Site icon Vistara News

Self harming : ಪತ್ನಿ ದೂರಾದಳೆಂದು ನೊಂದು ನೇಣಿಗೆ ಶರಣಾದ ನ್ಯಾಷನಲ್ ಕಬಡ್ಡಿ ಆಟಗಾರ

National kabaddi player Vinod Raj Urs commits suicide

ಚಿಕ್ಕಮಗಳೂರು : ನ್ಯಾಷನಲ್ ಕಬಡ್ಡಿ ಆಟಗಾರ ನೇಣಿಗೆ (National Kabaddi player) ಶರಣಾಗಿರುವ (Self harming) ಘಟನೆ ಚಿಕ್ಕಮಗಳೂರು ತಾಲೂಕಿನ ತೇಗೂರು ಗ್ರಾಮದಲ್ಲಿ ನಡೆದಿದೆ. ವಿನೋದ್ ರಾಜ್ ಅರಸ್ (Vinod Raj aras) ಮೃತ ದುರ್ದೈವಿ.

ಮದುವೆಯಾದ ಒಂದೇ ತಿಂಗಳಿಗೆ ಪತ್ನಿ ಬಿಟ್ಟಹೋದ ಹಿನ್ನೆಲೆಯಲ್ಲಿ ವಿನೋದ್‌ ರಾಜ್‌ ನೊಂದಿದ್ದ ಎನ್ನಲಾಗಿದೆ. ಕಳೆದ ಶುಕ್ರವಾರ ಆತ್ಮಹತ್ಯೆಗೆ ಯತ್ನಿಸಿದ ವಿನೋದ್ ರಾಜ್ ಅರಸ್‌ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸೋಮವಾರ ರಾತ್ರಿ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಎರಡು ವರ್ಷಗಳ ಕಾಲ ಪ್ರೀತಿಸಿದ್ದ ವಿನೋದ್‌ ರಾಜ್‌ 2023ರ ಡಿ.10 ರಂದು ಮದುವೆಯಾಗಿದ್ದರು. ಆದರೆ ಡಿ.31ಕ್ಕೆ ಪತಿ ಬೇಡ ಎಂದು ಪತ್ನಿ ಬಿಟ್ಟು ಹೋಗಿದ್ದಳು. ಪ್ರೇಮ ವಿವಾಹವು ಡಿ.31 ನಂತರ ಮಹಿಳಾ ಪೊಲೀಸ್ ಠಾಣಾ ಮೆಟ್ಟೀಲೇರಿತ್ತು. ದಾಂಪತ್ಯದಲ್ಲಿ ಕಲಹ ಉಂಟಾಗಿತ್ತು ಎನ್ನಲಾಗಿದೆ.

ಇದನ್ನೂ ಓದಿ: Murder Case : ಮತ್ತೊಬ್ಬನ ಮೋಹಕ್ಕೆ ಸಿಲುಕಿ ಗಂಡನ ಕೊಂದಳು ಮೂರು ಮಕ್ಕಳ ತಾಯಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ; ಅರ್ಜುನ ಪ್ರಶಸ್ತಿ ಹಾಕಿ ಆಟಗಾರನ ವಿರುದ್ಧ ಬೆಂಗಳೂರಿನಲ್ಲಿ ಪ್ರಕರಣ ದಾಖಲು

ನವದೆಹಲಿ: ಮದುವೆಯಾಗುವುದಾಗಿ ನಂಬಿಸಿ ಬೆಂಗಳೂರಿನ 22 ವರ್ಷದ ಯುವತಿಗೆ ವಂಚಿಸಿದ ಆರೋಪ ಹಿನ್ನೆಲೆ ಭಾರತೀಯ ಹಾಕಿ(Hockey Player Varun Kumar) ತಂಡದ ಡಿಫೆಂಡರ್ ವರುಣ್ ಕುಮಾರ್ (Varun Kumar) ಮೇಲೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ (Jnanabharathi Police Station) ಎಫ್ಐಆರ್ ದಾಖಲಾಗಿದೆ.

ವರುಣ್ ಕುಮಾರ್ ವಿರುದ್ಧ ಯುವತಿ ಅತ್ಯಾಚಾರ ಆರೋಪ ಮಾಡಿದ್ದು ಪೋಕ್ಸೋ (Pocso) ಪ್ರಕರಣ ದಾಖಲಾಗಿದೆ. ಯುವತಿ 17ನೇ ವಯಸ್ಸಿನಲ್ಲಿ ಇರುವಾಗ ಮದುವೆಯಾಗುವುದಾಗಿ ನಂಬಿಸಿ ಆಕೆಯ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿರುವುದಾಗಿ ಯುವತಿ ಆರೋಪ ಮಾಡಿದ್ದಾಳೆ. ವರುಣ್ ಕುಮಾರ್ 2021ನೇ ಸಾಲಿನ ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದರು. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತ ಹಾಕಿ ತಂಡ ಕಂಚಿನ ಪದಕ ಗೆದ್ದ ತಂಡದ ಸದಸ್ಯರಾಗಿದ್ದ ವರುಣ್​ಗೆ ಹಿಮಾಚಲ ಪ್ರದೇಶ ಸರ್ಕಾರ 1 ಲಕ್ಷ ಬಹುಮಾನ ನೀಡಿ ಗೌರವಿಸಿತ್ತು.

ಇದನ್ನೂ ಓದಿ Physical Abuse: ಕೋಚಿಂಗ್‌ಗೆ ತೆರಳುತ್ತಿದ್ದ ಅಪ್ರಾಪ್ತೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ

ಹಾಕಿ ಪಂದ್ಯಗಳಿಗಾಗಿ ಬೆಂಗಳೂರಿನ ಸಾಯಿ ಸ್ಟೇಡಿಯಂಗೆ ಭೇಟಿ ನೀಡಿದ ಸಂದರ್ಭದಲ್ಲಿ ವರುಣ್ ಕುಮಾರ್ ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಯುವತಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನಲ್ಲಿ ವರಣು ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಹಿಮಾಚಲ ಪ್ರದೇಶದವರಾದ ವರುಣ್ ಕುಮಾರ್ ಪಂಜಾಬ್‌ನ ಜಲಂಧರ್‌ನಲ್ಲಿ ವಾಸಿಸುತ್ತಿದ್ದರು. ಸದ್ಯ ಪರಾರಿಯಾಗಿರುವ ಅವರ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

ಅಪ್ರಾಪ್ತೆಯಾಗಿದ್ದ ಯುವತಿಗೆ ಸಾಮಾಜಿಕ ಜಾಲತಾಣದ ಮೂಲಕ ವರುಣ್ ಕುಮಾರ್ ಪರಿಚಯವಾಗಿತ್ತು. 17 ವರ್ಷದವಳಾಗಿದ್ದ ದೂರುದಾರಳನ್ನ ಪ್ರೀತಿಸುವುದಾಗಿ ನಂಬಿಸಿದ್ದ ವರಣ್​ ‘ಮನೆಯವರನ್ನು ಒಪ್ಪಿಸಿ ಮದುವೆಯಾಗುತ್ತೇನೆ. ಅಲ್ಲಿಯವರೆಗೂ ಪ್ರೇಮಿಗಳಾಗಿ ಇರೋಣ’ ಎಂದು ನಂಬಿಸಿ ದೈಹಿಕ ಸಂಪರ್ಕ ಮಾಡಿದ್ದ. ಆದರೆ, ಈಗ ಮದುವೆಯಾಗದೇ ವಂಚನೆ ಮಾಡಿದ್ದಾನೆ ಎಂದು ಯುವತಿ ತನ್ನ ದೂರಿನಲ್ಲಿ ತಿಳಿಸಿದ್ದಾಳೆ.

2019ರಲ್ಲಿ ನೈಟ್ ಡಿನ್ನರ್ ನೆಪದಲ್ಲಿ ಜಯನಗರಕ್ಕೆ ಕರೆದೊಯ್ದು ಬಲವಂತವಾಗಿ‌ ದೈಹಿಕ ಸಂಪರ್ಕ ಬೆಳಸಿದ್ದ. ಇದಾದ ಬಳಿಕವೂ ಆಗಾಗ ದೈಹಿಕ ಸಂಪರ್ಕ ಮಾಡಿದ್ದ. ಒಂದು ವರ್ಷದ ಹಿಂದೆ ನನ್ನ ತಂದೆ ಮೃತಪಟ್ಟಾಗ ಮನೆ ಬಳಿ ಬಂದು ಸಾಂತ್ವನ ಹೇಳಿ ಹೋಗಿದ್ದ. ಆದರೆ ಈಗ ಸಂಪರ್ಕಕ್ಕೆ ಸಿಗದೇ ವಂಚಿಸುತ್ತಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ದೂರುದಾರ ಯುವತಿ ವಾಲಿಬಾಲ್ ಕ್ರೀಡೆಯಲ್ಲಿ ಆಯ್ಕೆಯಾಗಿ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ದಕ್ಷಿಣ ವಿಭಾಗದ ತರಬೇತಿ ಪಡೆಯುತ್ತಿದ್ದರು. ಈ ವೇಳೆ ಇಬ್ಬರ ಮಧ್ಯೆ ಪ್ರೇಮಾಂಕುರವಾಗಿ ಬಳಿಕ ದೈಹಿಕ ಸಂಬಂಧ ಹೊಂದಿದ್ದರು.

ಯಾರು ಈ ವರುಣ್ ಕುಮಾರ್?


ಭಾರತ ಹಾಕಿ ತಂಡದ ಡಿಫೆಂಡರ್ ಆಗಿರುವ ವರುಣ್ ಮೂಲತಃ ಹಿಮಾಚಲ ಪ್ರದೇಶದವನು. 2017ರಲ್ಲಿ‌ ಭಾರತ ತಂಡದ ಪರ ಪದಾರ್ಪಣೆ ಮಾಡಿದ ಅವರು 2022ರ ಬರ್ಮಿಂಗ್ ಹ್ಯಾಂ – ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. 2022 ರ ಏಷ್ಯನ್ ಗೇಮ್ಸ್‌ ನಲ್ಲಿ ಚಿನ್ನ ಗೆದ್ದ ತಂಡದಲ್ಲಿದ್ದರು. ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಭಾರತ ತಂಡದ ಸದಸ್ಯನೂ ಕೂಡ ಆಗಿದ್ದರು. ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version