ಮುಂಬಯಿ: ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರು ನಾಳೆ(ಸೋಮವಾರ) 50ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಒಟ್ಟು 100 ಶತಕಗಳನ್ನು ಬಾರಿಸಿರುವ ಇವರು ಜೀವನದ ಅರ್ಧಶತಕವನ್ನು ಪೂರೈಸಲಿದ್ದಾರೆ. ಈಗಾಗಲೇ ಅಭಿಮಾನಿಗಳು ತಮ್ಮ ನೆಚ್ಚಿನ ಕ್ರಿಕೆಟ್ ಆಟಗಾರನಿಗೆ ಮುಂಚಿತವಾಗಿಯೇ ಹುಟ್ಟು ಹಬ್ಬದ ಶುಭಾಶಯ ತಿಳಿಸುವ ಜತೆಗೆ ವಿಶೇಷ ರೀತಿಯಲ್ಲಿ ಅಭಿಮಾನ ಮರೆಯುತ್ತಿದ್ದಾರೆ.
ಸಚಿನ್ ಅವರ ಅಪ್ಪಟ ಅಭಿಮಾನಿಯೊಬ್ಬರು ತನ್ನ ಎಡಗೈಯ ಮೇಲೆ ತಮ್ಮ ನೆಚ್ಚಿನ ಆಟಗಾರನ ಟ್ಯಾಟು ಹಾಕಿಸಿಕೊಂಡಿದ್ದಾರೆ. ಜತೆಗೆ ಈ ಪೋಟೋ ಮತ್ತು ಹಚ್ಚೆ ಹಾಕಿಸಿಕೊಳ್ಳುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ‘ದಯವಿಟ್ಟು ನನ್ನ ಟ್ಯಾಟೂ ನೋಡಿ ದೇವರೇ..’ ಎಂದು ಬರೆದುಕೊಂಡಿದ್ದಾರೆ. ಈ ಫೋಸ್ಟ್ ವೈರಲ್ ಆಗುತ್ತಿದ್ದಂತೆ ಸಚಿನ್ ಅವರು ಅಭಿಮಾನಿಯ ಈ ಅಭಿಮಾನಕ್ಕೆ ಟ್ವೀಟ್ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ. “ನಿಮ್ಮ ಈ ಪ್ರೀತಿಗೆ 10ಕ್ಕೆ 10 ಅಂಕಗಳನ್ನು ನೀಡುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ IPL 2023: ಪಂದ್ಯ ಸೋತರು ನೂತನ ದಾಖಲೆ ಬರೆದ ರೋಹಿತ್ ಶರ್ಮ
ಶನಿವಾರ ನಡೆದ ಮುಂಬಯಿ ಮತ್ತು ಪಂಜಾಬ್ ವಿರುದ್ಧದ ಪಂದ್ಯದ ವೇಳೆ ಸಚಿನ್ ಅವರು ತಮ್ಮ ಹುಟ್ಟುಹಬ್ಬಕ್ಕೆ ಮುಂಚಿತವಾಗಿಯೇ ಕೇಕ್ ಕಟ್ ಮಾಡಿ ಸಂಭ್ರಮಿಸಿದರು. ಸಚಿನ್ ಅವರು 2013 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಹೊಂದಿದ್ದರು. ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಮುಂಬೈ ಇಂಡಿಯನ್ಸ್ಗೆ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಮಗ ಅರ್ಜುನ್ ತೆಂಡೂಲ್ಕರ್ ಅವರು ಮುಂಬೈ ಇಂಡಿಯನ್ಸ್ ಪರ ಆಡುತ್ತಿದ್ದಾರೆ.