ನವ ದೆಹಲಿ: ಮುಂಬೈಕರ್ ಶ್ರೇಯಸ್ ಅಯ್ಯರ್ ಬೆನ್ನು ನೋವಿನ ಸಮಸ್ಯೆಯಿಂದ ಸುಧಾರಿಸಿಕೊಂಡಿದ್ದಾರೆ. ಅವರು ಬುಧವಾರ ಅಭ್ಯಾಸವನ್ನೂ ಆರಂಭಿಸಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ತಳವೂರಿ ಬ್ಯಾಟ್ ಮಾಡುವ ಸಾಮರ್ಥ್ಯ ಹೊಂದಿರುವ ಅವರು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಆಡುವ 11ರ ಬಳಗದಲ್ಲಿ ಅವಕಾಶ ಪಡೆಯುವ ಎಲ್ಲ ಸಾಧ್ಯತೆಗಳಿವೆ. ಹೀಗಾಗಿ ಮೊದಲ ಪಂದ್ಯದಲ್ಲಿ ಟೆಸ್ಟ್ ಮಾದರಿಗೆ ಪದಾರ್ಪಣೆ ಮಾಡಿದ್ದ ಸೂರ್ಯಕುಮಾರ್ ಯಾದವ್ ಚಾನ್ಸ್ ಕಳೆದುಕೊಳ್ಳಲಿದ್ದಾರೆ.
ಶ್ರೇಯಸ್ ಅಯ್ಯರ್ ಶ್ರೀಲಂಕಾ ವಿರುದ್ಧದ ಸರಣಿಯ ವೇಳೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದರು. ಹೀಗಾಗಿ ನ್ಯೂಜಿಲ್ಯಾಂಡ್ ವಿರುದ್ಧದ ಮೂರು ಪಂದ್ಯಗಳ ಏಕ ದಿನ ಸರಣಿಯ ತಂಡದಿಂದ ಹೊರಕ್ಕೆ ಬಿದ್ದಿದ್ದರು. ಬಳಿಕ ಅವರು ಬೆಂಗಳೂರಿನ ಎನ್ಸಿಎನಲ್ಲಿ ಪುನಶ್ಚೇತನಕ್ಕೆ ಒಳಗಾಗಿದ್ದರು. ಸಂಪೂರ್ಣ ಗುಣಮುಖರಾಗಿ ಬಂದಿರುವ ಅವರು ಅಭ್ಯಾಸವನ್ನು ಆರಂಭಿಸಿದ್ದಾರೆ. ಪಂದ್ಯಕ್ಕೆ ಇನ್ನೊಂದು ದಿನ ಬಾಕಿ ಉಳಿದಿದ್ದು. ಅಷ್ಟರಲ್ಲಿ ಸಂಪೂರ್ಣ ಗುಣಮುಖರಾಗಲಿದ್ದಾರೆ.
ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಅತ್ಯುತ್ತಮ ಬ್ಯಾಟರ್. ಚೆಂಡು ನಿಧಾನ ಗತಿಯಲ್ಲಿ ಚಲಿಸುತ್ತಿರುವ ವೇಳೆಯೂ ಕ್ರೀಸ್ಗೆ ಅಂಟಿಕೊಂಡು ಆಡುವ ಸಾಮರ್ಥ್ಯ ಅವರಲ್ಲಿದೆ. ಹೀಗಾಗಿ ಸೂರ್ಯಕುಮಾರ್ ಬದಲಿಗೆ ಶ್ರೇಯಸ್ಗೆ ಅವಕಾಶ ಸಿಗುವ ಸಾಧ್ಯತೆಗಳಿವೆ.
ಇದನ್ನು ಓದಿ : IND VS AUS: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಶ್ರೇಯಸ್ ಅಯ್ಯರ್ ಅಲಭ್ಯ
ಸೂರ್ಯಕುಮಾರ್ ಯಾದವ್ ಯಾದವ್ ಮೊದಲ ಟೆಸ್ಟ್ನಲ್ಲಿ ಪದಾರ್ಪಣೆ ಮಾಡಿ ವಿಶ್ವಾಸ ಮೂಡಿಸಿದ್ದ ಹೊರತಾಗಿಯೂ ಕೇವಲ ಎಂಟು ರನ್ಗಳಿಗೆ ವಿಕೆಟ್ ಒಪ್ಪಿಸಿದ್ದರು. ಇದರಿಂದಾಗಿ ಕೋಚ್ ರಾಹುಲ್ ದ್ರಾವಿಡ್, ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಅವರಿಗೆ ಮಣೆ ಹಾಕುವ ಸಾಧ್ಯತೆಗಳಿವೆ.
ಶ್ರೇಯಸ್ ಅಯ್ಯರ್ ಇದುವರೆಗೆ ಭಾರತ ತಂಡದ ಪರ ಏಳು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. 65 ಸರಾಸರಿಯಲ್ಲಿ 624 ರನ್ ಕೂಡ ಬಾರಿಸಿದ್ದಾರೆ.
ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ಅಕ್ಷರ್ ಪಟೇಲ್ , ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಸೂರ್ಯಕುಮಾರ್ ಯಾದವ್.