Site icon Vistara News

RR vs KKR: ಅಗ್ರಸ್ಥಾನಕ್ಕೆ ಇಂದು ಕೆಕೆಆರ್​-ರಾಜಸ್ಥಾನ್ ಮಧ್ಯೆ ಹೈವೋಲ್ಟೇಜ್ ಕದನ

RR vs KKR

ಕೋಲ್ಕತ್ತಾ: ಈ ಬಾರಿಯ ಐಪಿಎಲ್‌ನಲ್ಲಿ(IPL 2024) ಸದ್ಯ ಅಗ್ರ 2 ಸ್ಥಾನಗಳನ್ನು ಪಡೆದಿರುವ ರಾಜಸ್ಥಾನ್​ ರಾಯಲ್ಸ್(RR vs KKR)​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders)​ ತಂಡಗಳು ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಯಾರೇ ಗೆದ್ದರು ಅಗ್ರಸ್ಥಾನ ಪಡೆಯಲಿದ್ದಾರೆ. ಉಭಯ ತಂಡಗಳು ಕೂಡ ಬಲಿಷ್ಠವಾಗಿರುವ ಕಾರಣ ಈ ಪಂದ್ಯವನ್ನು ಹೈವೋಲ್ಟೇಜ್​ ಪಂದ್ಯ ಎಂದು ನಿರೀಕ್ಷೆ ಮಾಡಲಾಗಿದೆ. ರಾಜಸ್ಥಾನ(Rajasthan Royals) ಸದ್ಯ 6 ಪಂದ್ಯಗಳಲ್ಲಿ 5 ಗೆದ್ದಿದ್ದು ಅಗ್ರಸ್ಥಾನದಲ್ಲಿದೆ. ಕೋಲ್ಕತಾ 5ರಲ್ಲಿ 4 ಪಂದ್ಯಗಳಲ್ಲಿ ಜಯಿಸಿ ದ್ವಿತೀಯ ಸ್ಥಾನದಲ್ಲಿದೆ.

ಕೆಕೆಆರ್​ ತಂಡಕ್ಕೆ ದೊಡ್ಡ ಲಾಭವೆಂದರೆ ಸುನೀಲ್​ ನರೈನ್​ ಅವರ ಪ್ರಚಂಡ ಬ್ಯಾಟಿಂಗ್​ ಫಾರ್ಮ್ ಪಂದ್ಯದಿಂದ ಪಂದ್ಯಕ್ಕೆ ಅವರು ಸಿಡಿಯುತ್ತಲೇ ಇದ್ದಾರೆ. ಬೌಲರ್​ ಆಗಿರುವ ಅವರು ಆರಂಭಿಕಾಗಿ ಕಣಕ್ಕಿಳಿದು ಕಡಿಮೆ ಎಸೆತಗಳಿಂದ ದೊಡ್ಡ ಮೊತ್ತ ಪೇರಿಸುತ್ತಾರೆ. ಇದು ತಂಡಕ್ಕೆ ಬೋನಸ್​ ಆಗಿದೆ. ತಂಡಕ್ಕೆ ಹೆಚ್ಚುವರಿ ಬ್ಯಾಟರ್​ ಆಯ್ಕೆಯೂ ಸಿಕ್ಕಂತಾಗುತ್ತದೆ. 18 ವರ್ಷದ ಆಂಗ್ಕ್ರಿಶ್ ರಘುವಂಶಿ ಕೂಡ ಬಿರುಸಿನ ಬ್ಯಾಟಿಂಗ್​ ಮೂಲಕ ಗಮನಸೆಳೆದಿದ್ದರು. ಈ ಪಂದ್ಯದಲ್ಲೂ ತಂಡ ಇವರ ಮೇಲೆ ಹೆಚ್ಚಿನ ಬರವಸೆ ಇರಿಸಿದೆ. ರಸೆಲ್ ಅವರಂತೂ ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡರಲ್ಲೂ ಉತ್ತಮ ಫಾರ್ಮ್​ನಲ್ಲಿದ್ದಾರೆ. ಫಿಲ್​ ಸಾಲ್ಟ್​​ ಫಾರ್ಮ್​ಗೆ ಮರಳಿರುವುದು ತಂಡಕ್ಕೆ ಇನ್ನೂ ಹೆಚ್ಚಿನ ಬಲ ಬಂದಂತಾಗಿದೆ. ಕಳೆದ ಲಕ್ನೋ ವಿರುದ್ಧ ಅರ್ಧಶತಕ ಬಾರಿಸಿ ಮಿಂಚಿದ್ದರು.

ಫಾರ್ಮ್​ ಕಳೆದುಕೊಂಡ ಜೈಸ್ವಾಲ್


ಟೀಮ್​ ಇಂಡಿಯಾದ ಭವಿಷ್ಯದ ಆಟಗಾರ ಎಂದೇ ಗುರುತಿಸಲ್ಪಟ್ಟಿದ್ದ ಯುವ ಬ್ಯಾಟರ್​ ಯಶಸ್ವಿ ಜೈಸ್ವಾಲ್​ ಈ ಬಾರಿ ಐಪಿಎಲ್​ನಲ್ಲಿ ಸಂಪೂರ್ಣ ಮಂಕಾಗಿದ್ದಾರೆ. ಆಡಿದ ಪ್ರತಿ ಪಂದ್ಯದಲ್ಲಿಯೂ ವೈಫಲ್ಯ ಕಂಡಿದ್ದಾರೆ. ಟಿ20 ವಿಶ್ವಕಪ್​ಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇರುವಾಗ ಫಾರ್ಮ್​ ಕಳೆದುಕೊಂಡಿರುವುದು ಅವರಿಗೆ ಹಿನ್ನಡೆಯಾಗಿ ಪರಿಣಮಿಸಿದೆ. ಮುಂದಿನ ಪಂದ್ಯದಲ್ಲಿ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಮತ್ತೆ ವಿಫಲವಾದರೆ ಟಿ20 ವಿಶ್ವಕಪ್​ಗೆ ಆಯ್ಕೆಯಾವುದು ಅನುಮಾನವಾಗಿದೆ. ರಾಜಸ್ಥಾನ್(Rajasthan Royals) ತಂಡ ಕೂಡ ಬ್ಯಾಟಿಂಗ್​ ಮತ್ತು ಬೌಲಿಂಗ್​ ವಿಭಾಗದಲ್ಲಿ ಉತ್ತಮವಾಗಿದೆ. ಆದರೂ ಕೂಡ ಈ ತಂಡದ ಪ್ರದರ್ಶನದ ಮೇಲೆ ಹೆಚ್ಚು ನಂಬಿಕೆ ಇಡುವಂತಿಲ್ಲ. ಕಾರಣ ಪ್ರತಿ ಆವೃತ್ತಿಯಲ್ಲಿಯೂ ಆರಂಭಿಕ ಹಂತದಲ್ಲಿ ಸತತ ಗೆಲುವು ಸಾಧಿಸಿ ಆ ಬಳಿಕ ಸತತ ಸೋಲು ಕಂಡು ಪಾತಾಳಕ್ಕೆ ಕುಸಿದ ಹಲವು ನಿದರ್ಶನಗಳಿವೆ.

ಇದನ್ನೂ ಓದಿ IPL 2024: ಸ್ಟ್ರೈಕ್ ರೇಟ್​ ಮೂಲಕ ನೂತನ ದಾಖಲೆ ಬರೆದ ಅಬ್ದುಲ್​ ಸಮದ್

ಮುಖಾಮುಖಿ


ಉಭಯ ತಂಡಗಳು ಇದುವರೆಗೆ ಒಟ್ಟು 28 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ರಾಜಸ್ಥಾನ ರಾಯಲ್ಸ್​ 13 ಪಂದ್ಯ ಗೆದ್ದರೆ, ಕೋಲ್ಕತಾ ನೈಟ್​ ರೈಡರ್ಸ್​ 14 ಪಂದ್ಯ ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಕಳೆದ ಆವೃತ್ತಿಯಲ್ಲಿ ಒಂದೇ ಪಂದ್ಯ ಆಡಿ, ಈ ಪಂದ್ಯವನ್ನು ರಾಜಸ್ಥಾನ್​ 9 ವಿಕೆಟ್​ ಅಂತರದಿಂದ ಗೆದ್ದು ಬೀಗಿತ್ತು. ಈ ಸೋಲಿಗೆ ಕೆಕೆಆರ್​ ಈ ಬಾರಿ ತವರಿನಲ್ಲಿ ಸೇಡು ತೀರಿಸುವ ತವಕದಲ್ಲಿದೆ.

ಸಂಭಾವ್ಯ ಆಟಗಾರರ ಪಟ್ಟಿ


ರಾಜಸ್ಥಾನ್​: ಯಶಸ್ವಿ ಜೈಸ್ವಾಲ್‌, ಜೋಸ್ ಬಟ್ಲರ್‌, ಸಂಜು ಸ್ಯಾಮ್ಸನ್‌(ನಾಯಕ), ರಿಯಾನ್‌ ಪರಾಗ್, ಧೃವ್ ಜುರೆಲ್‌, ಶಿಮ್ರೊನ್ ಹೆಟ್ಮೇಯರ್‌, ರವಿಚಂದ್ರನ್ ಅಶ್ವಿನ್‌, ಕೇಶವ್‌ ಮಹರಾಜ್, ಟ್ರೆಂಟ್ ಬೌಲ್ಟ್‌, ಆವೇಶ್‌ ಖಾನ್, ಯುಜುವೇಂದ್ರ ಚಹಲ್‌.

ಕೋಲ್ಕತಾ: ಫಿಲ್ ಸಾಲ್ಟ್‌, ಸುನಿಲ್ ನರೈನ್‌, ವೆಂಕಟೇಶ್‌ ಅಯ್ಯರ್, ಶ್ರೇಯಸ್‌ ಅಯ್ಯರ್(ನಾಯಕ),ಅಂಗಕೃಷ್ ರಘುವಂಶಿ, ಆಂಡ್ರೆ ರಸೆಲ್‌, ರಮನ್‌ದೀಪ್‌ ಸಿಂಗ್, ಮಿಚೆಲ್ ಸ್ಟಾರ್ಕ್‌, ಹರ್ಷಿತ್ ರಾಣಾ, ವೈಭವ್‌ ಅರೋರ, ವರುಣ್‌ ಚಕ್ರವರ್ತಿ.

ಪಂದ್ಯ: ಸಂಜೆ 7.30ಕ್ಕೆ. ನೇರಪ್ರಸಾರ: ಸ್ಟಾರ್‌ಸ್ಪೋರ್ಟ್ಸ್‌, ಜಿಯೋ ಸಿನಿಮಾ.

Exit mobile version