Sachin Tendulkar: Change is needed in ODI cricket; Sachin Tendulkar Sachin Tendulkar: ಏಕದಿನ ಕ್ರಿಕೆಟ್​ನಲ್ಲಿ ಬದಲಾವಣೆ ಅಗತ್ಯ; ಸಚಿನ್​ ತೆಂಡೂಲ್ಕರ್​ - Vistara News Sachin Tendulkar: ಏಕದಿನ ಕ್ರಿಕೆಟ್​ನಲ್ಲಿ ಬದಲಾವಣೆ ಅಗತ್ಯ; ಸಚಿನ್​ ತೆಂಡೂಲ್ಕರ್​

ಕ್ರಿಕೆಟ್

Sachin Tendulkar: ಏಕದಿನ ಕ್ರಿಕೆಟ್​ನಲ್ಲಿ ಬದಲಾವಣೆ ಅಗತ್ಯ; ಸಚಿನ್​ ತೆಂಡೂಲ್ಕರ್​

ಏಕ​ದಿನ ಮಾದ​ರಿ​ಯನ್ನು ಟೆಸ್ಟ್‌ ರೀತಿ ತಲಾ 25 ಓವ​ರ್‌​ಗಳ 2 ಇನಿಂಗ್ಸ್​ ರೂಪ​ದಲ್ಲಿ ಆಡಿ​ಸ​ಬೇಕು ಎಂದು ಸಚಿನ್‌ ತೆಂಡೂಲ್ಕರ್ ಸಲಹೆ ನೀಡಿ​ದ್ದಾರೆ.

VISTARANEWS.COM


on

Sachin Tendulkar's advice to maintain the balance of ODI cricket
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಪ್ರೇಕ್ಷಕರ ಮನರಂಜನೆಯನ್ನು ಹೆಚ್ಚಿಸುವ ಸಲುವಾಗಿ ಏಕ ​ದಿನ ಕ್ರಿಕೆಟ್​ನಲ್ಲಿ(ODI Cricket) ಬದಲಾವಣೆ ಅಗತ್ಯ ಎಂದು ರವಿ ಶಾಸ್ತ್ರಿ (Ravi Shastri ಅವರು ಹೇಳಿಕೆ ನೀಡಿದ ಬೆನ್ನಲ್ಲೇ, ಇದೀಗ ಸಚಿನ್‌ ತೆಂಡೂಲ್ಕರ್(Sachin Tendulkar)​ ಕೂಡ ಏಕ​ದಿನದಲ್ಲಿ ಕೆಲ ಬದ​ಲಾ​ವಣೆ ಅಗ​ತ್ಯ​ವಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸಂದ​ರ್ಶ​ನ​ವೊಂದ​ರಲ್ಲಿ ಮಾತ​ನಾ​ಡಿರುವ ಸಚಿನ್​ ತೆಂಡೂಲ್ಕರ್​ “ಪ್ರಸ್ತುತ ನಡೆಯುತ್ತಿರುವ ಏಕದಿನ ಪಂದ್ಯ​ಗಳ ಫಲಿ​ತಾಂಶವನ್ನು ಮೊದಲೇ ಊಹಿ​ಸ​ಬ​ಹುದು. ಅದ​ರಲ್ಲೂ 15ರಿಂದ 40 ಓವ​ರ್‌​ವ​ರೆ​ಗಿನ ಅವಧಿ ತುಂಬಾ ನೀರಸವಾಗಿರುತ್ತದೆ. ಹೀಗಾಗಿ ಏಕ​ದಿನ ಮಾದ​ರಿ​ಯನ್ನು ಟೆಸ್ಟ್‌ ರೀತಿ ತಲಾ 25 ಓವ​ರ್‌​ಗಳ 2 ಇನಿಂಗ್ಸ್​ ರೂಪ​ದಲ್ಲಿ ಆಡಿ​ಸ​ಬೇಕು” ಎಂದು ಅವರು ಸಲಹೆ ನೀಡಿ​ದ್ದಾರೆ.

“ಟಿ20 ಕ್ರಿಕೆಟ್​ ಜಾಯಮಾನದಲ್ಲಿ ಇದೀಗ ಏಕದಿನ ಕ್ರಿಕೆಟ್​ನತ್ತ ಪ್ರೇಕ್ಷಕರ ಗಮನ ಕಡಿಮೆಯಾಗಿದೆ. ಹೀಗಾಗಿ ಪ್ರೇಕ್ಷಕರನ್ನು ಆಕರ್ಷಿಸಲು ಏಕದಿನ ಮಾದರಿಯ ಕ್ರಿಕೆಟ್​ನಲ್ಲಿ ಕೆಲ ಬದಲಾವಣೆ ಅಗತ್ಯ” ಎಂದು ಸಚಿನ್​ ಹೇಳಿದರು.

ಇದನ್ನೂ ಓದಿ Sachin Tendulkar: ಬಿಸಿಸಿಐ ಅಧ್ಯಕ್ಷರಾಗಲಿದ್ದಾರಾ ಸಚಿನ್​ ತೆಂಡೂಲ್ಕರ್​?

ರವಿಶಾಸ್ತ್ರಿ ಹೇಳಿದ್ದೇನು

ಏಕ ದಿನ ಕ್ರಿಕೆಟ್​ ಅಳಿವಿನಂಚಿನಲ್ಲಿದ್ದು ಇದನ್ನೂ​ ಹೆಚ್ಚು ಆಕರ್ಷಿಸಲು ಕೆಲ ಬದಲಾವಣೆ ಮಾಡಿಕೊಳ್ಳಬೇಕು ಎಂದು ಕಳೆದ ವಾರ ರವಿಶಾಸ್ತ್ರಿ ಹೇಳಿದ್ದರು. “1983ರಲ್ಲಿ ನಾವು ವಿಶ್ವ ಕಪ್ ಗೆದ್ದಾಗ ಅದು 60 ಓವರ್ ಪಂದ್ಯವಾಗಿತ್ತು. ನಂತರ ಪ್ರೇಕ್ಷಕರ ಗಮನ ಕಡಿಮೆಯಾದ ಕಾರಣ ಇದನ್ನೂ 50 ಓವರ್​ಗಳಿಗೆ ಇಳಿಸಲಾಯಿತು. ಇದೀಗ ಟಿ20 ಕ್ರಿಕೆಟ್ ಬಂದ ಬಳಿಕ ಏಕದಿನದ ಕ್ರೇಜ್​ ಜನರಲ್ಲಿ ಕಡಿಮೆಯಾಗಿದೆ. ಹೀಗಾಗಿ ಸಮಯದೊಂದಿಗೆ ಸ್ವರೂಪದ ಬದಲಾವಣೆಯೂ ಮಾಡುವ ಮೂಲಕ ಏಕ ದಿನ ಕ್ರಿಕೆಟ್​ ಹೆಚ್ಚು ಸ್ವಾರಸ್ಯವಾಗಲು ಇದನ್ನೂ 40 ಓವರ್​ಗೆ ಇಳಿಸುವ ಅಗತ್ಯ ಇದೆ” ಎಂದು ರವಿಶಾಸ್ತ್ರಿ ಸಲಹೆ ನೀಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024: ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆಯಲು ಸಜ್ಜಾದ ಆರ್​ಸಿಬಿ

IPL 2024: ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಕಣಕ್ಕಿಳಿಯುವ ಮೂಲಕ ಆರ್​ಸಿಬಿ 250ನೇ ಐಪಿಎಲ್​ ಪಂದ್ಯವನ್ನಾಡಿದ ದ್ವಿತೀಯ ತಂಡ ಎಂಬ ದಾಖಲೆ ಬರೆಯಲಿದೆ. ಮುಂಬೈ ಇಂಡಿಯನ್ಸ್​ ಮೊದಲ ತಂಡ

VISTARANEWS.COM


on

IPL 2024
Koo

ಹೈದರಾಬಾದ್​: ಇಂದು(ಗುರುವಾರ) ನಡೆಯುವ ಐಪಿಎಲ್(IPL 2024)​ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು(Royal Challengers Bangalore) ಮತ್ತು ಸನ್​ರೈಸರ್ಸ್​ ಹೈದರಾಬಾದ್​(Sunrisers Hyderabad ) ತಂಡಗಳು ಸೆಣಸಾಟ ನಡೆಸಲಿವೆ. ಈ ಪಂದ್ಯ ಆರ್​ಸಿಬಿಗೆ ಸ್ಮರಣೀಯವಾಗಿದೆ. ಇದು ಆರ್​ಸಿಗೆ(RCB) 250ನೇ ಐಪಿಎಲ್(RCB 250th IPL match)​ ಪಂದ್ಯವಾಗಿದೆ. ಈ ಸಾಧನೆ ಮಾಡಿದ ದ್ವಿತೀಯ ತಂಡ ಎಂಬ ಹೆಗ್ಗಳಿಕೆ ಆರ್​ಸಿಬಿ ಪಾತ್ರವಾಗಲಿದೆ.

“ಇಂದು ಆರ್​ಸಿಬಿಗೆ ಪ್ರಮುಖ ದಿನ. ನಮ್ಮ 250ನೇ ನೇ ಐಪಿಎಲ್​ ಪಂದ್ಯ! ಇದನ್ನು ಸ್ಮರಣೀಯವಾಗಿಸಲು ನಿಮ್ಮೆಲ್ಲರ ಹಾರೈಕೆಗಳು ಮತ್ತು ಬೆಂಬಲವನ್ನು ನಾವು ನಿರೀಕ್ಷಿಸುತ್ತಿದ್ದೇವೆ” ಎಂದು ಆರ್​ಸಿಬಿ ಫ್ರಾಂಚೈಸಿ ಇದುವರೆ ಆರ್​ಸಿಬಿ ತಂಡದ ಪರ ಆಡಿದ ಕೆಲ ಸ್ಟಾರ್​ ಆಟಗಾರರ ಫೋಟೊ ಕೊಲಾಜ್​ ಮಾಡಿ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ.

ಇದುವರೆಗಿನ ಐಪಿಎಲ್​ ಇತಿಹಾಸದಲ್ಲಿ ಮುಂಬೈ ಇಂಡಿಯನ್ಸ್​ ಮಾತ್ರ 250 ಪಂದ್ಯಗಳನ್ನಾಡಿದ ಸಾಧನೆ ಮಾಡಿದೆ. ಅಲ್ಲದೆ ಅತ್ಯಧಿಕ ಐಪಿಎಲ್​ ಪಂದ್ಯವನ್ನಾಡಿದ ಮೊದಲ ತಂಡ ಎಂಬ ಹೆಗ್ಗಳಿಕೆಯನ್ನು ಕೂಡ ಹೊಂದಿದೆ. ಮುಂಬೈ ಇದುವರೆಗೆ 255* ಐಪಿಎಲ್​ ಪಂದ್ಯಗಳನ್ನಾಡಿದೆ. ಆರ್​ಸಿಬಿ 250 ಪಂದ್ಯಗಳನ್ನಾಡಿದ 2ನೇ ತಂಡ ಎನಿಸಿಕೊಳ್ಳಲಿದೆ. ದುರಾದೃಷ್ಟವೆಂದರೆ ಇಷ್ಟು ಪಂದ್ಯಗಳನ್ನಾಡಿದರೂ ಕೂಡ ತಂಡ ಒಮ್ಮೆಯೂ ಕಪ್​ ಗೆಲ್ಲುವಲ್ಲಿ ಯಶಸ್ವಿಯಾಗಿಲ್ಲ. ಪ್ರತಿ ಐಪಿಎಲ್‌(IPL 2024) ಆರಂಭದ ಸಂದರ್ಭದಲ್ಲಿಯೂ ಆರ್‌ಸಿಬಿ ಒಂದು ಕ್ರೇಜ್‌ ಹುಟ್ಟಿಸುತ್ತದೆ. ದುರಾದೃಷ್ಟವಶಾತ್‌ ಈ ಕ್ರೇಜ್‌ ಬಹುಕಾಲ ಉಳಿಯುವುದಿಲ್ಲ. ಈ ಬಾರಿಯೂ ಅದೇ ರಾಗ ಅದೇ ಹಾಡು. ಅದರಲ್ಲಿಯೂ ಈ ಬಾರಿ ಹೊಸ ಅಧ್ಯಾಯ ಎಂದು ಆರ್‌ಸಿಬಿ ಹವಾ ಸೃಷ್ಟಿಸಿತ್ತು. ಆದರೆ ಇದೀಗ ಕ್ಷಮಿಸಿ ನಮ್ಮದು ಮುದಿದು ಹೋದ ಅಧ್ಯಾಯ ಎನ್ನುವ ಹಂತಕ್ಕೆ ತಲುಪಿದೆ.

ಇದನ್ನೂ ಓದಿ IPL 2024: ದುಬಾರಿ ರನ್​ ನೀಡಿ ಐಪಿಎಲ್​ನಲ್ಲಿ ಅನಗತ್ಯ ದಾಖಲೆ ಬರೆದ ಮೋಹಿತ್​ ಶರ್ಮ

ಅತಿ ಹೆಚ್ಚು ಐಪಿಎಲ್​ ಪಂದ್ಯವನ್ನಾಡಿದ ಟಾಪ್​ 5 ತಂಡಗಳು


ಮುಂಬೈ ಇಂಡಿಯನ್ಸ್​-255* ಪಂದ್ಯ

ರಾಯಲ್​ ಚಾಲೆಂಜರ್ಸ್​ ಬೆಂಗಳೂರು-249* ಪಂದ್ಯ

ಡೆಲ್ಲಿ ಕ್ಯಾಪಿಟಲ್ಸ್​-247*ಪಂದ್ಯ

ಕೋಲ್ಕತ್ತಾ ನೈಟ್​ ರೈಡರ್ಸ್​-244 ಪಂದ್ಯ

ಪಂಜಾಬ್​ ಕಿಂಗ್ಸ್​-240* ಪಂದ್ಯ

ಆರ್​ಸಿಬಿ(RCB) ಈ ಆವೃತ್ತಿಯಲ್ಲಿ ಇದುವರೆಗೆ ಆಡಿದ 8 ಪಂದ್ಯಗಳಲ್ಲಿ 7 ಸೋಲು ಕಂಡು ಪ್ಲೇ ಆಫ್​ ರೇಸ್​ನಿಂದ ಬಹುತೇಕ ಹೊರಬಿದ್ದಿದೆ. ಹೀಗಾಗಿ ಆರ್​ಸಿಬಿ ಪಾಲಿಗೆ ಇಂದು ನಡೆಯವ ಪಂದ್ಯ ಕೇವಲ ಔಪಚಾರಿಕ ಪಂದ್ಯ ಎಂದರೂ ತಪ್ಪಾಗಲಾರದು. ಇನ್ನುಳಿದ ಎಲ್ಲ ಪಂದ್ಯಗಳನ್ನು ಗೆದ್ದರೂ ಕೂಡ ಪ್ಲೇ ಆಫ್​ಗೇರಲು ಸಾಧ್ಯವಿಲ್ಲ. ಪವಾಡ ಸಂಭಿಸಿದರೆ ಮಾತ್ರ ಸಾಧ್ಯ.

ಸಂಭಾವ್ಯ ತಂಡಗಳು


ಆರ್​ಸಿಬಿ:
ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ವಿಲ್ ಜ್ಯಾಕ್ಸ್, ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್,ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಲಾಕಿ ಫರ್ಗುಸನ್, ಯಶ್ ದಯಾಲ್, ಮೊಹಮ್ಮದ್ ಸಿರಾಜ್.

ಸನ್​ರೈಸರ್ಸ್​ ಹೈದರಾಬಾದ್​: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್​, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ , ಅಬ್ದುಲ್ ಸಮದ್, ನಿತೀಶ್ ರೆಡ್ಡಿ, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಟಿ ನಟರಾಜನ್.

Continue Reading

ಕ್ರೀಡೆ

IPL 2024: ದುಬಾರಿ ರನ್​ ನೀಡಿ ಐಪಿಎಲ್​ನಲ್ಲಿ ಅನಗತ್ಯ ದಾಖಲೆ ಬರೆದ ಮೋಹಿತ್​ ಶರ್ಮ

IPL 2024: ಡೆಲ್ಲಿ ಕ್ಯಾಪಿಟಲ್ಸ್(Delhi Capitals)​ ವಿರುದ್ಧದ ಪಂದ್ಯದಲ್ಲಿ ದುಬಾರಿಯಾಗಿ ಕಂಡು ಬಂದ ಮೋಹಿತ್​ ಶರ್ಮ 4 ಓವರ್​ಗೆ ಬರೋಬ್ಬರಿ 73 ರನ್​ ಬಿಟ್ಟುಕೊಟ್ಟರು. ಈ ಮೂಲಕ ಐಪಿಎಲ್​ನ ಇದುವರೆಗಿನ ಇತಿಹಾಸದಲ್ಲೇ ಅತ್ಯಧಿಕ ರನ್​ ಬಿಟ್ಟುಕೊಟ್ಟ ಮೊದಲ ಬೌಲರ್​ ಎನ್ನುವ ಹಣೆಪಟ್ಟಿ ಕಟ್ಟಿಕೊಂಡರು.

VISTARANEWS.COM


on

IPL 2024
Koo

ನವದೆಹಲಿ: ಗುಜರಾತ್​ ಟೈಟಾನ್ಸ್​( ತಂಡದ ಮಧ್ಯಮ ಕ್ರಮಾಂಕದ ವೇಗಿ ಮೋಹಿತ್​ ಶರ್ಮ(Mohit Sharma) ಅವರು ಐಪಿಎಲ್​ನಲ್ಲಿ(IPL 2024) ಅತಿ ಹೆಚ್ಚು ರನ್​ ಬಿಟ್ಟುಕೊಟ್ಟ ಆಟಗಾರ ಎಂಬ ಅನಗತ್ಯ ದಾಖಲೆಯೊಂದನ್ನು ತಮ್ಮ ಹೆಸರಿಗೆ ಸೇರಿಸಿಕೊಂಡಿದ್ದಾರೆ. ಈ ಮೂಲಕ ಬಾಸಿಲ್ ಥಾಂಪಿ ದಾಖಲೆಯನ್ನು ಮುರಿದಿದ್ದಾರೆ.

​ಡೆಲ್ಲಿ ಕ್ಯಾಪಿಟಲ್ಸ್(Delhi Capitals)​ ವಿರುದ್ಧದ ಪಂದ್ಯದಲ್ಲಿ ದುಬಾರಿಯಾಗಿ ಕಂಡು ಬಂದ ಮೋಹಿತ್​ ಶರ್ಮ 4 ಓವರ್​ಗೆ ಬರೋಬ್ಬರಿ 73 ರನ್​ ಬಿಟ್ಟುಕೊಟ್ಟರು. ಈ ಮೂಲಕ ಐಪಿಎಲ್​ನ ಇದುವರೆಗಿನ ಇತಿಹಾಸದಲ್ಲೇ ಅತ್ಯಧಿಕ ರನ್​ ಬಿಟ್ಟುಕೊಟ್ಟ ಮೊದಲ ಬೌಲರ್​ ಎನ್ನುವ ಹಣೆಪಟ್ಟಿ ಕಟ್ಟಿಕೊಂಡರು. ಅಂತಿಮ ಓವರ್​ನಲ್ಲಿ ರಿಷಭ್​ ಪಂತ್​ ಅವರು 4 ಸಿಕ್ಸರ್​ ಮತ್ತು ಒಂದು ಬೌಂಡರಿ ಬಾರಿಸಿ ಒಟ್ಟು 31 ರನ್​ ಚಚ್ಚಿದರು.

ದುಬಾರಿ ರನ್​ ನೀಡಿದ ಆಟಗಾರರು


ಮೋಹಿತ್​ ಶರ್ಮ-73 ರನ್​. ಡೆಲ್ಲಿ ವಿರುದ್ಧ (2024)

ಬಾಸಿಲ್ ಥಾಂಪಿ-70 ರನ್​. ಆರ್​ಸಿಬಿ ವಿರುದ್ಧ (2018)

ಯಶ್​ ದಯಾಳ್​-69 ರನ್​. ಕೆಕೆಆರ್​ ವಿರುದ್ಧ (2023)

ರೀಸ್‌ ಟೋಪ್ಲೆ-68 ರನ್​. ಹೈದರಾಬಾದ್​ ವಿರುದ್ಧ (2024)

ಇದನ್ನೂ ಓದಿ IPL 2024 Points Table: ಡೆಲ್ಲಿ ಗೆಲುವಿನ ಬಳಿಕ ಅಂಕಪಟ್ಟಿಯಲ್ಲಿ ಮಹತ್ವದ ಬದಲಾವಣೆ

ಗುಜರಾತ್​ಗೆ 4 ರನ್​ ವಿರೋಚಿತ ಸೋಲು


ಇಲ್ಲಿನ ಅರುಣ್​ ಜೇಟ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಡೆಲ್ಲಿ ಕ್ಯಾಪಿಟಲ್ಸ್​ ರಿಷಭ್​ ಪಂತ್​(88*) ಮತ್ತು ಅಕ್ಷರ್​ ಪಟೇಲ್​(66) ಅವರ ಸಮಯೋಚಿತ ಬ್ಯಾಟಿಂಗ್​ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 224 ರನ್​ ಪೇರಿಸಿತು. ಜವಾಬಿತ್ತ ಗುಜರಾತ್ ದಿಟ್ಟ ಹೋರಾಟ ನಡೆಸಿದರೂ 8 ವಿಕೆಟ್​ಗೆ 220 ರನ್​ ಬಾರಿಸಿ ಸಣ್ಣ ಅಂತರದಿಂದ ​ಸೋಲೊಪ್ಪಿಕೊಂಡಿತು.

ಚೇಸಿಂಗ್​ ವೇಳೆ ಡೇವಿಡ್​ ಮಿಲ್ಲರ್​ ಅರ್ಧಶತಕ ಬಾರಿಸುವ ಮೂಲಕ ಒಂದು ಹಂತದಲ್ಲಿ ಗುಜರಾತ್​ ಪಾಳಯದಲ್ಲಿ ಗೆಲುವಿನ ಆಸೆ ಚಿಗುರೊಡೆಯುವಂತೆ ಮಾಡಿದರು. ಆದರೆ ಉಳಿದ ಆಟಗಾರರಿಂದ ಉತ್ತಮ ಸಾಥ್​ ಸಿಗದ ಕಾರಣ ದೊಡ್ಡ ಹೊಡೆತಗಳಿಗೆ ಕೈ ಹಾಕಿ ರಾಸಿಖ್ ಸಲಾಂ ಅವರಿಗೆ ಕ್ಯಾಚ್​ ನೀಡಿ ವಿಕೆಟ್​ ಕೈಚೆಲ್ಲಿದರು. ಈ ವಿಕೆಟ್​ ಪತನದ ಬಳಿಕ ರಶೀದ್​ ಖಾನ್​ ಮತ್ತು ಸಾಯಿ ಕಿಶೋರ್​ ಸಿಡಿದು ನಿಂತರು. ಅಂತಿಮ ಓವರ್​ನಲ್ಲಿ ಗೆಲುವಿಗೆ 19 ರನ್​ ತೆಗೆಯುವ ಸವಾಲಿನಲ್ಲಿ ರಶೀದ್​ ಅವರು ಮುಕೇಶ್​ ಕುಮಾರ್​ಗೆ ಸತತ 2 ಬೌಂಡರಿ ಮತ್ತು ಒಂದು ಸಿಕ್ಸರ್​ ಬಾರಿಸಿ ಪಂದ್ಯವನ್ನು ರೋಚಕ ಹಂತಕ್ಕೆ ತಂದು ನಿಲ್ಲಿಸಿದರು. ಅಂತಿಮ ಎಸೆತದಲ್ಲಿ ಗೆಲುವಿಗೆ 5 ರನ್​ ಬೇಕಿದ್ದಾಗ ಇದನ್ನು ಬಾರಿಸುವಲ್ಲಿ ರಶೀದ್​ ಎಡವಿದರು. ಡೆಲ್ಲಿ ರೋಚಕ 4 ರನ್​ಗಳ ಗೆಲುವು ಸಾಧಿಸಿತು. ಅಂತಿಮ ಓವರ್​ನಲ್ಲಿ ಮೋಹಿತ್​ ಶರ್ಮ ಕನಿಷ್ಠ ಒಂದು ಬಾಲ್​ ಕಂಟ್ರೋಲ್​ ಮಾಡುತ್ತಿದ್ದರೂ ಕೂಡ ಗುಜರಾತ್​ ಗೆಲ್ಲುವು ಕಾಣುವ ಸಾಧ್ಯತೆ ಇತ್ತು.

Continue Reading

ಕ್ರೀಡೆ

IPL 2024 Points Table: ಡೆಲ್ಲಿ ಗೆಲುವಿನ ಬಳಿಕ ಅಂಕಪಟ್ಟಿಯಲ್ಲಿ ಮಹತ್ವದ ಬದಲಾವಣೆ

IPL 2024 Points Table: ​ಇಂದು ನಡೆಯುವ ಪಂದ್ಯದಲ್ಲಿ ಹೈದರಾಬಾದ್​ ಮತ್ತು ಆರ್​ಸಿಬಿ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಹೈದರಾಬಾದ್​ ಗೆದ್ದರೆ ಕೆಕೆಆರ್​ ತಂಡವನ್ನು ಹಿಂದಿಕ್ಕಿ 2ನೇ ಸ್ಥಾನಕ್ಕೇರಲಿದೆ. ಕೆಕೆಆರ್​ 2ನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಕುಸಿಯಲಿದೆ. ಆರ್​ಸಿಬಿ ಗೆದ್ದರೂ ಕೂಡ ಕೊನೆಯ ಸ್ಥಾನದಲ್ಲೇ ಮುಂದುವರಿಯಲಿದೆ.

VISTARANEWS.COM


on

IPL 2024 Points Table
Koo

ನವದೆಹಲಿ: ಗುಜರಾತ್​ ಟೈಟಾನ್ಸ್(Gujarat Titans)​ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್(Delhi Capitals)​ ಗೆಲುವು ಸಾಧಿಸಿದ ಕಾರಣ ಅಂಕಪಟ್ಟಿಯಲ್ಲಿ(IPL 2024 Points Table) ಭಾರೀ ಬದಲಾವಣೆ ಸಂಭವಿಸಿದ್ದು, ಪ್ಲೇ ಆಫ್​ ರೇಸ್​ ಕೂಟ ತೀವ್ರ ಪೈಪೋಟಿ ಏರ್ಪಟ್ಟಿದೆ. 7ನೇ ಸ್ಥಾನಿಯಾಗಿದ್ದ ಡೆಲ್ಲಿ ಈ ಗೆಲುವಿನೊಂದಿಗೆ 6ನೇ ಸ್ಥಾನಕ್ಕೆ ಬಂದು ನಿಂತಿದೆ. 6ನೇ ಸ್ಥಾನದಲ್ಲಿದ್ದ ಗುಜರಾತ್ 7ಕ್ಕೆ ಕುಸಿದಿದೆ.

​ಇಂದು ನಡೆಯುವ ಪಂದ್ಯದಲ್ಲಿ ಹೈದರಾಬಾದ್​ ಮತ್ತು ಆರ್​ಸಿಬಿ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಹೈದರಾಬಾದ್​ ಗೆದ್ದರೆ ಕೆಕೆಆರ್​ ತಂಡವನ್ನು ಹಿಂದಿಕ್ಕಿ 2ನೇ ಸ್ಥಾನಕ್ಕೇರಲಿದೆ. ಕೆಕೆಆರ್​ 2ನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಕುಸಿಯಲಿದೆ. ಆರ್​ಸಿಬಿ ಗೆದ್ದರೂ ಕೂಡ ಕೊನೆಯ ಸ್ಥಾನದಲ್ಲೇ ಮುಂದುವರಿಯಲಿದೆ.

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ರಾಜಸ್ಥಾನ್​ ರಾಯಲ್ಸ್​87114 (+0.698)
ಕೆಕೆಆರ್​​75210 (+1.206)
ಹೈದರಾಬಾದ್​​75210 (+0.914)
ಲಕ್ನೋ85310 (+0.148)
ಚೆನ್ನೈ8448 (+0.415)
ಡೆಲ್ಲಿ9458 (-0.386)
ಗುಜರಾತ್​9458 (-0.974)
ಮುಂಬೈ8356 (-0.227)
ಪಂಜಾಬ್​8264 (-0.292)
ಆರ್​ಸಿಬಿ8172 (-1.046)

ಇಲ್ಲಿನ ಅರುಣ್​ ಜೇಟ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಡೆಲ್ಲಿ ಕ್ಯಾಪಿಟಲ್ಸ್​ ರಿಷಭ್​ ಪಂತ್​(88*) ಮತ್ತು ಅಕ್ಷರ್​ ಪಟೇಲ್​(66) ಅವರ ಸಮಯೋಚಿತ ಬ್ಯಾಟಿಂಗ್​ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 224 ರನ್​ ಪೇರಿಸಿತು. ಜವಾಬಿತ್ತ ಗುಜರಾತ್ ದಿಟ್ಟ ಹೋರಾಟ ನಡೆಸಿದರೂ 8 ವಿಕೆಟ್​ಗೆ 220 ರನ್​ ಬಾರಿಸಿ ಸಣ್ಣ ಅಂತರದಿಂದ ​ಸೋಲೊಪ್ಪಿಕೊಂಡಿತು.

ಇದನ್ನೂ ಓದಿ IPL 2024: ಬ್ಲಾಕ್​ ಟಿಕೆಟ್ ಮಾರಾಟ ಜಾಲ ಭೇದಿಸಿದ ಚೆನ್ನೈ ಪೊಲೀಸರು; 12 ಮಂದಿ ಸೆರೆ

ಕೆಲ ಕ್ರಮಾಂಕದಲ್ಲಿ ಶಕ್ತಿ ಮೀರಿ ಬ್ಯಾಟಿಂಗ್​ ನಡೆಸಿದ ಡೇವಿಡ್​ ಮಿಲ್ಲರ್​ ಅರ್ಧಶತಕ ಬಾರಿಸುವ ಮೂಲಕ ಒಂದು ಹಂತದಲ್ಲಿ ಗುಜರಾತ್​ ಪಾಳಯದಲ್ಲಿ ಗೆಲುವಿನ ಆಸೆ ಚಿಗುರೊಡೆಯುವಂತೆ ಮಾಡಿದರು. ಆದರೆ ಉಳಿದ ಆಟಗಾರರಿಂದ ಉತ್ತಮ ಸಾಥ್​ ಸಿಗದ ಕಾರಣ ದೊಡ್ಡ ಹೊಡೆತಗಳಿಗೆ ಕೈ ಹಾಕಿ ರಾಸಿಖ್ ಸಲಾಂ ಅವರಿಗೆ ಕ್ಯಾಚ್​ ನೀಡಿ ವಿಕೆಟ್​ ಕೈಚೆಲ್ಲಿದರು. ಈ ವಿಕೆಟ್​ ಪತನದ ಬಳಿಕ ರಶೀದ್​ ಖಾನ್​ ಮತ್ತು ಸಾಯಿ ಕಿಶೋರ್​ ಸಿಡಿದು ನಿಂತರು. ಅಂತಿಮ ಓವರ್​ನಲ್ಲಿ ಗೆಲುವಿಗೆ 19 ರನ್​ ತೆಗೆಯುವ ಸವಾಲಿನಲ್ಲಿ ರಶೀದ್​ ಅವರು ಮುಕೇಶ್​ ಕುಮಾರ್​ಗೆ ಸತತ 2 ಬೌಂಡರಿ ಮತ್ತು ಒಂದು ಸಿಕ್ಸರ್​ ಬಾರಿಸಿ ಪಂದ್ಯವನ್ನು ರೋಚಕ ಹಂತಕ್ಕೆ ತಂದು ನಿಲ್ಲಿಸಿದರು. ಅಂತಿಮ ಎಸೆತದಲ್ಲಿ ಗೆಲುವಿಗೆ 5 ರನ್​ ಬೇಕಿದ್ದಾಗ ಇದನ್ನು ಬಾರಿಸುವಲ್ಲಿ ರಶೀದ್​ ಎಡವಿದರು. ಡೆಲ್ಲಿ ರೋಚಕ 4 ರನ್​ಗಳ ಗೆಲುವು ಸಾಧಿಸಿತು.

Continue Reading

ಕ್ರೀಡೆ

DC vS GT: ಗುಜರಾತ್​ ವಿರುದ್ಧ ಡೆಲ್ಲಿಗೆ ರೋಚಕ ಗೆಲುವು ; ಪ್ಲೇ ಆಫ್​ ರೇಸ್ ಜೀವಂತ

DC vS GT:ಗುಜರಾತ್​ ಟೈಟಾನ್ಸ್​ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್​ ರೋಚಕ 4 ರನ್​ಗಳ ಗೆಲುವು ಸಾಧಿಸಿ ತನ್ನ ಪ್ಲೇ ಆಫ್​ ರೇಸ್​ ಜೀವಂತವಿರಿಸಿದೆ.

VISTARANEWS.COM


on

DC vs GT
Koo

ನವದೆಹಲಿ: ಅಂತಿಮ ಎಸೆತದವರೆಗೂ ಅತ್ಯಂತ ರೋಚಕವಾಗಿ ಸಾಗಿದ ಬುಧವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಗುಜರಾತ್​ ಟೈಟಾನ್ಸ್​ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್​ ರೋಚಕ 4 ರನ್​ಗಳ ಗೆಲುವು ಸಾಧಿಸಿ ತನ್ನ ಪ್ಲೇ ಆಫ್​ ರೇಸ್​ ಜೀವಂತವಿರಿಸಿದೆ. ಡೆಲ್ಲಿಗೆ ತವರಿನಲ್ಲಿ ಒಲಿದ ಮೊದಲ ಗೆಲುವು ಇದಾಗಿದೆ. ಕಳೆದ ಪಂದ್ಯದಲ್ಲಿ ಹೈದರಾಬಾದ್​ ವಿರುದ್ಧ ಹೀನಾಯ ಸೋಲು ಕಂಡಿತ್ತು.

ಇಲ್ಲಿನ ಅರುಣ್​ ಜೇಟ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಡೆಲ್ಲಿ ಕ್ಯಾಪಿಟಲ್ಸ್​ ರಿಷಭ್​ ಪಂತ್​(88*) ಮತ್ತು ಅಕ್ಷರ್​ ಪಟೇಲ್​(66) ಅವರ ಸಮಯೋಚಿತ ಬ್ಯಾಟಿಂಗ್​ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 224 ರನ್​ ಪೇರಿಸಿತು. ಜವಾಬಿತ್ತ ಗುಜರಾತ್ ದಿಟ್ಟ ಹೋರಾಟ ನಡೆಸಿದರೂ 8 ವಿಕೆಟ್​ಗೆ 220 ರನ್​ ಬಾರಿಸಿ ಸಣ್ಣ ಅಂತರದಿಂದ ​ಸೋಲೊಪ್ಪಿಕೊಂಡಿತು.

ವಿಫಲಗೊಂಡ ಗಿಲ್​


ಚೇಸಿಂಗ್​ ವೇಳೆ 100ನೇ ಐಪಿಎಲ್​ ಪಂದ್ಯವನ್ನಾಡಿದ ಶುಭಮನ್​ ಗಿಲ್​ 6 ರನ್​ ಗಳಿಸಿ ವಿಕೆಟ್​ ಕಳೆದುಕೊಂಡರು. ಆರಂಭಿಕ ಆಘಾತ ಕಂಡ ತಂಡಕ್ಕೆ, ವೃದ್ಧಿಮಾನ್​ ಸಾಹಾ ಮತ್ತು ಸಾಯಿ ಸುದರ್ಶನ್​ ನೆರವಾದರು. ಉಭಯ ಆಟಗಾರರು ಸೇರಿಕೊಂಡು ದ್ವಿತೀಯ ವಿಕೆಟ್​ಗೆ 82 ರನ್​ಗಳ ಅತ್ಯಮೂಲ್ಯ ಜತೆಯಾಟ ನಡೆಸಿದರು. ಸಾಹಾ 39 ರನ್​ ಗಳಿಸಿದರೆ, ಸಾಯಿ ಸುದರ್ಶನ್ 65 ರನ್​ ಬಾರಿಸಿದರು. ಉಭಯ ಆಟಗಾರರ ವಿಕೆಟ್​ ಪತನದ ಬಳಿಕ ಗುಜರಾತ್​ ಮತ್ತೆ ಕುಸಿತ ಕಂಡಿತು. ಬಳಿಕ ಬಂದ ಅಜ್ಮತುಲ್ಲಾ ಒಮರ್ಜಾಯ್(1), ಶಾರೂಖ್​ ಖಾನ್​(8) ಒಂದಂಕಕ್ಕೆ ಸೀಮಿತರಾಗಿ ನಿರಾಶೆ ಮೂಡಿಸಿದರು.

ಇದನ್ನೂ ಓದಿ IPL 2024: ಬ್ಲಾಕ್​ ಟಿಕೆಟ್ ಮಾರಾಟ ಜಾಲ ಭೇದಿಸಿದ ಚೆನ್ನೈ ಪೊಲೀಸರು; 12 ಮಂದಿ ಸೆರೆ

ಕೆಲ ಕ್ರಮಾಂಕದಲ್ಲಿ ಶಕ್ತಿ ಮೀರಿ ಬ್ಯಾಟಿಂಗ್​ ನಡೆಸಿದ ಡೇವಿಡ್​ ಮಿಲ್ಲರ್​ ಅರ್ಧಶತಕ ಬಾರಿಸುವ ಮೂಲಕ ಒಂದು ಹಂತದಲ್ಲಿ ಗುಜರಾತ್​ ಪಾಳಯದಲ್ಲಿ ಗೆಲುವಿನ ಆಸೆ ಚಿಗುರೊಡೆಯುವಂತೆ ಮಾಡಿದರು. ಆದರೆ ಉಳಿದ ಆಟಗಾರರಿಂದ ಉತ್ತಮ ಸಾಥ್​ ಸಿಗದ ಕಾರಣ ದೊಡ್ಡ ಹೊಡೆತಗಳಿಗೆ ಕೈ ಹಾಕಿ ರಾಸಿಖ್ ಸಲಾಂ ಅವರಿಗೆ ಕ್ಯಾಚ್​ ನೀಡಿ ವಿಕೆಟ್​ ಕೈಚೆಲ್ಲಿದರು. ಈ ವಿಕೆಟ್​ ಪತನದ ಬಳಿಕ ರಶೀದ್​ ಖಾನ್​ ಮತ್ತು ಸಾಯಿ ಕಿಶೋರ್​ ಸಿಡಿದು ನಿಂತರು. ಅಂತಿಮ ಓವರ್​ನಲ್ಲಿ ಗೆಲುವಿಗೆ 19 ರನ್​ ತೆಗೆಯುವ ಸವಾಲಿನಲ್ಲಿ ರಶೀದ್​ ಅವರು ಮುಕೇಶ್​ ಕುಮಾರ್​ಗೆ ಸತತ 2 ಬೌಂಡರಿ ಮತ್ತು ಒಂದು ಸಿಕ್ಸರ್​ ಬಾರಿಸಿ ಪಂದ್ಯವನ್ನು ರೋಚಕ ಹಂತಕ್ಕೆ ತಂದು ನಿಲ್ಲಿಸಿದರು. ಅಂತಿಮ ಎಸೆತದಲ್ಲಿ ಗೆಲುವಿಗೆ 5 ರನ್​ ಬೇಕಿದ್ದಾಗ ಇದನ್ನು ಬಾರಿಸುವಲ್ಲಿ ರಶೀದ್​ ಎಡವಿದರು. ಡೆಲ್ಲಿ ರೋಚಕ 4 ರನ್​ಗಳ ಗೆಲುವು ಸಾಧಿಸಿತು.

ಸಿಡಿದ ಪಂತ್​-ಅಕ್ಷರ್​


ಮೊದಲು ಇನಿಂಗ್ಸ್ ಆರಂಭಿಸಿದ ಡೆಲ್ಲಿಗೆ ಪೃಥ್ವಿ ಶಾ ಮತ್ತು ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್ ಆಕ್ರಮಣಕಾರಿ ಬ್ಯಾಟಿಂಗ್​ ಮೂಲಕ ಉತ್ತಮ ಆರಂಭ ಒದಗಿಸಿದರು. ಆದರೆ ಈ ಬ್ಯಾಟಿಂಗ್​ ಆರ್ಭಟ ಹೆಚ್ಚು ಹೊತ್ತು ಸಾಗಲಿಲ್ಲ. ಸಂದೀಪ್​ ವಾರಿಯರ್​ ಒಂದೇ ಓವರ್​ನಲ್ಲಿ ಉಭಯ ಆಟಗಾರರ ವಿಕೆಟ್​ ಕಿತ್ತು ಡೆಲ್ಲಿಗೆ ಅವಳಿ ಆಘಾತವಿಕ್ಕಿದರು. 5 ರನ್​ಗಳಿಸಿದ್ದ ವೇಳೆ ಜೀವದಾನ ಪಡೆದಿದ್ದ ಮ್ಯಾಕ್‌ಗುರ್ಕ್ 23 ರನ್​ಗಳಿಸಿ ಔಟಾದರು. ಇದರ ಬೆನ್ನಲ್ಲೇ ಪೃಥ್ವಿ ಶಾ(11) ವಿಕೆಟ್​ ಕೂಡ ಪತನಗೊಂಡಿತು. ನೂರ್ ಅಹ್ಮದ್ ಹಿಡಿದ ಅದ್ಭುತ ಕ್ಯಾಚ್​ಗೆ ಉಭಯ ಆಟಗಾರರು ಬಲಿಯಾದರು. ಈ ವಿಕೆಟ್​ ಪತನದ ಬಳಿಕ ಆಡಲಿಳಿದ ಶಾಯ್​ ಹೋಪ್​ ಕೂಡ ಡೆಲ್ಲಿಗೆ ಹೋಪ್​ ನೀಡುವಲ್ಲಿ ವಿಫಲರಾದರು. ಕೇವಲ 5 ರನ್​ಗೆ ಆಟ ಮುಗಿಸಿದರು.

44 ರನ್​ಗೆ ಮೂರು ವಿಕೆಟ್​ ಕಳೆದುಕೊಂಡ ವೇಳೆ ಕ್ರೀಸ್​ಗಿಳಿದ ಎಡಗೈ ಬ್ಯಾಟರ್​ಗಳಾದ ರಿಷಭ್​ ಪಂತ್​ ಮತ್ತು ಅಕ್ಷರ್​ ಪಟೇಲ್​ ಆರಂಭದಲ್ಲಿ ತಾಳ್ಮೆಯುತ ಬ್ಯಾಟಿಂಗ್​ ನಡೆಸಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಅರ್ಧಶತಕ ಪೂರ್ತಿಗೊಂಡ ತಕ್ಷಣ ಜಿದ್ದಿಗೆ ಬಿದ್ದವರಂತೆ ಬ್ಯಾಟ್​ ಬೀಸಿ ಗುಜರಾತ್​ ಬೌಲರ್​ಗಳ ಮೇಲೆ ಸವಾರಿ ಮಾಡಿದರು. 17ನೇ ಓವರ್​ ತನಕ ಕ್ರೀಸ್​ನಲ್ಲಿದ್ದ ಅಕ್ಷರ್​ ಪಟೇಲ್ 5 ಬೌಂಡರಿ ಮತ್ತು 4 ಸಿಕ್ಸರ್​ ನೆರವಿನಿಂದ 66 ರನ್​ ಚಚ್ಚಿದರು. ಈ ಜೋಡಿ 4ನೇ ವಿಕೆಟ್​ಗೆ 113 ರನ್​ ಒಟ್ಟುಗೂಡಿಸಿತು.

18 ಎಸೆತಗಳಲ್ಲಿ 67 ರನ್ ದಾಖಲು​


ಅಕ್ಷರ್​ ಪಟೇಲ್​ ವಿಕೆಟ್​ ಪತನದ ಬಳಿಕ ಆಡಲಿಳಿದ ಟ್ರಿಸ್ಟಾನ್ ಸ್ಟಬ್ಸ್ ಬಿರುಸಿನ ಬ್ಯಾಟಿಂಗ್​ ಮೂಲಕ ಕೇವಲ 7 ಎಸೆತಗಳಿಂದ ಅಜೇಯ 26 (2 ಸಿಕ್ಸರ್​, 3 ಬೌಂಡರಿ) ರನ್​ ಬಾರಿಸಿದರು. ಮೋಹಿತ್​ ಶರ್ಮ ಎಸೆತ ಅಂತಿಮ ಓವರ್​ನಲ್ಲಿ ಪಂತ್​ 4 ಸಿಕ್ಸರ್​ ಮತ್ತು ಒಂದು ಬೌಂಡರಿ ಸಿಡಿಸಿ 31 ರನ್ ದೋಚಿದರು. ಹೀಗಾಗಿ ಅಂತಿಮ 18 ಎಸೆತಗಳಲ್ಲಿ ಡೆಲ್ಲಿಗೆ ಬರೋಬ್ಬರಿ 67 ರನ್​ ಹರಿದು ಬಂತು. ಮೋಹಿತ್​ ಶರ್ಮ 4 ಓವರ್​ಗೆ 73 ರನ್​ ಬಿಟ್ಟುಕೊಟ್ಟು ಐಪಿಎಲ್​ನಲ್ಲಿಯೇ ಅತ್ಯಧಿಕ ರನ್​ ಹೊಡೆಸಿಕೊಂಡ ಆಟಗಾರ ಎನ್ನುವ ಕೆಟ್ಟ ದಾಖಲೆಯನ್ನು ತಮ್ಮ ಹೆಸರಿಗೆ ಸೇರಿಸಿಕೊಂಡರು. ಪಂತ್​ ಬರೋಬ್ಬರಿ 8 ಸಿಕ್ಸರ್​ ಮತ್ತು 5 ಬೌಂಡರಿ ಸಿಡಿಸಿ ಅಜೇಯ 88 ರನ್​ ಬಾರಿಸಿದರು. ಎದುರಿಸಿದ್ದು ಕೇವಲ 43 ಎಸೆತ. ಸಂದೀಪ್​ ವಾರಿಯರ್​ 15 ರನ್​ಗೆ 3 ವಿಕೆಟ್​ ಕಿತ್ತು ಗುಜರಾತ್​ ಪರ ಉತ್ತಮ ಬೌಲಿಂಗ್​ ನಡೆಸಿದರು. ಉಳಿದೆಲ್ಲರು ದುಬಾರಿಯಾಗಿ ಕಂಡುಬಂದರು. ​

Continue Reading
Advertisement
IPL 2024
ಕ್ರೀಡೆ24 mins ago

IPL 2024: ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆಯಲು ಸಜ್ಜಾದ ಆರ್​ಸಿಬಿ

Pakistan Teen
ದೇಶ25 mins ago

ಪಾಕಿಸ್ತಾನದ ಯುವತಿಯ ಪ್ರಾಣ ಉಳಿಸಿತು ಭಾರತದ ಹೃದಯ; ‘ಹಾರ್ಟ್‌’ ಟಚಿಂಗ್ ಸ್ಟೋರಿ ಇದು!

Comedy Khiladigalu Premier League From 27th April On Zee Kannada
ಕಿರುತೆರೆ25 mins ago

Comedy Khiladigalu Premier League: ಹೇಗಿರಲಿದೆ ಹೊಸ ಶೋ ʻಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ʼ?

Pushpa The Rule first single on May 1
ಟಾಲಿವುಡ್43 mins ago

Pushpa The Rule: ಬಿಗ್‌ ಅಪ್‌ಡೇಟ್‌ ಹಂಚಿಕೊಂಡ ʻಪುಷ್ಪ 2ʼ: ಮೇ 1ಕ್ಕೆ ತಂಡದಿಂದ ಗುಡ್‌ ನ್ಯೂಸ್‌!

actress amulya father in law election officers ride
ಕ್ರೈಂ48 mins ago

Election Officer Raid: ನಟಿ ಅಮೂಲ್ಯ ಮಾವ, ಬಿಜೆಪಿ ಮುಖಂಡನ ಮನೆ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ

Rahul Gandhi
ದೇಶ51 mins ago

Rahul Gandhi: ಶೀಘ್ರವೇ ಅಯೋಧ್ಯೆಗೆ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಭೇಟಿ; ರಾಮಲಲ್ಲಾನ ದರ್ಶನ!

IPL 2024
ಕ್ರೀಡೆ1 hour ago

IPL 2024: ದುಬಾರಿ ರನ್​ ನೀಡಿ ಐಪಿಎಲ್​ನಲ್ಲಿ ಅನಗತ್ಯ ದಾಖಲೆ ಬರೆದ ಮೋಹಿತ್​ ಶರ್ಮ

Amitabh Bachchan, AR Rahman honoured with Deenanath Mangeshkar award
ಸಿನಿಮಾ1 hour ago

Amitabh Bachchan: ಅಮಿತಾಭ್‌ ಬಚ್ಚನ್, ಎ ಆರ್ ರೆಹಮಾನ್‌ ಸೇರಿ ಹಲವರಿಗೆ ʻದೀನನಾಥ್ ಮಂಗೇಶ್ಕರ್ ಪ್ರಶಸ್ತಿʼ ಗೌರವ

Lok Sabha Election
ಕರ್ನಾಟಕ1 hour ago

Lok Sabha Election: ಕರ್ನಾಟಕ ಸೇರಿ 13 ರಾಜ್ಯದಲ್ಲಿ ನಾಳೆ 2ನೇ ಹಂತದ ಮತದಾನ; ಪಿನ್‌ ಟು ಪಿನ್‌ ಮಾಹಿತಿ ಇಲ್ಲಿದೆ

Subramanya Dhareshwar
ಶ್ರದ್ಧಾಂಜಲಿ1 hour ago

Subramanya Dhareshwar: ಜೇನುದನಿಯ ಗಾನಕೋಗಿಲೆ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ5 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20245 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌