲ್​

ರೋಹಿತ್ ನಾಯಕತ್ವದಲ್ಲಿ, ಕಳೆದ ವಾರ ಬಾರ್ಬಡೋಸ್‌ನಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಏಳು ರನ್‌ಗಳ ಜಯದೊಂದಿಗೆ 11 ವರ್ಷಗಳ ಐಸಿಸಿ ಪ್ರಶಸ್ತಿ ಬರವನ್ನು ಕೊನೆಗೊಳಿಸಿತ್ತು. 2007 ರ ಉದ್ಘಾಟನಾ ಆವೃತ್ತಿಯ ನಂತರ ಇದು ಭಾರತಕ್ಕೆ ಒಲಿದ ಎರಡನೇ ಟಿ20 ವಿಶ್ವಕಪ್ ಪ್ರಶಸ್ತಿಯಾಗಿತ್ತು. ಮೆನ್ ಇನ್ ಬ್ಲೂ ಈ ಹಿಂದೆ ರೋಹಿತ್ ಅವರ ನಾಯಕತ್ವದಲ್ಲಿ ಎರಡು ಫೈನಲ್‌ಗಳನ್ನು ಆಡಿತ್ತು. ಏಕದಿನ ವಿಶ್ವಕಪ್ ಮತ್ತು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್. ಇಲ್ಲಿ ರನ್ನರ್-ಅಪ್ ಸ್ಥಾನ ಗಳಿಸಿತ್ತು.

ಪಾಕ್‌ಗೆ ಭಾರತ ಹೋಗಲ್ಲ

2025ರಲ್ಲಿ ಪಾಕಿಸ್ತಾನದಲ್ಲಿ ಆಯೋಜನೆಗೊಂಡಿರುವ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ತಿಳಿದುಬಂದಿದೆ. ಕೆಲದಿನಗಳ ಹಿಂದಷ್ಟೇ ಚಾಂಪಿಯನ್ಸ್‌ ಟ್ರೋಫಿಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದ್ದ ಪಾಕಿಸ್ತಾನ ಕ್ರಿಕೆಟ್‌ ಬೋರ್ಡ್‌, ಮಾ.1ಕ್ಕೆ ಲಾಹೋರ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ನಿಗದಿ ಮಾಡಿತ್ತು. ಆದರೆ, ಭದ್ರತೆಯ ಕಾರಣವನ್ನು ನೀಡಿರುವ ಬಿಸಿಸಿಐ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲು ನಿರಾಕರಿಸಿದೆ ಎಂದು ವರದಿಗಳು ತಿಳಿಸಿವೆ.

Exit mobile version