ನವದೆಹಲಿ: ಭಾರತದ ಆತಿಥ್ಯದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಶೂಟಿಂಗ್(Shooting World Cup) ಸ್ಪೋರ್ಟ್ ಫೆಡರೇಶನ್(ಐಎಸ್‌ಎಸ್‌ಎಫ್) ವಿಶ್ವಕಪ್‌ಗೆ ಹಣದ ಬಳಕೆಯ ಮೇಲ್ವಿಚಾರಣೆ ಮಾಡಲು ದೆಹಲಿ ಹೈಕೋರ್ಟ್ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅರ್ಜನ್ ಕುಮಾರ್ ಸಿಕ್ರಿ ಅವರನ್ನು ಆಡಳಿತಾಧಿಕಾರಿಯಾಗಿ ನೇಮಿಸಿದೆ.
ಶುಕ್ರವಾರ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮಣ್ಯಂ ಪ್ರಸಾದ್ ಅವರ ವಿಭಾಗೀಯ ಪೀಠ ಈ ನಿರ್ಧಾರ ತೆಗೆದುಕೊಂಡಿದೆ. ಕ್ರೀಡಾ ನೀತಿ ಸಂಹಿತೆ ಉಲ್ಲಂಘನೆಗಳಿಗೆ ಸಂಬಂಧಿಸಿದಂತೆ ಹಿಂದಿನ ಹೈಕೋರ್ಟ್ ಆದೇಶದಂತೆ ಕೇಂದ್ರ ಸರ್ಕಾರ ಹಣ ಬಳಕೆಗೆ ನಿರ್ಬಂಧ ವಿಧಿಸಿದೆ. ಈ ಸಂಬಂಧ ರಾಷ್ಟ್ರೀಯ ರೈಫಲ್ ಅಸೋಸಿಯೇಷನ್ ಆಫ್ ಇಂಡಿಯಾ(NRAI) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ನಿವೃತ್ತ ನ್ಯಾಯಾಧೀಶರು ಮತ್ತು ಒಲಿಂಪಿಕ್ ಚಿನ್ನದ ಪದಕ ವಿಜೇತ ಅಭಿನವ್ ಬಿಂದ್ರಾ ಅವರನ್ನೊಳಗೊಂಡ ಸಮಿತಿ ರಚಿಸಬೇಕು ಎಂದು ಹೇಳಿದೆ.
ವರದಿಯನ್ನು ಮುಚ್ಚಿದ ಕವರ್‌ನಲ್ಲಿ ಸಲ್ಲಿಸಬೇಕು
ಈ ಟೂರ್ನಿಗೆ ಬಿಡುಗಡೆ ಮಾಡಲು ಉದ್ದೇಶಿಸಿರುವ ಹಣವನ್ನು ಸಮಿತಿಯ ಮೂಲಕ ರವಾನಿಸಬೇಕು ಮತ್ತು ವಿಶ್ವಕಪ್ ಪಂದ್ಯಾವಳಿಯ ಮುಕ್ತಾಯದ ನಂತರ ಸಮಿತಿಯು ತನ್ನ ವರದಿಯನ್ನು ಮುಚ್ಚಿದ ಕವರ್‌ನಲ್ಲಿ ನ್ಯಾಯಾಲಯದ ಮುಂದೆ ಸಲ್ಲಿಸಬೇಕು ಎಂದು ಕೋರ್ಟ್ ಸೂಚಿಸಿದೆ.
ಇದನ್ನೂ ಓದಿ | Wrestlers Protest | ಲೈಂಗಿಕ ಕಿರುಕುಳ ಪ್ರಕರಣ; 7 ಸದಸ್ಯರ ತನಿಖಾ ಸಮಿತಿ ರಚಿಸಿದ ಐಒಎ