ಬೆಂಗಳೂರು: ಭಾರತ ತಂಡದ ಅನುಭವಿ ಆಟಗಾರ ಶಿಖರ್ ಧವನ್(Shikhar Dhawan) ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಬದುಕಿಗೆ ವಿದಾಯ(shikhar dhawan retirement) ಹೇಳುವ ಮೂಲಕ ತೆರೆ ಎಳೆದಿದ್ದಾರೆ. ಇಂದು(ಶನಿವಾರ) ಬೆಳಗ್ಗೆ ಟ್ವಿಟರ್ ಎಕ್ಸ್ನಲ್ಲಿ ವಿಡಿಯೊ ಹಂಚಿಕೊಳ್ಳುವ ಮೂಲಕ ತಮ್ಮ ನಿವೃತ್ತಿಯನ್ನು ಪ್ರಕಟಿಸಿದರು. ಕ್ರಿಕೆಟ್ ವೃತ್ತಿ ಬದುಕಿನಲ್ಲಿ(shikhar dhawan records) ಅವರು ಲೆಕ್ಕವಿಲ್ಲದಷ್ಟು ದಾಖಲೆಗಳನ್ನು ನಿರ್ಮಿಸಿದ್ದಾರೆ. ಇದರಲ್ಲಿ ಪ್ರಮುಖ ದಾಖಲೆಗಳ ಪಟ್ಟಿ ಇಲ್ಲಿದೆ.
1. ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಅತಿ ವೇಗದ ಶತಕ ಬಾರಿಸಿದ ಭಾರತೀಯ ಆಟಗಾರ. 2013 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ 174 ಎಸೆತಗಳಿಂದ 187 ರನ್ ಸಿಡಿಸಿ ಈ ದಾಖಲೆ ಬರೆದಿದ್ದರು.
2. ಕ್ರಿಸ್ ಗೇಲ್, ಹರ್ಷಲ್ ಗಿಬ್ಸ್ ಮತ್ತು ಸೌರವ್ ಗಂಗೂಲಿ ಅವರೊಂದಿಗೆ ಐಸಿಸಿ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ (ಮೂರು) ಅತಿ ಹೆಚ್ಚು ಶತಕದ ಜಂಟಿ ದಾಖಲೆಯನ್ನು ಧವನ್ ಹಂಚಿಕೊಂಡಿದ್ದಾರೆ.
3. ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್ ಜಂಟಿ ಆತಿಥ್ಯದಲ್ಲಿ ನಡೆದಿದ್ದ 2015ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪರ ಪ್ರಮುಖ ರನ್ ಗಳಿಸಿದ ಆಟಗಾರ.
4. ಐಸಿಸಿ ಏಕದಿನ ಟೂರ್ನಿಯಲ್ಲಿ 65ರ ಸರಾಸರಿಯಲ್ಲಿ ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ಏಕೈಕ ಬ್ಯಾಟರ್ ಎಂಬ ವಿಶ್ವ ದಾಖಲೆ. 16 ಇನಿಂಗ್ಸ್ಗಳ ಮೂಲಕ ಈ ಸಾಧನೆ ಮಾಡಿದ್ದರು.
5. 2013ರಲ್ಲಿ ಅತಿ ಹೆಚ್ಚು ಏಕದಿನ ಶತಕ, 2014ರಲ್ಲಿ ವರ್ಷದ ವಿಸ್ಡನ್ ಕ್ರಿಕೆಟಿಗ ಪ್ರಶಸ್ತಿಗೆ ಭಾಜನ.
6. 2013ರಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಗರಿಷ್ಠ ಸ್ಕೋರರ್. 114(94), 102*(107), 48(41), 68(92), 31(24), 68(65), 125(128), 78(83), 46( 34), 21(22) ರನ್ ಕಲೆಹಾಕಿ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲೇ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿದ ದಾಖಲೆ ನಿರ್ಮಿಸಿದ್ದರು. ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.
7. ಟೆಸ್ಟ್ ಪಂದ್ಯವೊಂದರಲ್ಲಿ ಮೊದಲ ದಿನದ ಊಟದ ಮೊದಲು ಶತಕ ಸಿಡಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್.
8. ಏಕದಿನ ಕ್ರಿಕೆಟ್ನಲ್ಲಿ ಅತಿ ವೇಗವಾಗಿ 1,000 (ಜಂಟಿ-ವೇಗದ), 2,000, 3,000 ರನ್‌ಗಳನ್ನು ತಲುಪಿದ ವೇಗದ ಭಾರತೀಯ ಬ್ಯಾಟ್ಸ್‌ಮನ್.
9. ಐಸಿಸಿ ಚಾಂಪಿಯನ್ಸ್ ಟ್ರೋಫಿ 2013 ಮತ್ತು 2017 ರಲ್ಲಿ ಅತಿ ಹೆಚ್ಚು ಸ್ಕೋರರ್.
10. ಐಸಿಸಿ ಟೂರ್ನಿಗಳಲ್ಲಿ 1000 ರನ್‌ಗಳನ್ನು ತಲುಪಿದ ವೇಗದ ಬ್ಯಾಟ್ಸ್‌ಮನ್.
11. ಏಷ್ಯಾ ಕಪ್ 2018ರಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ.
12. ಐಪಿಎಲ್ ಟೂರ್ನಿಯ ಇತಿಹಾಸದಲ್ಲಿ ಸತತ ಎರಡು ಶತಕಗಳನ್ನು ಗಳಿಸಿದ ಮೊದಲ ಆಟಗಾರ.
ಇದನ್ನೂ ಓದಿ Shikhar Dhawan Retirement: ಟ್ಯಾಟೂ ಹಾಕಿಸಿ ಎಚ್ಐವಿ ಪರೀಕ್ಷೆ ಮಾಡಿಸಿಕೊಂಡಿದ್ದ ಧವನ್
13. ಸತತವಾಗಿ ಎರಡು ಬಾರಿ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಗೋಲ್ಡನ್ ಬ್ಯಾಟ್ ಪ್ರಶಸ್ತಿ ಗೆದ್ದ ಆಟಗಾರ.
14. 2021 ರಲ್ಲಿ, ಧವನ್ ಅವರಿಗೆ ಭಾರತ ಸರ್ಕಾರವು ಅರ್ಜುನ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು.