ಅಹಮದಾಬಾದ್: ನಾಳೆ(ಬುಧವಾರ) ನಡೆಯುವ 17ನೇ ಆವೃತ್ತಿಯ ಐಪಿಎಲ್ನ(IPL 2024) ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್(RCB vs RR) ಮತ್ತು ಆರ್ಸಿಬಿ ಮುಖಾಮುಖಿಯಾಗಲಿದೆ. ಈ ಪಂದ್ಯ ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ(Narendra Modi Stadium) ನಡೆಯಲಿದೆ. ಇದೇ ಮೈದಾನದಲ್ಲಿ ನಡೆಯಬೇಕಿದ್ದ ಲೀಗ್ ಪಂದ್ಯವೊಂದು ಮಳೆಯಿಂದ ರದ್ದಾಗಿತ್ತು. ಹೀಗಾಗಿ ಅಭಿಮಾನಿಗಳಿಗೆ ಈ ಪಂದ್ಯಕ್ಕೂ ಮಳೆ(Rain Forecast) ಇದೆಯಾ ಎಂಬ ಚಿಂತೆ ಕಾಡಿದೆ. ಆದರೆ ಹವಾಮಾನ(Ahmedabad Weather) ಇಲಾಖೆ ಸಿಹಿ ಸುದ್ದಿ ನೀಡಿದೆ.
ಹವಾಮಾನ ವರದಿ
ಹವಾಮಾನ ಇಲಾಖೆಯ ವರದಿಯ ಪ್ರಕಾರ, ಅಹಮದಾಬಾದ್‌ನಲ್ಲಿ ಮೇ 22 ರಂದು ತಾಪಮಾನವು 45 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗಬಹುದು ಮತ್ತು ಮಳೆಯಾಗುವ ಸಾಧ್ಯತೆ 0% ರಷ್ಟು ಇರುತ್ತದೆ ಎಂದು ತಿಳಿಸಿದೆ. ಹೀಗಾಗಿ ಪಂದ್ಯವನ್ನು ಅಭಿಮಾನಿಗಳು ಸಂಪೂರ್ಣವಾಗಿ ಕಣ್ತುಂಬಿಕೊಳ್ಳಬಹುದು. ರಾತ್ರಿ 8 ಗಂಟೆಗೆ ತಾಪಮಾನವು 42 ಡಿಗ್ರಿ ಸೆಲ್ಸಿಯಸ್‌ಗೆ ಮತ್ತು ರಾತ್ರಿ 10 ಗಂಟೆಗೆ 39 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ನಿರೀಕ್ಷೆಯಿದೆ. ಪಂದ್ಯದ ಸಮಯದಲ್ಲಿ ಗಾಳಿಯ ಪ್ರಮಾಣ ಸುಮಾರು 16-21% ಇದರು ಸಾಧತೆ ಇದೆ.
ಒಂದೊಮ್ಮೆ ಪಂದ್ಯಕ್ಕೆ ಮಳೆಯಿಂದ ಅಡಚಣೆಯಾದರೆ 120 ನಿಮಿಷಗಳ (2 ಗಂಟೆ) ಅವಧಿಗೆ ಪಂದ್ಯವನ್ನು ವಿಸ್ತರಿಸಬಹುದಾಗಿದೆ. ಆಗ 9.40ಕ್ಕೆ ಪಂದ್ಯ ಆರಂಭವಾಗುವುದಿದ್ದರೂ ಓವರ್‌ಗಳಲ್ಲಿ ಯಾವುದೇ ಕಡಿತ ಇರುವುದಿಲ್ಲ. ಸ್ಪಷ್ಟ ಫಲಿತಾಂಶಕ್ಕೆ ತಲಾ 5 ಓವರ್‌ಗಳ ಆಟ ನಡೆಯಬೇಕಿದೆ. ಹೆಚ್ಚುವರಿ ಅವಧಿಯಲ್ಲೂ ಇದು ಸಾಧ್ಯವಾಗದೇ ಹೋದರೆ ಲೀಗ್ ಹಂತದ ಅಂಕಪಟ್ಟಿಯಲ್ಲಿ ಮೇಲಿದ್ದ ತಂಡವನ್ನು ಜಯಶಾಲಿ ಎಂದು ಘೋಷಿಸಲಾಗುತ್ತದೆ.
ಮುಖಾಮುಖಿ
ಆರ್ಸಿಬಿ ಮತ್ತು ರಾಜಸ್ಥಾನ್ ತಂಡಗಳು ಇದುವರೆಗಿನ ಐಪಿಎಲ್ ಆವೃತ್ತಿಯಲ್ಲಿ ಒಟ್ಟು 31 ಬಾರಿ(RR vs RCB Head To Head Record) ಮುಖಾಮುಖಿಯಾಗಿವೆ. ಈ ಪೈಕಿ ಆರ್ಸಿಬಿ 15, ರಾಜಸ್ಥಾನ್ 13 ಗೆಲುವು ಸಾಧಿಸಿದೆ. 3 ಪಂದ್ಯಗಳು ಫಲಿತಾಂಶ ಇಲ್ಲದೆ ಕೊನೆಗೊಂಡಿದೆ. ಈ ಲೆಕ್ಕಾಚಾರದಲ್ಲಿ ಆರ್ಸಿಬಿ ಬಲಿಷ್ಠ ಎನ್ನಲಡ್ಡಿಯಿಲ್ಲ. ಈ ಬಾರಿಯ ಮುಖಾಮುಖಿಯಲ್ಲಿ ರಾಜಸ್ಥಾನ್ ಗೆಲುವು ಸಾಧಿಸಿತ್ತು.
ಇದನ್ನೂ ಓದಿ RCB vs RR: ಆರ್ಸಿಬಿ-ರಾಜಸ್ಥಾನ್ ತಂಡಗಳ ಐಪಿಎಲ್ ಪ್ಲೇ ಆಫ್/ನಾಕೌಟ್ ದಾಖಲೆ ಹೇಗಿದೆ?
ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2022ರಲ್ಲಿ ನಡೆದಿದ್ದ ಐಪಿಎಲ್ ಟೂರ್ನಿಯ ಕ್ವಾಲಿಫೈಯರ್-2 ಪಂದ್ಯದಲ್ಲಿ ಮುಖಾಮುಖಿಯಾಗಿತ್ತು. ಈ ಪಂದ್ಯ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದಿತ್ತು. ಪಂದ್ಯದಲ್ಲಿ ರಾಜಸ್ಥಾನ್ 7 ವಿಕೆಟ್ ಅಂತರದ ಭರ್ಜರಿ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿತ್ತು. ಇದೀಗ ಅಂದಿನ ಈ ಸೋಲಿಗೆ ಆರ್ಸಿಬಿ ಈ ಬಾರಿಯ ಎಲಿಮಿನೇಟರ್ ಪಂದ್ಯದಲ್ಲಿ ಸೇಡು ತೀರಿಸಿಕೊಂಡೀತೇ? ಎಂದು ಕಾದು ನೋಡಬೇಕಿದೆ.
ಸಂಭಾವ್ಯ ತಂಡಗಳು
ಆರ್ಸಿಬಿ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ರಜತ್ ಪಾಟಿದಾರ್, ಕ್ಯಾಮರೂನ್ ಗ್ರೀನ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆ), ಕರ್ಣ್ ಶರ್ಮಾ, ಯಶ್ ದಯಾಳ್, ಲಾಕಿ ಫರ್ಗುಸನ್, ಮೊಹಮ್ಮದ್ ಸಿರಾಜ್.
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಟಾಮ್ ಕೊಹ್ಲರ್-ಕಾಡ್ಮೋರ್, ಸಂಜು ಸ್ಯಾಮ್ಸನ್ (ನಾಯಕ), ರಿಯಾನ್ ಪರಾಗ್, ಧ್ರುವ್ ಜುರೆಲ್, ರೋವ್ಮನ್ ಪೊವೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಅವೇಶ್ ಖಾನ್, ನಾಂದ್ರೆ ಬರ್ಗರ್.