ಮುಂಬೈ: ಏಕದಿನ ಕ್ರಿಕೆಟ್ನಲ್ಲಿ 49ನೇ ಶತಕ ಬಾರಿಸಿ ತಮ್ಮ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿಗೆ (Virat Kohli) ದಿಗ್ಗಜ ಕ್ರಿಕೆಟರ್ ಸಚಿನ್ ತೆಂಡೂಲ್ಕರ್ ಅಭಿನಂದನೆ ಸಲ್ಲಿಸಿದ್ದಾರೆ. ತಮ್ಮ ಶತಕದೊಂದಿಗೆ, ಭಾರತದ ಮಾಜಿ ನಾಯಕ 50 ಓವರ್ಗಳ ಕ್ರಿಕೆಟ್ ಸ್ವರೂಪದಲ್ಲಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದವರ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಅವರನ್ನು ಸರಿಗಟ್ಟಿದರು. ಕೊಹ್ಲಿ ತಮ್ಮ 35 ನೇ ಹುಟ್ಟುಹಬ್ಬವನ್ನು ಆಚರಿಸಿದ ದಿನವಾದ ನವೆಂಬರ್ 5 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಭಾರತದ ಕ್ರಿಕೆಟ್ ವಿಶ್ವಕಪ್ ಮುಖಾಮುಖಿಯಲ್ಲಿ ಈ ಸಾಧನೆ ಮಾಡಿದ್ದಾರೆ.
ಸಚಿನ್ ತೆಂಡೂಲ್ಕರ್ ಅವರು ಕೊಹ್ಲಿಯ ಫೋಟೋವನ್ನು ಎಕ್ಸ್ ನಲ್ಲಿ (ಟ್ವಿಟರ್ನಲ್ಲಿ) ಹಂಚಿಕೊಂಡಿದ್ದಾರೆ ಹೃದಯಪೂರ್ವಕ ಶುಭಾಶಯ ತಿಳಿಸಿದ್ದಾರೆ. ಆದಷ್ಟು ಬೇಗ 50 ಶತಕ ಬಾರಿಸಿ ತಮ್ಮ ಶತಕವನ್ನು ಮುರಿಯುವಂತೆ ಹುರಿದುಂಬಿಸಿದರು.
“ವಿರಾಟ್ ಚೆನ್ನಾಗಿ ಆಡಿದ್ದಾರೆ. ನನಗೆ 49ರಿಂದ 50ಕ್ಕೆ ಹೋಗಲು ನನಗೆ 365 ದಿನಗಳು ಬೇಕಾಯಿತು (ಸಚಿನ್ ತೆಂಡೂಲ್ಕರ್ಗೆ ಈಗ 50 ವರ್ಷ. ಹೀಗಾಗಿ ಒಂದು ವರ್ಷ ಸಾಗಲು 50 ವರ್ಷ ಬೇಕಾಯಿತು ಎಂದು ಬರೆದುಕೊಂಡಿದ್ದಾರೆ) . ನೀವು ಮುಂದಿನ ಕೆಲವು ದಿನಗಳಲ್ಲಿ ನೀವು 49 ರಿಂದ 50 ಕ್ಕೆ ಹೋಗಿ ನನ್ನ ದಾಖಲೆಯನ್ನು ಮುರಿಯುತ್ತೀರಿ ಎಂದು ನಾನು ಭಾವಿಸುತ್ತೇನೆ. ಅಭಿನಂದನೆಗಳು!!” ಸಚಿನ್ ಬರೆದುಕೊಂಡಿದ್ದಾರೆ.
ತಾಂತ್ರಿಕವಾಗಿ ವಿರಾಟ್ ಕೊಹ್ಲಿ ಈಗ ಗರಿಷ್ಠ ಒಡಿಐ ಶತಕಗಳನ್ನು ಬಾರಿಸಿದವರ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಯಾಕೆಂದರೆ ಕೊಹ್ಲಿ 277 ಇನಿಂಗ್ಸ್ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಸಚಿನ್ ತೆಂಡೂಲ್ಕರ್ 452 ಇನಿಂಗ್ಸ್ಗಳಲ್ಲಿ ಆಡಿದ್ದರು. ರೋಹಿತ್ ಶರ್ಮಾ (31 ಶತಕ). ರಿಕಿ ಪಾಂಟಿಂಗ್ (30 ಶತಕ) ಹಾಗೂ ಸನತ್ ಜಯಸೂರ್ಯ (28 ಶತಕ) ನಂತರದ ಸ್ಥಾನಗಳಲ್ಲಿ ಇದ್ದಾರೆ.
ಈ ಸುದ್ದಿಯನ್ನೂ ಓದಿ : Virat Kohli : ಕೊಹ್ಲಿಗೆ ಕ್ಯೂಟ್ ಬರ್ತ್ಡೇ ವಿಶಷ್ ಕಳುಹಿಸಿದ ಪತ್ನಿ ಅನುಷ್ಕಾ ಶರ್ಮಾ
ತಮ್ಮ 35ನೇ ವರ್ಷದ ಜನುದಿನದಿಂದೇ ಅವರು ಈ ಸಾಧನೆ ಮಾಡಿರುವುದು ವಿಶೇಷ ಹಾಗೂ ಅವರ ಪಾಲಿಗೆ ಸ್ಮರಣೀಯ. ಐತಿಹಾಸಿಕ ಕೋಲ್ಕೊತಾದ ಈಡನ್ ಗಾರ್ಡನ್ಸ್ನ ಸ್ಟೇಡಿಯಮ್ನಲ್ಲಿ ಅವರು ಸಾಧನೆ ಮಾಡಿರುವುದು ಭಾರತ ಕ್ರಿಕೆಟ್ ಕ್ಷೇತ್ರದ ಪಾಲಿಗೆ ಇನ್ನೂ ವಿಶೇಷ. ವಿರಾಟ್ ಕೊಹ್ಲಿ ಈಗ 79 ಅಂತಾರಾಷ್ಟ್ರಿಯ ಶತಕದ ಸರದಾರ. ಅವರು ಖಾತೆಯಲ್ಲೀಗ 79 ಶತಕಗಳಿವೆ. ಅದರಲ್ಲಿ 29 ಶತಕ ಟೆಸ್ಟ್ ಕ್ರಿಕೆಟ್ನಲ್ಲಾದರೆ ಒಂದು ಶತಕ ಟಿ20 ಕ್ರಿಕೆಟ್ನಲ್ಲಾಗಿದೆ. ಗರಿಷ್ಠ ಶತಕಗಳನ್ನು ಬಾರಿಸಿದವರ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ 100 ಶತಕಗಳನ್ನು ಬಾರಿಸಿ ಅಗ್ರ ಸ್ಥಾನದಲ್ಲಿದ್ದಾರೆ. ಕೊಹ್ಲಿ ಅವರಿಗಿಂತ 21 ಶತಕಗಳಿಂದ ಹಿಂದಿದ್ದಾರೆ.
ಹೊಸ ಮೈಲುಗಲ್ಲು ಸ್ಥಾಪಿಸಿದ ಕೊಹ್ಲಿ
ದಕ್ಷಿಣ ಆಫ್ರಿಕಾ ವಿರುದ್ಧ ಸಾಗುತ್ತಿರುವ ವಿಶ್ವಕಪ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ(Virat Kohli) ಅವರು ನೂತನ ಮೈಲಿಗಲ್ಲೊಂದನ್ನು ತಲುಪಿದ್ದಾರೆ. ವಿಶ್ವಕಪ್ ಟೂರ್ನಿಯಲ್ಲಿ 1500* ರನ್ ಪೂರ್ತಿಗೊಳಿಸಿದ್ದಾರೆ. ಈ ಸಾಧನೆ ಮಾಡಿದ ಟೀಮ್ ಇಂಡಿಯಾದ 2ನೇ ಬ್ಯಾಟರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ಸದ್ಯ ವಿರಾಟ್ ಕೊಹ್ಲಿ ಅವರು ಅರ್ಧಶತಕ ಬಾರಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಅವರು ಶತಕ ಬಾರಿಸಿದರೆ ಸಚಿನ್ ತೆಂಡೂಲ್ಕರ್ ಅವರ ಸಾರ್ವಕಾಲಿಕ ಏಕದಿನ ಕ್ರಿಕೆಟ್ನ 49 ಶತಕದ ದಾಖಲೆಯನ್ನು ಸರಿಗಟ್ಟಲಿದ್ದಾರೆ.
ಸಚಿನ್ ತೆಂಡೂಲ್ಕರ್ ಮೊದಲಿಗ: ಕ್ರಿಕೆಟ್ ದೇವರು ಎಂದು ಕರೆಯಲ್ಪಡುವ ಮಾಜಿ ದಿಗ್ಗಜ ಆಟಗಾರ ಸಚಿನ್ ತೆಂಡೂಲ್ಕರ್ ಅವರು ವಿಶ್ವಕಪ್ನಲ್ಲಿ ಅತ್ಯಧಿಕ ರನ್ ಬಾರಿಸಿದ ದಾಖಲೆ ಹೊಂದಿದ್ದಾರೆ. ಸಚಿನ್ 45 ಪಂದ್ಯಗಳನ್ನು ಆಡಿ 2278 ರನ್ ಬಾರಿಸಿದ್ದಾರೆ. ಒಟ್ಟು 6 ವಿಶ್ವಕಪ್ ಶತಕ ಬಾರಿಸಿದ್ದಾರೆ. ಒಂದೇ ವಿಶ್ವಕಪ್ನಲ್ಲಿ ಅತಿ ಹೆಚ್ಚು ಶತಕ ಬಾರಿಸಿದವರ ಪಟ್ಟಿಯಲ್ಲಿ ಅವರಿಗೆ 6ನೇ ಸ್ಥಾನ. 1996ರ ವಿಶ್ವಕಪ್ನಲ್ಲಿ 2 ಶತಕ ಬಾರಿಸಿದ್ದರು. ಇದಾದ ಬಳಿಕ 2011ರ ವಿಶ್ವಕಪ್ನಲ್ಲಿಯೂ 2 ಶತಕ ಗಳಿಸಿದ್ದರು. ಅತಿ ಹೆಚ್ಚು ವಿಶ್ವಕಪ್ ಆಡಿದ ದಾಖಲೆಯೂ ಸಚಿನ್ ಹೆಸೆರಿನಲ್ಲಿದೆ. 1992-2011ರ ವರೆಗೆ ವಿಶ್ವಕಪ್ ಆಡಿದ್ದಾರೆ.
ಪಾಂಟಿಂಗ್ಗೆ 2ನೇ ಸ್ಥಾನ: ಆಸ್ಟ್ರೇಲಿಯಾದ ಅತ್ಯಂತ ಯಶಸ್ವಿ ನಾಯಕ ರಿಕಿ ಪಾಂಟಿಂಗ್ ಅವರು ವಿಶ್ವಕಪ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ. 46 ಪಂದ್ಯಗಳನ್ನು ಆಡಿ 1743 ರನ್ ಬಾರಿಸಿದ್ದಾರೆ. 2 ಬಾರಿ ನಾಯಕನಾಗಿ ಮತ್ತು ಒಂದು ಬಾರಿ ಆಟಗಾರನಾಗಿ ವಿಶ್ವಕಪ್ ಗೆದ್ದ ಸಾಧನೆಯೂ ಇವರದ್ದಾಗಿದೆ. 1996-2011ರ ತನಕದ ವಿಶ್ವಕಪ್ ಪಂದ್ಯ ಆಡಿದ್ದಾರೆ.