ಹೈದರಾಬಾದ್: ಮಸ್ಟ್ ವಿನ್ ಗೇಮ್ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಇದು ಪ್ರಸಕ್ತ ಋತುವಿನಲ್ಲಿ ಇತ್ತಂಡಗಳ ನಡುವಿನ ಮೊದಲ ಮುಖಾಮುಖಿ. ಹೀಗಾಗಿ ಗೆಲುವು ಯಾರಿಗೆ ಒಲಿಯಲಿದೆ ಎಂಬುದು ಕಾದು ನೋಡಬೇಕಿದೆ.
ಪಿಚ್ ರಿಪೋರ್ಟ್
ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಕ್ಕೂ ಸಮತೋಲಿತ ನೆರವು ನೀಡಲಿದೆ. ಇಲ್ಲಿ ಆರಂಭದಲ್ಲಿ ವೇಗದ ಬೌಲರ್‌ಳು ಮೇಲುಗೈ ಸಾಧಿಸಿದರೆ, ಬಳಿಕ ಬ್ಯಾಟರ್‌ಗಳು ಪಂದ್ಯದುದ್ದಕ್ಕೂ ಹಿಡಿತ ಸಾಧಿಸಲಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಆರ್‌ಸಿಬಿ ತಂಡಗಳು ಐಪಿಎಲ್ನಲ್ಲಿ ಇದುವರೆಗೆ ಒಟ್ಟು 22 ಬಾರಿ ಮುಖಾಮುಖಿಯಾಗಿದೆ. ಹೈದರಾಬಾದ್ 12 ಬಾರಿ ಗೆದ್ದಿದ್ದರೆ, ಆರ್‌ಸಿಬಿ 9 ಪಂದ್ಯಗಳಲ್ಲಿ ಮೇಲುಗೈ ಸಾಧಿಸಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ.
ಇದನ್ನೂ ಓದಿ IPL 2023: ಚಿರತೆಯಂತೆ ಜಿಗಿದು ಕ್ಯಾಚ್ ಪಡೆದ ಶಿಖರ್ ಧವನ್; ವಿಡಿಯೊ ವೈರಲ್
ಸಂಭಾವ್ಯ ತಂಡಗಳು
ಸನ್‌ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಏಡನ್ ಮಾರ್ಕ್ರಮ್ ,ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಅಬ್ದುಲ್ ಸಮದ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಟಿ ನಟರಾಜನ್, ಉಮ್ರಾನ್ ಮಲಿಕ್.
ಆರ್‌ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ಮಹಿಪಾಲ್ ಲೊಮ್ರೊರ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮೈಕಲ್ ಬ್ರೇಸ್‌ವೆಲ್, ವೇಯ್ನ್ ಪಾರ್ನೆಲ್, ಹರ್ಷಲ್ ಪಟೇಲ್, ಕರ್ಣ್ ಶರ್ಮಾ ಮತ್ತು ಮೊಹಮ್ಮದ್ ಸಿರಾಜ್.