ಬೆಂಗಳೂರು: ಭಾರತದ ಮಾಜಿ ಟೆನಿಸ್ ತಾರೆ ಸಾನಿಯಾ ಮಿರ್ಜಾ(Sania Mirza) ಅವರು ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರಿಂದ ವಿಚ್ಛೇದನ ಪಡೆದ ಬಳಿಕ ಸಾನಿಯ ಮರು ಮದುವೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಗಾಗ ಸುದ್ದಿಗಳು ಹರಿದಾಡುತ್ತಿತ್ತು. ಇತ್ತೀಚೆಗೆ ಟೀಮ್ ಇಂಡಿಯಾದ ಕ್ರಿಕೆಟಿಗ ಮೊಹಮ್ಮದ್ ಶಮಿ(Mohammed Shami) ಜತೆಗೆ ಸಾನಿಯಾ ಮಿರ್ಜಾ ಮದುವೆಯಾಗುತ್ತಾರೆ ಎಂಬ ಊಹಾಪೋಹಾ ಹಬ್ಬಿತ್ತು. ಈ ಬಗ್ಗೆ ಸಾನಿಯಾ ತಂದೆ ಇದು ಸುಳ್ಳು ಸುದ್ದಿ, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಸುದ್ದಿಯನ್ನು ನಂಬಬೇಡಿ ಎಂದು ಸ್ಪಷ್ಟನೆ ನೀಡಿದ್ದರು. ಆದರೂ ಕೂಡ ಕೆಲ ನೆಟ್ಟಿಗರು ಈ ಜೋಡಿ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳುತ್ತಲೇ ಇದ್ದರು. ಇದೀಗ ಈ ವದಂತಿ ಬಗ್ಗೆ ಸ್ವತಃ ಶಮಿಯೇ(Shami-Sania Mirza) ಸ್ಪಷ್ಟನೆ ನೀಡಿದ್ದಾರೆ.
ಯೂಟ್ಯೂಬರ್ ಶುಭಂಕರ್ ಮಿಶ್ರಾ ಅವರೊಂದಿಗಿನ ಸಂವಾದದಲ್ಲಿ ಶಮಿ ಅವರು ಸಾನಿಯಾ ಜತೆಗಿನ ಮದುವೆಯ ವಿಚಾರದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಜತೆಗೆ ನೆಟ್ಟಿಗರಿಗೆ ಎಚ್ಚರಿಯನ್ನು ಕೂಡ ನೀಡಿದ್ದಾರೆ.” ಸಾಮಾಜಿಕ ಜಾಲತಾಣದಲ್ಲಿ ನನ್ನ ಮತ್ತು ಸಾನಿಯಾ ಮದುವೆಯ ವಿಚಾರವಾಗಿ ಹರಿದಾಡುತ್ತಿರುವ ಸುದ್ದಿ ಸತ್ಯಕ್ಕೆ ದೂರವಾಗಿದೆ. ಇಂತಹ ಮೀಮ್ಸ್ಗಳು ಕೆಲವರಿಗೆ ಮನರಂಜನೆ ನೀಡಬಹುದು. ಆದರೆ, ಅದರಿಂದ ಉಂಟಾಗುವ ಕೆಟ್ಟ ಪರಿಣಾಮವನ್ನು ಒಮ್ಮೆ ಯೋಚಿಸಿದರೆ ಉತ್ತಮ. ಸಾಮಾಜಿಕ ಜಾಲತಾಣ ಇರುವುದು ಒಳ್ಳೆಯ ಉದ್ದೇಶಗಳನ್ನು ತಿಳಿಸುವ ಸಲುವಾಗಿ. ಯಾರೇ ಆದರೂ ಜಾಲತಾಣದಲ್ಲಿ ಪೋಸ್ಟ್ ಮಾಡುವಾಗ ಅದಕ್ಕೆ ಜವಾಬ್ದಾರರಾಗಿರಬೇಕು. ಇಂತಹ ಆಧಾರರಹಿತ ಸುದ್ದಿಗಳನ್ನು ಹರಡುವುದನ್ನು ಮೊದಲು ನಿಲ್ಲಿಸಿ” ಎಂದು ಹೇಳಿದ್ದಾರೆ.
ಇದನ್ನೂ ಓದಿ Mohammed Shami: ಕೊಹ್ಲಿ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ ಶಮಿ; ವಿಡಿಯೊ ವೈರಲ್
“ನಾನು ಇಲ್ಲಿ ಒಂದು ವಿಷಯ ಸ್ಪಷ್ಟಪಡಿಸ ಬಯಸುತ್ತೇನೆ. ಇಂತಹ ಸುದ್ದಿಗಳನ್ನು ಹಂಚಿಕೊಳ್ಳುವ ವ್ಯಕ್ತಿಗಳಿಗೆ ದೈರ್ಯವಿದ್ದರೆ, ನೀವು ನಿಮ್ಮ ಅಧಿಕೃತಕ ಖಾತೆಯಿಂದ ಈ ಎಲ್ಲಾ ವಿಷಯಗಳನ್ನು ಹಂಚಿಕೊಳ್ಳಿ. ಆಗ ನಾನು ಉತ್ತರ ನೀಡುತ್ತೇನೆ. ಬದಲಾಗಿ ನಕಲಿ ಖಾತೆಯಿಂದ ಬರುವಂತಹ ಪೋಸ್ಟ್ ಬಗ್ಗೆ ನಾನು ತಲೆಕೆಸಿಕೊಂಡಿಲ್ಲ” ಎಂದು ಹೇಳುವ ಮೂಲಕ ಸುಳ್ಳು ಸುದ್ದಿ ಹಬ್ಬಿ ಜನರನ್ನು ದಾರಿತಪ್ಪಿಸುವಂತೆ ಮಾಡುವ ನೆಟ್ಟಿಗರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
Md Shami Bhai let's go Saniya Mirza 🤝#ShoaibMalik #SanaJaved 😳🌟 pic.twitter.com/J7zAOLmY3q
— Fatima Khan (@afficasm) January 20, 2024
ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ಆಟಗಾರ ಶೋಯೆಬ್ ಮಲಿಕ್(Shoaib Malik) ಅವರಿಗೆ ಸಾನಿಯಾ ವಿಚ್ಚೇದನ ನೀಡಿದ ಬಳಿಕ ಡೀಪ್‌ಫೇಕ್(Deepfake) ಮೂಲಕ ಶಮಿ ಮತ್ತು ಸಾನಿಯಾ ಮಿರ್ಜಾ ಅವರ ಮುಖವನ್ನು ಈ ಹಿಂದೆ ಸಾನಿಯಾ ಅವರು ಮಲಿಕ್ ಜತೆಗೆ ತೆಗಿಸಿಕೊಂಡಿದ್ದ ಮದುವೆಯ ಫೋಟೊಗೆ ಫೋಟೊಗೆ ಶಮಿಯ ಮುಖವನ್ನು ಎಡಿಟ್ ಮಾಡಿ ಶಮಿ ಮತ್ತು ಸಾನಿಯಾ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೋಂಡಿದ್ದಾರೆ ಎಂದು ಟ್ವೀಟರ್ ಎಕ್ಸ್ನಲ್ಲಿ ಕಿಡಿಗೇಡಿಗಳು ವೈರಲ್ ಮಾಡಿದ್ದರು.
ಪಾದದ ಶಸ್ತ್ರಚಿಕಿತ್ಸೆಗೆ(mohammed shami injury update) ಒಳಗಾಗಿ ಚೇತರಿಕೆ ಕಾಣುತ್ತಿರುವ ಶಮಿ ಕ್ರಿಕೆಟ್ಗೆ ಮರಳುವು ಸಿದ್ಧತೆಯಲ್ಲಿದ್ದಾರೆ. ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ)ಯಲ್ಲಿ ಬೌಲಿಂಗ್ ಅಭ್ಯಾಸ ಆರಂಭಿಸಿದ್ದಾರೆ. ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಶಮಿ ಅವರು ತಮ್ಮ ಮೊನಚಾದ ಬೌಲಿಂಗ್ ದಾಳಿಯ ಮೂಲಕ ಟೂರ್ನಿಯಲ್ಲಿಯೇ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು. ಆಡಿದ 7 ಪಂದ್ಯಗಳಲ್ಲಿ 24 ವಿಕೆಟ್ ಉರುಳಿಸಿದ್ದರು.