ಪುಣೆ : ಪ್ರವಾಸಿ ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಭಾರತ ತಂಡ ಟಾಸ್ ಗೆದ್ದಿದ್ದು, ಎದುರಾಳಿ ತಂಡಕ್ಕೆ ಮೊದಲು ಬ್ಯಾಟ್ ಮಾಡುವಂತೆ ಆಹ್ವಾನ ನೀಡಿದೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಮ್ನಲ್ಲಿ ಈ ಹಣಾಹಣಿ ನಡೆಯುತ್ತಿದೆ.
ಮೊದಲ ಪಂದ್ಯದಲ್ಲಿ ಭಾರತ ತಂಡದ 2 ರನ್ಗಳ ವಿರೋಚಿತ ಗೆಲುವು ಸಾಧಿಸಿತ್ತು, ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ, ಈ ಪಂದ್ಯದಲ್ಲೂ ಗೆಲುವು ಸಾಧಿಸಿ ಸರಣಿಯನ್ನು ಕೈ ವಶ ಮಾಡಿಕೊಳ್ಳುವುದು ಭಾರತ ತಂಡದ ಇರಾದೆಯಾಗಿದೆ. ಅತ್ತ ಶ್ರೀಲಂಕಾ ತಂಡಕ್ಕೆ ಈ ಪಂದ್ಯವನ್ನು ಗೆದ್ದು ಸರಣಿಯನ್ನು ಜೀವಂತವಾಗಿರಿಸಿಕೊಳ್ಳುವ ಅನಿವಾರ್ಯತೆ ಎದುರಾಗಿದೆ.
ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಬೌಲರ್ ಹರ್ಷಲ್ ಪಟೇಲ್ ಬದಲಿಗೆ ಅರ್ಶ್ದೀಪ್ ಸಿಂಗ್ಗೆ ಅವಕಾಶ ನೀಡಲಾಗಿದೆ.
ತ್ರಿಪಾಠಿ ಪದಾರ್ಪಣೆ
ಸನ್ರೈಸರ್ಸ್ ಹೈದರಾಬಾದ್ ತಂಡದ ಪರವಾಗಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದ ರಾಹುಲ್ ತ್ರಿಪಾಠಿ ಟೀಮ್ ಇಂಡಿಯಾ ಟಿ20ನ ತಂಡದ ಪರವಾಗಿ ಪದಾರ್ಪಣೆ ಮಾಡಿದ್ದಾರೆ. ಅವರಿಗೆ 102ನೇ ಸಂಖ್ಯೆಯ ಕ್ಯಾಪ್ ದೊರೆಯಿತು. ಕೋಚ್ ದ್ರಾವಿಡ್ ಹಾಗೂ ನಾಯಕ ಪಾಂಡ್ಯ ಕ್ಯಾಪ್ ನೀಡಿದರು.
ತಂಡಗಳು
ಭಾರತ: ಇಶಾನ್ ಕಿಶನ್, ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ರಾಹುಲ್ ತ್ರಿಪಾಠಿ, ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಉಮ್ರಾನ್ ಮಲಿಕ್, ಶಿವಂ ಮಾವಿ, ಯಜ್ವೇಂದ್ರ ಚಹಲ್, ಅರ್ಶ್ದೀಪ್ ಸಿಂಗ್.
ಶ್ರೀಲಂಕಾ
ಪಾಥುಮ್ ನಿಸ್ಸಾಂಕ, ಕುಸಾಲ್ ಮೆಂಡಿಸ್, ಧನಂಜಯ ಡಿಸಿಲ್ವಾ, ಚರಿತ್ ಅಸಲಂಕಾ, ಭಾನುಕಾ ರಾಜಪಕ್ಷ, ದಸುನ್ ಶನಕ, ವಾನಿಂದು ಹಸರಂಗ, ಚಾಮಿಕಾ ಕರುಣಾರತ್ನೆ, ಮಹೀಶ್ ತೀಕ್ಷಣ, ಕಸುನ್ ರಜಿತಾ.
ಇದನ್ನೂ ಓದಿ | IND VS SL | ಗಾಯಗೊಂಡು ಲಂಕಾ ವಿರುದ್ಧದ ಟಿ20 ಸರಣಿಯಿಂದ ಹೊರಬಿದ್ದ ಸಂಜು ಸ್ಯಾಮ್ಸನ್!