ಮುಂಬಯಿ: ಟೀಮ್ ಇಂಡಿಯಾದ ಬೌಲಿಂಗ್ ಆಲ್ರೌಂಡರ್ ಶಾರ್ದೂಲ್ ಠಾಕೂರ್(Shardul Thakur) ಅವರು ಫೆಬ್ರವರಿ 27 ರಂದು ವೈವಾಹಿಕ ಜೀವನಕ್ಕೆ ಕಾಲಿರಿಸಲಿದ್ದಾರೆ. ಇದಕ್ಕೂ ಮುನ್ನ ನಡೆದ ಹಳದಿ(ಅರಿಶಿಣ) ಕಾರ್ಯಕ್ರಮದಲ್ಲಿ ಶಾರ್ದೂಲ್ ಅವರು ಕುಟುಂಬ ಸದಸ್ಯರೊಂದಿಗೆ ಸಖತ್ ಸ್ಟೆಪ್ಸ್ ಹಾಕಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಶಾರ್ದೂಲ್ ಠಾಕೂರ್ ಅವರು ತಮ್ಮ ಬಹುಕಾಲದ ಗೆಳತಿ ಮಿಥಾಲಿ ಪಾರೂಲ್ಕರ್ ಜತೆ ಕಳೆದ ವರ್ಷ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಫೆಬ್ರವರಿ 27 ಸೋಮವಾರದಂದು ಈ ಜೋಡಿ ಹಸೆಮಣೆ ಏರಲಿದೆ. ಮುಂಬೈನಲ್ಲಿ ಮದುವೆ ಸಮಾರಂಭ ನಡೆಯಲ್ಲಿದ್ದು, ಸುಮಾರು 200 ರಿಂದ 250 ಅತಿಥಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ KL Rahul and Athiya: ಆಸೀಸ್ ವಿರುದ್ಧದ 3ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ದೇವರ ಮೊರೆಹೋದ ಕೆ.ಎಲ್. ರಾಹುಲ್
ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಸ್ಥಾನ ಪಡೆದಿರುವ ಶಾರ್ದೂಲ್ ಠಾಕೂರ್ ವಿವಾಹದ ಬಳಿಕ ಟೀಮ್ ಇಂಡಿಯಾ ಕ್ಯಾಂಪ್ ಸೇರಲಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಮಾರ್ಚ್ 17ರಂದು ನಡೆಯಲಿದೆ.