Site icon Vistara News

T20 World Cup 2024: ಟಿ20 ವಿಶ್ವಕಪ್​ಗೂ ರೋಹಿತ್​ ಶರ್ಮಾ ನಾಯಕ; ಖಚಿತಪಡಿಸಿದ ಜಯ್​ ಶಾ

rohit sharma

ಮುಂಬಯಿ: ಬಹುನಿರೀಕ್ಷಿತ ಐಸಿಸಿ ಪುರುಷರ ಟಿ20 ವಿಶ್ವಕಪ್​(T20 World Cup 2024) ಟೂರ್ನಿ ಜೂನ್ 2 ರಿಂದ 29 ರ ವರೆಗೆ ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಜಂಟಿ ಆತಿಥ್ಯದಲ್ಲಿ ನಡೆಯಲಿದೆ. ಈ ಟೂರ್ನಿಯಲ್ಲಿಯೂ ಭಾರತ ತಂಡವನ್ನು ರೋಹಿತ್​ ಶರ್ಮಾ(Rohit Sharma) ಅವರೇ ಮುನ್ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಹಾರ್ದಿಕ್​ ಪಾಂಡ್ಯ ಅವರು ಭಾರತ ತಂಡದ ನಾಯಕನಾಗಲಿದ್ದಾರೆ, ರೋಹಿತ್​, ವಿರಾಟ್ ಮತ್ತು ರಾಹುಲ್​ ಸೇರಿ ಹಿರಿಯ ಆಟಗಾರರನ್ನು ಆಯ್ಕೆ ಮಾಡುವುದು ಅನುಮಾನ ಎನ್ನುವ ಮಾತುಗಳು ಕೇಳಿ ಬಂದಿತ್ತು. ಇದಕ್ಕೆ ಕಾರಣವೂ ಕೂಡ ಇತ್ತು. 2022ರ ಟಿ20 ವಿಶ್ವಕಪ್​ ಬಳಿಕ ಇವರೆಲ್ಲ ಭಾರತ ಪರ ಟಿ20 ಪಂದ್ಯವನ್ನು ಆಡಿರಲಿಲ್ಲ. ಆದರೆ, ಇದೇ ವರ್ಷ ಅಫಘಾನಿಸ್ತಾನ ವಿರುದ್ಧದ ಟಿ20ಯಲ್ಲಿ ಇವರೆಲ್ಲ ಕಮ್​ಬ್ಯಾಕ್​ ಮಾಡಿದ್ದರು. ರೋಹಿತ್​ ತಂಡದ ನಾಯಕನೂ ಆಗಿದ್ದರು. ಇದೀಗ ವಿಶ್ವಕಪ್​ನಲ್ಲಿ ರೋಹಿತ್​ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ(Jay Shah) ಬುಧವಾರ ಖಚಿತಪಡಿಸಿದ್ದಾರೆ. ಅಧಿಕೃತ ಮುದ್ರೆ ಬೀಳುವುದೊಂದೆ ಬಾಕಿ. ಇಲ್ಲಿಗೆ ಎಲ್ಲ ಅನುಮಾನಗಳಿಗೆ ತೆರೆ ಬಿದ್ದಿದೆ.

ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ಮರುನಾಮಕರಣ ಕಾರ್ಯಕ್ರಮದಲ್ಲಿ ಮಾತನಾಡಿದ ಜಯ್​ ಶಾ, ನಾವು 2023ರ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಸೋತಿರಬಹುದು. ಆದರೆ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ತೋರುವ ಮೂಲಕ ದೇಶದ ಜನರ ಹೃದಯ ಗೆದ್ದಿದ್ದೇವೆ. ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಭಾರತವು 2024 ರ ಟಿ 20 ವಿಶ್ವಕಪ್ ಗೆಲ್ಲಲಿದೆ ಎನ್ನುವ ವಿಶ್ವಾಸವಿದೆ ಎಂದು ಹೇಳಿದರು. ಈ ಮೂಲಕ ರೋಹಿತ್​ ಟಿ20 ವಿಶ್ವಕಪ್​ನಲ್ಲಿಯೂ ತಂಡದ ನಾಯಕತ್ವ ವಹಿಸಿಕೊಳ್ಳುವುದು ಖಚಿತ ಎನ್ನುವ ಸುಳಿವು ನೀಡಿದ್ದಾರೆ. ನಾಯಕತ್ವದ ನಿರೀಕ್ಷೆಯಲ್ಲಿದ್ದ ಹಾರ್ದಿಕ್​ ಪಾಂಡ್ಯಗೆ ನಿರಾಸೆಯಾಗಿದೆ. ಅವರಿಗೆ ಉಪನಾಯಕತ್ವ ಸಿಗುವ ಸಾಧ್ಯತೆ ಇದೆ.

ಇದನ್ನೂ ಓದಿ IND vs ENG: ರಾಜ್​ಕೋಟ್​ನ ಪಿಚ್​ ರಿಪೋರ್ಟ್​, ಹವಾಮಾನ ವರದಿ ಹೇಗಿದೆ?

ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್‌ 9 ರಂದು ಪಾಕ್​ ವಿರುದ್ಧ ಆಡಲಿದ. ಭಾರತ ತನ್ನ ಎಲ್ಲ ಲೀಗ್‌ ಪಂದ್ಯಗಳನ್ನು ಅಮೆರಿಕದಲ್ಲೇ ಆಡದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್‌ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್​ 9ರಂದು ನಡೆಯಲಿದೆ. ಪಂದ್ಯವಾಳಿಯ ಟಿಕೆಟ್​ಗಳ ಮಾರಾಟವನ್ನು ಐಸಿಸಿ ಈಗಾಗಲೇ ಆರಂಭಿಸಿದೆ

Exit mobile version