ಇಂದೋರ್: ನ್ಯೂಜಿಲ್ಯಾಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ನೂತನ ಜತೆಯಾಟದ ದಾಖಲೆಯೊಂದನ್ನು ಬರೆದಿದ್ದಾರೆ.
ಇಂದೋರ್ನ ಹೋಳ್ಕರ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ರೋಹಿತ್ ಮತ್ತು ಗಿಲ್ 204 ರನ್ ಜತೆಯಾಟ ನಡೆಸಿದ ವೇಳೆ ನ್ಯೂಜಿಲ್ಯಾಂಡ್ ತಂಡದ ವಿರುದ್ಧ ಅತ್ಯಧಿಕ ಜತೆಯಾಟ ನಡೆಸಿದ ನೂತನ ದಾಖಲೆ ಬರೆದರು. ಈ ಮೂಲಕ ವೀರೇಂದ್ರ ಸೆಹವಾಗ್ ಮತ್ತು ಗೌತಮ್ ಗಂಭೀರ್ ಅವರ ಜತೆಯಾಟದ ದಾಖಲೆಯನ್ನು ಮುರಿದಿದ್ದಾರೆ.
ಸೆಹವಾಗ್-ಗಂಭೀರ್ ಜೋಡಿ ಅಜೇಯ 201 ರನ್ ಬಾರಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಇದೀಗ ರೋಹಿತ್ ಮತ್ತು ಗಿಲ್ ಮೊದಲ ಸ್ಥಾನ ಅಲಂಕರಿಸಿದ್ದಾರೆ. ಈ ಪಟ್ಟಿಯಲ್ಲಿರುವ ಮೂರನೇ ಜೋಡಿ ಶ್ರೀಲಂಕಾದ ಉಪುಲ್ ತರಂಗ ಮತ್ತು ಸನತ್ ಜಯಸೂರ್ಯ ಈ ಜೋಡಿ 201 ರನ್ ಗಳಿಸಿತ್ತು.
ಇದನ್ನೂ ಓದಿ | IND VS NZ: ಟಾಸ್ ಗೆದ್ದ ನ್ಯೂಜಿಲ್ಯಾಂಡ್; ಭಾರತಕ್ಕೆ ಬ್ಯಾಟಿಂಗ್ ಆಹ್ವಾನ