Site icon Vistara News

Rohit Sharma: ಯುಪಿಎಸ್ಸಿ ಕೋಚಿಂಗ್​ನಲ್ಲಿಯೂ ರೋಹಿತ್​ ಶರ್ಮ ಹವಾ; ವೈರಲ್​ ವಿಡಿಯೊ ಇಲ್ಲಿದೆ

Rohit Sharma

Rohit Sharma: UPSC teacher's hilarious take on the pitch involving Rohit Sharma

ಮುಂಬಯಿ: ಭಾರತ ಕ್ರಿಕೆಟ್​ ತಂಡದ ನಾಯಕ ರೋಹಿತ್ ಶರ್ಮ(Rohit Sharma) ಅವರ ಸಾಧನೆ ಇದೀಗ ಯುಪಿಎಸ್ಸಿ ವಿದ್ಯಾರ್ಥಿಗಳಿಗೂ ಸ್ಫೂರ್ತಿಯಾಗಿದೆ. ಹೌದು, ಯುಪಿಎಸ್ಸಿ(UPSC ) ಕೋಚಿಂಗ್​ ಸೆಂಟರ್​ ಒಂದರಲ್ಲಿ ಶಿಕ್ಷಕರೊಬ್ಬರು(UPSC teacher) ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ವೇಳೆ ರೋಹಿತ್​ ಅವರ ಬ್ಯಾಟಿಂಗ್​ ಬಗ್ಗೆ ಗುಣಗಾನ ಮಾಡಿದ್ದಾರೆ. ಈ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್(viral video) ಆಗಿದೆ.

ಪಾಠ ಮಾಡುತ್ತಿದ್ದ ಶಿಕ್ಷಕ, ರೋಹಿತ್ ಶರ್ಮ ಅವರ ಬ್ಯಾಟಿಂಗ್ ನೋಡುವಾಹ ರನ್​ ಗಳಿಸಲೆಂದೇ ಈ ಪಿಚ್​ ಮಾಡಿರುವಂತೆ ತೋರುತ್ತದೆ. ಆದರೆ, ಇತರ ಬ್ಯಾಟರ್‌ಗಳು ಕ್ರೀಸ್​ಗೆ ಬಂದಾಗ ಅದು ಕಠಿಣ ಎಂದು ಅನಿಸುತ್ತದೆ. ಅದು ಏಕೆ ಎಂಬುದು ನಿಜಕ್ಕೂ ಗೊಂದಲಮಯವಾಗಿದೆ ಎಂದು ಹೇಳುವ ಮೂಲಕ ಪರೀಕ್ಷೆ ಬರೆಯಲು ಸಜ್ಜಾಗಿ ನಿಂತಿರುವ ವಿದ್ಯಾರ್ಥಿಗಳು ರೋಹಿತ್​ ರನ್​ ಗಳಿಸಿದಂತೆ ಅಂಕ ಗಳಿಸಬೇಕು ಎನ್ನುವ ಉದಾಹರಣೆಯನ್ನು ನೀಡಿದ್ದಾರೆ. ಈ ವಿಡಿಯೊ ಕಂಡ ನೆಟ್ಟಿಗರು ಮಿಶ್ರ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಕೆಲವರು ರೋಹಿತ್​ ಶೂನ್ಯಕ್ಕೆ ಔಟ್​ ಆದ ಹಲವು ನಿದರ್ಶನ ಇದೆ ಎಂದು ಹಾಸ್ಯ ಮಾಡಿದರೆ, ಇನ್ನು ಕೆಲವರು ರೋಹಿತ್​ ಏಕದಿನದಲ್ಲಿ ಮೂರು ಬಾರಿ ದ್ವಿಶತಕ ಬಾರಿಸಿದ್ದಾರೆ ಎಂದು ಕಮೆಂಟ್​ ಮಾಡಿದ್ದಾರೆ.

ಲಂಕಾ ವಿರುದ್ಧ ನಾಳೆ ನಡೆಯುವ ಅಂತಿಮ ಏಕದಿನ ಪಂದ್ಯದಲ್ಲಿ ರೋಹಿತ್​ ಶರ್ಮ 2 ಸಿಕ್ಸರ್​ ಬಾರಿಸಿದರೆ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್​ನಲ್ಲಿ(Most sixes in career in ODIs) ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಲಿದ್ದಾರೆ. ಈ ಮೂಲಕ ಕ್ರಿಸ್​ ಗೇಲ್​ (331 ಸಿಕ್ಸರ್​) ದಾಖಲೆಯನ್ನು ಮುರಿಯಲಿದ್ದಾರೆ. ಸದ್ಯ ರೋಹಿತ್​ 330 ಸಿಕ್ಸರ್​ ಬಾರಿಸಿ ಮೂರನೇ ಸ್ಥಾನಿಯಾಗಿದ್ದಾರೆ. ಅತಿ ಹೆಚ್ಚು ಸಿಕ್ಸರ್​ ಬಾರಿಸಿದ ವಿಶ್ವ ದಾಖಲೆ ಪಾಕಿಸ್ತಾನದ ಮಾಜಿ ನಾಯಕ ಹಾಗೂ ಆಟಗಾರ ಶಾಹೀದ್ ಅಫ್ರಿದಿ ಹೆಸರಿನಲ್ಲಿದೆ. ಅಫ್ರಿದಿ 398 ಏಕದಿನ ಪಂದ್ಯಗಳನ್ನಾಡಿ 351 ಸಿಕ್ಸರ್​ ಬಾರಿಸಿದ್ದಾರೆ. ರೋಹಿತ್​ ಕನಿಷ್ಠ 2 ವರ್ಷಗಳ ಕಾಲ ಏಕದಿನ ಆಡಿದರೆ ಈ ದಾಖಲೆಯನ್ನು ಮುರಿಯುವುದರಲ್ಲಿ ಯಾವುದೇ ಅನುಮಾನವಿಲ್ಲ.

ಇದನ್ನೂ ಓದಿ Rohit Sharma: ಕ್ರಿಸ್​ ಗೇಲ್​ ಸಿಕ್ಸರ್​ ದಾಖಲೆ ಮೇಲೆ ಕಣ್ಣಿಟ್ಟ ಹಿಟ್​ಮ್ಯಾನ್​ ರೋಹಿತ್​

ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

Exit mobile version