Site icon Vistara News

Rohit Sharma: 5 ಕೋಟಿ ಬಹುಮಾನ ಮೊತ್ತವನ್ನು ತಂಡದ ಸಿಬ್ಬಂದಿಗೆ ನೀಡಲು ಮುಂದಾದ ರೋಹಿತ್​

Rohit Sharma

Rohit Sharma:Rohit Sharma Offered To Give Up T20 World Cup Prize Money Before Rahul Dravid Decision

ಮುಂಬಯಿ: ಟಿ20 ವಿಶ್ವಕಪ್​ ಗೆದ್ದ ಭಾರತ ತಂಡಕ್ಕೆ ಬಿಸಿಸಿಐ(BCCI prize money) ನೀಡಿದ 125 ಕೋಟಿ ರೂಪಾಯಿ ಬಹುಮಾನ ಮೊತ್ತದಲ್ಲಿ ರಾಹುಲ್​ ದ್ರಾವಿಡ್(Rahul Dravid)​ ಅವರು ಹೆಚ್ಚುವರಿ 2.5 ಕೋಟಿ ರೂ. ಸ್ವೀಕರಿಸಲು ನಿರಾಕರಿಸಿದ ಬೆನ್ನಲ್ಲೇ ಇದೀಗ ನಾಯಕ ರೋಹಿತ್​ ಶರ್ಮ(Rohit Sharma) ಕೂಡ ಇದೇ ನಿರ್ಧಾರ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.

ಮೂಲಗಳ ಪ್ರಕಾರ ರೋಹಿತ್​ ಶರ್ಮ ತಮಗೆ ಬಂದಿರುವ ಬಹುಮಾನದಲ್ಲಿ 5 ಕೋಟಿ ರೂ. ಮೊತ್ತವನ್ನು ಇಡೀ ತಂಡದ ಸಿಬ್ಬಂದಿಗೆ ಹಂಚಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. “ತಂಡದ ಯಶಸ್ಸಿನಲ್ಲಿ ಅವರ ಪಾತ್ರ ಅಪಾರವಾಗಿದೆ. ಹೀಗಾಗಿ ಈ ಹಣದಲ್ಲಿ ಅವರಿಗೂ ಸಮಾನತೆ ಸಿಗಬೇಕು ಎನ್ನುವ ನಿಟ್ಟಿನಲ್ಲಿ ತನ್ನ ಬಹುಮಾನ ಮೊತ್ತವನ್ನು ಈ ಸಿಬ್ಬಂದಿಗೆ ನೀಡಲು ಬಯಸಿದ್ದೇನೆ, ತನಗೆ ನೀಡಲಾದ ಹಣದಲ್ಲಿ ಅವರಿಗಾಗಿ ಕಡಿತಗೊಂಡರೆ ಖಂಡಿತ ನನಗೆ ಯಾವುದೇ ಬೇಸರವಿಲ್ಲ” ಎಂದು ತಿಳಿಸಿರುವುದಾಗಿ ರೋಹಿತ್​ ಆಪ್ತ ಮೂಲಗಳು ತಿಳಿಸಿವೆ.

ಕ್ರಿಕೆಟಿಗರಿಗೆ ತಲಾ 5 ಕೋಟಿ ರೂಪಾಯಿ, ಕೋಚ್ ದ್ರಾವಿಡ್‌ಗೆ 5 ಕೋಟಿ ಹಾಗೂ ಸಹಾಯ ಸಿಬ್ಬಂದಿಗೆ ತಲಾ 2.5 ಕೋಟಿ ರೂಪಾಯಿ ಬಹುಮಾನ ಮೊತ್ತವನ್ನು ಬಿಸಿಸಿಐ ಘೋಷಿಸಿತ್ತು. ಆದರೆ ದ್ರಾವಿಡ್​ ತನ್ನ ಇತರ ಸಿಬ್ಬಂದಿ ವರ್ಗಕ್ಕೆ ನೀಡಿದಂತೆ ತನಗೂ 2.5 ಕೋಟಿ ರೂಪಾಯಿ ಮಾತ್ರ ಸಾಕು ಎಂದು ಹೆಚ್ಚುವರಿ 2.5 ಕೋಟಿ ರೂಪಾಯಿ ಸ್ವೀಕರಿಸಲು ನಿರಾಕರಿಸಿದ್ದರು.

ಜೂನ್​ 29ರಂದು ಬಾರ್ಡಡೋಸ್​ನಲ್ಲಿ ನಡೆದಿದ್ದ ಫೈನಲ್​ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವು ಸಾಧಿಸಿ 17 ವರ್ಷಗಳ ಬಳಿಕ 2ನೇ ಬಾರಿಗೆ ಟಿ20 ವಿಶ್ವಕಪ್(T20 World cup 2024)​ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದ ಟೀಮ್​ ಇಂಡಿಯಾಕ್ಕೆ ಬಿಸಿಸಿಐ 125 ಕೋಟಿ ಬಹುಮಾನ ನೀಡಿತ್ತು. ಮುಂಬೈಯಲ್ಲಿ ನಡೆದಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಈ ಬಹುಮಾನ ಮೊತ್ತದ ಚಕ್​ ವಿತರಿಸಲಾಗಿತ್ತು.

ಇದನ್ನೂ ಓದಿ Rohit Sharma: ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ ಕುಟುಂಬದ ಜತೆ ವಿದೇಶ ಪ್ರವಾಸ ಕೈಗೊಂಡ ರೋಹಿತ್​

ವಿಶ್ವಕಪ್​ ಗೆದ್ದ ತಂಡದ ಭಾಗವಾಗಿದ್ದ 15 ಮಂದಿ ಆಟಗಾರರಿಗೆ ತಲಾ 5 ಕೋಟಿ ರೂ ಹಂಚಲಾಗುತ್ತದೆ. ಇಡೀ ಕೂಟದಲ್ಲಿ ಒಂದೇ ಒಂದು ಪಂದ್ಯವಾಡದ ಆಟಗಾರರಿಗೂ ಇಷ್ಟೇ ಮೊತ್ತದ ಹಣ ಸಿಗಲಿದೆ. ಅಲ್ಲದೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೂ 5 ಕೋಟಿ ರೂ. ನೀಡಲಾಗುತ್ತದೆ ಎಂದು ವರದಿ ಹೇಳಿದೆ.

ಸಹಾಯಕ ಕೋಚ್ ಗಳಾದ ವಿಕ್ರಮ್ ರಾಥೋರ್, ಟಿ ದಿಲೀಪ್, ಪರಾಸ್ ಮಾಂಬ್ರೆ ಅವರಿಗೆ ತಲಾ 2.5 ಕೋಟಿ ರೂ ನೀಡಲಾಗುತ್ತದೆ. ತಲಾ 1 ಕೋಟಿ ರೂ ಅಜಿತ್ ಅಗರ್ಕರ್ ಸೇರಿ ಆಯ್ಕೆ ಸಮಿತಿ ಸದಸ್ಯರಿಗೆ ನೀಡಲಾಗುತ್ತದೆ. ತಂಡದೊಂದಿಗೆ ಪ್ರಯಾಣ ಬೆಳೆಸಿದ್ದ ನಾಲ್ವರು ಮೀಸಲು ಆಟಗಾರರಿಗೂ ತಲಾ 1 ಕೋಟಿ ಬಹುಮಾನ ಮೊತ್ತ ಸಿಗಲಿದೆ. ಶುಬ್ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹಮದ್, ಆವೇಶ್ ಖಾನ್ ಮೀಸಲು ಆಟಗಾರರಾಗಿದ್ದರು. ಸಹಾಯಕ ಸಿಬ್ಬಂದಿಗಳಲ್ಲಿ ಮೂವರು ಫಿಸಿಯೋಥೆರಪಿಸ್ಟ್‌ ಗಳು, ಮೂವರು ಥ್ರೋಡೌನ್ ಸ್ಪೆಷಲಿಸ್ಟ್ ಗಳು, ಇಬ್ಬರು ಮಸಾಜರ್ ಗಳು ಮತ್ತು ಸ್ಟ್ರೆಂತ್ ಆಯಂಡ್ ಕಂಡೀಷನಿಂಗ್ ಕೋಚ್ ತಲಾ 2 ಕೋಟಿ ರೂ. ನಿಗದಿ ಮಾಡಲಾಗಿತ್ತು.

Exit mobile version