ಮುಂಬಯಿ: ಸಚಿನ್ ತೆಂಡೂಲ್ಕರ್(sachin tendulkar) ಅವರ ಪುತ್ರಿ ಸಾರಾ ತೆಂಡೂಲ್ಕರ್ ಮತ್ತು ಟೀಮ್ ಇಂಡಿಯಾದ ಸ್ಟಾರ್ ಯುವ ಆಟಗಾರ ಶುಭಮನ್ ಗಿಲ್ ಇಬ್ಬರು ಕದ್ದು ಮುಚ್ಚಿ ಡೇಟಿಂಗ್(sara tendulkar and shubman gill relationship) ನಡೆಸುತ್ತಿದ್ದಾರೆ ಎಂಬ ಸುದ್ದಿ ಈಗಾಗಲೇ ಹಲವು ಬಾರಿ ಕೇಳಿಬಂದಿದೆ. ಇದೇ ಕಾರಣಕ್ಕೆ ಇವರಿಬ್ಬರನ್ನು ನೆಟ್ಟಿಗರು ಹಲವು ಬಾರಿ ಟ್ರೋಲ್ ಕೂಡ ಮಾಡಿದ್ದಾರೆ. ಆದರೆ ಗಿಲ್ ಮತ್ತು ಸಾರಾ ತಮ್ಮ ಪ್ರೀತಿ ಮತ್ತು ಡೇಟಿಂಗ್ ವಿಚಾರವಾಗಿ ಇದುವರೆಗೂ ಎಲ್ಲಯೂ ತುಟಿಬಿಚ್ಚಿಲ್ಲ. ಎಷ್ಟೇ ರೂಮರ್ಸ್ ಹಬ್ಬಿದರೂ ತಮ್ಮ ಪಾಡಿಗೆ ತಾವು ಸುಮ್ಮನಿದ್ದರು. ಇದೀಗ ಸಾರಾ ಅವರು ಮಾಡಿರುವ ಟ್ವೀಟ್ ಈ ಜೋಡಿ ನಿಜವಾಗಿಯೂ ಪ್ರೀತಿಸುತ್ತಿರುವುದು ಖಚಿತ ಎಂಬ ಸುಳಿವು ನೀಡಿದಂತಿದೆ.
“ವೆಲ್ ಪ್ಲೇ ಶುಭಮನ್ ಗಿಲ್”
ಆಸ್ಟ್ರೇಲಿಯಾ ವಿರುದ್ಧ ಶುಕ್ರವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ 5 ವಿಕೆಟ್ಗಳ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ಶುಭಮನ್ ಗಿಲ್ 63 ಎಸೆತ ಎದುರಿಸಿ 6 ಬೌಂಡರಿ ಮತ್ತು 2 ಸಿಕ್ಸರ್ ನೆರವಿನಿಂದ 74 ರನ್ ಬಾರಿಸಿ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಅವರ ಪ್ರದರ್ಶನಕ್ಕೆ ಸಾರಾ ತೆಂಡೂಲ್ಕರ್ ಅವರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ‘ವೆಲ್ ಪ್ಲೇ ಶುಭಮನ್ ಗಿಲ್’ ಎಂದು ಬರೆದು ಚಪ್ಪಾಳೆ ತಟ್ಟುವ ಎಮೊಜಿಯನ್ನು ಹಾಕಿದ್ದಾರೆ. ಇದು ನೆಟ್ಟಿಗರಿಗೆ ಆಹಾರವಾಗಿದೆ. ಇಬರಿಬ್ಬರ ಮಧ್ಯೆ ಪ್ರೇಮಾಂಕುರ ಇರುವುದು ಪಕ್ಕಾ ಎಂದಿದ್ದಾರೆ.
Well played #ShubmanGill 👏 & Team india 🇮🇳 #INDvAUS
— Sara Tendulkar (@imsaratendulkar) September 22, 2023
ಶುಭಮನ್ ಗಿಲ್ ಅವರು ಆಡುವ ವೇಳೆ ಹಲವು ಬಾರಿ ಪ್ರೇಕ್ಷಕರು ಸಾರಾ, ಸಾರಾ… ಎಂದು ಕೂಗಿದ್ದರು. ಈ ಸಾರಾ ಯಾರೆಂಬ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ನಡೆಯುತ್ತಿದ್ದರೂ ಇದಕ್ಕೆ ಯಾವುದೇ ಕ್ಲ್ಯಾರಿಟಿ ಸಿಕ್ಕಿರಲಿಲ್ಲ. ಕೆಲವರು ಗಿಲ್ ಸಚಿನ್ ತೆಂಡೂಲ್ಕರ್ ಪುತ್ರಿ ಜತೆ ಅಂದುಕೊಂಡಿದ್ದರೆ, ಇನ್ನೂ ಕೆಲವರು ನಟಿ ಸಾರಾ ಅಲಿ ಖಾನ್ ಎಂದುಕೊಂಡಿದ್ದರು. ಆದರೆ ಈಗ ನೆಟ್ಟಿಗರಿಗೆ ಒಂದು ಹಂತದ ಕ್ಲ್ಯಾರಿಟಿ ಸಿಕ್ಕಿದ್ದು ಸಚಿನ್ ಪುತ್ರಿ ಸಾರಾ ಅವರರೇ ಗಿಲ್ ಪ್ರೇಯಸಿ ಎಂದು ಹೇಳಿದ್ದಾರೆ.
ಇದನ್ನೂ ಓದಿ Viral Video: ಪಂದ್ಯ ಮುಗಿದರೂ ತಡರಾತ್ರಿವರೆಗೂ ಬ್ಯಾಟಿಂಗ್ ಅಭ್ಯಾಸ ನಡೆಸಿದ ಟೀಮ್ ಇಂಡಿಯಾ ಆಟಗಾರ
ಭಾರತಕ್ಕೆ 5 ವಿಕೆಟ್ ಜಯ
ಇಲ್ಲಿನ ಐಎಸ್ ಬಿಂದ್ರಾ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ 50 ಓವರ್ಗಳಲ್ಲಿ 276 ರನ್ಗಳಿಗೆ ಆಲ್ಔಟ್ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಭಾರತ ತಂಡ. 48.4 ಓವರ್ಗಳಲ್ಲಿ. 5 ವಿಕೆಟ್ ಕಳೆದುಕೊಂಡು 281 ರನ್ ಬಾರಿಸಿ ಜಯಶಾಲಿಯಾಯಿತು. ಭಾರತ ತಂಡದ ಪರ ಬೌಲಿಂಗ್ನಲ್ಲಿ 51 ರನ್ಗಳಿಗೆ 5 ವಿಕೆಟ್ ಉರುಳಿಸಿದ ಮೊಹಮ್ಮದ್ ಶಮಿ ಹಾಗೂ ಬ್ಯಾಟಿಂಗ್ ಮೂಲಕ ತಲಾ ಅರ್ಧ ಶತಕಗಳನ್ನು ಬಾರಿಸಿದ ಶುಭ್ಮನ್ ಗಿಲ್ (74) ಹಾಗೂ ಋತುರಾಜ್ ಗಾಯಕ್ವಾಡ್ (71), ಸೂರ್ಯಕುಮಾರ್ ಯಾದವ್ (50), ಮತ್ತು ಕೆ. ಎಲ್ ರಾಹುಲ್ (58*) ಗೆಲುವಿನ ರೂವಾರಿಗಳು ಎನಿಸಿಕೊಂಡರು.