Site icon Vistara News

Shreyas Iyer: ಶ್ರೇಯಸ್​ ಅಯ್ಯರ್​ ಗಾಯದ ಬಗ್ಗೆ ಬಿಸಿಸಿಐ ಬಿಗ್​ ಅಪ್​ಡೇಟ್​

shreyas iyer

ಕೊಲಂಬೊ: ಬೆನ್ನು ನೋವಿನ ಸೆಳೆತದಿಂದಾಗಿ ಪಾಕಿಸ್ತಾನ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದ ಶ್ರೇಯಸ್​ ಅಯ್ಯರ್(Shreyas Iyer)​ ಅವರ ಚೇತರಿಕೆಯ(shreyas iyer injury update) ಬಗ್ಗೆ ಬಿಸಿಸಿಐ(BCCI) ಮಂಗಳವಾರ ಅಪ್​ಡೇಟ್​ ನೀಡಿದೆ. ಅಯ್ಯರ್​ ಆರೋಗ್ಯವಾಗಿದ್ದಾರೆ. ಆದರೆ ಲಂಕಾ(IND vs SL) ಪಂದ್ಯಕ್ಕೆ ತಂಡದೊಂದಿಗೆ ಪ್ರಯಾಣಿಸುವುದಿಲ್ಲ ಎಂದು ತಿಳಿಸಿದೆ.

ಬಿಸಿಸಿಐ ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಅಯ್ಯರ್​ ಅವರ ಗಾಯದ ಬಗ್ಗೆ ಮಾಹಿತಿ ನೀಡಿದ್ದು, “ಶ್ರೇಯಸ್ ಅಯ್ಯರ್ ಅವರು ಉತ್ತಮವಾಗಿದ್ದಾರೆ. ಆತಂಕ ಪಡಬೇಕಾಗಿಲ್ಲ. ಆದರೆ ಬೆನ್ನು ನೋವಿನ ಸೆಳೆತದಿಂದ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ಅವರಿಗೆ ಬಿಸಿಸಿಐ ವೈದ್ಯಕೀಯ ತಂಡವು ವಿಶ್ರಾಂತಿಯ ಸಲಹೆ ನೀಡಿದೆ. ಹೀಗಾಗಿ ಅವರು ಶ್ರೀಲಂಕಾ ವಿರುದ್ಧದ ಸೂಪರ್ 4 ಪಂದ್ಯಕ್ಕಾಗಿ ತಂಡದೊಂದಿಗೆ ಕ್ರೀಡಾಂಗಣಕ್ಕೆ ಬರುವುದಿಲ್ಲ” ಎಂದು ತಿಳಿಸಿದೆ.

ವಿಶ್ವಕಪ್​ಗೆ ಅನುಮಾನ?

ಶ್ರೇಯಸ್ ಅಯ್ಯರ್ ಅವರು ಆಸ್ಟ್ರೇಲಿಯಾ ವಿರುದ್ಧದ ತವರಿನ ಟೆಸ್ಟ್​ ಸರಣಿಯಲ್ಲಿ ಗಾಯಗೊಂಡು ತಂಡದಿಂದ ಹೊರಗುಳಿದಿದ್ದರು. ಇದಾದ ಬಳಿಕ ಅವರು ಐಪಿಎಲ್​ನಿಂದಲೂ ದೂರ ಉಳಿದಿದ್ದರು. ಶಸ್ತ್ರಚಿಕಿತ್ಸಗೆ ಒಳಗಾಗಿದ್ದ ಬಳಿಕ ಬೆಂಗಳೂರಿನ ರಾಷ್ಟ್ರೀಯ ಅಕಾಡೆಮಿಯಲ್ಲಿ ಪುನಶ್ಚೇತನದಲ್ಲಿ ಗುಣಮುಖರಾಗಿದ್ದರು. ಹೀಗಾಗಿ ಅವರನ್ನು ಏಷ್ಯಾ ಕಪ್​ ಜತೆಗೆ ವಿಶ್ವಕಪ್​ ತಂಡದಲ್ಲಿಯೂ ಅವಕಾಶ ನೀಡಲಾಗಿತ್ತು. ಇದೀಗ ಮತ್ತೆ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿರುವುದು ಆಯ್ಕೆ ಸಮಿತಿಗೆ ಚಿಂತೆಗೀಡು ಮಾಡಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯ ವೇಳೆಗೆ ಚೇತರಿಕೆ ಕಾಣದಿದ್ದರೆ ವಿಶ್ವಕಪ್​ ತಂಡದಿಂದ ಕೈಬಿಡುವ ಸಾಧ್ಯತೆ ಹೆಚ್ಚಾಗಿದೆ.

ಇದನ್ನೂ ಓದಿ IND vs SL: ಟಾಸ್​ ಗೆದ್ದ ಭಾರತ ತಂಡದಿಂದ ಬ್ಯಾಟಿಂಗ್​ ಆಯ್ಕೆ

ಅಯ್ಯರ್​ ಅಲಭ್ಯತೆಯಲ್ಲಿ ಕೆ.ಎಲ್​ ರಾಹುಲ್​ ಅವರು ಪಾಕಿಸ್ತಾನ ವಿರುದ್ಧ ಕಣಕಿಳಿದಿದ್ದರು. ಅವರು ಕೂಡ ತೊಡೆಯ ಸ್ನಾಯು ಸೆಳೆತದಿಂದ ಚೇತರಿಕೆ ಕಂಡು ತಂಡಕ್ಕೆಎ ಮರಳಿದ್ದರು. ಕಮ್​ಬ್ಯಾಕ್​ ಮಾಡಿದ ಪಂದ್ಯದಲ್ಲೇ ಶತಕ ಬಾರಿಸಿ ತಮ್ಮ ಫಿಟ್​ನೆಸ್​ ಮತ್ತು ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದರು. ಅಯ್ಯರ್​ ಪಾಕ್​ ವಿರುದ್ಧದ ಮೊದಲ ಪಂದ್ಯದಲ್ಲಿ ಆಡಿದ್ದರು. ಆದರೆ 13 ರನ್​ ಗಳಿಸಿ ನಿರಾಸೆ ಮೂಡಿಸಿದ್ದರು. ನೇಪಾಳ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್​ ಅವಕಾಶ ಸಿಕ್ಕಿರಲಿಲ್ಲ.

ಪ್ರತಿಭಾನ್ವಿತ ಆಟಗಾರ

ಮಧ್ಯಮ ಕ್ರಮಾಂಕದ ಬ್ಯಾಟರ್‌ ಶ್ರೇಯಸ್​ ಅಯ್ಯರ್​ ಭರವಸೆಯ ಪ್ರತಿಭಾನ್ವಿತ ಆಟಗಾರ. ಇದುವರೆಗೆ ಟೀಮ್ ಇಂಡಿಯಾ ಪರ 10 ಟೆಸ್ಟ್, 44 ಏಕದಿನ ಮತ್ತು 49 ಟಿ20 ಪಂದ್ಯಗಳನ್ನು ಆಡಿದ್ದಾರೆ. 2017ರಲ್ಲಿ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನ್ಯೂಜಿಲ್ಯಾಂಡ್​ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. 50 ಓವರ್‌ಗಳ ಸ್ವರೂಪದಲ್ಲಿ, ಅವರು 46.6 ಸರಾಸರಿಯಲ್ಲಿ 1645 ರನ್ ಗಳಿಸಿದ್ದಾರೆ. ಐಪಿಎಲ್‌ನಲ್ಲಿಯೂ ಉತ್ತಮ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದಿದ್ದರು. ಆದರೆ ಗಾಯ ಮಾತ್ರ ಅವರಿಗೆ ಬೆನ್ನು ಬಿಡುವಂತೆ ಕಾಣುತ್ತಿಲ್ಲ.

Exit mobile version