Site icon Vistara News

Rohit Sharma: ಗೆಲುವಿನ ಸವಿ ನೆನಪಿಗಾಗಿ ಪಿಚ್​ನ ಮಣ್ಣು ತಿಂದ ರೋಹಿತ್​; ವಿಡಿಯೊ ವೈರಲ್​

Rohit Sharma

Rohit Sharma: Rohit Sharma reveals why he ate a speck of soil from Barbados pitch after India's T20 World Cup victory

ಬಾರ್ಬಡೋಸ್​: ಅತ್ಯಂತ ರೋಚಕವಾಗಿ ನಡೆದ ಟಿ20 ವಿಶ್ವಕಪ್​ ಫೈನಲ್(T20 World Cup 2024) ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ(South Africa vs India) ತಂಡವನ್ನು 7 ರನ್​ಗಳಿಂದ ಮಣಿಸಿದ ಭಾರತ 2ನೇ ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಿತು. ಜತೆಗೆ 13 ವರ್ಷಗಳ ಕಪ್​ ಬರಗಾಲ ಕೂಡ ನೀಗಿತು. ಈ ಗೆಲುವಿನ ಸವಿ ನೆನಪಿಗಾಗಿ ತಂಡದ ನಾಯಕ ರೋಹಿತ್ ಶರ್ಮ(Rohit Sharma) ಅವರು ಪಿಚ್​ನ ಒಂದು ಚಿಟಿಕೆ ಮಣ್ಣು ಬಾಯಿಗೆ ಹಾಕಿದ್ದಾರೆ. ಈ ವಿಡಿಯೊವನ್ನು ಐಸಿಸಿ ತನ್ನ ಅಧಿಕೃತ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದೆ.

ಫುಟ್ಬಾಲ್​, ಟೆನಿಸ್​ ಸೇರಿ ಹೊರಾಂಗಣ ಕ್ರೀಡೆಯಲ್ಲಿಯಲ್ಲಿ ಚಾಂಪಿಯನ್​ ಆದ ತಂಡದ ಕೆಲ ಆಟಗಾರರು ಮೈದಾನದ ಒಂದೆಡರು ಹುಲ್ಲನ್ನು ಕಿತ್ತು ತಿನ್ನುವ ಮೂಲಕ ಗೆಲುವಿಗೆ ನೆರವಾದ ಈ ಮೈದಾನದ ಋಣವನ್ನು ತೀರಿಸಿಕೊಳ್ಳುತ್ತಾರೆ. ಇದೇ ರೀತಿ ರೋಹಿತ್​ ಕೂಡ ಕಪ್​ ಗೆದ್ದ ಬಳಿಕ ಪಿಚ್​ನಿಂದ ಒಂದು ಚಿಟಿಕೆ ಮಣ್ಣನ್ನು ಬಾಯಿಗೆ ಹಾಕಿದ್ದಾರೆ.

ವಿದಾಯ ಹೇಳಿದ ರೋಹಿತ್​


ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಇದನ್ನೂ ಓದಿ

ರೋಚಕ ಪಂದ್ಯ ಗೆದ್ದ ಭಾರತ


ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು.

ಕೊನೆಯ ಓವರ್​ನಲ್ಲಿ ದಕ್ಷಿಣ ಆಫ್ರಿಕಾ ಗೆಲುವಿಗೆ 16 ರನ್ ಅಗತ್ಯವಿತ್ತು. ಹಾರ್ದಿಕ್ ಪಾಂಡ್ಯ ಎಸೆದ ಮೊದಲ ಎಸೆತವನ್ನು ಡೇವಿಡ್ ಮಿಲ್ಲರ್ ಸಿಕ್ಸರ್ ನತ್ತ ಬಾರಿಸಿದ್ದರು. ಬೌಂಡರಿ ಲೈನ್ ನಲ್ಲಿದ್ದ ಸೂರ್ಯ ಕುಮಾರ್ ಯಾದವ್ ಯಾರೂ ಊಹಿಸದಂತೆ ಸಾಹಸಮಯ ಅಮೋಘ ಕ್ಯಾಚ್ ಪಡೆದರು. 21 ರನ್ ಗಳಿಸಿದ್ದ ಡೇವಿಡ್​ ಮಿಲ್ಲರ್ ವಿಕೆಟ್​ ಕೈಚೆಲ್ಲಿದರು. ಎರಡನೇ ಎಸೆತವನ್ನು ರಬಾಡಾ ಬೌಂಡರಿ ಬಾರಿಸಿದರು. ಮೂರನೇ ಎಸೆತದಲ್ಲಿ ಒಂದು ರನ್ ಬಂತು. ಕೊನೆಯ ಎರಡು ಎಸೆತಗಳಲ್ಲಿ 10 ರನ್ ಅಗತ್ಯವಿತ್ತು. ಹಾರ್ದಿಕ್ ಒಂದು ವೈಡ್ ಎಸೆದರು. ರಬಾಡಾ ಕ್ಯಾಚಿತ್ತು ನಿರ್ಗಮಿಸಿದರು. ಕೊನೆಯ ಎಸೆತದಲ್ಲಿ ಒಂದು ರನ್ ಮಾತ್ರ ಬಂತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತು.

Exit mobile version