Site icon Vistara News

Shreyasi Singh: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಕಣಕ್ಕಿಳಿಯಲಿದ್ದಾರೆ ಬಿಜೆಪಿ ಶಾಸಕಿ

Shreyasi Singh

Shreyasi Singh: Shreyasi included in Indian shooting squad after ISSF approval for quota swap

ನವದೆಹಲಿ: ಕಾಮನ್ವೆಲ್ತ್‌ ಗೇಮ್ಸ್‌ ಮತ್ತು ಏಷ್ಯಾಡ್‌ನ‌ಲ್ಲಿ ಪದಕ ಜಯಿಸಿರುವ ಶೂಟರ್​ ಶ್ರೇಯಸಿ ಸಿಂಗ್(Shreyasi Singh)​ ಅವರು ಪ್ಯಾರಿಸ್‌ ಒಲಿಂಪಿಕ್ಸ್‌ಗಾಗಿ(Paris Olympics 2024) ಭಾರತ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಅಚ್ಚರಿ ಎಂದರೆ ಇವರು ಬಿಹಾರದ ಜಮುಯಿ ವಿಧಾನಸಭಾ ಕ್ಷೇತ್ರದ(Member of Bihar Vidhan Sabha) ಹಾಲಿ ಶಾಸಕಿ ಎಂಬುದು. 32 ವರ್ಷದ ಶ್ರೇಯಸಿ ಸಿಂಗ್‌, ಮಾಜಿ ಸಚಿವ ದಿವಂಗತ ದಿಗ್ವಿಜಯ್‌ ಸಿಂಗ್‌ ಅವರ ಪುತ್ರಿ.

ಒಲಿಂಪಿಕ್ಸ್‌ ಆಯ್ಕೆಯ ಮೊದಲ ಪಟ್ಟಿಯಲ್ಲಿ ಶ್ರೇಯಸಿ ಹೆಸರಿರಲಿಲ್ಲ. ಆದರೆ ಟೋಕಿಯೊ ಒಲಿಂಪಿಯನ್‌ ಮನು ಭಾಕರ್‌ ಮಹಿಳೆಯರ 10 ಮೀ. ಪಿಸ್ತೂಲ್‌ ಮತ್ತು 25 ಮೀ. ಪಿಸ್ತೂಲ್‌ ಸ್ಪರ್ಧೆಗಳಲ್ಲಿ ಅರ್ಹತೆ ಪಡೆದಿದ್ದರು. ಹೀಗಾಗಿ ಒಂದು ಕೋಟಾವನ್ನು ಮರುಹಂಚಿಕೆ ಮಾಡಬಹುದಾಗಿತ್ತು. ಇದನ್ನು ಟ್ರ್ಯಾಪ್‌ ಶೂಟರ್‌ಗಾಗಿ ಬದಲಾಯಿಸಲಾಯಿತು. ಹೀಗಾಗಿ ಈ ಕೋಟಾದಲ್ಲಿ ಶ್ರೇಯಸಿ ಅವರನ್ನು ಆಯ್ಕೆ ಮಾಡಲಾಯಿತು. ಶ್ರೇಯಸಿ 2014ರ ಕಾಮನ್ವೆಲ್ತ್‌ ಗೇಮ್ಸ್‌ ಹಾಗೂ ಏಷ್ಯಾಡ್‌ನ‌ ಡಬಲ್‌ ಟ್ರ್ಯಾಪ್‌ ಸ್ಪರ್ಧೆಯಲ್ಲಿ ಕ್ರಮವಾಗಿ ಬೆಳ್ಳಿ ಹಾಗೂ ಕಂಚಿನ ಪದಕ ಜಯಿಸಿದ್ದರು. 2018 ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಅವರು ದೇಶಕ್ಕೆ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ದೇಶಕ್ಕೆ ಮತ್ತು ಬಿಹಾರಕ್ಕೆ ಕೀರ್ತಿ ತಂದಿದ್ದರು.

ಒಲಿಂಪಿಕ್ಸ್​ ತಂಡಕ್ಕೆ ಆಯ್ಕೆಯಾದ ಬಗ್ಗೆ ಸುದ್ದಿ ಸಂಸ್ಥೆ ಜತೆ ಮಾಡಿದ ಶ್ರೇಯಸಿ, “ನಾನು ಒಲಿಂಪಿಕ್ಸ್‌ ಕ್ರೀಡಾಕೂಡದಲ್ಲಿ ದೇಶವನ್ನು ಪ್ರತಿನಿಧಿಸಬೇಕೆಂಬುದು ನನ್ನ ತಂದೆಯ ದೊಡ್ಡ ಕನಸಾಗಿತ್ತು. ತಂದೆಯ ಕನಸಿನಂತೆ ಒಲಿಂಪಿಕ್ಸ್​ ಆಡುವ ಸೌಭಾಗ್ಯ ಒದಗಿ ಬಂದಿದೆ. ಕೂಟದಲ್ಲಿ ಶ್ರೇಷ್ಠ ಪ್ರದರ್ಶನ ತೋರುವ ಮೂಲಕ ಚಿನ್ನದ ಪದಕ ಗೆಲ್ಲುವುದು ನನ್ನ ಗುರಿ. ಇದಕ್ಕಾಗಿ ಜಮುಯಿ ಜನತೆ ಪ್ರಾರ್ಥಿಸಲಿ” ಎಂದು ಶ್ರೇಯಸಿ ಹೇಳಿದ್ದಾರೆ.

ಇದನ್ನೂ ಓದಿ Paris Olympics 2024: ಅಧಿಕೃತವಾಗಿ ಪ್ಯಾರಿಸ್​ ಒಲಿಂಪಿಕ್ಸ್ ಟಿಕೆಟ್​ ಪಡೆದ ಸುಮಿತ್‌ ನಗಾಲ್‌

ಪ್ಯಾರಿಸ್​ ಒಲಿಂಪಿಕ್ಸ್​ ಉದ್ಘಾಟನಾ ಸಮಾರಂಭ(paris olympics 2024 opening ceremony) ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮದೊಂದಿಗೆ ನೆರವೇರಲಿದೆ. ಕ್ರೀಡಾಕೂಟ ಜುಲೈ 26ರಿಂದ ಆರಂಭವಾಗಿ, ಆಗಸ್ಟ್‌ 11ರವರೆಗೆ ನಡೆಯಲಿದೆ. ಪ್ಯಾರಾಲಿಂಪಿಕ್ಸ್‌ ಆಗಸ್ಟ್‌ 28 ರಿಂದ ಸೆಪ್ಟೆಂಬರ್‌ 8ರವರೆಗೆ ನಿಗದಿಯಾಗಿದೆ. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಯನ್ನು ಈಗಾಗಲೇ ಕ್ರೀಡಾಕೂಟದ ಆಯೋಜಕರು ಮಾಡಿದ್ದಾರೆ. ಗೇಮ್ಸ್‌ಗಾಗಿಯೇ ಇಲ್ಲಿನ ಸೀನ್‌ ನದಿಯನ್ನು ಸಾರ್ವಜನಿಕ ನಿಧಿಯಿಂದ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿ ಈ ನದಿಯನ್ನು ಸ್ನಾನಮಾಡಲು ಯೋಗ್ಯವೆನಿಸುವ ರೀತಿಯಲ್ಲಿ ಸ್ವಚ್ಛ ಮಾಡಲಾಗಿದೆ.

ಒಲಿಂಪಿಕ್ಸ್​ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

Exit mobile version