ನವದೆಹಲಿ: ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಲೈಂಗಿಕ ಕಿರುಕುಳ ಮತ್ತು ಬೆದರಿಕೆಯ ಆರೋಪ ಎದುರಿಸಿದ್ದ ಭಾರತೀಯ ಕುಸ್ತಿ ಒಕ್ಕೂಟವು ಮತ್ತೆ ಒತ್ತಡಕ್ಕೆ ಸಿಲುಕಿದೆ. ಯಾಕೆಂದರೆ ಕುಸ್ತಿ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಬ್ರಿಜ್ಭೂಷಣ್ ಅವರ ಬೆಂಬಲಿಗ ಸಂಜಯ್ ಸಿಂಗ್ ಆಯ್ಕೆಯಾದ ಬಳಿಕ ಅಸಮಾಧಾನಗೊಂಡಿರುವ ರಿಯೋ ಒಲಿಂಪಿಕ್ಸ್ ಪದಕ ವಿಜೇತ ಸಾಕ್ಷಿ ಮಲಿಕ್ ಕ್ರೀಡೆಯನ್ನು ತೊರೆಯುವ ಬೆದರಿಕೆ ಒಡ್ಡಿದ್ದಾರೆ.
#WATCH | Delhi: Wrestler Sakshi Malik says "We slept for 40 days on the roads and a lot of people from several parts of the country came to support us. If Brij Bhushan Singh's business partner and a close aide is elected as the president of WFI, I quit wrestling…" pic.twitter.com/j1ENTRmyUN
— ANI (@ANI) December 21, 2023
ಸಂಜಯ್ ಸಿಂಗ್ ಅವರು 12 ವರ್ಷಗಳ ಕಾಲ ಡಬ್ಲ್ಯುಎಫ್ಐ ಮುಖ್ಯಸ್ಥರಾಗಿದ್ದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ದೀರ್ಘಕಾಲದ ಸಹಾಯಕರಾಗಿದ್ದಾರೆ. ಉತ್ತರ ಪ್ರದೇಶದಿಂದ ಆರು ಬಾರಿ ಬಿಜೆಪಿ ಸಂಸದರಾಗಿದ್ದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಲಿಕ್ ಸೇರಿದಂತೆ ಉನ್ನತ ಕುಸ್ತಿಪಟುಗಳು ಆರೋಪಿಸಿದ್ದ ನಂತರ ಅವರು ರಾಜೀನಾಮೆ ನೀಡಬೇಕಾಯಿತು.
ಚುನಾವಣೆಯಲ್ಲಿ ಸಂಜಯ್ ಸಿಂಗ್ 47 ಮತಗಳಲ್ಲಿ 40 ಮತಗಳನ್ನು ಪಡೆದರು. ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ, ಡಬ್ಲ್ಯುಎಫ್ಐ ಅಧ್ಯಕ್ಷ ಸ್ಥಾನಕ್ಕೆ ಪ್ರತಿಭಟನಾನಿರತ ಕುಸ್ತಿಪಟುಗಳ ಆಯ್ಕೆಯಾಗಿದ್ದ ಅನಿತಾ ಶಿಯೋರನ್ ಕೇವಲ ಏಳು ಮತಗಳನ್ನು ಪಡೆದರು.
ದೇಶದ ಅಗ್ರ ಕುಸ್ತಿಪಟುಗಳಾದ ಮಲಿಖ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ ಫಲಿತಾಂಶದ ಬಗ್ಗೆ ನಿರಾಶೆ ವ್ಯಕ್ತಪಡಿಸಿದ್ದಾರೆ.
ಕಾಮನ್ವೆಲ್ತ್ ಮತ್ತು ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ವಿನೇಶ್ ಫೋಗಟ್, ಈಗ ಸಂಜಯ್ ಸಿಂಗ್ ಫೆಡರೇಶನ್ ಮುಖ್ಯಸ್ಥರಾಗಿ ಆಯ್ಕೆಯಾಗಿರುವುದರಿಂದ ಮಹಿಳಾ ಕುಸ್ತಿಪಟುಗಳು ಕಿರುಕುಳವನ್ನು ಎದುರಿಸುತ್ತಲೇ ಇರುತ್ತಾರೆ. ಎಂದು ಹೇಳಿದ್ದಾರೆ. “ದೇಶದಲ್ಲಿ ನ್ಯಾಯವನ್ನು ಹೇಗೆ ಪಡೆಯುವುದ ಎಂಬುದರ ಬಗ್ಗೆ ನನಗೆ ಯಾವುದೇ ಸುಳಿವು ಇಲ್ಲ” ಎಂದು ಫೋಗಟ್ ಹೇಳಿದರು. “ನಮ್ಮ ಕುಸ್ತಿ ವೃತ್ತಿಜೀವನದ ಭವಿಷ್ಯವು ಕತ್ತಲೆಯಲ್ಲಿದೆ. ಎಲ್ಲಿಗೆ ಹೋಗಬೇಕೆಂದು ನಮಗೆ ತಿಳಿದಿಲ್ಲ” ಎಂದು ಅವರು ಹೇಳಿದರು.
ಒಲಿಂಪಿಕ್ ಕಂಚಿನ ಪದಕ ವಿಜೇತೆ ಪುನಿಯಾ, “ನಮಗೆ ಸರ್ಕಾರ ನೀಡಿದ ಭರವಸೆಯನ್ನು ಈಡೇರಿಸದಿರುವುದು ದುರದೃಷ್ಟಕರ” ಎಂದು ಹೇಳಿದರು. “ನಾವು ಯಾವುದೇ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ, ನಾವು ರಾಜಕೀಯಕ್ಕಾಗಿ ಇಲ್ಲಿಗೆ ಬಂದಿಲ್ಲ. ನಾವು ಸತ್ಯಕ್ಕಾಗಿ ಹೋರಾಡುತ್ತಿದ್ದೆವು, ಆದರೆ ಇಂದು ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಸಹಾಯಕರೊಬ್ಬರು ಡಬ್ಲ್ಯುಎಫ್ಐ ಅಧ್ಯಕ್ಷರಾಗಿದ್ದಾರೆ” ಎಂದು ಅವರು ಹೇಳಿದರು.
ಕುಸ್ತಿ ಸಂಸ್ಥೆಗೆ ಮಹಿಳಾ ಮುಖ್ಯಸ್ಥರನ್ನು ಪಡೆಯಬೇಕೆಂದು ಅವರು ಬಯಸಿದ್ದರು ಎಂದು ಮಲಿಕ್ ಹೇಳಿದರು. “ಆದರೆ ಅದು ಸಂಭವಿಸಲಿಲ್ಲ” ಎಂದು ಅವರು ಹೇಳಿದರು. “ನಾವು ಹೋರಾಡಿದ್ದೇವೆ, ಆದರೆ ಹೊಸ ಅಧ್ಯಕ್ಷರು ಬ್ರಿಜ್ ಭೂಷಣ್ ಅವರ ಸಹಾಯಕ,ಅವರ ವ್ಯವಹಾರ ಪಾಲುದಾರರಾಗಿದ್ದರೆ, ನಾನು ಕುಸ್ತಿಯನ್ನು ತ್ಯಜಿಸುತ್ತೇನೆ” ಎಂದು ಒಲಿಂಪಿಕ್ ಕಂಚಿನ ಪದಕ ವಿಜೇತೆ ತಮ್ಮ ಬೂಟುಗಳನ್ನು ಮೇಜಿನ ಮೇಲೆ ಇರಿಸಿ ಹೇಳಿದ್ದಾರೆ.
ಈ ವರ್ಷದ ಜನವರಿಯಲ್ಲಿ, ಮೂವರು ಕುಸ್ತಿಪಟುಗಳು ಜಂತರ್ ಮಂತರ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಬ್ರಿಜ್ ಭೂಷಣ್ ಶರಣ್ ಸಿಂಗ್ ಹಲವಾರು ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದರು ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಸತ್ಯದ ಗೆಲುವು ಎಂದ ಸಂಜಯ್
ಇಂದಿನ ಚುನಾವಣೆಯಲ್ಲಿ ಜಯಗಳಿಸಿದ ನಂತರ, ಸಂಜಯ್ ಸಿಂಗ್ ಇದು ಸುಳ್ಳುಗಳ ಮೇಲೆ ಸತ್ಯದ ಗೆಲುವು ಎಂದು ಹೇಳಿದರು. “ಉತ್ತಮ ವ್ಯಕ್ತಿಯ ವಿರುದ್ಧ ಅವರು ಸುಳ್ಳು ಆರೋಪಗಳನ್ನು ಮಾಡಿದ್ದಾರೆ” ಎಂದು ಹೇಳಿದರು. ನೀವು ಬಿಜೆಪಿ ಸಂಸದರಿಗೆ ಹತ್ತಿರವಾಗಿದ್ದೀರಾ ಎಂಬ ಪ್ರಶ್ನೆಗೆ, “ಖಂಡಿತವಾಗಿಯೂ, ನಾನು ಅವರಿಗೆ ಹತ್ತಿರವಾಗಿದ್ದೇನೆ ಎಂಬುದರಲ್ಲಿ ಸಂದೇಹವಿಲ್ಲ” ಎಂದು ಸಂಜಯ್ ಸಿಂಗ್ ಹೇಳಿದರು. ಫೆಡರೇಶನ್ ಈಗ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬ ಬಗ್ಗೆ ಕುಸ್ತಿಪಟುಗಳ ಒಂದು ವಿಭಾಗದ ಕಳವಳದ ಬಗ್ಗೆ ಕೇಳಿದಾಗ, “ಯಾವುದೇ ಮಹಿಳಾ ಕುಸ್ತಿಪಟುವಿಗೆ ಅನ್ಯಾಯವಾಗುವುದಿಲ್ಲ” ಎಂದು ಅವರು ಹೇಳಿದರು.
ಇದನ್ನೂ ಓದಿ :Rajat Patidar: ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ ಆರ್ಸಿಬಿಯ ರಜತ್ ಪಾಟೀದಾರ್
ಸಂಜಯ್ ಸಿಂಗ್ ಅವರ ಗೆಲುವಿನ ಬಗ್ಗೆ ಸುದ್ದಿ ಸಂಸ್ಥೆ ಎಎನ್ಐಗೆ ಮಾತನಾಡಿದ ಬ್ರಿಜ್ ಭೂಷಣ್ ಶರಣ್ ಸಿಂಗ್, “ನಾನು ಗೆಲುವಿನ ಶ್ರೇಯಸ್ಸನ್ನು ದೇಶದ ಕುಸ್ತಿಪಟುಗಳಿಗೆ ಮತ್ತು ಡಬ್ಲ್ಯುಎಫ್ಐ ಕಾರ್ಯದರ್ಶಿಗೆ ನೀಡಲು ಬಯಸುತ್ತೇನೆ. ಹೊಸ ಫೆಡರೇಶನ್ ರಚನೆಯ ನಂತರ, ಕುಸ್ತಿ ಸ್ಪರ್ಧೆಗಳು ಪುನರಾರಂಭಗೊಳ್ಳುತ್ತವೆ ಎಂದು ನಾನು ಭಾವಿಸುತ್ತೇನೆ.
ಡಬ್ಲ್ಯುಎಫ್ಐ ಚುನಾವಣೆಯ ಪ್ರಕ್ರಿಯೆಯು ಜುಲೈನಲ್ಲಿ ಪ್ರಾರಂಭವಾಯಿತು, ಆದರೆ ನ್ಯಾಯಾಲಯದ ಪ್ರಕರಣಗಳು ಅದನ್ನು ವಿಳಂಬಗೊಳಿಸುತ್ತಲೇ ಇದ್ದವು. ಇದು ಅಂತರರಾಷ್ಟ್ರೀಯ ಕುಸ್ತಿ ಸಂಸ್ಥೆ ಡಬ್ಲ್ಯುಎಫ್ಐ ಅನ್ನು ಅಮಾನತುಗೊಳಿಸಲು ಕಾರಣವಾಯಿತು. ಸರ್ವೋಚ್ಚ ನ್ಯಾಯಾಲಯವು ಇತ್ತೀಚೆಗೆ ಪಂಜಾಬ್ ವಿಧಿಸಿದ್ದ ತಡೆಯಾಜ್ಞೆಯನ್ನು ತಳ್ಳಿಹಾಕಿತು.